AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Skin Care: ಈ ಎಲೆಗಳನ್ನು ಹೀಗೆ ಬಳಸಿದರೆ ಮುಖದಲ್ಲಿ ಮೊಡವೆಗಳು ಆಗುವುದಿಲ್ಲ

ಪೇರಳೆ ಎಲೆಗಳು ಹುಡುಗಿಯರ ಅಂದಹೆಚ್ಚಿಸಲು ತುಂಬಾ ಉಪಯುಕ್ತ ಎಂದು ಹೇಳಲಾಗುತ್ತದೆ. ಅದರಲ್ಲಿಯೂ ಮಾಲಿನ್ಯದಿಂದ ಉಂಟಾಗಿರುವ ಮುಖದ ಮೇಲಿನ ಕಲೆಗಳು ಮತ್ತು ಮೊಡವೆಗಳು ಸಂಪೂರ್ಣವಾಗಿ ಹೋಗುತ್ತದೆ ಜೊತೆಗೆ ಮುಖದ ಅಂದ ಹೆಚ್ಚಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಇದರ ಉಪಯೋಗವೇನು? ಇಲ್ಲಿದೆ ಮಾಹಿತಿ.

Skin Care: ಈ ಎಲೆಗಳನ್ನು ಹೀಗೆ ಬಳಸಿದರೆ ಮುಖದಲ್ಲಿ ಮೊಡವೆಗಳು ಆಗುವುದಿಲ್ಲ
Acne on face
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jul 05, 2024 | 4:51 PM

Share

ಪೇರಳೆ ಹಣ್ಣು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದು ನಿಮಗೆ ತಿಳಿದಿರಬಹುದು. ಇದನ್ನು ಸೇವನೆ ಮಾಡುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಮತ್ತು ಕ್ಯಾನ್ಸರ್ ಕೋಶಗಳನ್ನು ಕಡಿಮೆ ಮಾಡುತ್ತದೆ. ಪೇರಳೆಯಲ್ಲಿರುವ ಜೀವಸತ್ವಗಳು ಮತ್ತು ಪೋಷಕಾಂಶಗಳು ದೇಹವನ್ನು ಹೆಚ್ಚು ಶಕ್ತಿಯುತವಾಗಿಸುತ್ತದೆ. ಆದರೆ ಪೇರಳೆ ಹಣ್ಣು ಮಾತ್ರವಲ್ಲದೆ ಇದರ ಎಲೆಗಳು ಸಹ ಅನೇಕ ರೀತಿಯ ಪ್ರಯೋಜನಗಳನ್ನು ಹೊಂದಿವೆ ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಇದರ ಉಪಯೋಗವೇನು? ಇಲ್ಲಿದೆ ಮಾಹಿತಿ.

ಮೊಡವೆಗಳನ್ನು ಕಡಿಮೆ ಮಾಡುತ್ತದೆ:

ಪೇರಳೆ ಎಲೆಗಳು ಹುಡುಗಿಯರ ಅಂದ ಹೆಚ್ಚಿಸಲು ತುಂಬಾ ಉಪಯುಕ್ತ ಎಂದು ಹೇಳಲಾಗುತ್ತದೆ. ಅದರಲ್ಲಿಯೂ ಮಾಲಿನ್ಯದಿಂದ ಉಂಟಾಗಿರುವ ಮುಖದ ಮೇಲಿನ ಕಲೆಗಳು ಮತ್ತು ಮೊಡವೆಗಳು ಸಂಪೂರ್ಣವಾಗಿ ಹೋಗುತ್ತದೆ ಜೊತೆಗೆ ಮುಖದ ಅಂದ ಹೆಚ್ಚಾಗುತ್ತದೆ. ಮಾಲಿನ್ಯ, ಬದಲಾಗುತ್ತಿರುವ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ, ಮುಖದ ಮೇಲೆ ಗೆರೆಗಳು ಮತ್ತು ಕಪ್ಪು ಕಲೆಗಳು ಕಂಡು ಬರುವುದು ಸಾಮಾನ್ಯ. ಆದರೆ ಪೇರಳೆ ಎಲೆಗಳು ಇವುಗಳನ್ನು ಸಂಪೂರ್ಣವಾಗಿ ನಿವಾರಣೆ ಮಾಡುತ್ತದೆ. ಈ ಎಲೆಗಳಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳು ಮೊಡವೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಫೇಸ್ ಪ್ಯಾಕ್ ಹೇಗೆ ಮಾಡುವುದು?

  • ಕೆಲವು ಪೇರಳೆ ಎಲೆಗಳನ್ನು ಜಜ್ಜಿ ಅದರ ರಸವನ್ನು ತೆಗೆಯಿರಿ. ಬಳಿಕ ಉಳಿದಿರುವ ಮಿಶ್ರಣವನ್ನು ಮುಖಕ್ಕೆ ಹಚ್ಚಿ ಸರಿಯಾಗಿ ಮಸಾಜ್ ಮಾಡಿ. ಇದನ್ನು ಮಾಡುವುದರಿಂದ ಮೊಡವೆ ಕಡಿಮೆಯಾಗುತ್ತದೆ. ಜೊತೆಗೆ ಮುಖ ಕಪ್ಪಗಾಗುವುದನ್ನು ತಡೆಯುತ್ತದೆ.
  • ಕೆಲವು ಪೇರಳೆ ಎಲೆಗಳನ್ನು ನೀರಿನಲ್ಲಿ ಕುದಿಸಿ ಮತ್ತು ಆ ನೀರಿನಿಂದ ನಿಮ್ಮ ಮುಖವನ್ನು ತೊಳೆಯಿರಿ. ವಾರಕ್ಕೆ ಮೂರರಿಂದ ನಾಲ್ಕು ಬಾರಿ ಹೀಗೆ ಮಾಡಿದರೆ ಚರ್ಮವು ಕಾಂತಿಯುತವಾಗುತ್ತದೆ.

ಸೂಚನೆ: ಈ ಮಾಹಿತಿಯನ್ನು ಅನುಸರಿಸುವ ಮೊದಲು ವೈದ್ಯರ ಸಲಹೆ ಪಡೆದುಕೊಳ್ಳಿ.

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ