AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Personality Test: ನೀವು ಭಾವನೆಗಳನ್ನು ಹೇಗೆ ನಿಭಾಯಿಸುತ್ತೀರಿ ಎಂಬುದನ್ನು ಈ ಚಿತ್ರದ ಮೂಲಕ ತಿಳಿಯಬಹುದು

ಇತ್ತೀಚಿನ ದಿನಗಳಲ್ಲಿ ವ್ಯಕ್ತಿತ್ವ ಪರೀಕ್ಷೆಗಳು ಸಾಕಷ್ಟು ಜನಪ್ರಿಯವಾಗಿದೆ. ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌, ದೇಹಕಾರ ಸೇರಿದಂತೆ ಬಗೆ ಬಗೆಯ ವ್ಯಕ್ತಿತ್ವ ಪರೀಕ್ಷೆಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುತ್ತವೆ. ಇಲ್ಲೊಂದು ಅಂತಹದ್ದೇ ಚಿತ್ರ ವೈರಲ್‌ ಆಗಿದ್ದು, ಅದರಲ್ಲಿ ದೊಡ್ಡ ಮುಖ, ದಂಪತಿ, ನಾಯಿ ಈ ಮೂರು ಅಂಶಗಳಲ್ಲಿ ನಿಮಗೆ ಮೊದಲು ಕಾಣಿಸಿದ್ದೇನು ಎಂಬುದರ ಮೇಲೆ ನೀವು ಭಾವನೆಗಳನ್ನು ಯಾವ ರೀತಿ ನಿಭಾಯಿಸುತ್ತೀರಿ ಎಂಬುದನ್ನು ತಿಳಿಯಿರಿ.

Personality Test: ನೀವು ಭಾವನೆಗಳನ್ನು ಹೇಗೆ ನಿಭಾಯಿಸುತ್ತೀರಿ ಎಂಬುದನ್ನು ಈ ಚಿತ್ರದ ಮೂಲಕ ತಿಳಿಯಬಹುದು
ವ್ಯಕ್ತಿತ್ವ ಪರೀಕ್ಷೆImage Credit source: Times Now
ಮಾಲಾಶ್ರೀ ಅಂಚನ್​
|

Updated on: Aug 28, 2025 | 3:27 PM

Share

ವ್ಯಕ್ತಿತ್ವ ಪರೀಕ್ಷೆಯ (Personality Test) ಹಲವು ವಿಧಾನಗಳ ಮೂಲಕ ನಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ಸ್ವತಃ ನಾವೇ ಪರೀಕ್ಷಿಸಿಕೊಳ್ಳಬಹುದು. ಅವುಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವೂ ಒಂದು. ಕಣ್ಣಿಗೆ ಭ್ರಮೆಯನ್ನು ಉಂಟು ಮಾಡುವ ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಬುದ್ಧಿವಂತಿಕೆ, ಏಕಾಗ್ರತೆ, ದೃಷ್ಟಿ ತೀಕ್ಷ್ಣತೆಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ನಮ್ಮ ಸೀಕ್ರೆಟ್‌ ವ್ಯಕ್ತಿತ್ವವನ್ನು ಸಹ ಬಹಿರಂಗಪಡಿಸುತ್ತವೆ. ಇಂತಹದ್ದೊಂದು ಚಿತ್ರ ಇದೀಗ ವೈರಲ್‌ ಆಗಿದ್ದು, ಆ ಚಿತ್ರದಲ್ಲಿ ಒಂದು ಮುಖ, ಒಂದು ಜೋಡಿ, ಒಂದು ನಾಯಿ ಈ ಮೂರು ಅಂಶಗಳಲಿದ್ದು, ಇದರಲ್ಲಿ ಮೊದಲು ನಿಮಗೆ ಕಾಣಿಸಿದ್ದೇನು ಎಂಬುದರ ಆಧಾರದ ಮೇಲೆ ನೀವು ಭಾವನೆಗಳನ್ನು ಯಾವ ರೀತಿ ನಿಭಾಯಿಸುವ ವ್ಯಕ್ತಿ ಎಂಬುದನ್ನು ಪರೀಕ್ಷಿಸಿ.

ನೀವು ಭಾವನೆಗಳನ್ನು ಹೇಗೆ ನಿಭಾಯಿಸುತ್ತೀರಿ ಎಂಬುದನ್ನು ತಿಳಿಸುತ್ತೆ ಈ ಚಿತ್ರ:

ನೀವು ಮೊದಲು ಮುಖವನ್ನು ಗಮನಿಸಿದರೆ: ಈ ನಿರ್ದಿಷ್ಟ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ವೃದ್ಧನ ಮುಖವನ್ನು ಮೊದಲು ನೀವು ಗಮನಿಸಿದರೆ, ನೀವು ವಿವರಗಳನ್ನು ಒಟ್ಟಾರೆಯಾಗಿ ಸಂಪರ್ಕಿಸುವ ವ್ಯಕ್ತಿಯೆಂದು ಅರ್ಥ. ನೀವು ಗೊಂದಲಕ್ಕೆ ಒಳಗಾಗುವ ಬದಲು ವಿಷಯದ ಸಾರಗಳ ಮೇಲೆ ನಿಮ್ಮ ಗಮನವನ್ನು ಕೇಂದ್ರೀಕರಿಸುತ್ತೀರಿ.  ಈ ದೃಷ್ಟಿಕೋನವು ನಿಮ್ಮನ್ನು ಅರ್ಥಗರ್ಭಿತ ಮತ್ತು ಬುದ್ಧಿವಂತರನ್ನಾಗಿ ಮಾಡುತ್ತದೆ. ಆದರೂ ಕೆಲವೊಮ್ಮೆ ನೀವು ಮುಖ್ಯವಾಗಬಹುದಾದ ಸಣ್ಣ ವಿವರಗಳನ್ನು ಕಡೆಗಣಿಸುವ ಸಾಧ್ಯತೆ ಇರುತ್ತದೆ. ಒಟ್ಟಾರೆಯಾಗಿ ನಿಮ್ಮ ವಿಶಾಲ ದೃಷ್ಟಿಕೋನ ಮತ್ತು ಶಾಂತ ದೃಷ್ಟಿಕೋನದಿಂದ ಇತರರಿಗೆ ಮಾರ್ಗದರ್ಶನ ನೀಡುವ ಸಾಮರ್ಥ್ಯ ನಿಮ್ಮಲ್ಲಿದೆ.

ನೀವು ಮೊದಲು ದಂಪತಿಗಳನ್ನು ಗಮನಿಸಿದರೆ: ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ನೀವು ಮೊದಲು ದಂಪತಿಯನ್ನು ಗಮನಿಸಿದರೆ, ನೀವು  ಸಂಬಂಧಗಳು ಮತ್ತು ಮಾನವ ಸಂಪರ್ಕವನ್ನು ಹೆಚ್ಚಾಗಿ ಗೌರವಿಸುವ ವ್ಯಕ್ತಿಯೆಂದು ಅರ್ಥ. ಸಹಾನುಭೂತಿ, ನಿಷ್ಠೆ ಮತ್ತು ಅನ್ಯೋನ್ಯತೆ ನಿಮ್ಮ ಜೀವನದ ಕೇಂದ್ರಬಿಂದುವಾಗಿದೆ. ತುಂಬಾನೇ ಸಹಾನುಭೂತಿಯನ್ನು ಹೊಂದಿರುವ ನೀವು ಇತರರ ಭಾವನೆಗಳಿಗೆ ತಕ್ಷಣ ಸ್ಪಂದಿಸುವ ವ್ಯಕ್ತಿ. ನಿಮ್ಮ ಸ್ವಂತಕ್ಕಿಂತ ಇತರರ ಭಾವನೆಗಳಿಗೆ ಬೆಲೆ ಕೊಡಲು ಹೋಗುವ ಈ ನಿಮ್ಮ ಗುಣದಿಂದ ಕೆಲವೊಮ್ಮೆ ನಿಮಗೆ ನೋವುಂಟಾಗುವ ಸಾಧ್ಯತೆ ಇರುತ್ತದೆ. ಒಟ್ಟಾರೆಯಾಗಿ ನೀವು ಪ್ರೀತಿ, ಭಾವನೆಗಳಿಗೆ ಬೆಲೆ ಕೊಡುವ ವ್ಯಕ್ತಿ.

ಇದನ್ನೂ ಓದಿ
Image
ಈ ಚಿತ್ರದಲ್ಲಿ ನೀವು ಮೊದಲು ನೋಡುವ ಅಂಶ ನಿಮ್ಮ ವ್ಯಕ್ತಿತ್ವವನ್ನು ಹೇಳುತ್ತೆ
Image
ಈ ಒಗಟಿನ ಚಿತ್ರದ ಮೂಲಕ ನಿಮ್ಮ ಸೀಕ್ರೆಟ್‌ ವ್ಯಕ್ತಿತ್ವ ಹೇಗಿದೆ ಪರೀಕ್ಷಿಸಿ
Image
ಈ ಚಿತ್ರದ ಮೂಲಕ ನೀವು ನಿಮ್ಮ ರಹಸ್ಯ ವ್ಯಕ್ತಿತ್ವವನ್ನು ತಿಳಿಯಬಹುದು
Image
ಈ ಚಿತ್ರದಲ್ಲಿ ನೀವು ಗಮನಿಸುವ ಮೊದಲ ಅಂಶ ನಿಮ್ಮ ವ್ಯಕ್ತಿತ್ವ ತಿಳಿಸುತ್ತದೆ

ಇದನ್ನೂ ಓದಿ: ಈ ಚಿತ್ರದಲ್ಲಿ ನೀವು ಮೊದಲು ನೋಡುವ ಅಂಶದಿಂದ ನಿಮ್ಮ ವ್ಯಕ್ತಿತ್ವವನ್ನು ಪರೀಕ್ಷಿಸಬಹುದು

ನೀವು ಮೊದಲು ನಾಯಿಯನ್ನು ಗಮನಿಸಿದರೆ: ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ನೀವು ಮೊದಲು ನಾಯಿಯನ್ನು ಗಮನಿಸಿದರೆ, ನೀವು ಬಹಳ ನಿಷ್ಠೆಯ ವ್ಯಕ್ತಿಯೆಂದು ಅರ್ಥ. ನೀವು ಜೀವನದಲ್ಲಿ ಶಾಂತಿ  ಮತ್ತು ಸ್ಥಿರತೆಯನ್ನು ಬಯಸುವವರಾಗಿರುತ್ತೀರಿ. ಜೊತೆಗೆ ನೀವು ನಿಮ್ಮ ಪ್ರೀತಿಪಾತ್ರರನ್ನು ಕಷ್ಟಗಳಿಂದ ರಕ್ಷಿಸುವ ಅವರಿಗೆ ಸಹಾಯವನ್ನು ಮಾಡುವ ರಕ್ಷಣಾತ್ಮಕ ಪ್ರವೃತ್ತಿಯನ್ನು ಹೊಂದಿರುವ ವ್ಯಕ್ತಿಯೂ ಹೌದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ