AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಗ್ಗಿಪೆಟ್ಟಿಗೆಯಲ್ಲಿ ಹಿಡಿಯುತ್ತೆ ಈ ಪಟ್ಟು ಸೀರೆ: ಸಿರಿಸಿಲ್ಲಾ ನೇಕಾರರ ವಿಸ್ಮಯಕಾರಿ ಕಲೆಗೆ ಒಬಾಮಾ, ಮೋದಿ ಫಿದಾ

ತೆಲಂಗಾಣದ ಸಿರಿಸಿಲ್ಲಾ ನೇಕಾರರು ಬೆಂಕಿಕಡ್ಡಿ ಪೆಟ್ಟಿಗೆಯಲ್ಲಿ ಮಡಚಬಹುದಾದ ಅತ್ಯಂತ ಸೂಕ್ಷ್ಮವಾದ ಪಟ್ಟು ಸೀರೆಯನ್ನು ತಯಾರಿಸಿ ವಿಶ್ವದ ಗಮನ ಸೆಳೆದಿದ್ದಾರೆ. ಶುದ್ಧ ರೇಷ್ಮೆ ದಾರ ಹಾಗೂ ನೈಸರ್ಗಿಕ ಬಣ್ಣಗಳಿಂದ ಸಾಂಪ್ರದಾಯಿಕ ಇಕ್ಕತ್ ಶೈಲಿಯಲ್ಲಿ ನೇಯ್ದ ಈ ಸೀರೆಯನ್ನು ತಯಾರಿಸಲು 6 ದಿನ ಬೇಕು. ನಲ್ಲ ವಿಜಯ್ ಕುಮಾರ್ ಕುಟುಂಬದ ಈ ಕೌಶಲ ಒಬಾಮಾ, ಮೋದಿಗೂ ಗೌರವ ಸಲ್ಲಿಸಿದೆ. ಇದು ಕೇವಲ ಕಲೆಯಲ್ಲ, ಭಕ್ತಿಯ ಪ್ರತೀಕವೂ ಹೌದು.

ಅಗ್ಗಿಪೆಟ್ಟಿಗೆಯಲ್ಲಿ ಹಿಡಿಯುತ್ತೆ ಈ ಪಟ್ಟು ಸೀರೆ: ಸಿರಿಸಿಲ್ಲಾ ನೇಕಾರರ ವಿಸ್ಮಯಕಾರಿ ಕಲೆಗೆ ಒಬಾಮಾ, ಮೋದಿ ಫಿದಾ
ಸಿರಿಸಿಲ್ಲಾ ಸೀರೆ
ಅಕ್ಷಯ್​ ಪಲ್ಲಮಜಲು​​
|

Updated on: Aug 07, 2026 | 4:09 PM

Share

ಹೈದರಾಬಾದ್, ಆ.7: ತೆಲಂಗಾಣದ ಪ್ರಸಿದ್ಧ ‘ಸಿರಿಸಿಲ್ಲಾ’ (Sircilla) ಪ್ರದೇಶದ ಹಸ್ತಚಾಲಿತ ಮಗ್ಗದ (Handloom) ನೇಕಾರರು ತಮ್ಮ ಅಪ್ರತಿಮ ಕೌಶಲದ ಮೂಲಕ ವಿಶ್ವದ ಗಮನ ಸೆಳೆದಿದ್ದಾರೆ. ಅತ್ಯಂತ ಸೂಕ್ಷ್ಮವಾದ, ಬೆಂಕಿಕಡ್ಡಿ ಪೆಟ್ಟಿಗೆಯಲ್ಲಿ (Matchbox) ಮಡಚಿಡಬಹುದಾದ ವಿಶೇಷ ‘ಮ್ಯಾಚ್‌ಬಾಕ್ಸ್ ಪಟ್ಟು ಸೀರೆ’ಯನ್ನು ತಯಾರಿಸುವ ಮೂಲಕ ನೇಯ್ಗೆ ಕಲೆಗೆ ಹೊಸ ಮೆರಗು ನೀಡಿದ್ದಾರೆ.

ಈ ಸೀರೆಯನ್ನು ಶುದ್ಧ ರೇಷ್ಮೆ ದಾರಗಳು ಹಾಗೂ ನೈಸರ್ಗಿಕ ತರಕಾರಿ ಬಣ್ಣಗಳನ್ನು ಬಳಸಿ ಸಾಂಪ್ರದಾಯಿಕ ಇಕ್ಕತ್ ಶೈಲಿಯಲ್ಲಿ ಕೈಮಗ್ಗದಲ್ಲಿ ನೇಯ್ಯಲಾಗುತ್ತದೆ. ಅಗ್ಗಿಪೆಟ್ಟಿಗೆಯಲ್ಲಿ ಇಡುವಷ್ಟು ಸಣ್ಣದಾಗಿ ಮಡಚಬಹುದಾದರೂ, ಇದನ್ನು ಸಾಮಾನ್ಯ ರೇಷ್ಮೆ ಸೀರೆಯಂತೆಯೇ ಸುಲಭವಾಗಿ ಉಡಬಹುದಾಗಿದೆ. ಒಂದು ಸೀರೆಯನ್ನು ಸಂಪೂರ್ಣವಾಗಿ ಸಿದ್ಧಪಡಿಸಲು ಕನಿಷ್ಠ 6 ದಿನಗಳ ಶ್ರಮ ಬೇಕಾಗುತ್ತದೆ.

ಸಿರಿಸಿಲ್ಲಾದ ಪ್ರಸಿದ್ಧ ನೇಯ್ಗೆ ಕಲಾವಿದರಾದ ನಲ್ಲ ವಿಜಯ್ ಕುಮಾರ್ ಹಾಗೂ ವೆಲ್ದಿ ಹರಿಪ್ರಸಾದ್ ಈ ಅಪರೂಪದ ಸೀರೆಗಳನ್ನು ತಯಾರಿಸುವಲ್ಲಿ ಜಾಗತಿಕ ಗುರುತಿಸಿಕೊಂಡಿದ್ದಾರೆ. ನಲ್ಲ ವಿಜಯ್ ಅವರ ತಂದೆ ನಲ್ಲ ಪರಂಧಾಮುಲು ಅವರು 1987ರಲ್ಲಿ ಪ್ರಥಮ ಬಾರಿಗೆ ಇಂತಹ ಬೆಂಕಿಕಡ್ಡಿ ಪೆಟ್ಟಿಗೆಯಲ್ಲಿ ಹಿಡಿಯುವ ಸೀರೆಯನ್ನು ರೂಪಿಸಿ ‘ಸಿರಿಸಿಲ್ಲಾ ನೇಕಾರಿಕೆಗೆ’ ವಿಶ್ವಮಟ್ಟದಲ್ಲಿ ಮನ್ನಣೆ ತಂದುಕೊಟ್ಟಿದ್ದರು. ಅವರ ಮಗ ವಿಜಯ್ ಕುಮಾರ್ ಪ್ರಸ್ತುತ ಈ ಪರಂಪರೆಯನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ.

ಸಿರಿಸಿಲ್ಲಾದ ಈ ಮ್ಯಾಚ್‌ಬಾಕ್ಸ್ ಸೀರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಪಾರ ಪ್ರಶಂಸೆ ಪಡೆದುಕೊಂಡಿದೆ. ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಹಾಗೂ ಮಿಶೆಲ್ ಒಬಾಮಾ ಅವರಿಗೆ ಈ ವಿಶೇಷ ಸೀರೆಯನ್ನು ಉಡುಗೊರೆಯಾಗಿ ನೀಡುವ ಮೂಲಕ ಸಿರಿಸಿಲ್ಲಾ ನೇಕಾರರ ಕೀರ್ತಿ ಜಗತ್ತಿನಾದ್ಯಂತ ಪಸರಿಸಿತ್ತು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೂ ಸಹ ಈ ವಿಶೇಷ ಕೈಮಗ್ಗ ಶೈಲಿಯಲ್ಲಿ ತಯಾರಿಸಿದ ಶಾಲು ನೀಡಿ ಗೌರವಿಸಲಾಗಿತ್ತು.

ಇದನ್ನೂ ಓದಿ: ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ, ಲಕ್ಷಾಂತರ ರೂ. ನಷ್ಟದಲ್ಲಿ ರಾಫ್ಟಿಂಗ್ ಉದ್ಯಮಿಗಳು

ತಮ್ಮ ಕಲಾ ನೈಪುಣ್ಯತೆಯನ್ನು ಭಕ್ತಿಯೊಂದಿಗೆ ಸಮ್ಮಿಳನಗೊಳಿಸಿರುವ ನಲ್ಲ ವಿಜಯ್ ಕುಮಾರ್ ಅವರು, ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾದ ತಿರುಮಲ ತಿರುಪತಿ ದೇವಸ್ಥಾನದ ಶ್ರೀ ಪದ್ಮಾವತಿ ಅಮ್ಮನವರಿಗೆ, ಶ್ರೀಶೈಲದ ಭ್ರಮರಾಂಬಿಕಾ ದೇವಿಗೆ ಹಾಗೂ ವಿಜಯವಾಡದ ಕನಕದುರ್ಗಮ್ಮನಿಗೆ ಬೆಂಕಿಕಡ್ಡಿ ಪೆಟ್ಟಿಗೆಯಲ್ಲಿ ಹಿಡಿಯುವ ಈ ವಿಶೇಷ ಪಟ್ಟು ಸೀರೆಗಳನ್ನು ಸಮರ್ಪಿಸಿ ಭಕ್ತಿ ಮೆರೆದಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ