AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parenting Tips: ನಿಮ್ಮ ಮಕ್ಕಳ ನೆನಪಿನ ಶಕ್ತಿಯನ್ನು ಹೆಚ್ಚಿಸಲು ಹೀಗೆ ಮಾಡಿ

ಮಕ್ಕಳು ಎಷ್ಟೇ ಓದಿದರೂ ಮರು ಘಳಿಗೆಯಲ್ಲಿ ಅದನ್ನು ಮರೆತುಬಿಡುತ್ತಾರೆ. ಹೌದು ಪರೀಕ್ಷೆಗೆ ಎಷ್ಟೇ ಚೆನ್ನಾಗಿ ಓದಿದ್ರೂ ಪರೀಕ್ಷೆ ಬರೆಯುವಾಗ ಓದಿದ್ದನ್ನೆಲ್ಲಾ ಮರೆತು ಬಿಡುತ್ತಾರೆ. ಇದಕ್ಕೆ ಕಾರಣ ನೆನಪಿನ ಶಕ್ತಿಯ ಕೊರತೆ. ಹೀಗಿರುವಾಗ ಮಕ್ಕಳ ನೆನಪಿನ ಶಕ್ತಿಯನ್ನು ಹೆಚ್ಚಿಸಲು ಪೋಷಕರು ಏನು ಮಾಡಬೇಕು ಎಂಬುದನ್ನು ನೋಡಿ.

Parenting Tips: ನಿಮ್ಮ ಮಕ್ಕಳ ನೆನಪಿನ ಶಕ್ತಿಯನ್ನು ಹೆಚ್ಚಿಸಲು ಹೀಗೆ ಮಾಡಿ
ಸಾಂದರ್ಭಿಕ ಚಿತ್ರ Image Credit source: Getty Images
ಮಾಲಾಶ್ರೀ ಅಂಚನ್​
|

Updated on: Aug 03, 2025 | 3:46 PM

Share

ನಮ್ಮ ಮಕ್ಕಳು (children) ಚೆನ್ನಾಗಿ ಓದ್ಬೇಕು, ಉತ್ತಮ ಅಂಕ ಗಳಿಸಬೇಕು,  ಕ್ರಿಯಾಶೀಲರಾಗಿರಬೇಕು, ಉತ್ತಮ ಸಾಧನೆ ಮಾಡ್ಬೇಕು ಎಂದು ಪೋಷಕರು ಬಯಸುತ್ತಾರೆ. ಅದಕ್ಕಾಗಿ ಚೆನ್ನಾಗಿ ಓದುವಂತೆ ಒತ್ತಾಯಿಸುತ್ತಾರೆ. ಆದರೆ ಕೆಲವು ಮಕ್ಕಳು ಮನೆಯಲ್ಲಿ, ಶಾಲೆಯಲ್ಲಿ ಎಷ್ಟೇ ಚೆನ್ನಾಗಿ ಓದಿದರೂ ಅದನ್ನೆಲ್ಲಾ ಮರೆತು ಬಿಡುತ್ತಾರೆ.  ಅದರಲ್ಲೂ ಪರೀಕ್ಷೆಯ ದಿನ ಹೆಚ್ಚಿನ ಮಕ್ಕಳು ಓದಿದ್ದನ್ನೆಲ್ಲಾ ಮರೆತು ಬಿಡ್ತಾರೆ. ಇದಕ್ಕೆಲ್ಲ ಕಾರಣ ಸ್ಮರಣ ಶಕ್ತಿಯ (memory power) ಕೊರತೆ. ಹೀಗಿರುವಾಗ ಪೋಷಕರು ಮಕ್ಕಳಿಗೆ ಹೊಡೆದು, ಗದರಿಸಿ ಓದಿಸುವುದರ ಬದಲು ಈ ಕೆಲವೊಂದಿಷ್ಟು ಸಲಹೆಗಳನ್ನು ಪಾಲಿಸುವ ಮೂಲಕ ಮಕ್ಕಳ ನೆನಪಿನ ಶಕ್ತಿಯನ್ನು ಹೆಚ್ಚಿಸಬಹುದು. ಹಾಗಾದ್ರೆ ಮಕ್ಕಳ ನೆನಪಿನ ಶಕ್ತಿ ಹೆಚ್ಚಿಸಲು ಪೋಷಕರು ಏನು ಮಾಡಬಹುದು ಎಂಬುದನ್ನು ನೋಡೋಣ ಬನ್ನಿ.

ಹೀಗೆ ಮಾಡಿದ್ರೆ ನಿಮ್ಮ ಮಕ್ಕಳ ನೆನಪಿನ ಶಕ್ತಿ ವೃದ್ಧಿಸುವುದು ಗ್ಯಾರಂಟಿ:

ಸರಿಯಾದ ನಿದ್ರೆ: ಮಕ್ಕಳ ಮೆದುಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಾಕಷ್ಟು ವಿಶ್ರಾಂತಿ ಅತ್ಯಗತ್ಯ. ಮಕ್ಕಳಿಗೆ ದಿನಕ್ಕೆ ಕನಿಷ್ಠ 8 ರಿಂದ 10 ಗಂಟೆಗಳ ಕಾಲ ನಿದ್ರೆ ಬೇಕು. ರಾತ್ರಿಯ ಉತ್ತಮವಾದ ನಿದ್ರೆಯು ಮೆದುಳು ಹಗಲಿನಲ್ಲಿ ಕಲಿತದ್ದನ್ನು ನೆನಪಿನಲ್ಲಿ ಇಟ್ಟುಕೊಳ್ಳಲು ಸಹಾಯ ಮಾಡುತ್ತದೆ. ಅಲ್ಲದೆ  ನಿದ್ರೆಯು ಗಮನವನ್ನು ಸುಧಾರಿಸುತ್ತದೆ.  ಹಾಗಾಗಿ ಮೊದಲು ಮೊಬೈಲ್‌, ಟಿವಿ ಮತ್ತು ಲ್ಯಾಪ್‌ಟಾಪ್‌ ಬಳಕೆಯನ್ನು ಕಡಿಮೆ ಮಾಡಿಸಿ ಮತ್ತು ಸರಿಯಾದ ಸಮಯಕ್ಕೆ ಮಲಗುವ ಅಭ್ಯಾಸವನ್ನು ಮಕ್ಕಳಲ್ಲಿ  ರೂಢಿಸಿ.

ಆರೋಗ್ಯಕರ ಉಪಹಾರ, ಆಹಾರ: ಮಕ್ಕಳಿಗೆ ಬೆಳಗಿನ ಉಪಹಾರ ಬಹಳ ಮುಖ್ಯ. ಇದು ಮೆದುಳಿಗೆ ಅಗತ್ಯವಾದ ಪೋಷಕಾಂಶಗಳನ್ನು ಮತ್ತು ಶಕ್ತಿಯನ್ನು ಒದಗಿಸುತ್ತದೆ. ಬೆಳಗ್ಗೆ ಶಾಲೆಗೆ ಹೋಗುವ ಆತುರದಲ್ಲಿ ಅನೇಕ ಮಕ್ಕಳು ಉಪಹಾರ ಸೇವಿಸದೆ ಶಾಲೆಗೆ ಹೋಗುತ್ತಾರೆ. ಆದರೆ ಇದು ದೇಹ ಮತ್ತು ಮನಸ್ಸು ಎರಡಕ್ಕೂ ಹಾನಿಕರವಾಗಿದೆ. ಹಾಗಾಗಿ ಮಕ್ಕಳಿಗೆ ಬೆಳಗ್ಗಿನ ಉಪಹಾರದಲ್ಲಿ ಧಾನ್ಯಗಳು, ಹಣ್ಣುಗಳು ಮತ್ತು ಹಾಲಿನಂತಹ ಪೌಷ್ಟಿಕ, ಆರೋಗ್ಯಕರ ಆಹಾರವನ್ನು ನೀಡಬೇಕು. ಇದು ಅವರನ್ನು ತರಗತಿಯಲ್ಲಿ ಸಕ್ರಿಯವಾಗಿ ಮತ್ತು ಉತ್ಸಾಹಭರಿತರನ್ನಾಗಿ ಇರಿಸುತ್ತದೆ.

ಇದನ್ನೂ ಓದಿ
Image
ಪೋಷಕರು ಪದೇ ಪದೇ ಮಕ್ಕಳ ಮುಂದೆ ಜಗಳವಾಡಿದರೆ ಏನಾಗುತ್ತದೆ ಗೊತ್ತಾ?
Image
ಆರೋಗ್ಯಕರ ಜೀವನಕ್ಕಾಗಿ ಈ ಅಭ್ಯಾಸಗಳನ್ನು ಪಾಲಿಸಲು ಮರೆಯದಿರಿ
Image
ತಂದೆ ತನ್ನ ಮಗಳ ಮುಂದೆ ತಪ್ಪಿಯೂ ಈ ರೀತಿ ವರ್ತಿಸಬಾರದು
Image
ಮಕ್ಕಳಿಗೆ ಪೋಷಕರು ತಪ್ಪದೆ ಈ ವಿಚಾರಗಳನ್ನು ಕಲಿಸಬೇಕಂತೆ

ಓದುವ ಅಭ್ಯಾಸ: ಮೊಬೈಲ್‌, ಟಿವಿ ಮತ್ತು ಲ್ಯಾಪ್‌ಟಾಪ್‌ಗಳ ಬಳಕೆಯನ್ನು ಕಡಿಮೆ ಮಾಡಿಸಿ, ಮಕ್ಕಳಿಗೆ ಓದಲು ಕಥೆ ಪುಸ್ತಕಗಳು ಮತ್ತು ದಿನ ಪತ್ರಿಕೆಗಳನ್ನು ನೀಡಿ.  ಅವರು ದಿನಕ್ಕೆ ಕನಿಷ್ಠ 20 ನಿಮಿಷಗಳ ಓದುವ ಅಭ್ಯಾಸವನ್ನು ರೂಢಿಸಿಕೊಂಡರೆ ಅವರ ಸ್ಮರಣ ಶಕ್ತಿ ಹೆಚ್ಚಾಗುತ್ತದೆ. ಇಲ್ಲದಿದ್ದರೆ  ಫೊಷಕರು ಮಕ್ಕಳಿಗೆ  ಕಥೆ ಹೇಳಬಹುದು. ಇದರಿಂದಲೂ ಅವರ ಸ್ಮರಣ ಶಕ್ತಿ ಸುಧಾರಿಸುತ್ತದೆ.

ಇದನ್ನೂ ಓದಿ: ಪೋಷಕರು ಪದೇ ಪದೇ ಮಕ್ಕಳ ಮುಂದೆ ಜಗಳವಾಡಿದರೆ ಏನಾಗುತ್ತದೆ ಗೊತ್ತಾ?

ಆಟಗಳು: ಒಗಟುಗಳು, ಸುಡೋಕು, ಬ್ಲಾಕ್‌ಗಳು, ಮೆಮೊರಿ ಕಾರ್ಡ್‌ಗಳಂತಹ  ಆಟಗಳನ್ನು ಆಡಿಸಿ. ಇದು ಮೋಜಿನ ಆಟ ಮಾತ್ರವಲ್ಲದೆ ಮೆದುಳಿಗೆ ವ್ಯಾಯಾಮವನ್ನು ಸಹ ನೀಡುತ್ತದೆ. ಇದರಿಂದ ನೆನಪಿನ ಶಕ್ತಿ ಕೂಡ ಹೆಚ್ಚಾಗುತ್ತದೆ. ಹೀಗಿರುವಾಗ ಮಕ್ಕಳಿಗೆ ಮೊಬೈಲ್‌, ಟಿವಿ ಬದಲು ಇಂತಹ ಆಟಗಳನ್ನು ಆಡಿಸಿ. ಇಂತಹ ಆಟಗಳು ಮಕ್ಕಳ ಆಲೋಚನೆ ಮತ್ತು ಸ್ಮರಣಶಕ್ತಿಯನ್ನು ಸುಧಾರಿಸುತ್ತದೆ.

ಪ್ರಾಣಾಯಾಮ ಮತ್ತು ಧ್ಯಾನ: ಮಕ್ಕಳಿಗೆ ಬೆಳಿಗ್ಗೆ 10 ನಿಮಿಷಗಳ ಕಾಲ ಉಸಿರಾಟದ ವ್ಯಾಯಾಮಗಳನ್ನು ಅಭ್ಯಾಸ ಮಾಡಿಸಿ. ಇದು  ಮಕ್ಕಳ ಮನಸ್ಸನ್ನು ಶಾಂತವಾಗಿರಿಸುತ್ತದೆ ಮತ್ತು ಅವರ ಗಮನವನ್ನು ಸುಧಾರಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವರು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್