AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿನಿತ್ಯ ರನ್ನಿಂಗ್​ ಮಾಡುವ ಅಭ್ಯಾಸ ಇದೆಯೇ? ಈ ವಿಷಯಗಳನ್ನು ನೀವು ತಿಳಿಯಲೇಬೇಕು

ರನ್ನಿಂಗ್​ ಮಾಡುವುದರಿಂದ ಮೂಳೆಗಳು ಬಲಗೊಳ್ಳುತ್ತದೆ. ದೇಹದಲ್ಲಿನ ಹೆಚ್ಚುವರಿ ಕೊಬ್ಬನ್ನು ಕರಗಿಸುತ್ತದೆ. ಹಾಗಾಗಿ ಪ್ರತಿನಿತ್ಯ ಓಡುವ ಅಭ್ಯಾಸದಿಂದ ಆರೋಗ್ಯಕ್ಕೆ ಹೆಚ್ಚಿನ ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ.

ಪ್ರತಿನಿತ್ಯ ರನ್ನಿಂಗ್​ ಮಾಡುವ ಅಭ್ಯಾಸ ಇದೆಯೇ? ಈ ವಿಷಯಗಳನ್ನು ನೀವು ತಿಳಿಯಲೇಬೇಕು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 20, 2021 | 1:19 PM

Share

ಎಲ್ಲರಿಗೂ ತಿಳಿದಿರುವಂತೆ ವ್ಯಾಯಾಮವು ಆರೋಗ್ಯಕರ ಜೀವನಕ್ಕೆ ಅಡಿಪಾಯವಾಗಿದೆ. ಪ್ರತಿನಿತ್ಯ ಓಡುವುದರಿಂದ ನಮ್ಮ ದೇಹ ಸದೃಢವಾಗಿರಲು ಸಹಾಯಕವಾಗಿದೆ. ಯಾವ ವಯಸ್ಸಿನಲ್ಲಿಯೂ ಸಹ ಹೆಚ್ಚು ಆ್ಯಕ್ಟೀವ್ ಆಗಿರಲು ಓಟವು ಅತ್ಯಂತ ಒಳ್ಳೆಯ ವ್ಯಾಯಾಮ. ಇದು ದೇಹದ ಒಟ್ಟಾರೆ ಯೋಗಕ್ಷೇಮಕ್ಕೆ ಪ್ರಯೋಜನವನ್ನು ನೀಡುತ್ತದೆ. ಹೃದಯನಾಳದ ಆರೋಗ್ಯವನ್ನು ಸುಧಾರಿಸುವುದರಿಂದ ಹಿಡಿದು, ಸದೃಢವಾದ ಸ್ನಾಯುವನ್ನು ಹೊಂದಲು ಸಹಾಯ ಮಾಡುತ್ತದೆ. ಉತ್ತಮ ಆರೋಗ್ಯಕ್ಕಾಗಿ ಪ್ರತಿನಿತ್ಯವೂ ಓಡುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ.

ಪ್ರತಿನಿತ್ಯ ರನ್ನಿಂಗ್​ ಮಾಡುವುದರಿಂದ ಆರೋಗ್ಯ ಪ್ರಯೋಜನಗಳು ಪ್ರತಿನಿತ್ಯ ರನ್ನಿಂಗ್​ ಮಾಡುವುದರಿಂದ ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ.  ವ್ಯಾಯಾಮ ಮಾಡುವಾಗ ಸ್ನಾಯು ಬಲಗೊಲ್ಳುತ್ತದೆ. ನಿಮ್ಮ ಹೃದಯ ಕೂಡಾ ಒಂದು ಸ್ನಾಯು. ಹೃದಯಕ್ಕೆ ರಕ್ತದ ಹರಿವನ್ನು ಸುಧಾರಿಸುತ್ತದೆ. ಹಾಗಾಗಿ ಓಟದಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನಗಳಿವೆ. ಬೆಳಿಗ್ಗೆ ಎದ್ದ ತಕ್ಷಣ ರನ್ನಿಂಗ್​ ಮಾಡುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ.

ರನ್ನಿಂಗ್​ ಮಾಡುವುದರಿಂದ ಮೂಳೆಗಳು ಬಲಗೊಳ್ಳುತ್ತದೆ. ಓಟವು ದೇಹದ ತೂಕಕ್ಕೆ ಹೆಚ್ಚು ಪರಿಣಾಮ ಬೀರುತ್ತದೆ. ದೇಹದ ತೂಕವನ್ನು ನಿಯಂತ್ರಿಸುವಲ್ಲಿ ಇದು ಸಹಾಯಕವಾಗಿದೆ. ದೇಹದಲ್ಲಿನ ಹೆಚ್ಚುವರಿ ಕೊಬ್ಬನ್ನು ಕರಗಿಸುತ್ತದೆ. ಮೂಳೆಗಳನ್ನು ಗಟ್ಟಿಗೊಳಿಸುತ್ತದೆ. ಹಾಗಾಗಿ ಪ್ರತಿನಿತ್ಯ ಓಡುವ ಅಭ್ಯಾಸದಿಂದ ಆರೋಗ್ಯಕ್ಕೆ ಹೆಚ್ಚಿನ ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ.

ಪ್ರತಿನಿತ್ಯ 20 ನಿಮಿಷಗಳ ಕಾಲ ಓಡುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಬಳಿಕ 5 ನಿಮಿಷ ವಿಶ್ರಾಂತಿ ಪಡೆಯಬೇಕು. ಹೃದಯ ಬಡಿತ ಮತ್ತು ಸ್ನಾಯುಗಳಿಗೆ ರಕ್ತದ ಹರಿವನ್ನು ನಿಯಂತ್ರಿಸಲು ವೇಗದ ನಡಿಗೆ, ಜಾಗಿಂಗ್ ಅಥವಾ ರನ್ನಿಂಗ್ ಅಭ್ಯಾಸ ಉತ್ತಮ ಮಾರ್ಗವಾಗಿದೆ.

ಗಮನಿಸಲೇಬೇಕಾದ ಅಂಶವೆಂದರೆ ಪ್ರತಿನಿತ್ಯ ಬೆಳಿಗ್ಗೆ ರನ್ನಿಂಗ್​ ಮಾಡುವುದು ಒಳ್ಳೆಯದು. ಜತೆಗೆ ಖಾಲಿ ಹೊಟ್ಟೆಯಲ್ಲಿ ಓಡುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಹೊಟ್ಟೆ ತುಂಬಿದ್ದಾಗ ರನ್ನಿಂಗ್​ ಮಾಡುವ ಅಭ್ಯಾಸದಿಂದ ಆರೋಗ್ಯಕ್ಕೆ ಅನಾಕೂಲಗಳಿವೆ. ಈ ಕುರಿತಂತೆ ಹೆಚ್ಚು ಗಮನವಿರಲಿ.

ಇದನ್ನೂ ಓದಿ:

Health Tips: ಅರಿಶಿಣ ಹಾಲು ಸೇವಿಸಿದರೆ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ತಿಳಿದಿದೆಯೇ?

Health Tips: ಅಧಿಕ ರಕ್ತದೊತ್ತಡ ಸಮಸ್ಯೆ ನಿಂಯತ್ರಿಸಲು ಈ ಕೆಲವು ವಿಷಯಗಳು ಗಮನದಲ್ಲಿರಲಿ

(Running health benefits check in Kannada)

Published On - 1:11 pm, Mon, 20 September 21

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್