ಕಿಡ್ನಿಯ ಆರೋಗ್ಯವನ್ನು ಕಾಪಾಡಿಕೊಳ್ಳಲು ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ

ದೇಹ ನಿರ್ಜಲೀಕರಣಗೊಂಡು ಕಿಡ್ನಿ ಸ್ಟೋನ್​ನಂತಹ ಸಮಸ್ಯೆಗಳು ಕಾಡುತ್ತದೆ. ಆದ್ದರಿಂದ ಸಾಕಷ್ಟು ನೀರು ಕುಡಿಯಿರಿ. ದಿನಕ್ಕೆ 2 ರಿಂದ 3 ಲೀ ವರೆಗೆ ನೀರು ಸೇವಿಸಿ.

ಕಿಡ್ನಿಯ ಆರೋಗ್ಯವನ್ನು ಕಾಪಾಡಿಕೊಳ್ಳಲು ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
ಸಾಂಕೇತಿಕ ಚಿತ್ರ
Follow us
TV9 Web
| Updated By: Pavitra Bhat Jigalemane

Updated on:Mar 17, 2022 | 5:14 PM

ದೇಹದಲ್ಲಿರುವ ನಿರುಪಯುಕ್ತ ವಸ್ತುಗಳನ್ನು ಹೊರಹಾಕಲು ಪಿಲ್ಟರ್​ನಂತೆ ಕೆಲಸ ಮಾಡುವ ಅಂಗ ಕಿಡ್ನಿ (Kidney) ಅಥವಾ ಮೂತ್ರಪಿಂಡಗಳು, ಪಕ್ಕೆಲುಬುಗಳ ಕೆಳಭಾಗದಲ್ಲಿ ಬೆನ್ನುಮೂಳೆಯ ಎರಡೂ ಬದಿಗಳಲ್ಲಿರುವ ಮುಷ್ಟಿ ಗಾತ್ರದ ಅಂಗಗಳಾಗಿವೆ. ಈ ಮೂತ್ರಪಿಂಡಗಳನ್ನು ಆರೋಗ್ಯವಾಗಿಟ್ಟುಕೊಳ್ಳುವುದು ಅಗತ್ಯವಾಗಿದೆ. ಏಕೆಂದರೆ ದೇಹದಲ್ಲಿನ ರಕ್ತವನ್ನು ಶುದ್ಧೀಕರಿಸುವುದು ಮಾತ್ರವಲ್ಲದೆ ರಕ್ತದೊತ್ತಡವನ್ನು ನಿಯಂತ್ರಿಸಲು, ಮೂಳೆಗಳ ಆರೋಗ್ಯವನ್ನು ಕಾಪಾಡಿಕೊಳ್ಳಲು, ಹಿಮೋಗ್ಲೋಬಿನ್​ನ ಸಮತೋಲನದಲ್ಲಿಡಲು ಕಿಡ್ನಿ ನೆರವಾಗುತ್ತದೆ. ಕಿಡ್ನಿಯ ಕಾಯಿಲೆಗಳು ಆರಂಭದಲ್ಲಿ ಯಾವುದೇ ಲಕ್ಷಣಗಳು ಕಾಣಿಸಿಕೊಳ್ಳುವುದಿಲ್ಲ. ಆದರೆ ಕ್ರಮೇಣ ಕಿಡ್ನಿಯ ಸಮಸ್ಯೆಗಳು ಅಪಾಯವನ್ನು ತಂದೊಡ್ಡಬಹುದು.

ಕಿಡ್ನಿಯ ಆರೋಗ್ಯವನ್ನು ಕಾಪಾಡಿಕೊಳ್ಳುವ ಜೀವನಶೈಲಿಯನ್ನು ಬದಲಿಸಿಕೊಳ್ಳುವುದು ಅಗತ್ಯವಾಗಿದೆ. ದಿನನಿತ್ಯದ ಜೀವನದಲ್ಲಿ ಈ ಅಭ್ಯಾಸಗಳನ್ನು ರೂಢಿಸಿಕೊಂಡರೆ  ಕಾಡುವ ಕಿಡ್ನಿ ಸ್ಟೋನ್​, ಕಿಡ್ನಿ ವೈಫಲ್ಯದಂತಹ ಸಮಸ್ಯೆಗಳಿಂದ ದೂರವಿರಬಹುದು.

ವ್ಯಾಯಾಮದ ಅಭ್ಯಾಸ: ಪ್ರತಿದಿನ ಕನಿಷ್ಠ ಅರ್ಧಗಂಟೆಯಾದರೂ ವ್ಯಾಯಮ ಮಾಡಿ. ನಿಯಮಿತ ವ್ಯಾಯಾಮವು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆಜತೆಗೆ ಮುಖ್ಯವಾಗಿ ಮೂತ್ರಪಿಂಡದ ಹಾನಿಯನ್ನು ತಡೆಗಟ್ಟುವಲ್ಲಿ ನೆರವಾಗುತ್ತದೆ. ಸೊಂಟದ ಭಾಗವನ್ನು ಸದೃಢಗೊಳಿಸುತ್ತದೆ.

ಹೆಚ್ಚು ನೀರಿನ ಸೇವನೆ: ಇನ್ನಂತೂ ಬೇಸಿಗೆ ಆರಂಭವಾಗುತ್ತಿದೆ. ದೇಹ ನಿರ್ಜಲೀಕರಣಗೊಂಡು ಕಿಡ್ನಿ ಸ್ಟೋನ್​ನಂತಹ ಸಮಸ್ಯೆಗಳು ಕಾಡುತ್ತದೆ. ಆದ್ದರಿಂದ ಸಾಕಷ್ಟು ನೀರು ಕುಡಿಯಿರಿ. ದಿನಕ್ಕೆ2 ರಿಂದ 3 ಲೀ ವರೆಗೆ ನೀರು ಸೇವಿಸಿ. ಮೂತ್ರಪಿಂಡದಿಂದ ಸೋಡಿಯಂ ಮತ್ತು ಇತರ ವಿಷಗಳನ್ನು ಹೊರಹಾಕಲು ನೀರು ಸಹಾಯ ಮಾಡುತ್ತದೆ, ಇದರಿಂದಾಗಿ ಮೂತ್ರಪಿಂಡದ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡುತ್ತದೆ

ಧೂಮಪಾನ ಮತ್ತು ಮಧ್ಯಪಾನವನ್ನು ನಿರ್ಬಂಧಿಸಿ: ಧೂಮಪಾನ ಮತ್ತು ಮಧ್ಯಪಾನದ ಅಭ್ಯಾಸದಿಂದ ಕಿಡ್ನಿಗೆ ಹಾನಿಯುಂಟಾಗುತ್ತದೆ. ಧೂಮಪಾನವು ಮೂತ್ರಪಿಂಡದ ಜೀವಕೋಶದ ಕಾರ್ಸಿನೋಮವನ್ನು ಅಭಿವೃದ್ಧಿಪಡಿಸುವ ಅಪಾಯವನ್ನು ಹೆಚ್ಚಿಸುತ್ತದೆ. ಕೆಲವೊಮ್ಮೆ ಮೂತ್ರಪಿಂಡದ ಕ್ಯಾನ್ಸರ್​ನಂತಹ ಅಪಾಯವನ್ನು ತಂದೊಡ್ಡಬಹುದು.

ನಿಯಮಿತವಾದ ಕಿಡ್ನಿ ಪರೀಕ್ಷೆ: ಮೂತ್ರಪಿಂಡದ ಕಾಯಿಲೆಗೆ ತುತ್ತಾಗುವ ಸಾಧ್ಯತೆಗಳನ್ನು ಹೊಂದಿರುವ ಜನರು ಮಧುಮೇಹಿಗಳು, ಕಡಿಮೆ ತೂಕದೊಂದಿಗೆ ಜನಿಸಿದವರು, ಹೃದಯರಕ್ತನಾಳದ ಸಮಸ್ಯೆಗಳು, ಅಧಿಕ ರಕ್ತದೊತ್ತಡ ಮತ್ತು ಬೊಜ್ಜು ಹೊಂದಿರುವವರು ಮೂತ್ರಪಿಂಡವನ್ನು ನಿಯಮಿತವಾಗಿ ಪರೀಕ್ಷಿಸಿಕೊಳ್ಳುವುದು ಅಗತ್ಯವಾಗಿದೆ.

ಇದನ್ನೂ ಓದಿ:

ಜಿಮ್​ಗೆ ಹೋಗದೆಯೂ ದೇಹದ ತೂಕ ಇಳಿಸಿಕೊಳ್ಳಬಹುದು: ಇಲ್ಲಿವೆ ನೋಡಿ ಸಿಂಪಲ್​ ಸೂತ್ರಗಳು

Published On - 5:11 pm, Thu, 17 March 22

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್