AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Police Commemoration Day 2024: ಅಕ್ಟೋಬರ್ 21 ರಂದು ಪೊಲೀಸ್ ಸ್ಮರಣಾರ್ಥ ದಿನವನ್ನು ಆಚರಿಸುವುದು ಏಕೆ? ಇಲ್ಲಿದೆ ಮಾಹಿತಿ

ದೇಶದ ಭದ್ರತೆಗಾಗಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸುವಾಗ ಪ್ರಾಣ ತ್ಯಾಗ ಮಾಡಿದ ಪೊಲೀಸ್ ಸಿಬ್ಬಂದಿಯನ್ನು ಸ್ಮರಿಸುವ ದಿನವಾಗಿದೆ. 1959ರ ಅಕ್ಟೋಬರ್ 21ರಂದು ಭಾರತ ಹಾಗೂ ಚೀನಾ ಗಡಿಯಲ್ಲಿ ದೇಶ ಸೇವೆಯಲ್ಲಿ ನಿರತರಾಗಿದ್ದ ಕೇಂದ್ರೀಯ ಸಶಸ್ತ್ರ ಮೀಸಲು ಪಡೆಯ 10 ಜನ ಪೊಲೀಸರು, ಚೀನಾ ಸೇನಾ ಪಡೆಗಳು ನಡೆಸಿದ ದಾಳಿಯಲ್ಲಿ ಹುತಾತ್ಮರಾಗಿದ್ದರು. ಅವರ ಈ ಸ್ಮರಣಾರ್ಥವಾಗಿ ಪೊಲೀಸ್ ಸ್ಮರಣಾರ್ಥ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಆಚರಣೆಯ ಕುರಿತಾದ ಇನ್ನಷ್ಟು ಮಾಹಿತಿ ಇಲ್ಲಿದೆ.

Police Commemoration Day 2024: ಅಕ್ಟೋಬರ್ 21 ರಂದು ಪೊಲೀಸ್ ಸ್ಮರಣಾರ್ಥ ದಿನವನ್ನು ಆಚರಿಸುವುದು ಏಕೆ? ಇಲ್ಲಿದೆ ಮಾಹಿತಿ
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Oct 21, 2024 | 9:53 AM

Share

ಯಾವುದೇ ದೇಶಕ್ಕೆ ಪೊಲೀಸ್ ಪಡೆಗಳು ಬಹಳ ಮುಖ್ಯ. ಅಪರಾಧವನ್ನು ತಡೆಗಟ್ಟುವಲ್ಲಿ, ಅಪರಾಧಿಗಳ ಕೃತ್ಯಗಳಿಗೆ ಶಿಕ್ಷಿಸುವಲ್ಲಿ ಮತ್ತು ಆ ಪ್ರದೇಶದಲ್ಲಿ ಶಾಂತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಪೊಲೀಸರು ಪ್ರಮುಖ ಪಾತ್ರ ವಹಿಸುತ್ತಾರೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಮತ್ತು ಅಗತ್ಯ ಸಮಯದಲ್ಲಿ ರಾಷ್ಟ್ರಕ್ಕೆ ನೆರವಾಗಲು ಪೊಲೀಸ್ ಪಡೆಗಳ ಕೆಲಸವು ನಿಜಕ್ಕೂ ಶ್ಲಾಘನೀಯವಾದದ್ದು. 1959 ರಲ್ಲಿ ಭಾರತ-ಚೀನಾ ಗಡಿಯಲ್ಲಿ ದೇಶವನ್ನು ರಕ್ಷಿಸುವ ಸಂದರ್ಭದಲ್ಲಿ ಹುತಾತ್ಮರಾದ ಹತ್ತು ಪೊಲೀಸರನ್ನು ಈ ದಿನದಂದು ಸ್ಮರಿಸಲಾಗುತ್ತದೆ.

ರಾಷ್ಟ್ರೀಯ ಪೊಲೀಸ್ ಸ್ಮರಣಾರ್ಥ ದಿನದ ಇತಿಹಾಸ

ಅಕ್ಟೋಬರ್ 21, 1959 ರಂದು, ಲಡಾಖ್ನ ಹಾಟ್ ಸ್ಪ್ರಿಂಗ್ಸ್ನಲ್ಲಿ ಭಾರಿ ಶಸ್ತ್ರಸಜ್ಜಿತ ಚೀನೀ ಪಡೆಗಳು ಹೊಂಚುದಾಳಿಯಲ್ಲಿ ಹತ್ತು ವೀರ ಪೊಲೀಸರು ತಮ್ಮ ಪ್ರಾಣವನ್ನು ಅರ್ಪಿಸಿದರು. 2012 ರಿಂದ ದೆಹಲಿಯ ಚಾಣಕ್ಯಪುರಿಯಲ್ಲಿರುವ ಪೋಲಿಸ್ ಸ್ಮಾರಕದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಪೊಲೀಸ್ ಸ್ಮರಣೋತ್ಸವ ದಿನಾಚರಣೆಯನ್ನು ನಡೆಸಲಾಗುತ್ತಿದೆ. ಅಂದಿನಿಂದ ಪ್ರತಿ ವರ್ಷ ಅಕ್ಟೋಬರ್ 21 ರಂದು ಈ ಹುತಾತ್ಮರ ಮತ್ತು ಕರ್ತವ್ಯದಲ್ಲಿ ಹುತಾತ್ಮರಾದ ಇತರ ಎಲ್ಲಾ ಪೊಲೀಸ್ ಸಿಬ್ಬಂದಿಯ ಸ್ಮರಣಾರ್ಥವಾಗಿ ರಾಷ್ಟ್ರೀಯ ಪೊಲೀಸ್ ಸ್ಮರಣಾರ್ಥ ದಿನವಾಗಿ ಆಚರಿಸಲಾಗುತ್ತಾ ಬರಲಾಗುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಕ್ಟೋಬರ್ 15, 2018ರಂದು ದೇಶದ ಮೊದಲ ಪೊಲೀಸ್ ಮ್ಯೂಸಿಯಂ ಅನ್ನು ದೆಹಲಿಯಲ್ಲಿ ಉದ್ಘಾಟಿಸಿದರು. ಈ‌ ಮ್ಯೂಸಿಯಂ ಭಾರತೀಯ ಪೊಲೀಸ್ ಪಡೆಗಳ ಶೌರ್ಯವನ್ನು ಪ್ರದರ್ಶಿಸಿ, ಗೌರವಿಸುತ್ತದೆ.

ಇದನ್ನೂ ಓದಿ: ದೀಪಾವಳಿ ಹಬ್ಬ ವಿಶೇಷವಾಗಿ ಆಚರಿಸಲು ಈ ಕೆಲವು ಸ್ಥಳಗಳಿಗೆ ತಪ್ಪದೆ ಭೇಟಿ ನೀಡಿ

ರಾಷ್ಟ್ರೀಯ ಪೊಲೀಸ್ ಸ್ಮರಣಾರ್ಥ ದಿನದ ಮಹತ್ವ ಹಾಗೂ ಆಚರಣೆ

ಪೊಲೀಸ್ ಸಿಬ್ಬಂದಿಯ ತ್ಯಾಗ ಮತ್ತು ರಾಷ್ಟ್ರೀಯ ಭದ್ರತೆ ಮತ್ತು ಸಮಗ್ರತೆಯನ್ನು ಕಾಪಾಡುವಲ್ಲಿ ಅವರ ಪ್ರಮುಖ ಪಾತ್ರವನ್ನು ಗುರುತಿಸುವುದುವುದು ಹಾಗೂ ದೇಶಕ್ಕಾಗಿ ಪ್ರಾಣತೆತ್ತವರನ್ನು ಸ್ಮರಿಸುವ ಉದ್ದೇಶದಿಂದ ಈ ದಿನವು ಮಹತ್ವದ್ದಾಗಿದೆ. ಚಾಣಕ್ಯಪುರಿಯಲ್ಲಿರುವ ಪೋಲಿಸ್ ಸ್ಮಾರಕದಲ್ಲಿ ದೇಶಕ್ಕಾಗಿ ತಮ್ಮ ಜೀವವನ್ನು ಮುಡಿಪಾಗಿಟ್ಟ ಪೊಲೀಸ್ ಸಿಬ್ಬಂದಿಗಳಿಗೆ ಪ್ರಧಾನ ಮಂತ್ರಿಯವರು ಗೌರವ ನಮನ ಸಲ್ಲಿಸುತ್ತಾರೆ. ದೇಶದಾದ್ಯಂತ ಹುತಾತ್ಮರ ಸ್ಮಾರಕಗಳಲ್ಲಿ ಪುಷ್ಪ ನಮನ ಸಲ್ಲಿಸಲಾಗುತ್ತದೆ. ಅದಲ್ಲದೇ, ರಾಷ್ಟ್ರೀಯ ಮಟ್ಟದಲ್ಲಿ ಪೊಲೀಸ್ ಸ್ಮರಣಾರ್ಥ ದಿನಾಚರಣೆಯ ಪ್ರಯುಕ್ತ ಹತ್ತು ಹಲವು ಕಾರ್ಯಕ್ರಮಗಳು ನಡೆಯುತ್ತವೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್