AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Personality Test: ಪಕ್ಷಿ, ಮರ; ಈ ಚಿತ್ರದಲ್ಲಿ ನೀವು ಮೊದಲು ಗಮನಿಸುವ ಅಂಶ ನಿಮ್ಮ ವ್ಯಕ್ತಿತ್ವದ ಬಗ್ಗೆ ಸಾಕಷ್ಟು ಹೇಳುತ್ತೆ

ಇತ್ತೀಚಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಪರೀಕ್ಷೆಗಳು ಸಾಕಷ್ಟು ಜನಪ್ರಿಯವಾಗಿದೆ. ಇವುಗಳು ಮೆದುಳಿಗೆ ಕೆಲಸವನ್ನು ನೀಡುವುದರ ಜೊತೆಗೆ ನಮ್ಮೊಳಗಿನ ರಹಸ್ಯ ವ್ಯಕ್ತಿತ್ವವನ್ನು ಸಹ ತಿಳಿಸುತ್ತದೆ. ಅಂತಹದ್ದೊಂದು ಚಿತ್ರ ಇದೀಗ ವೈರಲ್‌ ಆಗಿದ್ದು, ಆ ಚಿತ್ರದಲ್ಲಿ ಪಕ್ಷಿ ಮತ್ತು ಮರವಿದ್ದು, ಇದರಲ್ಲಿ ನಿಮಗೆ ಯಾವ ಅಂಶ ಮೊದಲು ಕಾಣಿಸಿತು ಎಂಬುದರ ಮೇಲೆ ನೀವು ಸ್ವತಂತ್ರವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವವರೇ ಎಂಬುದನ್ನು ಪರೀಕ್ಷಿಸಿ.

Personality Test: ಪಕ್ಷಿ, ಮರ; ಈ ಚಿತ್ರದಲ್ಲಿ ನೀವು ಮೊದಲು ಗಮನಿಸುವ ಅಂಶ ನಿಮ್ಮ ವ್ಯಕ್ತಿತ್ವದ ಬಗ್ಗೆ ಸಾಕಷ್ಟು ಹೇಳುತ್ತೆ
ವ್ಯಕ್ತಿತ್ವ ಪರೀಕ್ಷೆImage Credit source: Marina Winberg/Instagram
ಮಾಲಾಶ್ರೀ ಅಂಚನ್​
|

Updated on: Jun 17, 2025 | 3:58 PM

Share

ಸಾಮಾನ್ಯವಾಗಿ ವ್ಯಕ್ತಿಯ ವ್ಯಕ್ತಿತ್ವವನ್ನು (Personality) ಆತನ ನಡವಳಿಕೆಯ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ಇನ್ನೂ ಜ್ಯೋತಿಷ್ಯಶಾಸ್ತ್ರದಲ್ಲಿ ರಾಶಿ ನಕ್ಷತ್ರದ ಆಧಾರದ ಮೇಲೆ, ಸಂಖ್ಯಾ ಶಾಸ್ತ್ರದಲ್ಲಿ ಹುಟ್ಟಿದ ದಿನಾಂಕದ ಆಧಾರದ ಮೇಲೆ ವ್ಯಕ್ತಿಯ ಗುಣ ಸ್ವಭಾವವನ್ನು ತಿಳಿಯಬಹುದು. ಅದೇ ರೀತಿ ಪರ್ಸನಾಲಿಟಿ ಟೆಸ್ಟ್‌ (Personality Test) ಚಿತ್ರಗಳ ಮೂಲಕವೂ ನಾವು ನಮ್ಮ ವ್ಯಕ್ತಿತ್ವವನ್ನು ತಿಳಿಯಬಹುದು. ಪರ್ಸನಾಲಿಟಿ ಟೆಸ್ಟ್‌ ಮುಖಾಂತರ ನೀವು ಕೂಡಾ ನಿಮ್ಮ ನಿಗೂಢ ಗುಣ ಸ್ವಭಾವ ಹೇಗಿದೆ ಎಂಬುದನ್ನು ಪರೀಕ್ಷೆ ಮಾಡಿರುತ್ತೀರಿ ಅಲ್ವಾ. ಹಾಗೆಯೇ ಇಂದಿನ ಪರ್ಸನಾಲಿಟಿ ಟೆಸ್ಟ್‌ನಲ್ಲಿ ನೀವು ಸ್ವತಂತ್ರವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವವರೇ ಅಥವಾ ನೀವು ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಇನ್ನೊಬ್ಬರ ಸಹಾಯವನ್ನು ಕೇಳುತ್ತೀರೇ ಎಂಬುದನ್ನು ಪರೀಕ್ಷಿಸಿ.

ಚಿತ್ರ ನೋಡಿ, ನೀವು ಯಾವ ರೀತಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ ತಿಳಿಯಿರಿ:

ಈ ನಿರ್ದಿಷ್ಟ ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟನ್ನು marina__neauralean ಹೆಸರಿನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ಹಕ್ಕಿಗಳು ಮತ್ತು ಮರ ಇವೆರಡು ಅಂಶಗಳಿದ್ದು, ಇವುಗಳಲ್ಲಿ ನಿಮಗೆ ಮೊದಲು ಕಾಣಿಸಿದ್ದು ಯಾವುದು ಎಂಬುದರ ಮೇಲೆ ನೀವು ನಿರ್ಧಾರಗಳನ್ನು ಹೇಗೆ ತೆಗದುಕೊಳ್ಳುತ್ತೀರಿ ಎಂಬುದನ್ನು ಪರೀಕ್ಷಿಸಿ.

ಇದನ್ನೂ ಓದಿ
Image
ನೀವು ನಿರ್ಧಾರ ತೆಗೆದುಕೊಳ್ಳುವ ರೀತಿಯನ್ನು ವಿವರಿಸುವ ಚಿತ್ರವಿದು
Image
ಈ ಚಿತ್ರ ನೋಡಿ ನಿಮ್ಮ ನಿಗೂಢ ಗುಣ ಸ್ವಭಾವವನ್ನು ಪರೀಕ್ಷಿಸಿ
Image
ನೀವು ಹಠಮಾರಿ ಸ್ವಭಾವದವರೇ ಎಂಬುದನ್ನು ತಿಳಿಸುವ ಚಿತ್ರವಿದು
Image
ನೀವು ಹುಟ್ಟಿದ ತಿಂಗಳೇ ತಿಳಿಸುತ್ತೆ ನಿಮ್ಮ ಅದೃಷ್ಟದ ಬಣ್ಣ ಯಾವುದೆಂದು

ವಿಡಿಯೋ ಇಲ್ಲಿದೆ ನೋಡಿ:

ಮರ: ಈ ಚಿತ್ರದಲ್ಲಿ ನಿಮಗೆ ಮೊದಲು ಮರ ಕಾಣಿಸಿದರೆ ನೀವು ಸ್ವತಂತ್ರವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವವರು ಎಂದರ್ಥ. ನೀವು ಇತರರ ಮಾತನ್ನು ಕೇಳಿದರೂ, ಅದು ನಿಮ್ಮ ಸ್ವಂತ ನಿರ್ಧಾರದ ಮೇಲೆ ಪರಿಣಾಮ ಬೀರುವುದಿಲ್ಲ. ನೀವು ಯಾವಾಗಲೂ ನಿಮ್ಮ ಮನಸ್ಸಿಗೆ ಸರಿ ಅನಿಸುವ ನಿರ್ಧಾರಗಳನ್ನೇ ತೆಗೆದುಕೊಳ್ಳುತ್ತೀರಿ. ನಿಮಗೆ ಸರಿ ಎನಿಸುವ ಪ್ರತಿಯೊಂದು ಕೆಲಸವನ್ನು ಸಹ ನೀವು ಮಾಡುತ್ತೀರಿ. ನೀವು ನಿಮ್ಮ ತತ್ವಗಳಿಗೆ ನಿಷ್ಠರಾಗಿರುವುದು ಅದು ನಿಮ್ಮ ಅಮೂಲ್ಯ ಕೌಶಲ್ಯ ಅಂತಾನೇ ಹೇಳಬಹುದು. ಒಟ್ಟಾರೆಯಾಗಿ ನೀವು ನಿಮಗೆ ಸರಿ ಅನಿಸಿದ ನಿರ್ಧಾರಗಳನ್ನೇ ತೆಗೆದುಕೊಳ್ಳುತ್ತೀರಿ.

ಇದನ್ನೂ ಓದಿ: ನೀವು ಈ ಚಿತ್ರದಲ್ಲಿ ಮೊದಲು ಗಮನಿಸುವ ಅಂಶ ನೀವು ನಿರ್ಧಾರಗಳನ್ನು ತೆಗೆದುಕೊಳ್ಳುವ ರೀತಿಯ ಬಗ್ಗೆ ಸಾಕಷ್ಟು ಹೇಳುತ್ತದೆ

ಪಕ್ಷಿಗಳು: ಈ ನಿರ್ದಿಷ್ಟ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ನಿಮಗೆ ಮೊದಲು ಹಕ್ಕಿ ಕಾಣಿಸಿದರೆ ನಿಮಗೆ ನೀವು ತೆಗೆದುಕೊಳ್ಳುವ ನಿರ್ಧಾರಗಳ ಮೇಲೆ ನಂಬಿಕೆಯಿಲ್ಲ ಎಂದರ್ಥ. ನೀವು ತೆಗೆದುಕೊಳ್ಳುವ ನಿರ್ಧಾರಗಳ ಬಗ್ಗೆ ಅದು ಸರಿಯೇ ಅಥವಾ ತಪ್ಪೇ ಎಂಬ ಅನುಮಾನಗಳಿದ್ದು, ಹಾಗಾಗಿ ನೀವು ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ನಿಮ್ಮ ಹತ್ತಿರದವರ ಸಲಹೆ ಮತ್ತು ಅಭಿಪ್ರಾಯಗಳನ್ನು ಕೇಳುತ್ತೀರಿ. ಆದರೆ ಸ್ವಂತವಾಗಿ ಯೋಚಿಸುವುದಿಲ್ಲ.

ಇನ್ನಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ