AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Personality Test: ನೀವು ಯಾವ ರೀತಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ ಎಂಬುದನ್ನು ಈ ಚಿತ್ರದ ಮೂಲಕ ತಿಳಿಯಿರಿ

ಪ್ರತಿಯೊಬ್ಬರ ವ್ಯಕ್ತಿತ್ವ ಭಿನ್ನವಾಗಿರುವಂತೆ, ನಿರ್ಧಾರಗಳನ್ನು ತೆಗೆದುಕೊಳ್ಳುವ ರೀತಿಯಲ್ಲೂ ಸಾಕಷ್ಟು ಭಿನ್ನತೆಗಳಿರುತ್ತದೆ. ಹೌದು ಕೆಲವರು ಆತುರದಲ್ಲಿ ನಿರ್ಧಾರಗಳನ್ನು ತೆಗೆದುಕೊಂಡರೆ, ಇನ್ನೂ ಕೆಲವರು ಯೋಚಿಸಿ ನಿಧಾನವಾಗಿ ನಿರ್ಧಾರ ತೆಗೆದುಕೊಳ್ಳುತ್ತಾರೆ. ಇದರಲ್ಲಿ ನೀವು ಹೇಗೆ ನಿರ್ಧಾರ ತೆಗೆದುಕೊಳ್ಳುತ್ತೀರಿ ಎಂಬುದನ್ನು ಇಂದಿನ ಈ ಪರ್ಸನಾಲಿಟಿ ಟೆಸ್ಟ್‌ನಲ್ಲಿ ತಿಳಿಯಿರಿ.

Personality Test: ನೀವು ಯಾವ ರೀತಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ ಎಂಬುದನ್ನು ಈ ಚಿತ್ರದ ಮೂಲಕ ತಿಳಿಯಿರಿ
ವ್ಯಕ್ತಿತ್ವ ಪರೀಕ್ಷೆImage Credit source: Social Media
ಮಾಲಾಶ್ರೀ ಅಂಚನ್​
|

Updated on: Nov 29, 2025 | 3:15 PM

Share

ವ್ಯಕ್ತಿಯ ವ್ಯಕ್ತಿತ್ವ, ಗುಣಸ್ವಭಾವ ಹೇಗಿದೆ ಎಂಬುದನ್ನು ತಿಳಿಯುವ ಹಲವಾರು ವಿಧಾನಗಳಿವೆ. ಅವುಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌ (Personality Test) ಕೂಡ ಒಂದು. ಕಣ್ಣಿಗೆ ಭ್ರಮೆಯನ್ನು ಉಂಟು ಮಾಡುವ ಈ ಚಿತ್ರದಲ್ಲಿ ನಿಮ್ಮ ಕಣ್ಣಿಗೆ ಮೊದಲು ಕಾಣಿಸುವ ಅಂಶದ ಆಧಾರದ ಮೇಲೆ ನೀವು ನಿಮ್ಮ ರಹಸ್ಯ ವ್ಯಕ್ತಿತ್ವ ಹೇಗಿದೆ ಎಂಬುದನ್ನು ತಕ್ಕಮಟ್ಟಿಗೆ ತಿಳಿದುಕೊಳ್ಳಬಹುದಾಗಿದೆ. ಇಲ್ಲೊಂದು ಅದೇ ರೀತಿಯ ಚಿತ್ರ ವೈರಲ್‌ ಆಗಿದ್ದು, ಅದರಲ್ಲಿ ಸಿಂಹ ಅಥವಾ ಮರದ ಕೊಂಬೆ ಇವೆರಡರಲ್ಲಿ ನಿಮಗ್ಯಾವ ಅಂಶ ಕಾಣಿಸಿತು ಎಂಬ ಆಧಾರದ ಮೇಲೆ ನೀವು ಯಾವ ರೀತಿ ನಿರ್ಧಾರಗಳನ್ನು ತೆಗೆದುಕೊಳ್ಳುವವರು ಎಂಬುದನ್ನು ಪರೀಕ್ಷಿಸಿ.

ನೀವು ಯಾವ ರೀತಿ ನಿರ್ಧಾರಗಳನ್ನು ತೆಗೆದುಕೊಳ್ಳುವವರು?

ಸಿಂಹ: ಈ ಚಿತ್ರದಲ್ಲಿ ಮೊದಲು ನೀವು ಸಿಂಹವನ್ನು ನೋಡಿದರೆ, ನೀವು ದೊಡ್ಡ ಗುರಿಯ ಮೇಲೆ ಮಾರ್ಗದರ್ಶಿಸಲ್ಪಡುವ ವ್ಯಕ್ತಿಗಳು ಎಂದರ್ಥ. ನೀವು ನಿರ್ಧಾರಗಳನ್ನು ಕ್ಷಣ ಮಾತ್ರದಲ್ಲಿ  ತೆಗೆದುಕೊಳ್ಳುತ್ತೀರಿ, ಜೊತೆಗೆ ಅಪಾಯಗಳನ್ನು ಎದುರಿಸಲು ಹಿಂಜರಿಯುವುದಿಲ್ಲ. ಈ ಗುಣ ನಿಮಗೆ ಹೊಸ ಹೊಸ ಯೋಜನೆಗಳನ್ನು ಪ್ರಾರಂಭಿಸಲು, ಹೊಸ ಜನರೊಂದಿಗೆ ಬೆರೆಯಲು ಸಾಕಷ್ಟು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಚಿತ್ರದ ಮೂಲಕ ನಿಮ್ಮ ಆಂತರಿಕ ಶಕ್ತಿ ಏನೆಂಬುದನ್ನು ತಿಳಿದುಕೊಳ್ಳಿ

ಮರದ ಕೊಂಬೆ: ನೀವು ಮೊದಲು ಮರದ ಕೊಂಬೆಯನ್ನು ನೋಡಿದರೆ ನೀವು ಯಾವುದೇ ಹೆಜ್ಜೆ ಇಡುವ ಮೊದಲು ಅದರ ಬಗ್ಗೆ ಸಾಕಷ್ಟು ವಿಶ್ಲೇಷಣೆ ಮಾಡುತ್ತೀರಿ, ಸಾಕಷ್ಟು ಸಮಯವನ್ನು ತೆಗೆದುಕೊಳ್ಳುತ್ತೀರಿ. ನಂತರವೇ ನಿಮ್ಮ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ. ಒಟ್ಟಿನಲ್ಲಿ ನೀವು ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಅದರ ಸರಿ ತಪ್ಪುಗಳ ಬಗ್ಗೆ ಚಿಂತನಾಶೀಲವಾಗಿ ಪರೀಕ್ಷಿಸುತ್ತೀರಿ. ಇದು ನಿಮಗೆ ಕಷ್ಟದ ಪರಿಸ್ಥಿತಿಯಲ್ಲೂ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಬಹಳಷ್ಟು ಸಹಾಯ ಮಾಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ