AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತತ 15 ದಿನಗಳವರೆಗೆ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ಜ್ಯೂಸ್‌ ಕುಡಿದರೆ ಏನಾಗುತ್ತದೆ?

ವಿಟಮಿನ್‌ ಸಿ, ಟ್ಯಾನಿನ್‌, ಕಬ್ಬಿಣಾಂಶ, ಕ್ಯಾಲ್ಸಿಯಂ ನಂತಹ ಸಾಕಷ್ಟು ಪೋಷಕಾಂಶಗಳನ್ನು ಹೊಂದಿರುವ ನೆಲ್ಲಿಕಾಯಿಯನ್ನು ಆಯುರ್ವೇದಲ್ಲಿ ಅಮೃತವೆಂದು ಪರಿಗಣಿಸಲಾಗಿದೆ. ನೆಲ್ಲಿಕಾಯಿಯ ಸೇವನೆ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದೆಂದು ಬಹುತೇಕ ಎಲ್ಲರಿಗೂ ಗೊತ್ತೇ ಇದೆ. ಆದರೆ ಸತತ 15 ದಿನಗಳ ಕಾಲ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ಜ್ಯೂಸ್‌ ಕುಡಿಯುವುದರಿಂದ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ, ದೇಹದಲ್ಲಿ ಏನೆಲ್ಲಾ ಸಕಾರಾತ್ಮಕ ಬದಲಾವಣೆಗಳಾಗುತ್ತವೆ ಗೊತ್ತಾ? ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಸತತ 15 ದಿನಗಳವರೆಗೆ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ಜ್ಯೂಸ್‌ ಕುಡಿದರೆ ಏನಾಗುತ್ತದೆ?
ನೆಲ್ಲಿಕಾಯಿ ಜ್ಯೂಸ್‌ ಸೇವನೆಯ ಪ್ರಯೋಜನImage Credit source: Getty Images
ಮಾಲಾಶ್ರೀ ಅಂಚನ್​
|

Updated on: Oct 07, 2026 | 6:56 PM

Share

ಮುಖ್ಯಾಂಶಗಳು

  • ನೆಲ್ಲಿಕಾಯಿ ಜ್ಯೂಸ್‌ ಸೇವನೆ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
  • ನೆಲ್ಲಿಕಾಯಿ ಜ್ಯೂಸ್‌ ಕೂದಲು ಮತ್ತು ತ್ವಚೆಯ ಆರೋಗ್ಯವನ್ನು ವೃದ್ಧಿಸುತ್ತದೆ
  • ನೆಲ್ಲಿಕಾಯಿ ಜ್ಯೂಸ್‌ ಸೇವನೆಯಿಂದ ದೇಹದ ರೋಗ ನಿರೋಧಕ ಶಕ್ತಿ ಬಲಗೊಳ್ಳುತ್ತದೆ

ಗಾತ್ರದಲ್ಲಿ ಸಣ್ಣದಾಗಿರುವ  ನೆಲ್ಲಿಕಾಯಿ (Amla) ಹೇರಳವಾದ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ.  ನೆಲ್ಲಿಕಾಯಿ ವಿಟಮಿನ್ ಸಿ, ಉತ್ಕರ್ಷಣ ನಿರೋಧಕ ಸೇರಿದಂತೆ ಕಬ್ಬಿಣಾಂಶ, ಕ್ಯಾಲ್ಸಿಯಂ ಸೇರಿದಂತೆ ಸಾಕಷ್ಟು ಪೋಷಕಾಂಶಗಳನ್ನು ಹೊಂದಿದ್ದು, ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಜೀರ್ಣಕ್ರಿಯೆ, ಚರ್ಮ ಮತ್ತು ಕೂದಲಿನ ಆರೋಗ್ಯವನ್ನು ಉತ್ತೇಜಿಸಲು ಸಖತ್‌ ಸಹಕಾರಿಯಾಗಿದೆ. ನೆಲ್ಲಿಕಾಯಿಯ ಈ ವಿಶೇಷ ಗುಣಗಳು, ಅವುಗಳ ಆರೋಗ್ಯ ಲಾಭಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿವರು ಸಹ ಮನ್‌ ಕಿ ಬಾತ್‌ 138 ನೇ ಸಂಚಿಕೆಯಲ್ಲಿ ಪ್ರಸ್ತಾಪಿಸಿದ್ದರು. ನೆಲ್ಲಿಕಾಯಿ ತಿನ್ನುವುದರಿಂದ ಸಾಕಷ್ಟು ಲಾಭಗಳನ್ನು ಪಡೆಯಬಹುದು. ಅದೇ ರೀತಿ ನೆಲ್ಲಿಕಾಯಿ ಜ್ಯೂಸ್‌ ಏಕೆ ಸೇವನೆ ಮಾಡಬೇಕು, ಸತತ 15 ದಿನಗಳವರೆಗೆ ನೆಲ್ಲಿಕಾಯಿ ಜ್ಯೂಸ್‌ ಸೇವಿಸುವುದರಿಂದ ದೇಹದಲ್ಲಿ ಏನೆಲ್ಲಾ ಬದಲಾವಣೆಗಳಾಗುತ್ತವೆ ಎಂಬುದನ್ನು ತಿಳಿದುಕೊಳ್ಳಿ.

ನೆಲ್ಲಿಕಾಯಿ ಜ್ಯೂಸ್‌ ಸೇವನೆಯಿಂದ ಲಭಿಸುವ ಪ್ರಯೋಜನಗಳು:

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ:

ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಯಲ್ಲಿ ಸಮೃದ್ಧವಾಗಿದ್ದು, ಇದು ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ ಮತ್ತು ನಿಮ್ಮ ದೇಹವನ್ನು ಶೀತ, ಕೆಮ್ಮು ಮತ್ತು ಸೋಂಕುಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ.

ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ:

ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ನೆಲ್ಲಿಕಾಯಿ ಜ್ಯೂಸ್‌ ತುಂಬಾ ಪರಿಣಾಮಕಾರಿಯಾಗಿದೆ. ಇದು ಮಲಬದ್ಧತೆ, ಆಮ್ಲೀಯತೆ ಗ್ಯಾಸ್‌ನಂತಹ ಹೊಟ್ಟೆಯ ಸಮಸ್ಯೆಗಳಿಂದ ಪರಿಹಾರವನ್ನು ನೀಡುತ್ತದೆ. ಜೊತೆಗೆ ಇದರಲ್ಲಿರುವ ನಾರಿನಾಂಶವು ಕರುಳನ್ನು ಸ್ವಚ್ಛವಾಗಿರಿಸುತ್ತದೆ.

ನೆಲ್ಲಿಕಾಯಿ ಜ್ಯೂಸ್‌ ಕೂದಲು ಮತ್ತು ಚರ್ಮಕ್ಕೆ ಪ್ರಯೋಜನಕಾರಿ:

ನೆಲ್ಲಿಕಾಯಿ ಜ್ಯೂಸ್‌ನಲ್ಲಿರುವ ಉತ್ಕರ್ಷಣ ನಿರೋಧಕಗಳು ಮತ್ತು ಜೀವಸತ್ವಗಳು ಕೂದಲನ್ನು ಬಲವಾಗಿ, ದಪ್ಪವಾಗಿ ಮತ್ತು ಹೊಳೆಯುವಂತೆ ಮಾಡುತ್ತದೆ. ಇದು ಕೂದಲು ಉದುರುವಿಕೆಯನ್ನು ತಡೆಯಲು ಸಹಾಯ ಮಾಡುತ್ತದೆ. ಅಲ್ಲದೆ, ಇದು ಚರ್ಮಕ್ಕೆ ನೈಸರ್ಗಿಕ ಹೊಳಪನ್ನು ನೀಡುತ್ತದೆ ಮತ್ತು ಸುಕ್ಕುಗಳನ್ನು ಕಡಿಮೆ ಮಾಡುತ್ತದೆ.

ನೆಲ್ಲಿಕಾಯಿ ಜ್ಯೂಸ್‌ ತೂಕ ಇಳಿಕೆಗೆ ಸಹಕಾರಿ:

ನೀವು ತೂಕ ಇಳಿಸಿಕೊಳ್ಳಲು ಬಯಸಿದರೆ, ನೆಲ್ಲಿಕಾಯಿ ಜ್ಯೂಸ್ ಒಂದು ಉತ್ತಮ ಆಯ್ಕೆಯಾಗಿದೆ. ಇದು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ ಮತ್ತು ದೇಹದಿಂದ ವಿಷವನ್ನು ಹೊರಹಾಕುತ್ತದೆ, ಇದರಿಂದಾಗಿ ತೂಕ ಇಳಿಸುವುದು ಸುಲಭವಾಗುತ್ತದೆ.

ಇದನ್ನೂ ಓದಿ: 7 ದಿನಗಳವರೆಗೆ ತಪ್ಪದೇ ಜೀರಿಗೆ ನೀರು ಕುಡಿಯಿರಿ, ಈ ಎಲ್ಲಾ ಪ್ರಯೋಜನಗಳನ್ನು ನಿಮ್ಮದಾಗಿಸಿಕೊಳ್ಳಿ

ನೆಲ್ಲಿಕಾಯಿ ಜ್ಯೂಸ್‌ ಸೇವನೆ ಕಣ್ಣುಗಳಿಗೆ ಒಳ್ಳೆಯದು:

ನೆಲ್ಲಿಕಾಯಿ ಜ್ಯೂಸ್‌ ಕಣ್ಣುಗಳಿಗೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇದರಲ್ಲಿರುವ ಕ್ಯಾರೋಟಿನ್ ದೃಷ್ಟಿ ಸುಧಾರಿಸುತ್ತದೆ ಮತ್ತು ಕಣ್ಣಿನ ಪೊರೆ ಮತ್ತು ಕಣ್ಣಿನ ಆಯಾಸದಂತಹ ಕಣ್ಣಿನ ಸಂಬಂಧಿತ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.

ನೆಲ್ಲಿಕಾಯಿ ಜ್ಯೂಸ್‌ ಮಧುಮೇಹಿಗಳಿಗೆ ಒಳ್ಳೆಯದು:

ನೆಲ್ಲಿಕಾಯಿ  ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನಗೊಳಿಸಲು ಸಹಾಯ ಮಾಡುವ ಕೆಲವು ಗುಣಗಳನ್ನು ಹೊಂದಿದೆ. ಹೀಗಿರುವಾಗ ನಿತ್ಯ ಮಿತ ಪ್ರಮಾಣದಲ್ಲಿ ನೆಲ್ಲಿಕಾಯಿ ಜ್ಯೂಸ್‌ ಕುಡಿಯುವ ಮೂಲಕ ಮಧುಮೇಹವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.

ನೆಲ್ಲಿಕಾಯಿ ಜ್ಯೂಸ್‌ ತಯಾರಿಸುವುದು ಹೇಗೆ?

ನೆಲ್ಲಿಕಾಯಿ ಜ್ಯೂಸ್‌ ತಯಾರಿಸಲು, ಮೊದಲು ನೆಲ್ಲಿಕಾಯಿಯನ್ನು ಚೆನ್ನಾಗಿ ತೊಳೆದು ಸಣ್ಣ ತುಂಡುಗಳಾಗಿ ಕತ್ತರಿಸಿ. ಅದನ್ನು ಮಿಕ್ಸಿಯಲ್ಲಿ ಹಾಕಿ ರುಬ್ಬಿಕೊಳ್ಳಿ, ಮತ್ತೆ ಬೇಕಾದಷ್ಟು ನೀರನ್ನು ಸೇರಿಸಿ ಇನ್ನೊಂದು ರುಬ್ಬಿಕೊಳ್ಳಿ. ನಂತರ ತಯಾರಾದ ಈ ರಸವನ್ನು ಸೋಸಿ ಕುಡಿಯಿರಿ. ನೀವು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸತತ 15 ದಿನಗಳವರೆಗೆ ಈ ಜ್ಯೂಸ್‌ ಕುಡಿಯುವುದರಿಂದ ಉತ್ತಮ ಪ್ರಯೋಜನಗಳನ್ನು ಪಡೆಯಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವರು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ