Ramphal: ಈ ಹಣ್ಣಿನಲ್ಲಿದೆ ಆರೋಗ್ಯದ ಗುಟ್ಟು, ಇದು ಹೃದಯಕ್ಕೆ ಪ್ರಯೋಜನಕಾರಿ ಫಲ

ಸ್ಥಳೀಯ ಕಾಲೋಚಿತ ಹಣ್ಣುಗಳು ನಮ್ಮ ಆರೋಗ್ಯಕ್ಕೆ ತುಂಬಾನೇ ಉಪಯೋಗಕಾರಿಯಾಗಿರುತ್ತವೆ. ಅಂತಹ ಹಣ್ಣುಗಳಲ್ಲಿ ಒಂದಾದ ರಾಮಫಲದ ಆರೋಗ್ಯ ಪ್ರಯೋಜನಗಳ ಬಗ್ಗೆ ವಿವರ ಇಲ್ಲಿದೆ. ಈ ಚಳಿಋತುವಿನಲ್ಲಿ ಲಭ್ಯವಿರುವ ವಿವಿಧ ರೀತಿಯ ರುಚಿಕರವಾದ ಮತ್ತು ಆರೋಗ್ಯಯುತವಾದ ಸೀಸಲನ್ ಹಣ್ಣುಗಳಿಗೆ ಹೆಸರುವಾಸಿಯಾಗಿವೆ.

Ramphal: ಈ ಹಣ್ಣಿನಲ್ಲಿದೆ ಆರೋಗ್ಯದ ಗುಟ್ಟು, ಇದು ಹೃದಯಕ್ಕೆ ಪ್ರಯೋಜನಕಾರಿ ಫಲ
Ramphal Image Credit source: google image
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Jan 16, 2023 | 7:16 PM

ಸ್ಥಳೀಯ ಕಾಲೋಚಿತ ಹಣ್ಣುಗಳು ನಮ್ಮ ಆರೋಗ್ಯಕ್ಕೆ ತುಂಬಾನೇ ಉಪಯೋಗಕಾರಿಯಾಗಿರುತ್ತವೆ. ಅಂತಹ ಹಣ್ಣುಗಳಲ್ಲಿ ಒಂದಾದ ರಾಮಫಲ(Ramphal) ಆರೋಗ್ಯ ಪ್ರಯೋಜನಗಳ ಬಗ್ಗೆ ವಿವರ ಇಲ್ಲಿದೆ. ಈ ಚಳಿಋತುವಿನಲ್ಲಿ ಲಭ್ಯವಿರುವ ವಿವಿಧ ರೀತಿಯ ರುಚಿಕರವಾದ ಮತ್ತು ಆರೋಗ್ಯಯುತವಾದ ಸೀಸಲನ್ ಹಣ್ಣುಗಳಿಗೆ ಹೆಸರುವಾಸಿಯಾಗಿವೆ. ಅಂತಹ ದೇಸಿ ಹಣ್ಣುಗಳಲ್ಲಿ ಒಂದಾದ ರಾಮಫಲದ ಬಗ್ಗೆ ನಾವಿವತ್ತು ಹೇಳುತ್ತೇವೆ. ರಾಮಫಲವನ್ನು ವೈಲ್ಡ್ ಸ್ವೀಟ್‌ಸಾಪ್ ಅಥವಾ ಬುಲ್ಲೊಕ್ಸ್ ಹಾರ್ಟ್ ಎಂದು ಕರೆಯುತ್ತಾರೆ. ಹೆಚ್ಚು ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿರುವ ಈ ಹಣ್ಣನ್ನು ಸೀತಾಫಲ ಅಂತನೂ ಕರೆಯುತ್ತಾರೆ.

ನಿಯಮಿತವಾಗಿ ಹಣ್ಣುಗಳು ಮತ್ತು ತರಕಾರಿಗಳನ್ನು ತಿನ್ನುವುದು ಆರೋಗ್ಯಕರ ಆಹಾರದ ಪ್ರಮುಖ ಭಾಗವಾಗಿದೆ. ಮತ್ತು ದೈನಂದಿನ ಹೈಪರ್ ಲೋಕಲ್ ಹಣ್ಣುಗಳನ್ನು ತಿನ್ನುವುದು ಆರೋಗ್ಯಕರ ಆಹಾರ ಕ್ರಮವನ್ನು ಪಾಲಿಸುವುದು ಉತ್ತಮ ಮಾರ್ಗವಾಗಿದೆ ಎಂದು ಪ್ರಸಿದ್ಧ ನ್ಯೂಟ್ರೀಷ್ಯನಿಸ್ಟ್ ಅವ್ನಿ ಕೌಲ್ ಹೇಳುತ್ತಾರೆ. ನಿಮ್ಮ ಆಹಾರದಲ್ಲಿ ಈ ಹಣ್ಣುಗಳನ್ನು ಸೇರಿಸುವುದರಿಂದ ದೇಹದಲ್ಲಿ ಸೂಕ್ಷ್ಮ ಪೋಷಕಾಂಶಗಳ ಸಮೀಕರಣವನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳುತ್ತಾರೆ. ಬೇರ್, ಮಲ್ಬೆರಿ ಮತ್ತು ರಾಮಫಲದಂತಹ ಹಣ್ಣುಗಳನ್ನು ಹೈಪರ್ ಲೋಕಲ್ ಹಣ್ಣುಗಳು ಎಂದು ಪರಿಗಣಿಸಲಾಗುತ್ತದೆ.

ರಾಮಫಲವು 5 ಅದ್ಭುತ ಆರೋಗ್ಯ ಪ್ರಯೋಜನಗಳು:

ಚರ್ಮ ಮತ್ತು ಕೂದಲಿಗೆ ಒಳ್ಳೆಯದು: ಇದು ವಿಟಮಿನ್ ಸಿ ಅಂಶವನ್ನು ಹೊಂದಿದ್ದು, ಅದು ನಿಮ್ಮ ಚರ್ಮ ಮತ್ತು ಕೂದಲಿಗೆ ಪ್ರಯೋಜನವನ್ನು ನೀಡುತ್ತದೆ. ಮೊಡವೆಗಳನ್ನು ಕಡಿಮೆ ಮಾಡಲು ರಾಮಫಲ ಒಳ್ಳೆಯದು. ಎಂದು ಅವ್ನಿ ಕೌಲ್ ಹೇಳುತ್ತಾರೆ. ಈ ಹಣ್ಣಿನಲ್ಲಿರುವ ವಿಟಮಿನ್ ಸಿ ಚರ್ಮದ ಸಮಸ್ಯೆಗಳಿಗೆ ಕಾರಣವಾಗುವ ಸ್ವತಂತ್ರ ರಾಡಿಕಲ್‌ಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ನೀವು 30ರ ಹರೆಯದವರಾಗಿದ್ದರೆ ಮತ್ತು ಮೊಡವೆಗಳನ್ನು ಹೊಂದಿದ್ದರೆ ಈ ಹಣ್ಣು ನಿಮ್ಮ ಹೊಳಪನ್ನು ಮರಳಿ ತರಲು ಸಹಾಯ ಮಾಡುತ್ತದೆ.

ಇದನ್ನು ಓದಿ:Lifestyle: ನಮಗಾಗಿ ನಾವು ಬದುಕೋದು ಹೇಗೆ? ಉತ್ತಮ ಜೀವನಕ್ಕಾಗಿ ಈ ಸರಳ ಸೂತ್ರಗಳನ್ನು ಪಾಲಿಸಿ

ಮಧುಮೇಹಕ್ಕೆ ಒಳ್ಳೆಯದು: ಮದುಮೇಹಿಗಳಿಗೆ ವಿಶೇಷವಾಗಿ ಹಣ್ಣುಗಳ ವಿಚಾರಕ್ಕೆ ಬಂದಾಗ ಯಾವುದನ್ನು ತಿನ್ನಬೇಕು ಮತ್ತು ಯಾವುದನ್ನು ಇನ್ನಬಾರದು ಎಂಬುವುದನ್ನು ಆರಿಸಿಕೊಳ್ಳುವುದು ನಿರಂತರ ಹೋರಾಟವಾಗಿದೆ. ರಾಮಫಲವು ಒಂದು ಹೈಪರ್ ಲೋಕಲ್ ಹಣ್ಣು ಎಂದು ಅವ್ನಿ ಕೌಲ್ ಹೇಳುತ್ತಾರೆ, ಇದು ರಕ್ತದಲ್ಲಿನ ಗ್ಲೂಕೋಸ್ ಕಡಿಮೆಗೊಳಿಸುವ ಗುಣಲಕ್ಷಣಗಳನ್ನು ಹೊಂದಿರುವುದರಿಂದ ಮಧುಮೇಹಕ್ಕೆ ಪ್ರಯೋಜನಕಾರಿಯಾಗಿದೆ.

ರೋಗ ನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ: ಚಳಿಗಾಲದ ಹವಾಮಾನದ ಬದಲಾವಣೆಯಿಂದಾಗಿ ಅನಾರೋಗ್ಯಕ್ಕೆ ಒಳಗಾಗುವ ಮತ್ತು ಶೀತ, ಕೆಮ್ಮಿನಿಂದ ನಿರಂತರವಾಗಿ ಹೋರಾಡುತ್ತಿರುವ ಎಲ್ಲರಿಗೂ ರಾಮಫಲ ಪ್ರಯೋಜನಕಾರಿಯಾಗಿದೆ. ಇದರಲ್ಲಿರುವ ಸಿ, ಎ ಮತ್ತು ಬಿ ವಿಟಮಿನ್‌ಗಳ ಅಂಶವು ರೋಗ ನಿರೋಧಕ ಶಕ್ತಿಯನ್ನು ಮತ್ತಷ್ಟು ಹೆಚ್ಚಿಸುತ್ತದೆ. ಹಾಗೂ ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡುತ್ತದೆ ಎಂದು ಅವ್ನಿ ಕೌಲ್ ಹೆಳುತ್ತಾರೆ.

ದುರ್ಬಲ ಕೀಳುಗಳಿಗೆ ಸಹಾಯಕಾರಿ: ಚಳಿಗಾಲದಲ್ಲಿ ಕೀಲು ನೋವು ಹೆಚ್ಚಾಗುವುದು ಸಾಮಾನ್ಯವಾಗಿದೆ, ಅದರಲ್ಲೂ ವಿಶೇಷವಾಗಿ ವಯಸ್ಸಾದವರಲ್ಲಿ. ರಾಮಫಲವು ಈ ನೋವುಗಳ ಶಮನಕ್ಕೆ ಉಪಯೋಗಕಾರಿಯಾಗಿದೆ. ಇದು ಉರಿಯೂತ ನಿವಾರಕವಾಗಿರುವುದರಿಂದ ಇದು ದೇಹದಲ್ಲಿನ ಸ್ವತಂತ್ರ ರಾಡಿಕಲ್‌ಗಳಿಂದ ಉಂಟಾಗುವ ಹಾನಿಯ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಇದು ಕೀಲು ನೋವು ಸಮಸ್ಯೆಯನ್ನು ನಿಭಾಯಿಸಲು ಸಹಾಯ ಮಾಡುತ್ತದೆ.

ಹೃದಯಕ್ಕೆ ಪ್ರಯೋಜನಕಾರಿ: ರಾಮಫಲದಲ್ಲಿರುವ ವಿಟಮಿನ್ ಬಿ6 ಹೃದಯದ ಬಳಿ ಸಂಗ್ರಹವಾಗುವ ಕೊಬ್ಬನ್ನು ನಿರ್ವಹಿಸಲು ಸಹಾಯ ಮಾಡುತ್ತದೆ ಹಾಗೂ ಹೃದಯ ಸಂಬಂಧಿ ಸಮಸ್ಯೆಗಳನ್ನು ತಡೆಯುತ್ತದೆ ಎಂದು ಅವ್ನಿ ಕೌಲ್ ಹೇಳುತ್ತಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:16 pm, Mon, 16 January 23

ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ