AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಲು ಶಾಶ್ವತವಲ್ಲ, ಗೆಲುವಿನ ದಾರಿಯ ಆಯ್ದುಕೊಳ್ಳುವ ಸ್ವಾತಂತ್ರ್ಯ ಕೂಡ ನಿಮ್ಮದೇ, ಆತ್ಮವಿಶ್ವಾಸ ಹೆಚ್ಚಿಸಲು ಸಲಹೆಗಳು ಇಲ್ಲಿವೆ

ಜೀವನದಲ್ಲಿ ಸೋಲು ಗೆಲುವು ಎಲ್ಲವೂ ಸಾಮಾನ್ಯ, ಸೋಲೇ ಗೆಲುವಿನ ಮೆಟ್ಟಿಲು ಎನ್ನುತ್ತಾರೆ, ಆದರೆ ಕೆಲವೊಬ್ಬರ ಜೀವನದಲ್ಲಿ ಕೆಲವೊಮ್ಮೆ ಕೇವಲ ಸೋಲನ್ನು ಮಾತ್ರವೇ ಕಾಣುತ್ತಿರುತ್ತಾರೆ. ಆಗ ಸೋತೆ ಎಂದು ಕೊರಗುವುದು, ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವುದರ ಬದಲು, ಗೆಲುವು ನಿಮ್ಮದಾಗಿಸಿಕೊಳ್ಳುವುದು ಹೇಗೆ, ನೀವು ಎಡವಿದ್ದೆಲ್ಲಿ ಎಂಬುದರ ಬಗ್ಗೆ ಆಲೋಚಿಸಬೇಕು.

ಸೋಲು ಶಾಶ್ವತವಲ್ಲ, ಗೆಲುವಿನ ದಾರಿಯ ಆಯ್ದುಕೊಳ್ಳುವ ಸ್ವಾತಂತ್ರ್ಯ ಕೂಡ ನಿಮ್ಮದೇ, ಆತ್ಮವಿಶ್ವಾಸ ಹೆಚ್ಚಿಸಲು ಸಲಹೆಗಳು ಇಲ್ಲಿವೆ
ಆತ್ಮವಿಶ್ವಾಸImage Credit source: Healthshots.com
ನಯನಾ ರಾಜೀವ್
|

Updated on: Sep 15, 2023 | 3:00 PM

Share

ಜೀವನದಲ್ಲಿ ಸೋಲು ಗೆಲುವು ಎಲ್ಲವೂ ಸಾಮಾನ್ಯ, ಸೋಲೇ ಗೆಲುವಿನ ಮೆಟ್ಟಿಲು ಎನ್ನುತ್ತಾರೆ, ಆದರೆ ಕೆಲವೊಬ್ಬರ ಜೀವನದಲ್ಲಿ ಕೆಲವೊಮ್ಮೆ ಕೇವಲ ಸೋಲನ್ನು ಮಾತ್ರವೇ ಕಾಣುತ್ತಿರುತ್ತಾರೆ. ಆಗ ಸೋತೆ ಎಂದು ಕೊರಗುವುದು, ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವುದರ ಬದಲು, ಗೆಲುವು ನಿಮ್ಮದಾಗಿಸಿಕೊಳ್ಳುವುದು ಹೇಗೆ, ನೀವು ಎಡವಿದ್ದೆಲ್ಲಿ ಎಂಬುದರ ಬಗ್ಗೆ ಆಲೋಚಿಸಬೇಕು.

ಆತ್ಮವಿಶ್ವಾಸ, ಛಲ ನಿಮ್ಮಲ್ಲಿದ್ದರೆ ಅಸಾಧ್ಯವಾದುದ್ದನ್ನು ಕೂಡ ಸಾಧಿಸಿ ತೋರಿಸಬಹುದು. ಜರ್ನಲ್ ಆಫ್ ಮೆಂಟಲ್ ಹೆಲ್ತ್ ಅಂಡ್ ಸೈಕಾಲಜಿ ಪ್ರಕಾರ, ಆತ್ಮ ವಿಶ್ವಾಸವು ನಿಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಯಶಸ್ಸಿನ ಸಾಧ್ಯತೆಗಳನ್ನು ಹೆಚ್ಚಿಸುತ್ತದೆ.

ನಿಮ್ಮನ್ನು ಇತರರೊಂದಿಗೆ ಹೋಲಿಸುವುದನ್ನು ನಿಲ್ಲಿಸಿ ಬೇರೆಯವರ ಸೌಂದರ್ಯ, ಬಣ್ಣ, ಮೈಕಟ್ಟು, ಆಸ್ತಿ ಎಲ್ಲದಕ್ಕೂ ಹೋಲಿಕೆ ಮಾಡಲು ಹೋಗಿ, ತಮ್ಮ ಬಳಿ ಇಲ್ಲವಲ್ಲ ಎಂದು ಕೊರಗುತ್ತಾರೆ. ಆದರೆ ಹೋಲಿಕೆ ಕೊನೆಯದಾಗಿ ಅಸೂಯೆಯಾಗಿ ಬದಲಾಗುತ್ತದೆ.

ನಿಮ್ಮನ್ನು ನಿರಾಸೆಗೊಳಿಸುವಂತಹ ಸ್ನೇಹಿತರನ್ನು ಬಿಟ್ಟುಬಿಡಿ ನಿಮ್ಮನ್ನು ನಿರಾಸೆಗೊಳಿಸುವಂತಹ ಸ್ನೇಹಿತರನ್ನು ಬಿಡಿ. ಸಕಾರಾತ್ಮಕ ಚಿಂತನೆಯ ಜನರ ಸಹವಾಸವನ್ನು ಯಾವಾಗಲೂ ಒಪ್ಪಿಕೊಳ್ಳಬೇಕು. ನೀವು ಸಮಯ ಕಳೆಯುವ ಜನರು ನಿಮ್ಮ ಆಲೋಚನೆಗಳು ಮತ್ತು ದೃಷ್ಟಿಕೋನವನ್ನು ಪ್ರಭಾವಿಸಬಹುದು.

ಮತ್ತಷ್ಟು ಓದಿ: ಮನೆಗೆಲಸ ಮಾಡುವುದರಿಂದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು! ಹೇಗೆ ಎಂದು ತಿಳಿದುಕೊಳ್ಳಿ

ನಿಮ್ಮ ಬಗ್ಗೆ ನಿಮಗೆ ಕಾಳಜಿ ಇರಲಿ ಆತ್ಮ ವಿಶ್ವಾಸವನ್ನು ಹೆಚ್ಚಿಸಿಕೊಳ್ಳುವ ಮೊದಲು, ನಿಮ್ಮ ಬಗ್ಗೆ ನೀವು ಕಾಳಜಿವಹಿಸುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಪೌಷ್ಠಿಕಾಂಶಯುಕ್ತ ಆಹಾರ, ಆರೋಗ್ಯಕರ ಜೀವನಶೈಲಿ ನಿಮ್ಮದಾಗಬೇಕು, ಜತೆಗೆ ಸ್ವಲ್ಪ ವ್ಯಾಯಾಮ ಕೂಡ ದಿನದ ಒಂದು ಭಾಗವಾಗಿರಬೇಕು.

ತಪ್ಪನ್ನು ತಿದ್ದಿಕೊಳ್ಳಲು ಪ್ರಯತ್ನಿಸಿ ನೀವು ತಪ್ಪು ಮಾಡಿದಾಗ ಅದು ನಿಮ್ಮ ಅರಿವಿಗೆ ಬಂದಾಗ ಮತ್ತೆ ತಪ್ಪಾಗದಂತೆ ಎಚ್ಚರವಹಿಸಿ.

ಸಕಾರಾತ್ಮಕ ಮಾತು ನೀವಾಡುವ ಮಾತಿಗೆ ಸಾಮರ್ಥ್ಯವನ್ನು ಹೆಚ್ಚಿಸುವ ಹಾಗೂ ಕುಗ್ಗಿಸಲು ಎರಡೂ ಶಕ್ತಿಯೂ ಇದೆ, ಎಂದೂ ಬೇರೆಯವರಿಗೆ ನೋವಾಗುವಂತೆ ಮಾತನಾಡಬೇಡಿ. ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಲು ಸಕಾರಾತ್ಮಕ ಚರ್ಚೆ ಹಾಗೂ ಸಂಭಾಷಣೆ ಇರಲಿ, ಅದರೊಂದಿಗೆ ಮುನ್ನಡೆಯಿರಿ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ