AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Personality Test: ಹುಲಿ, ಮರ ಇದರಲ್ಲಿ ನಿಮಗೆ ಮೊದಲು ಕಂಡಿದ್ದೇನು? ಚಿತ್ರ ನೋಡಿ ವ್ಯಕ್ತಿತ್ವ ಪರೀಕ್ಷಿಸಿ

ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌ಗಳು ಇತ್ತೀಚಿಗೆ ಸಖತ್‌ ಟ್ರೆಂಡಿಂಗ್‌ನಲ್ಲಿದೆ. ಈ ಚಿತ್ರಗಳು ಮೆದುಳಿಗೆ ವ್ಯಾಯಾಮವನ್ನು ನೀಡುವುದರ ಜೊತೆಗೆ ನಮ್ಮ ರಹಸ್ಯ ವ್ಯಕ್ತಿತ್ವ ಹೇಗಿದೆ ಎಂಬುದನ್ನು ಕೂಡಾ ಪರಿಚಯಿಸುತ್ತವೆ. ಅಂತಹದ್ದೊಂದು ಆಪ್ಟಿಕಲ್‌ ಇಲ್ಯೂಷನ್‌ ಚಿತ್ರ ಇದೀಗ ವೈರಲ್‌ ಆಗಿದ್ದು, ಹುಲಿ ಅಥವಾ ಮರ ಈ ಚಿತ್ರದಲ್ಲಿ ನಿಮಗೆ ಮೊದಲು ಕಾಣಿಸಿದ್ದೇನು ಎಂಬುದರ ಮೇಲೆ ನೀವು ಸಹೃದಯಿಯೇ ಅಥವಾ ಬಲವಾದ ಇಚ್ಛಾಶಕ್ತಿಯನ್ನು ಹೊಂದಿದವರೇ ಎಂಬುದನ್ನು ಪರೀಕ್ಷಿಸಿ.

Personality Test: ಹುಲಿ, ಮರ ಇದರಲ್ಲಿ ನಿಮಗೆ ಮೊದಲು ಕಂಡಿದ್ದೇನು? ಚಿತ್ರ ನೋಡಿ ವ್ಯಕ್ತಿತ್ವ ಪರೀಕ್ಷಿಸಿ
ವ್ಯಕ್ತಿತ್ವ ಪರೀಕ್ಷೆImage Credit source: Google
ಮಾಲಾಶ್ರೀ ಅಂಚನ್​
|

Updated on: May 21, 2025 | 4:10 PM

Share

ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ನಡವಳಿಕೆಯ ಆಧಾರದ ಮೇಲೆ ಆತನ ವ್ಯಕ್ತಿತ್ವ ಹೇಗಿದೆ ಎಂಬುದನ್ನು ನಿರ್ಧರಿಸುತ್ತಾರೆ. ಇದಲ್ಲದೆ ನಮಗೆ ತಿಳಿದಿರುವ ನಮ್ಮ ರಹಸ್ಯ ವ್ಯಕ್ತಿತ್ವವನ್ನು ದೇಹಕಾರ, ಆಪ್ಟಿಕಲ್‌ ಇಲ್ಯೂಷನ್‌  (optical illusion) ಚಿತ್ರಗಳ ಮೂಲಕವೂ ನಾವು ತಿಳಿಯಬಹುದಾಗಿದೆ. ವ್ಯಕ್ತಿತ್ವ ಪರೀಕ್ಷೆಗೆ (Personality Test) ಸಂಬಂಧಪಟ್ಟ ಇಂತಹ ಸಾಕಷ್ಟು ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುತ್ತವೆ. ಇಲ್ಲೊಂದು ಅಂತಹದ್ದೇ ಚಿತ್ರ ವೈರಲ್‌ ಆಗಿದ್ದು, ಆ ಫೋಟೋದಲ್ಲಿ ಹುಲಿ ಅಥವಾ ಮರ ನಿಮಗೇನು ಕಾಣಿಸಿತು ಎಂಬ ಆಧಾರದ ಮೇಲೆ ನೀವು ಸಹೃದಯಿ ಗುಣ ಸ್ವಭಾವವನ್ನು ಹೊಂದಿದವರೇ ಅಥವಾ ಬಲವಾದ ಇಚ್ಛಾಶಕ್ತಿಯನ್ನು ಹೊಂದಿರುವವರೇ ಎಂಬದನ್ನು ಪರೀಕ್ಷಿಸಬಹುದಾಗಿದೆ.

ಹುಲಿ, ಮರ ಇದರಲ್ಲಿ ನಿಮಗೆ ಮೊದಲು ಕಂಡಿದ್ದೇನು?

ವ್ಯಕ್ತಿಯ ಗುಪ್ತ ಗುಣ ಸ್ವಭಾವವನ್ನು ಸೆಕೆಂಡುಗಳಲ್ಲಿ ಬಹಿರಂಗಪಡಿಸುವ ಈ ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ಮೊದಲ ನೋಟಕ್ಕೆ ಕೆಲವರಿಗೆ ಮರ ಕಾಣಿಸಿದರೆ, ಇನ್ನೂ ಕೆಲವರಿಗೆ ಮೊದಲ ನೋಟದಲ್ಲಿ ಹುಲಿ ಕಾಣಿಸಬಹುದು. ಇದರಲ್ಲಿ ನಿಮಗೆ ಯಾವುದು ಮೊದಲು ಕಾಣಿಸಿತು ನೋಡಿ, ನೀವು ಉದಾರ ಹೃದಯದವರೇ ಎಂಬುದನ್ನು ಪರೀಕ್ಷಿಸಿ.

ಮೊದಲು ಮರ ಕಾಣಿಸಿದರೆ: ಈ ಚಿತ್ರದಲ್ಲಿ ಮೊದಲು ನಿಮಗೇನಾದರೂ ಮರವನ್ನು ನೋಡಿದರೆ ಬಲವಾದ ಇಚ್ಛಾಶಕ್ತಿಯನ್ನು ಹೊಂದಿರುವ ನೀವು ಒಂಟಿಯಾಗಲು ಇಷ್ಟಪಡುವವರು ಎಂದರ್ಥ. ನಿಮ್ಮ ಬಲವಾದ ಇಚ್ಛಾಶಕ್ತಿ ನಿಮ್ಮನ್ನು ಗುರಿ ಮುಟ್ಟಲು ಸಹಾಯ ಮಾಡುತ್ತದೆ. ನೀವು ಏನನ್ನಾದರೂ ಮಾಡಲು ಮನಸ್ಸು ಮಾಡಿದರೆ ಅದನ್ನು ಸಾಧಿಸಲು ಎಂತಹ ರಿಸ್ಕ್‌ ತೆಗೆದುಕೊಳ್ಳುವುದಕ್ಕೂ ತಯಾರಿರುತ್ತೀರಿ. ನಿಮ್ಮ ಕಠಿಣ ಪರಿಶ್ರಮ, ನಿಮ್ಮ ಆಲೋಚನೆ ಇವೆಲ್ಲವೂ ಜನರಿಗೆ ಇಷ್ಟವಾಗುತ್ತದೆ. ಒಟ್ಟಾರೆಯಾಗಿ ಗುರಿ ಆಧಾರಿತ ವ್ಯಕ್ತಿಯಾಗಿರುವ ನೀವು ಯಾರ ಸಹಾಯವೂ ಇಲ್ಲದೆ ಒಬ್ಬಂಟಿಯಾಗಿ ನಿಂತು ಸವಾಲುಗಳನ್ನು ಎದುರಿಸುವವರಾಗಿರುತ್ತೀರಿ.

ಇದನ್ನೂ ಓದಿ
Image
ಭಯೋತ್ಪಾದನಾ ವಿರೋಧಿ ದಿನವನ್ನು ಆಚರಿಸುವುದ ಹಿಂದಿನ ಕಾರಣವೇನು?
Image
ಸಾರಾ ತೆಂಡೂಲ್ಕರ್ ಕೇಶ ಸೌಂದರ್ಯದ ರಹಸ್ಯ ಏನು ಗೊತ್ತಾ?
Image
ಪ್ರತಿದಿನ ಈ 6 ಆಹಾರ ಸೇವನೆ ಮಾಡಿ, ಹೃದಯಕ್ಕೆ ರಕ್ಷಣೆಯಾಗಿ ನಿಲ್ಲುತ್ತದೆ
Image
ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರ ನೋಡಿ ನಿಮ್ಮ ರಹಸ್ಯ ವ್ಯಕ್ತಿತ್ವ ತಿಳಿಯಿರಿ

ಇದನ್ನೂ ಓದಿ: ಹಕ್ಕಿ, ಮೊಸಳೆ; ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರ ನೋಡಿ ನಿಮ್ಮ ರಹಸ್ಯ ವ್ಯಕ್ತಿತ್ವ ತಿಳಿಯಿರಿ

ಮೊದಲು ಹುಲಿ ಕಾಣಿಸಿದರೆ: ನಿಮಗೇನಾದರೂ ಈ ನಿರ್ದಿಷ್ಟ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ಮೊದಲು ಹುಲಿ ಕಾಣಿಸಿದರೆ ನೀವು ಸಹೃದಯಿ ಎಂದು ಅರ್ಥ. ಔದಾರ್ಯವನ್ನು ಹೊಂದಿರುವ ನೀವು ಎಷ್ಟೇ ಕಷ್ಟದ ಪರಿಸ್ಥಿತಿಯಲ್ಲಿ ಇದ್ದರೂ ಸಹ ಇನ್ನೊಬ್ಬರಿಗೆ ಸಹಾಯ ಹಸ್ತ ಚಾಚಲು ಸಿದ್ಧರಿರುತ್ತೀರಿ. ನಿಮ್ಮ ನಿಸ್ವಾರ್ಥ ಸ್ವಭಾವ ಹಾಗೂ ಇತತರಿಗೆ ನೀವು ಕೊಡುವ ಬೆಂಬಲದ ಗುಣವನ್ನು ಎಲ್ಲರೂ ಹೊಗಳುತ್ತಾರೆ. ಇದಲ್ಲದೆ ನೀವು ನಿಮ್ಮ ಕಷ್ಟಗಳು ಇತರರಿಗೆ ಹೊರೆಯಾಗಬಹುದು ಎಂದು ಭಾವಿಸಿ ನೀವು ನಿಮ್ಮ ನೋವುಗಳನ್ನು ಇತರರೊಂದಿಗೆ ಹಂಚಿಕೊಳ್ಳಲು ಇಷ್ಟಪಡುವುದಿಲ್ಲ. ಹೆಚ್ಚಾಗಿ ನೀವು ನಿಮ್ಮ ಭಾವನೆಗಳನ್ನು ನಿಮ್ಮ ಮನದಲ್ಲಿಯೇ ಮುಚ್ಚಿಡುತ್ತೀರಿ. ಒಟ್ಟಾರೆಯಾಗಿ ಯಾವಾಗಲೂ ಶಾಂತವಾಗಿರುವ ನೀವು ಇತರರಿಗೆ ತೊಂದರೆ ಕೊಡದಂತೆ ಬದುಕುವವರಾಗಿರುತ್ತೀರಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು