Pregnant Travelers: ಗರ್ಭಾವಸ್ಥೆಯಲ್ಲಿ ಪ್ರಯಾಣ ಮಾಡುವಾಗ ಈ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಿ

ಗರ್ಭಾವಸ್ಥೆ ಅತ್ಯಂತ ಸೂಕ್ಷ್ಮ ಸಮಯವಾಗಿರುವುದರಿಂದ ಪ್ರಯಾಣ ಬೆಳೆಸುವುದನ್ನು ಅದಷ್ಟು ತಪ್ಪಿಸಿ ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ವಿಶೇಷವಾಗಿ ಗರ್ಭಾವಸ್ಥೆಯ ಮೊದಲ ತ್ರೈಮಾಸಿಕದಲ್ಲಿ ಪ್ರಯಾಣ ಬೆಳೆಸುವುದು ಅಷ್ಟು ಸೂಕ್ತವಲ್ಲ.

Pregnant Travelers: ಗರ್ಭಾವಸ್ಥೆಯಲ್ಲಿ ಪ್ರಯಾಣ ಮಾಡುವಾಗ ಈ  ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಿ
Pregnant Travelers
Follow us
ಅಕ್ಷತಾ ವರ್ಕಾಡಿ
|

Updated on: Dec 25, 2023 | 3:22 PM

ಗರ್ಭಧಾರಣೆಯ ಹಂತವು ಪ್ರತಿಯೊಂದು ಮಹಿಳೆಗೂ ವಿಶೇಷವಾದುದು. ಈ ಸಮಯದಲ್ಲಿ ಸಂತೋಷವಾಗಿರುವುದರ ಜೊತೆಗೆ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯವಾಗಿರುತ್ತದೆ. ಗರ್ಭಾವಸ್ಥೆ ಅತ್ಯಂತ ಸೂಕ್ಷ್ಮ ಸಮಯವಾಗಿರುವುದರಿಂದ ಪ್ರಯಾಣ ಬೆಳೆಸುವುದನ್ನು ಅದಷ್ಟು ತಪ್ಪಿಸಿ ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ವಿಶೇಷವಾಗಿ ಗರ್ಭಾವಸ್ಥೆಯ ಮೊದಲ ತ್ರೈಮಾಸಿಕದಲ್ಲಿ ಪ್ರಯಾಣ ಬೆಳೆಸುವುದು ಅಷ್ಟು ಸೂಕ್ತವಲ್ಲ. ಅದರೂ ಕೂಡ ನೀವು ದೂರ ಪ್ರಯಾಣ ಬೆಳೆಸುವುದು ಅನಿವಾರ್ಯವೆಂದಾದರೆ ಈ ಕೆಲವು ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಿ.

ರೈಲು, ಬಸ್, ಖಾಸಗಿ ವಾಹನ ಅಥವಾ ವಿಮಾನವಾಗಿರಲಿ, ಗರ್ಭಾವಸ್ಥೆಯಲ್ಲಿ ಪ್ರಯಾಣಿಸುವಾಗ ವಿಶೇಷ ಕಾಳಜಿಯನ್ನು ತೆಗೆದುಕೊಳ್ಳಬೇಕಾಗುತ್ತದೆ. ನೀವು ವಿಮಾನದಲ್ಲಿ ಪ್ರಯಾಣಿಸಬೇಕಾದರೆ, ಟಿಕೆಟ್ ಕಾಯ್ದಿರಿಸುವ ಮೊದಲು, ಏರ್ಲೈನ್ಸ್ನಿಂದ ನಿಯಮಗಳು ಏನೆಂದು ತಿಳಿದುಕೊಳ್ಳಿ. 36 ನೇ ವಾರದವರೆಗೆ ವಿಮಾನ ಪ್ರಯಾಣವನ್ನು ಸುರಕ್ಷಿತವೆಂದು ಪರಿಗಣಿಸಲಾಗಿದ್ದರೂ, ವಿಮಾನಯಾನ ಸಂಸ್ಥೆಗಳು ವಿಭಿನ್ನ ನಿಯಮಗಳನ್ನು ಹೊಂದಿರಬಹುದು.

ಆರಾಮದಾಯಕ ಆಸನ:

ಗರ್ಭಾವಸ್ಥೆಯಲ್ಲಿ ಸಾಕಷ್ಟು ಆರಾಮ ಅಗತ್ಯವಿರುತ್ತದೆ. ಆದ್ದರಿಂದ ನೀವು ರೈಲು, ವಿಮಾನ ಅಥವಾ ಯಾವುದೇ ವಾಹನಗಳಲ್ಲಿ ಪ್ರಯಾಣಿಸುವಾಗ ಸಂಪೂರ್ಣವಾಗಿ ಆರಾಮದಾಯಕ ಆಸನ ಆಯ್ಕೆ ಮಾಡುವುದು ಅಗತ್ಯ. ಇದಲ್ಲದೇ ದೀರ್ಘಕಾಲ ಒಂದೇ ಸ್ಥಳದಲ್ಲಿ ಕುಳಿತುಕೊಳ್ಳುವುದು ಸಮಸ್ಯೆಗಳನ್ನು ಉಂಟುಮಾಡಬಹುದು.

ಔಷಧಿಗಳನ್ನು ಇಟ್ಟುಕೊಳ್ಳಿ:

ಗರ್ಭಾವಸ್ಥೆಯಲ್ಲಿ, ಸಾಮಾನ್ಯವಾಗಿ ವಾಂತಿ, ವಾಕರಿಕೆ ಮತ್ತು ತಲೆತಿರುಗುವಿಕೆಯಂತಹ ಸಮಸ್ಯೆಗಳನ್ನು ಉಂಟಾಗುತ್ತದೆ.ಅಂತಹ ಪರಿಸ್ಥಿತಿಯಲ್ಲಿ, ಪ್ರಯಾಣದ ಸಮಯದಲ್ಲಿ ಯಾವುದೇ ತೊಂದರೆ ಉಂಟಾಗದಂತೆ ವೈದ್ಯರನ್ನು ಸಂಪರ್ಕಿಸಿದ ನಂತರ ಕೆಲವು ಔಷಧಿಗಳನ್ನು ನಿಮ್ಮೊಂದಿಗೆ ಇಟ್ಟುಕೊಳ್ಳಿ. ಯಾಕೆಂದರೆ ಕೆಲವೊಮ್ಮೆ ನೀವು ಹೊರಗಡೆಯಿಂದ ಔಷಧಿಗಳನ್ನು ಖರೀದಿಸಲು ಬಯಸಿದರೂ ಕೆಲವು ಸ್ಥಳಗಳಲ್ಲಿ ಲಭ್ಯವಿರುವುದಿರಬಹುದು.

ಇದನ್ನೂ ಓದಿ: ಮಕ್ಕಳಲ್ಲಿ ಆಗಾಗ್ಗೆ ಕಾಡುವ ಬಿಕ್ಕಳಿಸುವಿಕೆಗೆ ಕಾರಣ ಮತ್ತು ತಕ್ಷಣದ ಪರಿಹಾರ

ಆಹಾರ ಕ್ರಮಗಳ ಬಗ್ಗೆ ಜಾಗರೂಕರಾಗಿರಿ:

ವಿಮಾನದಲ್ಲಿ ಆಹಾರ ಪದಾರ್ಥಗಳ ಬಗ್ಗೆ ಚಿಂತಿಸುವ ಅಗತ್ಯವಿಲ್ಲವಾದರೂ, ನೀವು ರೈಲು ಅಥವಾ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರೆ, ನಿಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಿ ಮತ್ತು ಪ್ರಯಾಣದ ಸಮಯದಲ್ಲಿ ಹೊರಗಿನ ಆಹಾರವನ್ನು ಸೇವಿಸುವುದನ್ನು ತಪ್ಪಿಸಿ.

ಆರಾಮದಾಯಕ ದಿಂಬುಗಳನ್ನು ತೆಗೆದುಕೊಳ್ಳಿ:

ಪ್ರಯಾಣ ಮಾಡುವಾಗ ನೀವು ಆರಾಮದಾಯಕವಾದ ದಿಂಬುಗಳನ್ನು ನಿಮ್ಮೊಂದಿಗೆ ಇಟ್ಟುಕೊಳ್ಳಬಹುದು. ಏಕೆಂದರೆ ಗರ್ಭಾವಸ್ಥೆಯಲ್ಲಿ ಕೆಲ ಸಮಯದವರೆಗೆ ಕುಳಿತುಕೊಳ್ಳುವುದು ಬೆನ್ನುನೋವಿಗೆ ಕಾರಣವಾಗುತ್ತದೆ. ಅದಕ್ಕಾಗಿ ಬೆನ್ನು, ಕುತ್ತಿಗೆ ನೋವನ್ನು ತಡೆಯಲು ಆರಾಮದಾಯಕ ದಿಂಬುಗಳನ್ನು ಜೊತೆಗಿರಿಸಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ