AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Personality Test: ಈ ಚಿತ್ರದಲ್ಲಿ ನೀವು ಮೊದಲು ಗಮನಿಸುವ ಅಂಶವೇ ಹೇಳುತ್ತೆ ನಿಮ್ಮ ವ್ಯಕ್ತಿತ್ವದ ರಹಸ್ಯ

ಕಣ್ಣಿಗೆ ಭ್ರಮೆಯನ್ನು ಉಂಟುಮಾಡುವ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ನಮ್ಮ ಮೆದುಳಿಗೆ ವ್ಯಾಯಾಮವನ್ನು ನೀಡುವುದು ಮಾತ್ರವಲ್ಲದೆ ನಮ್ಮ ರಹಸ್ಯ ವ್ಯಕ್ತಿತ್ವವನ್ನು ಸಹ ಬಹಿರಂಗಪಡಿಸುತ್ತವೆ. ಇಂತಹ ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿಗಳು ಸೋಷಿಯಲ್‌ ಮೀಡಿಯಾದಲ್ಲಿ ಪ್ರತಿನಿತ್ಯ ವೈರಲ್‌ ಆಗುತ್ತಿರುತ್ತವೆ. ಇಲ್ಲೊಂದು ಅಂತಹದ್ದೇ ಚಿತ್ರವೊಂದು ವೈರಲ್‌ ಆಗಿದ್ದು, ಹಸಿರು ಕಾಡು ಅಥವಾ ಮಹಿಳೆ ಆ ಚಿತ್ರದಲ್ಲಿ ನಿಮಗೆ ಮೊದಲು ಕಂಡ ಅಂಶ ಯಾವುವು ಎಂಬುದರ ಮೇಲೆ ನಿಮ್ಮ ವ್ಯಕ್ತಿತ್ವದ ರಹಸ್ಯ ಹೇಗಿದೆ ಎಂಬುದನ್ನು ತಿಳಿದುಕೊಳ್ಳಿ.

Personality Test: ಈ ಚಿತ್ರದಲ್ಲಿ ನೀವು ಮೊದಲು ಗಮನಿಸುವ ಅಂಶವೇ ಹೇಳುತ್ತೆ ನಿಮ್ಮ ವ್ಯಕ್ತಿತ್ವದ ರಹಸ್ಯ
ವ್ಯಕ್ತಿತ್ವ ಪರೀಕ್ಷೆImage Credit source: Times Of India
ಮಾಲಾಶ್ರೀ ಅಂಚನ್​
|

Updated on: Sep 04, 2025 | 4:41 PM

Share

ಸಾಮಾನ್ಯವಾಗಿ ಪ್ರತಿಯೊಬ್ಬರೂ ಸಹ ತಮ್ಮ ಭವಿಷ್ಯ ಹೇಗಿರ್ಬೋದು, ರಹಸ್ಯ ಗುಣ ಸ್ವಭಾವ ಹೇಗಿದೆ ಎಂಬೆಲ್ಲಾ ವಿಚಾರವನ್ನು ತಿಳಿಯಲು ಜ್ಯೋತಿಷ್ಯಶಾಸ್ತ್ರ, ಸಂಖ್ಯಾಶಾಸ್ತ್ರದ ಮೊರೆ ಹೋಗ್ತಾರೆ. ಆದರೆ ವ್ಯಕ್ತಿತ್ವ ಪರೀಕ್ಷೆಯ (Personality test) ಮೂಲಕ ನಮ್ಮ ಗುಣ ಸ್ವಭಾವ ಹೇಗಿದೆ ಎಂಬುದನ್ನು ನಾವೇ ತಿಳಿದುಕೊಳ್ಳಬಹುದು. ಹೌದು ದೇಹಕಾರ, ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌, ಹಸ್ತರೇಖೆ ಹೀಗೆ ವ್ಯಕ್ತಿತ್ವ ಪರೀಕ್ಷೆಯ ಹಲವು ವಿಧಾನಗಳ ಮೂಲಕ ನಾವು ನಮ್ಮ ಸೀಕ್ರೆಟ್‌ ಗುಣ ಸ್ವಭಾವವನ್ನು ತಿಳಿದುಕೊಳ್ಳಬಹುದು. ಇಲ್ಲೊಂದು ಅಂತಹದ್ದೇ ಚಿತ್ರ ವೈರಲ್‌ ಆಗಿದ್ದು, ಅದರಲ್ಲಿ ಹಸಿರು ಕಾಡು ಅಥವಾ ಮಹಿಳೆಯ ಮುಖ ಈ ಎರಡರಲ್ಲಿ ನಿಮಗ್ಯಾವ ಅಂಶ ಕಾಣಿಸಿತು ಎಂಬ ಆಧಾರದ ಮೇಲೆ ನಿಮ್ಮ ವ್ಯಕ್ತಿತ್ವದ ರಹಸ್ಯ ಹೇಗಿದೆ ಎಂಬುದನ್ನು ತಿಳಿದುಕೊಳ್ಳಿ.

ನಿಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ತಿಳಿಸುವ ಚಿತ್ರವಿದು:

ಈ ನಿರ್ದಿಷ್ಟ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ಹಸಿರು ಕಾಡು ಹಾಗೂ ಮಹಿಳೆಯ ಮುಖ ಇವೆರಡು ಅಂಶಗಳಿದ್ದು, ಇದರಲ್ಲಿ ನಿಮಗ್ಯಾವ ಅಂಶ ಮೊದಲು ಕಾಣಿಸಿತು ಎಂಬುದರ ಆಧಾರದ ಮೇಲೆ ನಿಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ಪರೀಕ್ಷಿಸಿಕೊಳ್ಳಿ.

ಮೊದಲು ಹಸಿರು ಕಾಡು ನೋಡಿದರೆ: ಈ ನಿರ್ದಿಷ್ಟ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ನೀವು ಮೊದಲು ಹಸಿರ ಕಾಡನ್ನು ಗಮನಿಸಿದರೆ ನೀವು ದೈನಂದಿನ ಜೀವನದ ಬಗ್ಗೆ ಆಗಾಗ್ಗೆ ಚಿಂತಿಸುವ ಅಥವಾ ಒತ್ತಡಕ್ಕೆ ಒಳಗಾಗುವ ವ್ಯಕ್ತಿ ಎಂದರ್ಥ. ಹೊರಗಿನಿಂದ ಜನ ನಿಮ್ಮನ್ನು ಮಹತ್ವಾಕಾಂಕ್ಷೆಯುಳ್ಳ, ಕಠಿಣ ಪರಿಶ್ರಮಿ ಮತ್ತು ಆತ್ಮವಿಶ್ವಾಸದ ವ್ಯಕ್ತಿಯಾಗಿ ನೋಡುತ್ತಾರೆ. ಆದರೆ ನೀವು ಮಾನಸಿಕವಾಗಿ ಹೆಚ್ಚು ಒತ್ತಡದಿಂದ ಇರುವವರು. ಹೌದು ನಿಮ್ಮ ಕೆಲಸದ ಹೊರೆಯನ್ನು ನಿಭಾಯಿಸಲು ನೀವು ಸಾಕಷ್ಟು ಒತ್ತಡವನ್ನು ಅನುಭವಿಸುತ್ತಿರುವ ವ್ಯಕ್ತಿಗಳು. ನೀವು ಆತ್ಮವಿಶ್ವಾಸವನ್ನು ಹೊಂದಿದ್ದರೂ, ಶಿಸ್ತುಬದ್ಧರಾಗಿದ್ದರೂ ಕೆಲವೊಮ್ಮೆ ಭವಿಷ್ಯದ ಬಗ್ಗೆ ಆತಂಕವನ್ನು ಹೊಂದಿರುತ್ತೀರಿ. ಶಾಂತಿ ಮತ್ತು ಸ್ಥಿರತೆಗಾಗಿ ಹಂಬಲಿಸುತ್ತೀರಿ. ಹೀಗಿದ್ದರೂ ಕೂಡಾ ದೃಢ ನಿಶ್ಚಯವನ್ನು ಹೊಂದಿರುವ ನೀವು, ಅಂದುಕೊಂಡಿದ್ದನ್ನು ಸಾಧಿಸುವ ವ್ಯಕ್ತಿ.

ಇದನ್ನೂ ಓದಿ
Image
ಈ ಚಿತ್ರದಲ್ಲಿ ನೀವು ಮೊದಲು ಕಂಡ ಅಂಶ ಹೇಳುತ್ತೆ ನಿಮ್ಮ ವ್ಯಕ್ತಿತ್ವ
Image
ನೀವು ಭಾವನಾತ್ಮಕ ವ್ಯಕ್ತಿಯೇ ಎಂಬುದನ್ನು ತಿಳಿಸುವ ಚಿತ್ರವಿದು
Image
ನೀವು ಭಾವನೆಗಳನ್ನು ಹೇಗೆ ನಿಭಾಯಿಸುತ್ತೀರಿ ಎಂಬುದನ್ನು ತಿಳಿಸುತ್ತೆ ಈ ಚಿತ್ರ
Image
ಈ ಚಿತ್ರದಲ್ಲಿ ನೀವು ಮೊದಲು ನೋಡುವ ಅಂಶ ನಿಮ್ಮ ವ್ಯಕ್ತಿತ್ವವನ್ನು ಹೇಳುತ್ತೆ

ಇದನ್ನೂ ಓದಿ: ಗೊರಿಲ್ಲಾ, ಪಕ್ಷಿಗಳು, ಸಿಂಹ, ಮೀನು; ನೀವು ಮೊದಲು ಕಂಡ ಅಂಶ ಹೇಳುತ್ತೆ ನಿಮ್ಮ ವ್ಯಕ್ತಿತ್ವ

ಮಹಿಳೆಯ ಮುಖವನ್ನು ಗಮನಿಸಿದರೆ: ನೀವು ಈ ಚಿತ್ರದಲ್ಲಿ ಮೊದಲು ಮಹಿಳೆಯ ಮುಖವನ್ನು ಗಮನಿಸಿದರೆ ನೀವು ಶಾಂತ, ಸರಳ ಸ್ವಭಾವದ ವ್ಯಕ್ತಿಯೆಂದು ಅರ್ಥ. ನೀವು ಪ್ರಾಯೋಗಿಕ ಮತ್ತು ಪ್ರಸ್ತುತ ಕ್ಷಣದಲ್ಲಿ ಬದುಕಲು ಪ್ರಯತ್ನಿಸುವ ವ್ಯಕ್ತಿಯಾಗಿರುತ್ತೀರಿ. ನೀವು ನಿಮ್ಮ ಜೀವನದ ಬಗ್ಗೆ ಸಕಾರಾತ್ಮಕ ಮನೋಭಾವನೆಯನ್ನು ಹೊಂದಿದ್ದು, ನಿಮ್ಮ ಈ ಗುಣ ಜನರಿಗೂ ಇಷ್ಟವಾಗುತ್ತದೆ. ಇನ್ನೊಂದೇನೆಂದರೆ ನೀವು ನಿಮ್ಮ ಸ್ವ ಬೆಳವಣಿಗೆಯ ಮೇಲೆ ಹೆಚ್ಚು ಗಮನಹರಿಸುವ ವ್ಯಕ್ತಿ. ಅಲ್ಲದೆ ನೀವು ನಿಮ್ಮತನದ ಮೂಲಕ ಹೆಚ್ಚು ಸಂತೃಪ್ತರಾಗಿ ಮತ್ತು ಶಾಂತಿಯಿಂದ ಇರುವವರಾಗಿರುತ್ತೀರಿ.ಇದಲ್ಲದೆ ನಿಮಗೆ ತೀಕ್ಷ್ಣವಾದ ಸಿಕ್ಸ್ತ್‌ ಸೆನ್ಸ್‌ ಇದ್ದು, ಇದರಿಂದ ಇತತರಿಗೆ ನಿಮ್ಮನ್ನು ಮೋಸಗೊಳಿಸುವುದು ಕಷ್ಟಸಾಧ್ಯವಾಗಿದೆ. ನೀವು ಪ್ರತಿಯೊಂದು ವಿಷಯದಲ್ಲೂ ಬಹಳ ಸೂಕ್ಷ್ಮವಾಗಿ ಇರುವ ವ್ಯಕ್ತಿಗಳು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಕಾರುಣ್ಯ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್
ಕಾರುಣ್ಯ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​