
ಇಂದು ಹೆಣ್ಣು ಮಕ್ಕಳ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಗತಿಗಳು ಸಂಪೂರ್ಣ ಬದಲಾಗಿದೆ. ಹೌದು, ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ತೊಡಗಿಕೊಳ್ಳುವ ಮೂಲಕ ಸ್ವತಂತ್ರ ಬದುಕನ್ನು ಕಟ್ಟಿಕೊಂಡಿದ್ದಾರೆ. ಮಹಿಳೆಯರನ್ನು ಇನ್ನಷ್ಟು ಸದೃಢರನ್ನಾಗಿ ಮಾಡಲು ಸರ್ಕಾರವು ವಿವಿಧ ರೀತಿಯ ಯೋಜನೆಗಳ ಜಾರಿಗೆ ತರುತ್ತಿದೆ. ಭಾರತದಲ್ಲಿ ಫೆಬ್ರವರಿ 13 ರಂದು ರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ. ಈ ದಿನ ಭಾರತದ ಪ್ರಥಮ ಮಹಿಳಾ ರಾಜ್ಯಪಾಲೆ ಸರೋಜಿನಿ ನಾಯ್ಡು ಜನ್ಮದಿನ ಕೂಡ ಹೌದು.
ದೇಶದ ಮಹಿಳೆಯರಿಗೆ ಮಾದರಿಯಾಗಿರುವ ಮಹಿಳೆಯರಲ್ಲಿ ಸರೋಜಿನಿ ನಾಯ್ಡು ಕೂಡ ಒಬ್ಬರು. ಫೆಬ್ರವರಿ 13 ರಂದು ಸರೋಜಿನಿ ನಾಯ್ಡು ಅವರ ಜನ್ಮದಿನ. ಸ್ವಾತಂತ್ರ್ಯ ಹೋರಾಟ ಹಾಗೂ ಅವರ ಕೊಡುಗೆಯನ್ನು ಗೌರವಿಸುವ ಸಲುವಾಗಿ ಸರ್ಕಾರವು ಫೆಬ್ರವರಿ 13 ಅನ್ನು ರಾಷ್ಟ್ರೀಯ ಮಹಿಳಾ ದಿನವೆಂದು ಘೋಷಣೆ ಮಾಡಿತು. ಸರೋಜಿನಿ ನಾಯ್ಡುರವರು ಭಾರತದಲ್ಲಿ ಮಹಿಳೆಯರ ಅಭಿವೃದ್ಧಿಗೆ ನೀಡಿದ ಕೊಡುಗೆಗಳನ್ನು ಗೌರವಿಸುವ ಸಲುವಾಗಿ, ಅವರ ಜನ್ಮ ದಿನವನ್ನು ರಾಷ್ಟ್ರೀಯ ಮಹಿಳಾ ದಿನವನ್ನಾಗಿ ಆಚರಿಸುತ್ತಾ ಬರಲಾಗುತ್ತಿದೆ.
ರಾಷ್ಟ್ರೀಯ ಮಹಿಳಾ ದಿನದಂದು ಭಾರತದ ಕೋಗಿಲೆ ಸರೋಜಿನಿ ನಾಯ್ಡುರವರ ಜನ್ಮದಿನವಾಗಿದೆ. ಹೌದು, ಸರೋಜಿನಿ ನಾಯ್ಡು ಮಹಿಳೆಯರ ಅಭಿವೃದ್ಧಿಗೆ ಗಣನೀಯ ಕೊಡುಗೆಗಳನ್ನು ಗೌರವಿಸುವ ಸಲುವಾಗಿ ಈ ದಿನವೂ ಮಹತ್ವದ್ದಾಗಿದೆ. ಈ ವಿಶೇಷ ದಿನದಂದು ಪುರುಷರಷ್ಟೇ ಸ್ತ್ರೀಯರು ಸಮಾನರು ಎನ್ನುವ ನೆಲೆಯಲ್ಲಿ ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಿದೆ. ಈ ದಿನದ ಅಂಗವಾಗಿ ಸರೋಜಿನಿ ನಾಯ್ಡುರವರ ಜೀವನದ ಬಗ್ಗೆ ತಿಳಿಸುವ ಕಾರ್ಯಕ್ರಮಗಳನ್ನು ಮಾಡಲಾಗುತ್ತದೆ. ಸಾಧನೆ ಮಾಡಿರುವ ಮಹಿಳೆಯರನ್ನು ಗುರುತಿಸಲಾಗುತ್ತದೆ. ಮಹಿಳಾ ಚಾರಿಟಿಗಾಗಿ ನಿಧಿಯನ್ನು ಸಂಗ್ರಹಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.
ಇದನ್ನೂ ಓದಿ: ಫೆಬ್ರವರಿ 13 ರಂದೇ ವಿಶ್ವ ರೇಡಿಯೋ ದಿನ ಆಚರಿಸುವುದು ಏಕೆ? ಇಲ್ಲಿದೆ ಕುತೂಹಲಕಾರಿ ಮಾಹಿತಿ
ಸರೋಜಿನಿ ನಾಯ್ಡು ಭಾರತದ ಅತ್ಯಂತ ಪ್ರಸಿದ್ಧ ಕವಿಗಳಲ್ಲಿ ಒಬ್ಬರು. ಅವರ ಕೃತಿಯ ಸಾಹಿತ್ಯ ಮತ್ತು ಸಂಗೀತ ಶೈಲಿಯಿಂದಲೇ ಖ್ಯಾತರಾದವರು. ಹೀಗಾಗಿ ಅವರಿಗೆ “ಇಂಡಿಯಾಸ್ ನೈಟಿಂಗೇಲ್” ಎಂದು ಬಿರುದು ನೀಡಲಾಯಿತು. ಅದಲ್ಲದೇ, ಅತ್ಯಂತ ಪ್ರತಿಷ್ಠಿತ ಹಾಗೂ ಗೌರವಾನ್ವಿತ ರಾಜನೀತಿಜ್ಞೆ ಮತ್ತು ಮಹಾನ್ ಲೇಖಕಿ ಹಾಗೂ ರಾಜಕೀಯ ಸಾಧನೆಗಳಿಂದ ಇತರರಿಗೆ ಮಾದರಿಯಾಗಿದ್ದಾರೆ. ಕ್ವಿಟ್ ಇಂಡಿಯಾ” ಚಳವಳಿಯ ಸಮಯದಲ್ಲಿ ಸರೋಜಿನಿ ನಾಯ್ಡು ಅವರನ್ನು ಬಂಧಿಸಲಾಯಿತು. ಅವರು ಗಾಂಧೀಜಿಯವರೊಂದಿಗೆ 21 ತಿಂಗಳ ಕಾಲ ಜೈಲು ವಾಸ ಅನುಭವಿಸಿದ್ದರು. ಸ್ವಾತಂತ್ರ್ಯದ ನಂತರ, ಭಾರತದ ರಾಜ್ಯವೊಂದರ ಮೊದಲ ಮಹಿಳಾ ಗವರ್ನರ್ ಕೂಡ ಆಗಿದ್ದರು. ಮಹಿಳೆಯರ ಹಕ್ಕುಗಳು ಮತ್ತು ಭಾರತೀಯ ಸ್ವಾತಂತ್ರ್ಯಕ್ಕೆ ಅವರು ನೀಡಿದ ಕೊಡುಗೆಗಳ ಹೊರತಾಗಿ, ಸಾಹಿತ್ಯ ಕ್ಷೇತ್ರಕ್ಕೂ ಅಪಾರ ಕೊಡುಗೆ ನೀಡಿದ್ದಾರೆ.
ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ