AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Care Tips:ಮುಂಜಾನೆ ತಡವಾಗಿ ಎದ್ದೇಳುತ್ತೀರಾ? ಈ ಆರೋಗ್ಯ ಸಮಸ್ಯೆ ಬರಬಹುದು ಜೋಪಾನ!

ಒಬ್ಬ ವ್ಯಕ್ತಿಯು ಆರೋಗ್ಯವಂತನಾಗಿರಬೇಕಾದರೆ ಪೌಷ್ಟಿಕಾಂಶಯುಕ್ತ ಆಹಾರದೊಂದಿಗೆ ನಿದ್ದೆ ಕೂಡ ಅಷ್ಟೇ ಅಗತ್ಯವಾಗುತ್ತದೆ. ಆದರೆ ಕೆಲವರು ರಾತ್ರಿ ಹನ್ನೆರಡು ಗಂಟೆಯಾದರೂ ಮಲಗುವುದೇ ಇಲ್ಲ. ರಾತ್ರಿ ತಡವಾಗಿ ಮಲಗಿ ಬೆಳಗ್ಗೆ ಕೂಡ ತಡವಾಗಿಯೆ ಎದ್ದೇಳುತ್ತಾರೆ. ಇಂತಹ ಅಭ್ಯಾಸವಿದ್ದರೆ ಇದು ಅನೇಕ ರೀತಿಯ ಸಮಸ್ಯೆಗಳಿಗೆ ದಾರಿ ಮಾಡಿಕೊಡಬಹುದು.

Health Care Tips:ಮುಂಜಾನೆ ತಡವಾಗಿ ಎದ್ದೇಳುತ್ತೀರಾ? ಈ ಆರೋಗ್ಯ ಸಮಸ್ಯೆ ಬರಬಹುದು ಜೋಪಾನ!
Sleeping Pattern
ಸಾಯಿನಂದಾ
| Edited By: |

Updated on: Apr 11, 2024 | 5:56 PM

Share

ಮನುಷ್ಯನ ಆರೋಗ್ಯಕ್ಕೆ ನಿದ್ರೆ ತುಂಬಾ ಅವಶ್ಯಕ. ಒಬ್ಬ ವ್ಯಕ್ತಿಯು ಆರೋಗ್ಯಕರವಾಗಿರಬೇಕಾದರೆ ಕನಿಷ್ಠ ಏಳೆಂಟು ಗಂಟೆಗಳ ಕಾಲವಾದರೂ ನಿದ್ರಿಸಲೇಬೇಕು. ದೇಹಕ್ಕೆ ಅತಿಯಾದ ನಿದ್ದೆಯು ಒಳ್ಳೆಯದಲ್ಲ. ಕೆಲವರಿಗೆ ರಾತ್ರಿ ಬೇಗ ಮಲಗಿ ಬೆಳಗ್ಗೆ ಬೇಗ ಏಳುವ ಅಭ್ಯಾಸವಿರುತ್ತದೆ. ಬೆಳಗ್ಗೆ ಬೇಗ ಏಳುವ ಅಭ್ಯಾಸ ಆರೋಗ್ಯಕ್ಕೆ ಉತ್ತಮವಾಗಿದೆ. ಆದರೆ ರಾತ್ರಿ ತಡವಾಗಿ ಮಲಗಿ ಬೆಳಗ್ಗೆ ತಡವಾಗಿ ಏಳುವುದರಿಂದ ಆರೋಗ್ಯವೂ ಹಾಳಾಗುವುದಂತು ಖಂಡಿತ.

  • ರಾತ್ರಿ ತಡವಾಗಿ ಮಲಗುವುದು ಮತ್ತು ಬೆಳಿಗ್ಗೆ ತಡವಾಗಿ ಏಳುವುದು ಒತ್ತಡ ಮತ್ತು ಮೂಡ್ ಸ್ವಿಂಗ್‌ಗಳಂತಹ ಸಮಸ್ಯೆಗಳನ್ನು ಉಂಟುಮಾಡಬಹುದು. ಈ ರೀತಿಯ ಅಭ್ಯಾಸವು ಮಾನಸಿಕ ಆರೋಗ್ಯಕ್ಕೆ ಒಳ್ಳೆಯದಲ್ಲ.
  • ಬೆಳಗಿನ ಜಾವದವರೆಗೆ ಮಲಗಿದರೆ ಬೆಳಗಿನ ಉಪಾಹಾರ ಮತ್ತು ಊಟದ ಸಮಯದಲ್ಲಿ ಬದಲಾವಣೆಯಾಗುತ್ತದೆ. ಇದರಿಂದ ಚಯಾಪಚಯ ಕ್ರಿಯೆಯಲ್ಲಿ ಬದಲಾವಣೆಯಾಗಿ ತೂಕ ಹೆಚ್ಚಾಗಬಹುದು.
  • ಪ್ರತಿ ದಿನ ಬೆಳಗ್ಗೆ ತಡವಾಗಿ ಏಳುವುದರಿಂದ ಇಡೀ ದಿನ ಭಾರವೆನಿಸುತ್ತದೆ. ತಡವಾಗಿ ಏಳುವುದರಿಂದ ಆಯಾಸ, ಸುಸ್ತು ಎನಿಸಬಹುದು. ಈ ಅಭ್ಯಾಸವು ದಿನದ ಕೆಲಸದ ಮೇಲೆ ಪರಿಣಾಮ ಬೀರುತ್ತದೆ.
  • ಬೆಳಗ್ಗಿನ ದಿನವನ್ನು ತಡವಾಗಿ ಏಳುವ ಮೂಲಕ ಪ್ರಾರಂಭ ಮಾಡುವುದರಿಂದ ಕರುಳಿನ ಕೆಲಸವು ಸಮಯಕ್ಕೆ ಸರಿಯಾಗಿ ಆಗುವುದಿಲ್ಲ. ಹೀಗಾಗಿ ಮಲಬದ್ಧತೆ ಮತ್ತು ಹೊಟ್ಟೆ ಉಬ್ಬರದಂತಹ ಸಮಸ್ಯೆಗಳಿಗೆ ಕಾರಣವಾಗುತ್ತದೆ.
  • ಮುಂಜಾನೆ ತಡವಾಗಿ ಎದ್ದರೆ ಮಾನಸಿಕ ಆತಂಕ, ಒತ್ತಡ, ಖಿನ್ನತೆ, ಸಿಡುಕು, ಕೋಪ ಹೀಗೆ ಹಲವಾರು ಸಮಸ್ಯೆಗಳು ಎದುರಾಗುತ್ತವೆ.
  • ಬೆಳಗ್ಗೆ ತಡವಾಗಿ ಏಳುವುದರಿಂದ ದಿನಚರಿಯೇ ಬದಲಾಗುತ್ತದೆ. ಈ ರೀತಿಯ ಅಭ್ಯಾಸದಿಂದ ಮಧುಮೇಹ ಮತ್ತು ಹೃದ್ರೋಗದ ಅಪಾಯವು ಹೆಚ್ಚಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್