AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Personality Test: ಈ ಚಿತ್ರದಲ್ಲಿ ನಿಮಗೆ ಮೊದಲು ಕಾಣಿಸುವ ಅಂಶ ನಿಮ್ಮ ಶಕ್ತಿ-ದೌರ್ಬಲ್ಯ ಬಗ್ಗೆ ತಿಳಿಸುತ್ತದೆ

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ನಮ್ಮ ಬುದ್ಧಿವಂತಿಕೆ, ದೃಷ್ಟಿ ತೀಕ್ಷ್ಣತೆಯನ್ನು ಪರೀಕ್ಷಿಸುವ ಹಾಗೂ ಮೆದುಳಿಗೆ ವ್ಯಾಯಾಮ ನೀಡುವ ಒಂದೊಳ್ಳೆ ಒಗಟಿನ ಆಟ ಮಾತ್ರವಲ್ಲದೆ ಇವು ನಮ್ಮ ನಿಗೂಢ ವ್ಯಕ್ತಿತ್ವವನ್ನು ಬಹಿರಂಗಪಡಿಸುವ ಸಾಧನವೂ ಹೌದು. ಇಂತಹ ಸಾಕಷ್ಟು ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌ ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುತ್ತವೆ. ಇಲ್ಲೊಂದು ಅದೇ ರೀತಿಯ ಚಿತ್ರ ವೈರಲ್‌ ಆಗಿದ್ದು, ಅದರಲ್ಲಿ ನಿಮಗೆ ಮೊದಲು ಕಾಣಿಸುವ ಅಂಶದ ಆಧಾರದ ಮೇಲೆ ನಿಮ್ಮ ಸಾಮರ್ಥ್ಯ, ದೌರ್ಬಲ್ಯ ಏನೆಂಬುದನ್ನು ತಿಳಿಯಿರಿ.

Personality Test: ಈ ಚಿತ್ರದಲ್ಲಿ ನಿಮಗೆ ಮೊದಲು ಕಾಣಿಸುವ ಅಂಶ ನಿಮ್ಮ ಶಕ್ತಿ-ದೌರ್ಬಲ್ಯ ಬಗ್ಗೆ ತಿಳಿಸುತ್ತದೆ
ವ್ಯಕ್ತಿತ್ವ ಪರೀಕ್ಷೆImage Credit source: Times Of India
ಮಾಲಾಶ್ರೀ ಅಂಚನ್​
|

Updated on: Sep 28, 2025 | 6:05 PM

Share

ಪ್ರತಿಯೊಬ್ಬ ವ್ಯಕ್ತಿಯ ವ್ಯಕ್ತಿತ್ವ ಭಿನ್ನವಾಗಿರುತ್ತವೆ. ಈ ವಿಭಿನ್ನ ವ್ಯಕ್ತಿತ್ವವನ್ನು (Personality)  ಆತನ ನಡವಳಿಕೆಯ ಆಧಾರದ ಮೇಲೆ ಜನ ಅಳೆಯುತ್ತಾರೆ. ಹೀಗೆ ನಾವು ಹೇಗೆ ನಡೆದುಕೊಳ್ಳುತ್ತೇವೆ ಎಂಬುದರ ಆಧಾರದ ಮೇಲೆ ಜನ ನಮ್ಮ ವ್ಯಕ್ತಿತ್ವವನ್ನು ಅಳೆಯುತ್ತಾರೆ ಅಲ್ವಾ. ಅದೇ ರೀತಿ ವ್ಯಕ್ತಿತ್ವ ಪರೀಕ್ಷೆಯ ಮೂಲಕ ನಮ್ಮ ನಿಗೂಢ ವ್ಯಕ್ತಿತ್ವ ಹೇಗಿದೆ ಎಂಬುದನ್ನು ನಾವೇ ತಿಳಿದುಕೊಳ್ಳಬಹುದು. ಇಂತಹ ಸಾಕಷ್ಟು ಚಿತ್ರಗಳು ಸೋಷಿಯಲ್‌ ಮೀಡಿಯಾದಲ್ಲಿ ಕಾಣಸಿಗುತ್ತವೆ. ಇಲ್ಲೊಂದು ಅಂತಹದ್ದೇ ಚಿತ್ರ ವೈರಲ್‌ ಆಗಿದ್ದು, ಆ ಚಿತ್ರದಲ್ಲಿ ನಿಮಗೆ ಮೊದಲು ಯಾವ ಅಂಶ ಕಣ್ಣಿಗೆ ಬಿತ್ತು ಎಂಬುದರ ಆಧಾರದ ಮೇಲೆ ನಿಮ್ಮ ಸಾಮರ್ಥ್ಯ ಮತ್ತು ದೌರ್ಬಲ್ಯಗಳು ಯಾವುವು ಎಂಬುದನ್ನು ನೀವು ತಿಳಿದುಕೊಳ್ಳಿ.

ನಿಮ್ಮ ಸಾಮರ್ಥ್ಯ ಮತ್ತು ದೌರ್ಬಲ್ಯದ ಬಗ್ಗೆ ತಿಳಿಯಿರಿ:

ಈ ನಿರ್ದಿಷ್ಟ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವನ್ನು ಮರೀನಾ ವಿನ್‌ಬರ್ಗ್‌ (Marina_neuralean) ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ನಿರ್ದಿಷ್ಟ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ಕಾಡು, ಪರ್ವತ, ಆಕಾಶ, ಮಹಿಳೆ ಈ ನಾಲ್ಕು ಅಂಶಗಳಿದ್ದು, ಅದರಲ್ಲಿ ನಿಮಗೆ ಮೊದಲು ಯಾವ ಅಂಶ ಕಾಣಿಸಿತು ಎಂಬುದರ ಮೇಲೆ ನಿಮ್ಮ ಸಾಮರ್ಥ್ಯ ಮತ್ತು ದೌರ್ಬಲ್ಯಗಳ ಬಗ್ಗೆ ತಿಳಿದುಕೊಳ್ಳಿ.

ಇದನ್ನೂ ಓದಿ
Image
ನೀವು ಸೋಮಾರಿಯೇ, ಶ್ರಮಜೀವಿಯೇ ಎಂಬುದನ್ನು ಈ ಚಿತ್ರವೇ ತಿಳಿಸುತ್ತದೆ
Image
ನೀವು ಆಯ್ಕೆ ಮಾಡುವ ಕಿಟಕಿ ಬಹಿರಂಗಪಡಿಸುತ್ತೆ ನಿಮ್ಮ ವ್ಯಕ್ತಿತ್ವದ ರಹಸ್ಯ
Image
ಕಾರು ಎತ್ತ ಕಡೆ ಸಾಗುತ್ತಿದೆ ಎಂಬ ಅಂಶ ನಿಮ್ಮ ವ್ಯಕ್ತಿತ್ವದ ಬಗ್ಗೆ ಹೇಳುತ್ತೆ
Image
ನೀವು ಯಾವ ವಿಚಾರಕ್ಕೆ ಭಯ ಪಡುವವರು ಎಂಬುದನ್ನು ಈ ಚಿತ್ರ ತಿಳಿಸುತ್ತೆ

ಕಾಡು: ಈ ನಿರ್ದಿಷ್ಟ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ನಿಮಗೆ ಕಾಡು ಕಂಡರೆ, ನೀವು ಬೆಂಬಲ ಮತ್ತು ಸ್ಥಿರತೆಯನ್ನು ಹುಡುಕುತ್ತಿದ್ದೀರಿ ಮತ್ತು ನೀವು ದೈನಂದಿನ ಜೀವನದ ಜಂಜಾಟದಲ್ಲಿ ಸ್ವಲ್ಪ ಕಳೆದುಹೋಗುತ್ತಿದ್ದೀರಿ ಎಂದರ್ಥ. ಅರಣ್ಯವು ಪ್ರಕೃತಿಯೊಂದಿಗಿನ ನಿಮ್ಮ ಸಂಪರ್ಕ, ನಿಮ್ಮ ಏಕಾಂತತೆಯ ಅಗತ್ಯ ಮತ್ತು ಶಾಂತವಾಗಿ ನಿಮ್ಮ ಶಕ್ತಿಯನ್ನು ಪುನಃಸ್ಥಾಪಿಸುವುದನ್ನು ಸಂಕೇತಿಸುತ್ತದೆ. ಅಲ್ಲದೆ ಇದು ನೀವು ಜೀವನದ ಜಂಜಾಟದಿಂದ ಸ್ವಲ್ಪ ಬ್ರೇಕ್‌ ತೆಗೆದುಕೊಂಡು ವಿಶ್ರಾಂತಿ ಪಡೆಯಬೇಕು ಎಂಬುದನ್ನು ಸೂಚಿಸುತ್ತದೆ.

ವಿಡಿಯೋ ಇಲ್ಲಿದೆ ನೋಡಿ:

ಪರ್ವತ: ಈ ಚಿತ್ರದಲ್ಲಿ ನೀವು ಮೊದಲು ಪರ್ವತವನ್ನು ಗಮನಿಸಿದರೆ, ನೀವು ನಿಮ್ಮ ಸಾಧನೆಯ  ಮೇಲೆ ಗಮನವನ್ನು ಕೇಂದ್ರೀಕರಿಸಿದ ಗುರಿ-ಆಧಾರಿತ ವ್ಯಕ್ತಿ ಎಂದರ್ಥ. ನೀವು ಸವಾಲುಗಳನ್ನು ಜಯಿಸಲು ಸಾಕಷ್ಟು ಶ್ರಮವನ್ನು ವಹಿಸುವವರಾಗಿರುತ್ತೀರಿ. ಆದರೆ ಇದರಿಂದ ನೀವು ಸ್ವಲ್ಪ ದಣಿದಂತಾಗುತ್ತೀರಿ.

ಇದನ್ನೂ ಓದಿ: ನೀವು ಸೋಮಾರಿಯೇ, ಶ್ರಮಜೀವಿಯೇ ಎಂಬುದನ್ನು ಚಿತ್ರವೇ ತಿಳಿಸುತ್ತದೆ

ಆಕಾಶ: ನಿಮಗೆ ಮೊದಲು ಆಕಾಶ ಕಾಣಿಸಿದರೆ, ನಿಮ್ಮ ಮನಸ್ಸು ಭವಿಷ್ಯದ ಮೇಲೆ ಕೇಂದ್ರೀಕೃತವಾಗಿದೆ ಎಂದರ್ಥ. ನೀವು ಬಹಳಷ್ಟು ಯೋಚಿಸುತ್ತೀರಿ ಮತ್ತು ಕನಸು ಕಾಣುತ್ತೀರಿ. ಆಕಾಶವು ಸ್ವಾತಂತ್ರ್ಯ, ಆಧ್ಯಾತ್ಮಿಕ ಹುಡುಕಾಟ ಮತ್ತು ಕೆಲವೊಮ್ಮೆ ವಾಸ್ತವದಿಂದ ಕನಸಿನ ಲೋಕಕ್ಕೆ ತಪ್ಪಿಸಿಕೊಳ್ಳುವುದನ್ನು ಸಂಕೇತಿಸುತ್ತದೆ.

ಮಹಿಳೆ: ಈ ಚಿತ್ರದಲ್ಲಿ ನೀವು ಮೊದಲು ಮಹಿಳೆಯನ್ನು ಗಮನಿಸಿದರೆ ನಿಮ್ಮ ಗ್ರಹಿಕೆ ವ್ಯಕ್ತಿತ್ವ, ಸಂಬಂಧಗಳು ಮತ್ತು ಭಾವನೆಗಳ ಮೇಲೆ ಕೇಂದ್ರೀಕೃತವಾಗಿದೆ. ಮಹತ್ವಾಕಾಂಕ್ಷೆಯುಳ್ಳವರಾದ ನೀವು ಇತರರೊಂದಿಗೆ ಸಾಮರಸ್ಯದಿಂದಿರಲು ಬಯಸುವವರಾಗಿರುತ್ತೀರಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ