Pravasi Bharatiya Divas 2025: ಜನವರಿ 9 ರಂದೇ ಪ್ರವಾಸಿ ಭಾರತೀಯ ದಿವಸ್ ಆಚರಿಸುವುದು ಏಕೆ? ಏನಿದರ ವಿಶೇಷ? ಇಲ್ಲಿದೆ ಸಂಪೂರ್ಣ ಮಾಹಿತಿ

ಭಾರತದಲ್ಲಿ ಹುಟ್ಟಿದ್ದರೂ ಉದ್ಯೋಗಕ್ಕಾಗಿ ವಿದೇಶದಲ್ಲಿ ಅದೆಷ್ಟೋ ಭಾರತೀಯರು ನೆಲೆಸಿದ್ದಾರೆ. ದೇಶದ ಅಭಿವೃದ್ಧಿಯಲ್ಲಿ ವಿದೇಶಗಳಲ್ಲಿ ಈ ಅನಿವಾಸಿ ಭಾರತೀಯರು ನೀಡುವ ಕೊಡುಗೆಯನ್ನು ಸ್ಮರಿಸುವ ದಿನವಾಗಿದೆ. ಹೀಗಾಗಿ ಭಾರತ ಸರ್ಕಾರವು ಅನಿವಾಸಿ ಭಾರತೀಯರಿಗಾಗಿಯೇ ಪ್ರವಾಸಿ ಭಾರತೀಯ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನವನ್ನು ಆಚರಿಸುವುದರ ಹಿಂದಿನ ಕಾರಣವೇನು? ಏನಿದರ ವಿಶೇಷತೆ? ಈ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

Pravasi Bharatiya Divas 2025: ಜನವರಿ 9 ರಂದೇ ಪ್ರವಾಸಿ ಭಾರತೀಯ ದಿವಸ್ ಆಚರಿಸುವುದು ಏಕೆ? ಏನಿದರ ವಿಶೇಷ? ಇಲ್ಲಿದೆ ಸಂಪೂರ್ಣ ಮಾಹಿತಿ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 09, 2025 | 9:55 AM

ಭಾರತದಲ್ಲಿ ಹುಟ್ಟಿ ಬೆಳೆದ ಜನರು ಪ್ರಪಂಚ ಮೂಲೆ ಮೂಲೆಯಲ್ಲಿ ದುಡಿಯುತ್ತಿದ್ದಾರೆ. ಹುಟ್ಟೂರು ಬಿಟ್ಟು ತೆರಳಿದ್ದರೂ ಕೂಡ, ಭಾರತಕ್ಕೆ ಸಂಕಷ್ಟ ಎದುರಾದಾಗ ಈ ಅನಿವಾಸಿಗಳು ನೆರವಿಗೆ ಬರುತ್ತಾರೆ. ತಮ್ಮ ತಾಯಿ ನೆಲೆಯ ಅಭಿವೃದ್ಧಿಗಾಗಿ ಅನಿವಾಸಿ ಭಾರತೀಯರು ನೀಡುವ ಕೊಡುಗೆ ಅಪಾರವಾದದ್ದು. ಹೀಗಾಗಿ ಜನವರಿ 9 ರಂದು ಅವರಿಗಾಗಿ ಪ್ರವಾಸಿ ಭಾರತೀಯ ದಿನವನ್ನು ಮೀಸಲಿಡಲಾಗಿದೆ. ಈ ದಿನದಂದು ಅನಿವಾಸಿ ಭಾರತೀಯರ ಕೊಡುಗೆಯನ್ನು ಸ್ಮರಿಸಲಾಗುತ್ತದೆ

ಜ.9 ರಂದೇ ಪ್ರವಾಸಿ ಭಾರತೀಯ ದಿವಸ್ ಆಚರಣೆ ಯಾಕೆ?

1915ರ ಜ.9ರಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ವಾಪಸ್‌ ಆಗಿದ್ದರು. ತದನಂತರದಲ್ಲಿ ಸ್ವಾತಂತ್ರ್ಯ ಹೋರಾಟದ ಮುಂದಾಳತ್ವ ವಹಿಸಿ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಈ ಹಿನ್ನಲೆಯಲ್ಲಿ ಗಾಂಧೀಜಿಯವರ ಸೇವೆಯನ್ನು ಸ್ಮರಿಸುವ ಉದ್ದೇಶದಿಂದ ಭಾರತ ಸರ್ಕಾರ ಜನವರಿ 9 ರಂದು ‘ಪ್ರವಾಸಿ ಭಾರತೀಯ ದಿವಸ್’ ಆಗಿ ಆಚರಿಸುವುದಾಗಿ ಘೋಷಿಸಿತು. ಅಂದಿನಿಂದ ಪ್ರವಾಸಿ ಭಾರತೀಯ ದಿವಸ್ ಆಚರಣೆಯು ಚಾಲ್ತಿಯಲ್ಲಿದೆ.

ಪ್ರವಾಸಿ ಭಾರತೀಯ ದಿವಸ್ ಆಚರಣೆಯ ಹಿನ್ನೆಲೆ

2003ರಲ್ಲಿ ಅನಿವಾಸಿ ಭಾರತೀಯರ ಕೊಡುಗೆ ಸ್ಮರಿಸಲಾಗುವ ಸಲುವಾಗಿ ಈ ಆಚರಣೆಯನ್ನು ಪ್ರಾರಂಭಿಸಲಾಯಿತು. ಭಾರತ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಭಾರತೀಯ ವಾಣಿಜ್ಯ ಮಂಡಳಿ ಒಕ್ಕೂಟ, ಭಾರತೀಯ ಕೈಗಾರಿಕಾ ಒಕ್ಕೂಟ ಮತ್ತು ಈಶಾನ್ಯ ಪ್ರದೇಶದ ಅಭಿವೃದ್ಧಿ ಸಚಿವಾಲಯದಿಂದ ಸಹಯೋಗದಿಂದ ಈ ಕಾರ್ಯಕ್ರಮ ಆಯೋಜಿಸುತ್ತದೆ. ವರ್ಷಕ್ಕೊಮ್ಮೆ ನಡೆಸಲಾಗುತ್ತಿದ್ದ ಈ ಆಚರಣೆಯನ್ನು 2015ರ ಬಳಿಕ ಪ್ರತೀ ಎರಡು ವರ್ಷಕ್ಕೊಮ್ಮೆ ಆಯೋಜಿಸಲಾಗುತ್ತಿದೆ. ಈ ದಿನ ನಡೆಯುವ ಸಮಾವೇಶದಲ್ಲಿ ಅನಿವಾಸಿಗಳಿಗೆ ಭಾರತ ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತವೆ.

ಇದನ್ನೂ ಓದಿ: ಮೇಕಪ್ ನ್ಯಾಚುಲರ್ ಆಗಿ ಬರಬೇಕಂದ್ರೆ ಈ ಟಿಪ್ಸ್ ಪಾಲಿಸಿ

ಪ್ರವಾಸಿ ಭಾರತೀಯ ದಿವಸ್ ಆಚರಣೆ

ದೇಶದ ಪ್ರಮುಖ ನಗರದಲ್ಲಿ ಸಮಾವೇಶ ನಡೆಸುವ ಮೂಲಕ ಪ್ರವಾಸಿ ಭಾರತೀಯ ದಿವಸ್ ಆಚರಿಸಲಾಗುತ್ತದೆ. 2015 ರಿಂದ 2023 ರವರೆಗೆ ಒಟ್ಟು 16 ಸಮಾವೇಶಗಳು ನಡೆದಿವೆ. ಈ ವರ್ಷ 18 ನೇ ಪ್ರವಾಸಿ ಭಾರತೀಯ ದಿವಸ್ ಸಮಾವೇಶವನ್ನು ಒಡಿಶಾ ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಜನವರಿ 8 ರಿಂದ 10 ರವರೆಗೆ ಭುವನೇಶ್ವರದಲ್ಲಿ ನಡೆಯಲಿದೆ. ಪ್ರವಾಸಿ ಭಾರತೀಯ ಸಮ್ಮೇಳನದಲ್ಲಿ ಪಾಲ್ಗೊಳ್ಳಲು 50 ಕ್ಕೂ ಹೆಚ್ಚು ದೇಶಗಳಿಂದ ಹೆಚ್ಚಿನ ಸಂಖ್ಯೆಯ ಅನಿವಾಸಿ ಭಾರತೀಯರು ಭಾಗವಹಿಸುತ್ತಿದ್ದು, ಈ ವರ್ಷ ಅಭಿವೃದ್ಧಿ ಹೊಂದಿದ ಭಾರತಕ್ಕೆ ಅನಿವಾಸಿ ಭಾರತೀಯರ ಕೊಡುಗೆ ಎನ್ನುವ ಥೀಮ್ ನಲ್ಲಿ ಈ ದಿನವನ್ನು ಆಚರಿಸಲಾಗುತ್ತಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ