AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Police Commemoration Day 2025: ಸಮಾಜದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ತ್ಯಾಗ, ಸೇವೆ ಅಪಾರ

ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು, ಜನರು ನೆಮ್ಮದಿಯಿಂದ ಜೀವನ ನಡೆಸಲು ಪೊಲೀಸರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸುತ್ತಾರೆ. ಅದೆಷ್ಟೋ ಪೊಲೀಸರು ಸಮಾಜವನ್ನು ಕಾಪಾಡುವ ಸಲುವಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಈ ಹುಹಾತ್ಮ ಪೊಲೀಸರ ತ್ಯಾಗ, ಬಲಿದಾನವನ್ನು ನೆನೆಯಲು, ಗೌರವ ಸಲ್ಲಿಸಲು ಪ್ರತಿವರ್ಷ ಅಕ್ಟೋಬರ್‌ 21 ರಂದು ಪೊಲೀಸ್‌ ಸಂಸ್ಮರಣಾ ದಿನವನ್ನು ಆಚರಿಸಲಾಗುತ್ತದೆ.

Police Commemoration Day 2025: ಸಮಾಜದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ತ್ಯಾಗ, ಸೇವೆ ಅಪಾರ
ಪೊಲೀಸ್‌ ಸಂಸ್ಮರಣಾ ದಿನImage Credit source: Pinterest
ಮಾಲಾಶ್ರೀ ಅಂಚನ್​
|

Updated on: Oct 21, 2025 | 9:54 AM

Share

ಸೈನಿಕರು ದೇಶದ ಗಡಿಯಲ್ಲಿ ನಿಂತು ದೇಶ ರಕ್ಷಣೆ ಮಾಡಿದರೆ, ಪೊಲೀಸರು (Police) ಸಮಾಜದ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡುವ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ನಾಗರಿಕ ಸಮಾಜವನ್ನು ರಕ್ಷಣೆ ಮಾಡುವ ಸಲುವಾಗಿ, ಜನರು ನೆಮ್ಮದಿಯಿಂದ ಜೀವನ ನಡೆಸುವ ಸಲುವಾಗಿ ಅವರು ದಿನದ 24 ಗಂಟೆ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸುತ್ತಾರೆ. ಅದೆಷ್ಟೋ ಪೊಲೀಸರು ದೇಶ ರಕ್ಷಣೆಯ ಸಲುವಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಹೌದು ಸಮಸ್ಯೆಗಳು ಎದುರಾದ ಸಂದರ್ಭದಲ್ಲಿ ದಿಟ್ಟತನದಿಂದ ಕರ್ತವ್ಯ ನಿರ್ವಹಿಸುತ್ತಾ ಪೊಲೀಸರು ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದುಂಟು. ಇಂತಹ ದಿಟ್ಟ ಹುತಾತ್ಮ ಪೊಲೀಸರ ತ್ಯಾಗ, ಬಲಿದಾನವನ್ನು ಸ್ಮರಿಸಲು, ಅವರಿಗೆ ಗೌರವವನ್ನು ಸಲ್ಲಿಸಲು ಪ್ರತಿವರ್ಷ ಅಕ್ಟೋಬರ್‌ 21 ರಂದು ನಮ್ಮ ಭಾರತದಲ್ಲಿ ಪೊಲೀಸ್‌ ಸಂಸ್ಮರಣಾ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿಯೋಣ ಬನ್ನಿ.

ಪೊಲೀಸ್ ಸ್ಮಾರಕ ದಿನವನ್ನು ಏಕೆ ಪ್ರಾರಂಭಿಸಲಾಯಿತು?

ಅಕ್ಟೋಬರ್‌ 21, 1959 ರಲ್ಲಿ ಟಿಬೆಟ್‌ನಲ್ಲಿ ಚೀನಾದೊಂದಿಗಿನ ಭಾರತದ 2,500 ಮೈಲಿ ಗಡಿಯನ್ನು ಭದ್ರಪಡಿಸುವ ಜವಾಬ್ದಾರಿಯನ್ನು ಭಾರತೀಯ ಪೊಲೀಸರ ಮೂರು ಬೆಟಾಲಿಯನ್‌ಗಳು ವಹಿಸಿಕೊಂಡವು. ಮೊದಲ ಎರಡು ಬೆಟಾಲಿಯನ್‌ಗಳು ತಮ್ಮ ಗಸ್ತು ಪೂರ್ಣಗೊಳಿಸಿ ಹಿಂತಿರುಗಿದವು, ಆದರೆ ಮೂರನೇ ಬೆಟಾಲಿಯನ್ ಹಿಂತಿರುಗಲಿಲ್ಲ. ಈಶಾನ್ಯ ಲಡಾಖ್‌ನ ಹಾಟ್ ಸ್ಪ್ರಿಂಗ್ಸ್ ಪ್ರದೇಶದಲ್ಲಿ ನಿಯೋಜಿಸಲಾದ ಪೊಲೀಸ್ ಸಿಬ್ಬಂದಿಯ ಈ ತುಕಡಿಯ ಮೇಲೆ ಚೀನಾದ ಸೈನ್ಯವು ಹೊಂಚು ದಾಳಿ ನಡೆಸಿತು. ಈ ದಾಳಿಯಲ್ಲಿ  ಬೆಟಾಲಿಯನ್‌ ನೇತೃತ್ವ ವಹಿಸಿದ್ದ . ಡಿಎಸ್ಪಿ ಶ್ರೀ ಕರಮ್ ಸಿಂಗ್ ಸೇರಿದಂತೆ ಹತ್ತು  ಪೊಲೀಸರು ಹುತಾತ್ಮರಾದರು ಮತ್ತು ಏಳು ಮಂದಿ ಗಾಯಗೊಂಡರು. ಮತ್ತು ಈ ಗಾಯಗೊಂಡ 7 ಪೊಲೀಸರನ್ನು ಚೀನಾದ ಸೈನ್ಯವು ಒತ್ತೆಯಾಳಾಗಿ ಇರಿಸಿಕೊಂಡಿತು. ಘಟನೆ ನಡೆದ 23 ದಿನಗಳ ನಂತರ, ನವೆಂಬರ್ 13, 1959 ರಂದು, ಚೀನಾ ಸೇನೆಯು ಪೊಲೀಸರನ್ನು ಭಾರತಕ್ಕೆ ಹಿಂದಿರುಗಿಸಿತು. ಕರಮ್ ಸಿಂಗ್ ಅವರ ಶೌರ್ಯಕ್ಕಾಗಿ ಅವರಿಗೆ ಮರಣೋತ್ತರವಾಗಿ ಅಶೋಕ ಚಕ್ರವನ್ನು ನೀಡಲಾಯಿತು.

ಹೀಗೆ ಪೊಲೀಸ್ ಸಿಬ್ಬಂದಿಗಳು ರಾಷ್ಟ್ರಕ್ಕಾಗಿ ಮಾಡಿದ ತ್ಯಾಗ ನೆನೆಯಲು ಮತ್ತು ಕೊಡುಗೆಗಳನ್ನು ಗುರುತಿಸಲು  ಜನವರಿ 1960 ರಲ್ಲಿ ನಡೆದ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್‌ಗಳ ವಾರ್ಷಿಕ ಸಮ್ಮೇಳನದಲ್ಲಿ  ಅಕ್ಟೋಬರ್ 21 ರಂದು ಪೊಲೀಸ್‌ ಸಂಸ್ಮರಣಾ ದಿನವನ್ನು ಆಚರಿಸುವುದಾಗಿ ಘೋಷಿಸಲಾಯಿತು. ಅಂದಿನಿಂದ ಪ್ರತಿವರ್ಷ ಈ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ಇದನ್ನೂ ಓದಿ
Image
ವಿಶ್ವ ಅಂಕಿಅಂಶ ದಿನವನ್ನು ಆಚರಿಸುವ ಉದ್ದೇಶವೇನು?
Image
ಬಡತನ ನಿರ್ಮೂಲನಾ ದಿನದ ಪ್ರಾಮುಖ್ಯತೆಯೇನು?
Image
ಆಹಾರ ವ್ಯರ್ಥ ಮಾಡದಿರಿ
Image
ಸರಿಯಾರ ರೀತಿಯಲ್ಲಿ ಕೈ ತೊಳೆಯಿರಿ, ರೋಗ ರುಜಿನಗಳಿಂದ ದೂರವಿರಿ

ಇದನ್ನೂ ಓದಿ: ವಿಶ್ವ ಅಂಕಿಅಂಶ ದಿನವನ್ನು ಆಚರಿಸುವ ಉದ್ದೇಶವೇನು?

ಪೊಲೀಸ್‌ ಸಂಸ್ಮರಣಾ ದಿನದ ಮಹತ್ವ:

  • ದೇಶ, ಸಮಾಜದ ಭದ್ರತೆಗಾಗಿ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಪ್ರಾಣ ತ್ಯಾಗ ಮಾಡಿದ ಪೊಲೀಸ್‌ ಸಿಬ್ಬಂದಿಗಳನ್ನು ಸ್ಮರಿಸುವ ಸಲುವಾಗಿ ಪ್ರತಿವರ್ಷ ಅಕ್ಟೋಬರ್‌ 21 ರಂದು ಪೊಲೀಸ್‌ ಸ್ಮರಣಾರ್ಥ ದಿನವನ್ನು ಆಚರಿಸಲಾಗುತ್ತದೆ.
  • ಈ ದಿನದಂದು, ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಪೊಲೀಸ್ ಸಿಬ್ಬಂದಿಗೆ ಗೌರವ ಸಲ್ಲಿಸಲಾಗುತ್ತದೆ.
  • ಪೊಲೀಸರ ತ್ಯಾಗ ಮತ್ತು ಬಲಿದಾನವನ್ನು ನೆನೆಯಲಾಗುತ್ತದೆ.
  • ಈ ದಿನ ದೇಶಾದ್ಯಂತ ಪೊಲೀಸ್‌ ಹುತಾತ್ಮಕ ಸ್ಮಾರಕಗಳಲ್ಲಿ ಪುಷ್ಪ ನಮನ ಸಲ್ಲಿಸಲಾಗುತ್ತದೆ. ಮತ್ತು ಈ ದಿನದಂದು ಹಲವು ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ