AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒತ್ತಡ ರಹಿತ ಜೀವನ ನಿಮ್ಮದಾಗಲು ದೈನಂದಿನ ದಿನಚರಿಯಲ್ಲಿ ತಪ್ಪದೇ ಈ ಅಭ್ಯಾಸಗಳನ್ನು ಪಾಲಿಸಿ

ಬಿಡುವಿಲ್ಲದ ಜೀವನ, ಕೆಲಸದ ಹೊರೆ, ಕುಟುಂಬ ಮತ್ತು ಕೆಲಸದ ಜವಾಬ್ದಾರಿ ಇವೆಲ್ಲವೂ ಒತ್ತಡ ಹೆಚ್ಚಾಗಲು ಪ್ರಮುಖ ಕಾರಣ. ಈ ಒತ್ತಡ ದೀರ್ಘಕಾಲ ಮುಂದುವರೆದರೆ ದೈಹಿಕ ಮತ್ತು ಮಾನಸಿಕ ಆರೋಗ್ಯ ಸಂಪೂರ್ಣವಾಗಿ ಹದಗೆಡುತ್ತದೆ. ಹೌದು ಮನಸ್ಸಿನ ನೆಮ್ಮದಿ ಹಾಳಾಗುತ್ತದೆ, ನಿದ್ರೆಯ ಕೊರತೆ ಉಂಟಾಗುತ್ತದೆ. ಹೀಗಿರುವಾಗ ಒತ್ತಡದಿಂದ ಮುಕ್ತರಾಗಿ ನೆಮ್ಮದಿಯ ಜೀವನ ನಡೆಸಲು ದೈನಂದಿನ ದಿನಚರಿಯಲ್ಲಿ ಈ ಕೆಲವು ಸರಳ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ.

ಒತ್ತಡ ರಹಿತ ಜೀವನ ನಿಮ್ಮದಾಗಲು ದೈನಂದಿನ ದಿನಚರಿಯಲ್ಲಿ ತಪ್ಪದೇ ಈ ಅಭ್ಯಾಸಗಳನ್ನು ಪಾಲಿಸಿ
ಸಾಂದರ್ಭಿಕ ಚಿತ್ರ Image Credit source: Getty Images
ಮಾಲಾಶ್ರೀ ಅಂಚನ್​
|

Updated on: Aug 16, 2026 | 7:07 PM

Share

ಇಂದಿನ ಈ ಆಧುನಿಕ ಯುಗದಲ್ಲಿ ಕೆಲಸದ ಹೊರೆ, ಆರ್ಥಿಕ ಚಿಂತೆ, ಕುಟುಂಬದ ಜವಾಬ್ದಾರಿ ಇವೆಲ್ಲದರ ಕಾರಣದಿಂದ ಬಹುತೇಕ ಹೆಚ್ಚಿನವರು ಒತ್ತಡದ (stress) ಜೀವನವನ್ನು ನಡೆಸುತ್ತಿದ್ದಾರೆ. ಈ ಒತ್ತಡ ಮಾನಸಿಕ ಮಾತ್ರವಲ್ಲ ದೈಹಿಕ ಆರೋಗ್ಯದ ಮೇಲೂ ಸಾಕಷ್ಟು ಪರಿಣಾಮವನ್ನು ಬೀರುತ್ತದೆ. ಆದ್ದರಿಂದ ಅನೇಕರು ಒತ್ತಡದಿಂದ ವಿಮುಕ್ತರಾಗಿ ನೆಮ್ಮದಿಯ ಜೀವನ ನಡೆಸಲು ದಾರಿಯನ್ನು ಹುಡುಕುತ್ತಿದ್ದಾರೆ. ದೈನಂದಿನ ದಿನಚರಿಯಲ್ಲಿ ಒಂದಷ್ಟು ಬದಲಾವಣೆಗಳನ್ನು ಮಾಡಿ, ಒಂದಿಷ್ಟು ಸಕಾರಾತ್ಮಕ ಅಭ್ಯಾಸಗಳನ್ನು ಪಾಲಿಸುವ ಮೂಲಕ ಒತ್ತಡವನ್ನು ಕಡಿಮೆ ಮಾಡಬಹುದು. ಈ ಅಭ್ಯಾಸಗಳು ಒತ್ತಡವನ್ನು ಕಡಿಮೆ ಮಾಡಿ, ಮನಸ್ಸನ್ನು ಶಾಂತಗೊಳಿಸುತ್ತದೆ. ಒತ್ತಡಮುಕ್ತ ಜೀವನ ನಡೆಸಲು ಸಹಕಾರಿಯಾದ ಅಭ್ಯಾಸಗಳು ಯಾವುವು ಎಂಬ ಪೂರ್ಣ ಮಾಹಿತಿ ಇಲ್ಲಿದೆ.

ಒತ್ತಡದಿಂದ ವಿಮುಕ್ತರಾಗಿ ನೆಮ್ಮದಿಯ ಜೀವನ ನಡೆಸಲು ಪಾಲಿಸಬೇಕಾದ ಅಭ್ಯಾಸಗಳು:

ದಿನವನ್ನು ಸಕಾರಾತ್ಮಕ ಆಲೋಚನೆಗಳೊಂದಿಗೆ ಪ್ರಾರಂಭಿಸಿ:

ಬೆಳಗ್ಗೆ ಎದ್ದ ತಕ್ಷಣ, ಕೆಲಸ ಆರ್ಥಿಕ ಪರಿಸ್ಥಿತಿಯ ಬಗ್ಗೆ ನಕಾರಾತ್ಮಕವಾಗಿ ಯೋಚಿಸುತ್ತಾ ದಿನವನ್ನು ಆರಂಭಿಸಿದರೆ ಆ ಸಂಪೂರ್ಣ ದಿನವೇ ಹಾಳಾಗುತ್ತದೆ. ಆದ್ದರಿಂದ ನಿಮ್ಮ ದಿನವನ್ನು ಸಕಾರಾತ್ಮಕ ಆಲೋಚನೆಗಳೊಂದಿಗೆ ಪ್ರಾರಂಭಿಸಿ. ದೇವರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಿ, ಸಕಾರಾತ್ಮಕತೆಯನ್ನು ಹೆಚ್ಚಿಸುವ ಪುಸ್ತಕವನ್ನು ಓದಿ. ಇದು ಸಕಾರಾತ್ಮಕತೆಯನ್ನು ಹೆಚ್ಚಿಸಿ ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ.

ಧ್ಯಾನ ಮಾಡಿ:

ಪ್ರತಿದಿನ ಬೆಳಗೆದ್ದು, ಮೊಬೈಲ್‌ ನೋಡುತ್ತಾ ಒತ್ತಡವನ್ನು ಇನ್ನಷ್ಟು ಹೆಚ್ಚಿಸುವ ಬದಲು ಎದ್ದ ಬಳಿಕ 10 ರಿಂದ 15 ನಿಮಿಷಗಳ ಕಾಲ ಧ್ಯಾನವನ್ನು ಮಾಡಿ.  ಮನಸ್ಸನ್ನು ಶಾಂತಗೊಳಿಸಲು ಧ್ಯಾನವು ಒಂದು ಪರಿಣಾಮಕಾರಿ ಮಾರ್ಗವಾಗಿದೆ. ಪ್ರತಿದಿನ ಹತ್ತು ಹದಿನೈದು ನಿಮಿಷಗಳ ಕಾಲ ಧ್ಯಾನ ಮಾಡುವುದರಿಂದ ಮನಸ್ಸು ಶಾಂತವಾಗುತ್ತದೆ, ಏಕಾಗ್ರತೆ ಸುಧಾರಿಸುತ್ತದೆ ಮತ್ತು ಕ್ರಮೇಣ ಒತ್ತಡ ಕೂಡ ಕಡಿಮೆಯಾಗುತ್ತದೆ.

ನಿಯಮಿತ ಯೋಗ, ವಾಕಿಂಗ್:

ಪ್ರತಿದಿನ ಬೆಳಗ್ಗೆ ಲಘು ವ್ಯಾಯಾಮ, ಯೋಗ  ಮಾಡುವುದು ಅಥವಾ ಬೆಳಗ್ಗೆ, ಸಂಜೆ ವಾಕಿಂಗ್‌ ಮಾಡುವುದು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಖತ್ ಪ್ರಯೋಜನಕಾರಿ. ಈ ದೈಹಿಕ ಚಟುವಟಿಕೆ ದೇಹದಲ್ಲಿ ಎಂಡಾರ್ಫಿನ್‌ಗಳ ಉತ್ಪಾದನೆಯನ್ನು ಉತ್ತೇಜಿಸುತ್ತದೆ, ಮನಸ್ಥಿತಿಯನ್ನು ಸುಧಾರಿಸುತ್ತದೆ ಮತ್ತು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಕೆಲಸದ ಯೋಜನೆ:

ಯೋಜನೆ ಇಲ್ಲದೆ ಕೆಲಸ ಮಾಡುವುದರಿಂದ ಒತ್ತಡ ಹೆಚ್ಚಾಗುತ್ತದೆ. ಆದ್ದರಿಂದ ಬೆಳಿಗ್ಗೆ ಅಥವಾ ರಾತ್ರಿ ಮಲಗುವ ಮುನ್ನವೇ ನಾಳಿನ ನಿಮ್ಮ ಪ್ರಮುಖ ಕೆಲಸಗಳ ಪಟ್ಟಿಯನ್ನು ಮಾಡಿ, ಅವುಗಳನ್ನು ಸಮಯಕ್ಕೆ ಸರಿಯಾಗಿ ಮಾಡಿ ಮುಗಿಸಿ, ಇದು ಅರ್ಧದಷ್ಟು ಒತ್ತಡವನ್ನು ಕಡಿಮೆ ಮಾಡುತ್ತದೆ.

ಕೆಲಸದ ಮಧ್ಯೆ ಸಣ್ಣ ವಿರಾಮಗಳನ್ನು ತೆಗೆದುಕೊಳ್ಳಿ:

ನಿರಂತರವಾಗಿ ಒಂದೇ ಸ್ಥಳದಲ್ಲಿ ಕುಳಿತು  ನಿರಂತರ ಕೆಲಸ ಮಾಡುವುದು ಮಾನಸಿಕ ಆಯಾಸಕ್ಕೆ ಕಾರಣವಾಗಬಹುದು. ಕೆಲಸದ ಮಧ್ಯೆ 5 ರಿಂದ 10 ನಿಮಿಷಗಳ ಬ್ರೇಕ್‌ ತೆಗೆದುಕೊಂಡು ಸ್ವಲ್ಪ ಅತ್ತಿಂದ ಇತ್ತ ನಡೆದಾಗಿ ಇದು ಒತ್ತಡವನ್ನು ಕೊಂಚ ನಿವಾರಿಸುತ್ತದೆ.

ಇದನ್ನೂ ಓದಿ: ಪ್ರತಿದಿನ ಬೆಳಗ್ಗೆ 15 ನಿಮಿಷಗಳ ಬಾಲಾಸನ ಮಾಡಿ, ಎಲ್ಲಾ ಪ್ರಯೋಜನಗಳನ್ನು ನಿಮ್ಮದಾಗಿಸಿಕೊಳ್ಳಿ

ಡಿಜಿಟಲ್ ಡಿಟಾಕ್ಸ್:

ಮೊಬೈಲ್ ಫೋನ್, ಲ್ಯಾಪ್‌ಟಾಪ್ ಮತ್ತು ಸಾಮಾಜಿಕ ಮಾಧ್ಯಮಗಳ ಅತಿಯಾದ ಬಳಕೆಯು ಮಾನಸಿಕ ಒತ್ತಡವನ್ನು ಹೆಚ್ಚಿಸುತ್ತದೆ. ಆದ್ದರಿಂದ ಮಲಗುವ ಒಂದೆರಡು ಗಂಟೆಗಳ ಮುನ್ನ ಮೊಬೈಲ್‌ ಫೋನ್‌ನಿಂದ ದೂರವಿರಿ ಮತ್ತು ಪುಸ್ತಕವನ್ನು ಓದಿ ಅಥವಾ ಸಂಗೀತವನ್ನು ಆಲಿಸಿ.

ಉತ್ತಮ ನಿದ್ರೆ ಪಡೆಯಿರಿ:

ಮಾನಸಿಕ ಆರೋಗ್ಯಕ್ಕೆ ಉತ್ತಮ ನಿದ್ರೆ ಪಡೆಯುವುದು ಅತ್ಯಗತ್ಯ. ಏಳರಿಂದ ಎಂಟು ಗಂಟೆಗಳ ನಿದ್ರೆ ಮನಸ್ಸನ್ನು ತಾಜಾವಾಗಿರಿಸುತ್ತದೆ, ಮತ್ತು ಇದು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ನಿಮಗಾಗಿ ಸಮಯ ಮೀಸಲಿಡಿ:

ಪ್ರತಿದಿನ ಸ್ವಲ್ಪ ಸಮಯವನ್ನು ನಿಮಗಾಗಿ ಮಾತ್ರ ಮೀಸಲಿಡಿ. ಈ ಸಮಯದಲ್ಲಿ ಪುಸ್ತಕ ಓದುವುದು, ಸಂಗೀತ ಕೇಳುವುದು, ಗಾರ್ಡನಿಂಗ್‌, ವ್ಯಾಯಾಮ ಇತ್ಯಾದಿ ಚಟುವಟಿಕೆ ಮಾಡಿ. ಇದು ನಿಮ್ಮ ಮನಸ್ಸನ್ನು ಶಾಂತಗೊಳಿಸಲು ಮತ್ತು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ