ಜ್ವರ ಬಂದಾಗ ಸ್ನಾನ ಮಾಡಬಾರದೇ? ಇಲ್ಲಿದೆ ತಜ್ಞರ ಸಲಹೆ

ಮಳೆಗಾಲ ಬಂತೆಂದರೆ ಸಾಕು ವೈರಲ್ ಜ್ವರವೂ ನಮ್ಮನ್ನು ಬೆನ್ನಟ್ಟಿ ಬರುತ್ತದೆ. ಸಾಮಾನ್ಯವಾಗಿ ಜ್ವರ ಬಂದ ಸಂದರ್ಭದಲ್ಲಿ ಸ್ನಾನ ಮಾಡಬೇಡಿ, ಕೈಕಾಲು ಮುಖ ತೊಳೆದುಕೊಂಡರೆ ಸಾಕು ಎಂದು ಮನೆಯ ಹಿರಿಯರು ಹೇಳುವ ಮಾತನ್ನು ಬಹುಃಶ ನಾವೆಲ್ಲರೂ ಕೇಳಿರಬಹುದು. ಜ್ವರ ಹೆಚ್ಚಾಗಬಹುದು ಎಂಬ ಕಾರಣಕ್ಕೆ ಸ್ನಾನ ಮಾಡಬಾರದು ಎಂದು ಮನೆಯ ಹಿರಿಯರು ಈ ಮಾತನ್ನು ಹೇಳುತ್ತಿದ್ದರು. ಅಷ್ಟಕ್ಕೂ ಜ್ವರ ಬಂದಾಗ ಸ್ನಾನ ಮಾಡಬಾರದೇ? ಈ ಬಗ್ಗೆ ತಜ್ಞರ ಅಭಿಪ್ರಾಯವೇನು ಇಲ್ಲಿದೆ ಮಾಹಿತಿ.

ಜ್ವರ ಬಂದಾಗ ಸ್ನಾನ ಮಾಡಬಾರದೇ? ಇಲ್ಲಿದೆ ತಜ್ಞರ ಸಲಹೆ
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 22, 2023 | 4:44 PM

ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿಯ ಕುಗ್ಗುವಿಕೆಯ ಕಾರಣದಿಂದ ಜ್ವರ, ಶೀತ, ಕೆಮ್ಮು ಇನ್ನಿತರ ಕಾಯಿಲೆಗಳು ನಮ್ಮನ್ನು ಬಾಧಿಸುತ್ತವೆ. ಅಲ್ಲದೇ ಈ ಋತುವಿನಲ್ಲಿ ವೈರಲ್ ಜ್ವರ ಕೂಡಾ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಈ ಜ್ವರದಿಂದಾಗಿ ಸುಸ್ತು, ಮೈ ಕೈ ನೋವು ಕಾಣಿಸಿಕೊಳ್ಳುತ್ತದೆ. ಈ ಕಾರಣದಿಂದಾಗಿ ಹೆಚ್ಚಿನವರು ಈ ಸಮಯದಲ್ಲಿ ಸ್ನಾನ ಮಾಡಲು ಇಷ್ಟಪಡುವುದಿಲ್ಲ. ಇದರ ಹೊರತಾಗಿ ಮನೆಯ ಹಿರಿಯರೂ ಕೂಡಾ ಜ್ವರದ ಸಮಯದಲ್ಲಿ ಸ್ನಾನ ಮಾಡಬೇಡಿ, ಕೈಕಾಲು ಮುಖ ತೊಳೆದುಕೊಂಡರೆ ಸಾಕು ಎಂದು ಹೇಳುತ್ತಾರೆ. ಏಕೆಂದರೆ ಇಂತಹ ಪರಿಸ್ಥಿತಿಯಲ್ಲಿ ಸ್ನಾನ ಮಾಡಿದರೆ ಜ್ವರವು ಇನ್ನಷ್ಟು ಉಲ್ಬಣಗೊಳ್ಳಬಹುದು ಎಂಬ ಕಾರಣಕ್ಕೆ ಈ ಮಾತನ್ನು ಹೇಳುತ್ತಾರೆ. ಅಷ್ಟಕ್ಕೂ ಜ್ವರ ಬಂದಾಗ ಸ್ನಾನ ಮಾಡಬಾರದೇ? ಈ ಬಗ್ಗೆ ತಜ್ಞರು ಏನು ಹೇಳುತ್ತಾರೆ ಎಂಬುದನ್ನು ನೋಡೋಣ.

ಜ್ವರದ ಸಮಯದಲ್ಲಿ ಸ್ನಾನ ಮಾಡಬೇಕೇ ಅಥವಾ ಬೇಡವೇ?

ತಜ್ಞರ ಪ್ರಕಾರ ಜ್ವರದ ಸಮಯದಲ್ಲಿ ಸ್ನಾನ ಮಾಡುವುದರಿಂದ ಆರೋಗ್ಯಕ್ಕೆ ಯಾವುದೇ ಹಾನಿಯುಂಟಾಗುವುದಿಲ್ಲ. ಅವರ ಪ್ರಕಾರ ನೀವು ಜ್ವರ ಇರುವಂತಹ ಸಮಯದಲ್ಲಿ ಸ್ನಾನ ಮಾಡಬಹುದು ಆದರೆ ಅದಕ್ಕೂ ಮೊದಲು ನೀವು ಕೆಲವು ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಜ್ವರ ಬಂದಾಗ ಅಧಿಕ ಬಿಸಿ ಅಥವಾ ತನ್ನೀರಿನಿಂದ ಸ್ನಾನ ಮಾಡಬಾರದು. ಬದಲಿಗೆ ಉಗುರು ಬೆಚ್ಚಗಿನ ನೀರಿನಲ್ಲಿ ಸ್ನಾನ ಮಾಡಿದರೆ ಉತ್ತಮ. ತಜ್ಞರ ಪ್ರಕಾರ ಜ್ವರದ ಸಮಯದಲ್ಲಿ ಉಗುರುಬೆಚ್ಚಗಿನ ನೀರಿನಿಂದ ಸ್ನಾನ ಮಾಡುವುದರಿಂದ ನಿಮ್ಮ ಜ್ವರದ ಪರಿಣಾಮವನ್ನು ಸಹ ಕಡಿಮೆ ಮಾಡಬಹುದು.

ಇದನ್ನೂ ಓದಿ:ಮೈಸೂರು: ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ

ಅಷ್ಟೇ ಅಲ್ಲ ಉಗುರು ಬೆಚ್ಚಗಿನ ನೀರಿನಿಂದ ಸ್ನಾನ ಮಾಡುವುದರಿಂದ ನಿಮ್ಮ ಸ್ನಾಯುಗಳು ಸಹ ವಿಶ್ರಾಂತಿಯನ್ನು ಪಡೆಯುತ್ತವೆ. ಜೊತೆಗೆ ದೇಹದ ನೋವು ನಿವಾರಣೆಯಾಗುತ್ತದೆ. ಇದರ ಹೊರತಾಗಿ ಯಾರಿಗಾದರೂ ಜ್ವರ 102 ಡಿಗ್ರಿ ಅಥವಾ ಅದಕ್ಕಿಂಂತ ಹೆಚ್ಚಿದ್ದರೆ ಅಂತಹ ಪರಿಸ್ಥಿತಿಯಲ್ಲಿ ಸ್ನಾನ ಮಾಡುವ ತಪ್ಪನ್ನು ಮಾಡಬೇಡಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್  ಮಾಡಿ: 

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್