Miss Universe: ಮೊದಲ ಬಾರಿಗೆ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಮುಸ್ಲಿಂ ರಾಷ್ಟ್ರ: ಇವರೇ ನೋಡಿ ಸೌದಿ ಬ್ಯೂಟಿ

ಮೊದಲ ಬಾರಿಗೆ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಸೌದಿ ಅರೇಬಿಯಾ ಸ್ಪರ್ಧಿಸಲ್ಲಿದ್ದು,27 ವರ್ಷದ ಸೌದಿ ಬ್ಯೂಟಿ ರೂಮಿ ಅಲ್ಕಹ್ತಾನಿ ಸೌದಿ ಅರೇಬಿಯಾವನ್ನು ಪ್ರತಿನಿಧಿಸಲಿದ್ದಾರೆ. ರೂಮಿ ಅಲ್ಕಹ್ತಾನಿ ಅವರ ಬಗೆಗಿನ ಇನ್ನಷ್ಟು ವಿವರ ಇಲ್ಲಿ ತಿಳಿದುಕೊಳ್ಳಿ.

Miss Universe: ಮೊದಲ ಬಾರಿಗೆ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಮುಸ್ಲಿಂ ರಾಷ್ಟ್ರ: ಇವರೇ ನೋಡಿ ಸೌದಿ ಬ್ಯೂಟಿ
Rumy AlqahtaniImage Credit source: instagram
Follow us
ಅಕ್ಷತಾ ವರ್ಕಾಡಿ
|

Updated on: Mar 27, 2024 | 12:29 PM

ಮೊಟ್ಟಮೊದಲ ಬಾರಿಗೆ ಪ್ರತಿಷ್ಠಿತ ವಿಶ್ವ ಸುಂದರಿ ಸ್ಪರ್ಧೆ(Miss Universe) ಯಲ್ಲಿ ಭಾಗವಹಿಸಲು ತಯಾರಿ ನಡೆಸುತ್ತಿರುವ ಸೌದಿ ಅರೇಬಿಯಾ ಹೊಸ ಇತಿಹಾಸ ನಿರ್ಮಿಸಲು ಸಜ್ಜಾಗಿದೆ. 27 ವರ್ಷದ ರೂಮಿ ಅಲ್ಕಹ್ತಾನಿ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಸೌದಿ ಅರೇಬಿಯಾವನ್ನು ಪ್ರತಿನಿಧಿಸುತ್ತಿದ್ದಾರೆ. ಈ ಮೂಲಕ ಸೌದಿ ಅರೇಬಿಯಾದ ಮಹಿಳಾ ಸಬಲೀಕರಣಕ್ಕೆ ಮಹತ್ವದ ಮೈಲಿಗಲ್ಲಾಗಲಿದೆ.

ರೂಮಿ ಅಲ್ಕಹ್ತಾನಿ ಯಾರು?

ರೂಮಿ ಅಲ್ಕಹ್ತಾನಿ ಅವರು ಮಲೇಷ್ಯಾದಲ್ಲಿನ ಮಿಸ್ ಏಷ್ಯಾ ಮತ್ತು ಮಿಸ್ ಅರಬ್ ಪೀಸ್ ಸೇರಿದಂತೆ ವಿವಿಧ ಅಂತರರಾಷ್ಟ್ರೀಯ ಸ್ಪರ್ಧೆಗಳಲ್ಲಿ ಸೌದಿ ಅರೇಬಿಯಾವನ್ನು ಪ್ರತಿನಿಧಿಸಿದ್ದರು. ಇದಲ್ಲದೇ ಮಿಸ್ ಮಿಡಲ್ ಈಸ್ಟ್ (ಸೌದಿ ಅರೇಬಿಯಾ) ಮತ್ತು ಮಿಸ್ ಅರಬ್ ವರ್ಲ್ಡ್ ಪೀಸ್ 2021 ರಂತಹ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

27 ವರ್ಷದ ರೂಪದರ್ಶಿ ರೂಮಿ ಸೋಮವಾರ ತಮ್ಮ ಇನ್‌ಸ್ಟಾಗ್ರಾಮ್ ಮೂಲಕ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಇನ್ಸ್ಟಾಗ್ರಾಮ್​​​ನಲ್ಲಿ ಹಂಚಿಕೊಂಡಿರುವ ಪೋಸ್ಟ್​​​ ಇಲ್ಲಿದೆ ನೋಡಿ.

ಅರೇಬಿಕ್ ಸೇರಿದಂತೆ ಇಂಗ್ಲಿಷ್, ಫ್ರೆಂಚ್ ಮತ್ತು ಬಹು ಭಾಷೆಗಳಲ್ಲಿ ನಿರರ್ಗಳವಾಗಿ ಮಾತನಾಡಬಲ್ಲ ರೂಮಿ ಅಲ್ಕಹ್ತಾನಿ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಅರಬ್​​​ ರಾಷ್ಟ್ರವನ್ನು ಪ್ರತಿನಿಧಿಸುವ ಮೂಲಕ ವಿಶ್ವ ಸುಂದರಿ ಪಟ್ಟವನ್ನು ಮುಡಿಗೇರಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಸ್ಥಳೀಯ ಮಾಧ್ಯಮಗಳ ವರದಿಗಳು ತಿಳಿಸಿವೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು