ವಿಪರೀತ ಚಳಿಯಾದರೆ ದೇಹದ ಮೇಲಾಗುವ ಪರಿಣಾಮಗಳೇನು?

ವಿಪರೀತ ಚಳಿಯನ್ನು ನಿಭಾಯಿಸಲು ಮಾನವನ ದೇಹವು ಅಸಮರ್ಥವಾಗಿದೆ. ಹೊರಗಿನ ತಾಪಮಾನ ಕಡಿಮೆಯಾಗುತ್ತಿದ್ದಂತೆ ನಮ್ಮ ದೇಹವು ತಾಪಮಾನವನ್ನು ಎತ್ತಿ ಹಿಡಿಯಲು ಹೆಚ್ಚುವರಿ ಪ್ರಯತ್ನ ಮಾಡುತ್ತದೆ. ಇದರಿಂದ ಆರೋಗ್ಯದ ಅಪಾಯಗಳು ಉಂಟಾಗಬಹುದು.

ವಿಪರೀತ ಚಳಿಯಾದರೆ ದೇಹದ ಮೇಲಾಗುವ ಪರಿಣಾಮಗಳೇನು?
ಚಳಿ
Follow us
ಸುಷ್ಮಾ ಚಕ್ರೆ
|

Updated on: Jan 09, 2024 | 3:42 PM

ಚಳಿಗಾಲದ ಚಳಿಗೆ ಉತ್ತರ ಭಾರತದ ರಾಜ್ಯಗಳು ಸೇರಿದಂತೆ ಕರ್ನಾಟಕದ ಕೆಲವು ಭಾಗಗಳು ಕೂಡ ನಲುಗುತ್ತಿವೆ. ಮಂಜು ತುಂಬಿದ ಮುಂಜಾನೆ ಮತ್ತು ಸೂರ್ಯನ ಬೆಳಕು ಕಡಿಮೆಯಾಗಿ ಉತ್ತರ ಭಾರತದಲ್ಲಿ ಚಳಿಗಾಲದ ತೀವ್ರತೆ ಹೆಚ್ಚಾಗಿದೆ. ದೆಹಲಿಯಲ್ಲಿ 12.1 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗಿದೆ. ಈ ಚಳಿಯು 2 ದಿನಗಳವರೆಗೆ ಮುಂದುವರಿಯಬಹುದು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ವಿಪರೀತ ಚಳಿಯನ್ನು ನಿಭಾಯಿಸಲು ಮಾನವನ ದೇಹವು ಅಸಮರ್ಥವಾಗಿದೆ. ಹೊರಗಿನ ತಾಪಮಾನ ಕಡಿಮೆಯಾಗುತ್ತಿದ್ದಂತೆ ನಮ್ಮ ದೇಹವು ತಾಪಮಾನವನ್ನು ಎತ್ತಿ ಹಿಡಿಯಲು ಹೆಚ್ಚುವರಿ ಪ್ರಯತ್ನ ಮಾಡುತ್ತದೆ. ಇದರಿಂದ ಆರೋಗ್ಯದ ಅಪಾಯಗಳು ಉಂಟಾಗಬಹುದು. ತೀವ್ರವಾದ ಚಳಿಯು ನಿಮ್ಮ ಯೋಗಕ್ಷೇಮದ ಮೇಲೆ ಯಾವ ರೀತಿಯ ಕೆಟ್ಟ ಪರಿಣಾಮ ಬೀರುತ್ತದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ಹೈಪೋಥರ್ಮಿಯಾ:

ಇದು ನಡುಗುವಿಕೆ, ಗೊಂದಲ ಮತ್ತು ತೀವ್ರತರವಾದ ಪ್ರಕರಣಗಳಲ್ಲಿ ಪ್ರಜ್ಞಾಹೀನತೆಯಂತಹ ರೋಗಲಕ್ಷಣಗಳಿಗೆ ಕಾರಣವಾಗುತ್ತದೆ. ವಿಪರೀತ ಚಳಿಯ ತಾಪಮಾನಕ್ಕೆ ದೀರ್ಘಕಾಲದವರೆಗೆ ಒಡ್ಡಿಕೊಳ್ಳುವುದರಿಂದ ಜೀವಕ್ಕೇ ಅಪಾಯಕಾರಿಯಾದ ಈ ಸಮಸ್ಯೆ ಉಂಟಾಗುತ್ತದೆ.

ಇದನ್ನೂ ಓದಿ: ಹೃದಯದ ಆರೋಗ್ಯ ಹೆಚ್ಚಿಸುವ 9 ಸೂಪರ್‌ಫುಡ್‌ಗಳು ಇಲ್ಲಿವೆ

ಫ್ರಾಸ್ಬೈಟ್:

ತೆರೆದ ಚರ್ಮ ಮತ್ತು ತುದಿಗಳು ತೀವ್ರವಾದ ಶೀತದಲ್ಲಿ ಫ್ರಾಸ್ಬೈಟ್​ಗೆ ಒಳಗಾಗುತ್ತವೆ. ಚರ್ಮ ಮತ್ತು ಅಂಗಾಂಶಗಳ ಘನೀಕರಣದಿಂದ ತೊಂದರೆ ಉಂಟಾಗಬಹುದು. ಮರಗಟ್ಟುವಿಕೆ, ಬಣ್ಣ ಮತ್ತು ಅಂಗಾಂಶಗಳ ಹಾನಿಗೆ ಕಾರಣವಾಗಬಹುದು. ತೀವ್ರವಾದ ಶೀತದ ಈ ನೋವಿನ ಮತ್ತು ಸಂಭಾವ್ಯ ಶಾಶ್ವತ ಪರಿಣಾಮವನ್ನು ತಡೆಯಲು ಕೈಗಳು, ಪಾದಗಳು, ಮೂಗು ಮತ್ತು ಕಿವಿಗಳನ್ನು ಬೆಚ್ಚಗಿಡುವುದು ಮುಖ್ಯ.

ಉಸಿರಾಟದ ಸಮಸ್ಯೆಗಳು:

ತಣ್ಣನೆಯ ಗಾಳಿಯು ಉಸಿರಾಟದ ವ್ಯವಸ್ಥೆಗೆ ತೊಂದರೆ ಉಂಟುಮಾಡಬಹುದು. ಅದರಲ್ಲೂ ವಿಶೇಷವಾಗಿ ಅಸ್ತಮಾ ಅಥವಾ ದೀರ್ಘಕಾಲದ ಪ್ರತಿರೋಧಕ ಶ್ವಾಸಕೋಶದ ಕಾಯಿಲೆ (COPD) ರೀತಿಯ ಮೊದಲೇ ಅಸ್ತಿತ್ವದಲ್ಲಿರುವ ಸಮಸ್ಯೆಗಳನ್ನು ಹೊಂದಿರುವ ವ್ಯಕ್ತಿಗಳಿಗೆ ಇದು ಇನ್ನಷ್ಟು ತೊಂದರೆ ಉಂಟುಮಾಡುತ್ತದೆ. ಶೀತ, ಶುಷ್ಕ ಗಾಳಿಯು ಶ್ವಾಸನಾಳಕ್ಕೆ ತೊಂದರೆ ಉಂಟುಮಾಡುತ್ತದೆ. ಇದು ಉಸಿರಾಟದ ತೊಂದರೆ, ಕೆಮ್ಮು ಮತ್ತು ಉಬ್ಬಸಕ್ಕೆ ಕಾರಣವಾಗುತ್ತದೆ. ಹೀಗಾಗಿ, ಆರೋಗ್ಯ ಸಮಸ್ಯೆ ಇರುವವರು ತಮ್ಮ ಮೂಗು ಮತ್ತು ಬಾಯಿಯನ್ನು ಮುಚ್ಚಲು ಸ್ಕಾರ್ಫ್‌ಗಳನ್ನು ಧರಿಸುವ ಮೂಲಕ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.

ಹೃದಯರಕ್ತನಾಳದ ಒತ್ತಡ:

ತೀವ್ರವಾದ ಶೀತವು ಹೃದಯರಕ್ತನಾಳದ ವ್ಯವಸ್ಥೆಯ ಮೇಲೆ ಹೆಚ್ಚುವರಿ ಹೊರೆಯನ್ನು ಉಂಟುಮಾಡುತ್ತದೆ. ಆಗ ದೇಹವು ತನ್ನ ತಾಪಮಾನವನ್ನು ಕಾಪಾಡಿಕೊಳ್ಳಲು ಹೆಚ್ಚು ಶ್ರಮಿಸುತ್ತದೆ. ಇದು ಹೆಚ್ಚಿದ ಹೃದಯ ಬಡಿತ ಮತ್ತು ಅಧಿಕ ರಕ್ತದೊತ್ತಡಕ್ಕೆ ಕಾರಣವಾಗಬಹುದು. ಹೃದಯದ ಸಮಸ್ಯೆ ಇರುವ ವ್ಯಕ್ತಿಗಳಿಗೆ ಈ ಹೆಚ್ಚುವರಿ ಒತ್ತಡವು ಹೃದಯಾಘಾತದ ಅಪಾಯವನ್ನು ಹೆಚ್ಚಿಸಬಹುದು.

ಇದನ್ನೂ ಓದಿ: ಚಳಿಗಾಲದಲ್ಲಿ ಹೃದಯಾಘಾತದ ಅಪಾಯದಿಂದ ಪಾರಾಗುವುದು ಹೇಗೆ?

ಸೋಂಕುಗಳಿಗೆ ಹೆಚ್ಚಿದ ಸಂವೇದನೆ:

ಶೀತ ಹವಾಮಾನವು ಪ್ರತಿರಕ್ಷಣಾ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ. ಈ ವೇಳೆ ಜನರು ಸೋಂಕುಗಳಿಗೆ ಹೆಚ್ಚು ಒಳಗಾಗುತ್ತಾರೆ. ಕಡಿಮೆ ತಾಪಮಾನ ಮತ್ತು ಶುಷ್ಕ ಗಾಳಿಯ ಸಂಯೋಜನೆಯು ವೈರಸ್​ ಮತ್ತು ಬ್ಯಾಕ್ಟೀರಿಯಾಗಳ ವಿರುದ್ಧ ದೇಹ ಹೋರಾಡದೆ ಇರಬಹುದು. ಜ್ವರ ಮತ್ತು ನೆಗಡಿಯಂತಹ ಉಸಿರಾಟದ ಸೋಂಕುಗಳು ಚಳಿಗಾಲದ ತಿಂಗಳುಗಳಲ್ಲಿ ಹೆಚ್ಚಾಗುತ್ತವೆ. ಹೀಗಾಗಿ, ಉತ್ತಮ ನೈರ್ಮಲ್ಯವನ್ನು ಅಭ್ಯಾಸ ಮಾಡುವುದು, ಉಷ್ಣತೆಯನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ