AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಂಕ್​ಫುಡ್ಸ್​ಗಳನ್ನು ತಿನ್ನುವುದರಿಂದ ಮಾನಸಿಕ ಆರೋಗ್ಯಕ್ಕೂ ಅಪಾಯ, ಸಂಶೋಧನೆ ಹೇಳುವುದೇನು?

ನೀವು ನಿಮ್ಮ ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯವನ್ನು ನೋಡಿಕೊಳ್ಳುವುದು ತುಂಬಾ ಮುಖ್ಯ, ಇಂದಿನ ಒತ್ತಡದ ಬದುಕಿನಲ್ಲಿ ನೀವು ದೇಹಕ್ಕೆ ಕೆಲಸ ಕೊಡುವುದಕ್ಕಿಂತ ಮೆದುಳಿಗೆ ಹೆಚ್ಚು ಕೆಲಸ ಕೊಡುತ್ತೀರಿ, ಹೀಗಾಗಿ ನೀವು ತೆಗೆದುಕೊಳ್ಳುವ ಆಹಾರಗಳ ಕಡೆಗೆ ಗಮನಹರಿಸುವುದು ಉತ್ತಮ, ನೀವು ಆತುರಾತುರದಲ್ಲಿ ತಿನ್ನುವ ಜಂಕ್​ಫುಡ್ಸ್​ಗಳು ನಿಮ್ಮ ಮಾನಸಿಕ ಆರೋಗ್ಯವನ್ನು ಹದಗೆಡಿಸಬಹುದು.

ಜಂಕ್​ಫುಡ್ಸ್​ಗಳನ್ನು ತಿನ್ನುವುದರಿಂದ ಮಾನಸಿಕ ಆರೋಗ್ಯಕ್ಕೂ ಅಪಾಯ, ಸಂಶೋಧನೆ ಹೇಳುವುದೇನು?
ಮಾನಸಿಕ ಆರೋಗ್ಯ Image Credit source: India Today
Follow us
ನಯನಾ ರಾಜೀವ್
|

Updated on: Oct 17, 2024 | 9:57 AM

ನೀವು ಯಾವ ರೀತಿಯ ಆಹಾರ ಸೇವಿಸುತ್ತೀರ ಎಂಬುದರ ಮೇಲೆ ನಿಮ್ಮ ಆರೋಗ್ಯ ನಿಂತಿದೆ. ನೀವು ತಿನ್ನುವ ಆಹಾರಗಳು ನಿಮ್ಮ ದೈಹಿಕ ಮಾತ್ರವಲ್ಲದೆ ಮಾನಸಿಕ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ ಎಂಬುದು ನೆನಪಿರಲಿ. ಕ್ಯಾಲಿಫೋರ್ನಿಯಾದ ಬ್ರೈನ್-ಇಮೇಜಿಂಗ್ ಸಂಶೋಧಕ ಡಾ. ಡೇನಿಯಲ್ ಅಮೆನ್ ಖಿನ್ನತೆ ವಿರುದ್ಧ ಹೋರಾಡುತ್ತಿರುವವರು ಜಂಕ್ ಫುಡ್​ ತಿನ್ನುವುದನ್ನು ನಿಲ್ಲಿಸಬೇಕು ಎಂದು ಸಲಹೆ ನೀಡಿದ್ದಾರೆ.

ನಿಮ್ಮ ಕರುಳಿನ ಆರೋಗ್ಯ ಹಾಗೂ ನಿಮ್ಮ ಮೆದುಳಿನ ಆರೋಗ್ಯ ಎರಡಕ್ಕೂ ಒಂದಕ್ಕೊಂದು ಸಂಬಂಧವಿದೆ, ನೀವು ಅಲ್ಟ್ರಾ ಪ್ರೊಸೆಸ್ಡ್​ ಆಹಾರವನ್ನು ತಿನ್ನುವ ಅಭ್ಯಾಸವಿದ್ದರೆ ಖಂಡಿತವಾಗಿಯೂ ನೀವು ಖಿನ್ನತೆಗೆ ಜಾರುವ ಅಪಾಯ ಹೆಚ್ಚಿರುತ್ತದೆ. ಕರುಳು ಮತ್ತು ಮೆದುಳು ನಿರಂತರವಾಗಿ ನರಗಳು ಮತ್ತು ರಾಸಾಯನಿಕ ಸಂಕೇತಗಳ ಸಂಕೀರ್ಣ ಜಾಲದ ಮೂಲಕ ಸಂವಹನ ನಡೆಸುತ್ತವೆ.

ಮೆದುಳು ಆಹಾರದ ಜೀರ್ಣಕ್ರಿಯೆಗೆ ತಯಾರಾಗಲು ಕರುಳನ್ನು ಸಂಕೇತಿಸುತ್ತದೆ, ಆದರೆ ಒತ್ತಡವು ವಾಕರಿಕೆ ಅಥವಾ ಅತಿಸಾರದಂತಹ ಜಠರಗರುಳಿನ ರೋಗಲಕ್ಷಣಗಳನ್ನು ಉಂಟುಮಾಡುವ ಸಂಕೇತಗಳನ್ನು ಪ್ರಚೋದಿಸುತ್ತದೆ. ಅದರ ಭಾಗವಾಗಿ, ಕರುಳಿನ ಸೂಕ್ಷ್ಮಾಣುಜೀವಿ – ನಮ್ಮ ಜೀರ್ಣಾಂಗ ವ್ಯವಸ್ಥೆಯಲ್ಲಿ ಬ್ಯಾಕ್ಟೀರಿಯಾ, ವೈರಸ್‌ಗಳು ಮತ್ತು ಶಿಲೀಂಧ್ರಗಳ ಸಂಗ್ರಹ – ಮೆದುಳಿನ ಕ್ರಿಯೆಯ ಮೇಲೆ ಪ್ರಭಾವ ಬೀರುವ ಮತ್ತು ಮನಸ್ಥಿತಿಯ ಮೇಲೆ ಪರಿಣಾಮ ಬೀರುವ ರಾಸಾಯನಿಕಗಳನ್ನು ಉತ್ಪಾದಿಸುತ್ತದೆ.

ಮತ್ತಷ್ಟು ಓದಿ: Soy Milk: ಸೋಯಾ ಹಾಲನ್ನು ಯಾರು ಸೇವನೆ ಮಾಡಬೇಕು, ಯಾರು ಮಾಡಬಾರದು?

ನೀವು ಫೈಬರ್​ಯುಕ್ತ ಆಹಾರವನ್ನು ಹೆಚ್ಚು ಸೇವಿಸಿಬೇಕು, ಹಣ್ಣುಗಳು, ತರಕಾರಿಗಳ ಬಳಕೆ ಹೆಚ್ಚಿರಲಿ, ಪ್ರೋಟಿನ್ ಕೂಡ ದೇಹಕ್ಕೆ ಹೆಚ್ಚು ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ನ್ಯಾಷನಲ್​ ಇನ್​ಸ್ಟಿಟ್ಯೂಟ್​ ಆಫ್ ಹೆಲ್ತ್​ ಪ್ರಕಾರ, ಜಂಕ್ ಫುಡ್ ಬೊಜ್ಜು, ಟೈಪ್ 2 ಡಯಾಬಿಟಿಸ್, ಹೃದ್ರೋಗ, ಜೀರ್ಣಕಾರಿ ಸಮಸ್ಯೆಗಳು, ಅಧಿಕ ರಕ್ತದೊತ್ತಡ ಮತ್ತು ಖಿನ್ನತೆ ಸೇರಿದಂತೆ ಅನೇಕ ನಕಾರಾತ್ಮಕ ಆರೋಗ್ಯ ಪರಿಣಾಮಗಳನ್ನು ಉಂಟುಮಾಡಬಹುದು.

ವೈದ್ಯರ ಪ್ರಕಾರ, ಯುವಕರು ತಮ್ಮ ಜೀವನವನ್ನು ಸುಧಾರಿಸಲು ಕೆಲಸ ಮಾಡುವಾಗ, ಅವರ ದೈಹಿಕ, ಭಾವನಾತ್ಮಕ ಮತ್ತು ಮಾನಸಿಕ ಆರೋಗ್ಯವನ್ನು ನೋಡಿಕೊಳ್ಳಲು ಯೋಗ ಮತ್ತು ಧ್ಯಾನದ ಸಹಾಯವನ್ನು ಪಡೆಯುವುದು ಉತ್ತಮ. ಈ ಮಾನಸಿಕ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುವಾಗ ತೂಕ ಹೆಚ್ಚಾಗುವುದು ಅಥವಾ ಹೃದಯ ಬಡಿತದ ಅಡಚಣೆಯಂತಹ ಅಡ್ಡ ಪರಿಣಾಮಗಳ ಸಾಧ್ಯತೆಗಳಿರುತ್ತವೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಊರ ಜನರಿಂದ ಸೋಫಿಯ ಮಾವ, ಕುಟುಂಬಸ್ಥರಿಗೆ ಅಭಿನಂದನೆ
ಊರ ಜನರಿಂದ ಸೋಫಿಯ ಮಾವ, ಕುಟುಂಬಸ್ಥರಿಗೆ ಅಭಿನಂದನೆ
ಗ್ರಾ ಪಂ ಸದಸ್ಯನಿಗಿರುವಷ್ಟು ಕಾಮನ್ ಸೆನ್ಸ್ ಪಾಟೀಲ್​ಗೆ ಇಲ್ಲ: ಯತ್ನಾಳ್
ಗ್ರಾ ಪಂ ಸದಸ್ಯನಿಗಿರುವಷ್ಟು ಕಾಮನ್ ಸೆನ್ಸ್ ಪಾಟೀಲ್​ಗೆ ಇಲ್ಲ: ಯತ್ನಾಳ್
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ