AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Social media: ಯುವ ಜನತೆಯಲ್ಲಿ ಮಾನಸಿಕ ಒತ್ತಡ ಹೆಚ್ಚುತ್ತಿರುವುದಕ್ಕೆ ಸಾಮಾಜಿಕ ಮಾಧ್ಯಮ ಕಾರಣವೇ?

ಇಂದಿನ ಡಿಜಿಟಲ್ ಯುಗದಲ್ಲಿ, ಸಾಮಾಜಿಕ ಮಾಧ್ಯಮ ಜೀವನದ ಪ್ರಮುಖ ಭಾಗವಾಗಿದೆ. ಯುವ ಪೀಳಿಗೆ ಇದರಲ್ಲಿಯೇ ಗಂಟೆಗಟ್ಟಲೆ ಸಮಯ ಕಳೆಯುತ್ತಿದ್ದಾರೆ, ಸ್ನೇಹಿತರು ಮತ್ತು ಕುಟುಂಬದೊಂದಿಗೆ ಮಾತುಕತೆ, ಮಾಹಿತಿ, ಮನರಂಜನೆಗಾಗಿ ಇದನ್ನು ಹೆಚ್ಚಾಗಿ ಬಳಸುತ್ತಿದ್ದಾರೆ. ಆದರೆ ಇದರಿಂದ ಕೆಟ್ಟ ಪರಿಣಾಮಗಳಿವೆ ಎಂಬುದು ನಿಮಗೆ ತಿಳಿದಿದೆಯೇ, ವಿಶೇಷವಾಗಿ ಮಾನಸಿಕ ಆರೋಗ್ಯದ ವಿಷಯಕ್ಕೆ ಬಂದಾಗ ಸಾಮಾಜಿಕ ಮಾಧ್ಯಮವು ಯುವ ಜನರಲ್ಲಿ ಒತ್ತಡಕ್ಕೆ ಪ್ರಮುಖ ಕಾರಣವಾಗಬಹುದು ಎಂದು ಅಧ್ಯಯನಗಳು ತಿಳಿಸಿವೆ.

Social media: ಯುವ ಜನತೆಯಲ್ಲಿ ಮಾನಸಿಕ ಒತ್ತಡ ಹೆಚ್ಚುತ್ತಿರುವುದಕ್ಕೆ ಸಾಮಾಜಿಕ ಮಾಧ್ಯಮ ಕಾರಣವೇ?
ಪ್ರೀತಿ ಭಟ್​, ಗುಣವಂತೆ
| Edited By: |

Updated on: May 25, 2024 | 6:02 PM

Share

ದೇಶದಲ್ಲಿ ಈಗ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಸ್ಮಾರ್ಟ್‌ಫೋನ್ ಬಳಕೆದಾರರಿದ್ದಾರೆ. ಜಾಗತಿಕವಾಗಿ ಭಾರತ, ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಸದ್ಯದ ಪರಿಸ್ಥಿತಿಯಲ್ಲಿ ಜನರು ಊಟ- ತಿಂಡಿ ಬೇಕಾದರೂ ಬಿಟ್ಟಿರುತ್ತಾರೆ ಇಂಟರ್‌ನೆಟ್‌ ಮತ್ತು ಸ್ಮಾರ್ಟ್‌ಫೋನ್ ಮಾತ್ರ ಬಿಟ್ಟಿರಲು ಸಾಧ್ಯವಿಲ್ಲ ಎನ್ನುವ ಮನಸ್ಥಿತಿಯಲ್ಲಿದ್ದಾರೆ. ಇದರ ಬಳಕೆಯು ಜನರನ್ನು ಸಾಮಾಜಿಕ ಮಾಧ್ಯಮಕ್ಕೆ ವ್ಯಸನಿಯನ್ನಾಗಿ ಮಾಡಿದೆ. ಇಂದಿನ ಡಿಜಿಟಲ್ ಯುಗದಲ್ಲಿ, ಸಾಮಾಜಿಕ ಮಾಧ್ಯಮ ಜೀವನದ ಪ್ರಮುಖ ಭಾಗವಾಗಿದೆ. ಯುವ ಪೀಳಿಗೆ ಇದರಲ್ಲಿಯೇ ಗಂಟೆಗಟ್ಟಲೆ ಸಮಯ ಕಳೆಯುತ್ತಿದ್ದಾರೆ, ಸ್ನೇಹಿತರು ಮತ್ತು ಕುಟುಂಬದೊಂದಿಗೆ ಮಾತುಕತೆ, ಮಾಹಿತಿ, ಮನರಂಜನೆಗಾಗಿ ಇದನ್ನು ಹೆಚ್ಚಾಗಿ ಬಳಸುತ್ತಿದ್ದಾರೆ. ಆದರೆ ಇದರಿಂದ ಕೆಟ್ಟ ಪರಿಣಾಮಗಳಿವೆ ಎಂಬುದು ನಿಮಗೆ ತಿಳಿದಿದೆಯೇ, ವಿಶೇಷವಾಗಿ ಮಾನಸಿಕ ಆರೋಗ್ಯದ ವಿಷಯಕ್ಕೆ ಬಂದಾಗ ಸಾಮಾಜಿಕ ಮಾಧ್ಯಮವು ಯುವ ಜನರಲ್ಲಿ ಒತ್ತಡಕ್ಕೆ ಪ್ರಮುಖ ಕಾರಣವಾಗಬಹುದು ಎಂದು ಅಧ್ಯಯನಗಳು ತಿಳಿಸಿವೆ.

ಸಾಮಾಜಿಕ ಮಾಧ್ಯಮಗಳು ಮಾನಸಿಕ ಒತ್ತಡ ಉಂಟುಮಾಡುವುದು ಹೇಗೆ?

ಜನರು ಈ ರೀತಿಯಲ್ಲಿ ಹೆಚ್ಚು ಸಮಯ ಕಳೆದಾಗ, ಕೆಲಸ, ಅಧ್ಯಯನ, ಸ್ನೇಹ ಮತ್ತು ಕುಟುಂಬದವರೊಂದಿಗೆ ಬೆರೆಯುವುದು, ಇನ್ನಿತರ ಚಟುವಟಿಕೆಗಳಿಂದ ಸಂಪರ್ಕ ಕಡಿದುಕೊಳ್ಳಲು ಪ್ರಾರಂಭಿಸುತ್ತಾರೆ. ಇಂತಹ ನಿರ್ಧಾರಗಳು ಅವರನ್ನು ಒಂಟಿಯನ್ನಾಗಿ ಮಾಡುತ್ತದೆ ಇದರಿಂದ ಅವರು ಮಾನಸಿಕ ಒತ್ತಡಕ್ಕೆ ಗುರಿಯಾಗುತ್ತಾರೆ. ಕೆಲವೊಮ್ಮೆ ನಾವು ಇತರರು ಸಂತೋಷವಾಗಿರುವುದನ್ನು ನೋಡಿ ಅಥವಾ ಅವರ ಜೀವನ ಶೈಲಿಯಂತೆ ಇರಬೇಕೆಂದು ಬಯಸುತ್ತೇವೆ, ನಮ್ಮ ಮನಸ್ಸಿಗೆ ಇಂತಹ ವಿಷಯಗಳನ್ನು ನಿಯಂತ್ರಿಸುವುದು ಕಷ್ಟವಾಗುತ್ತದೆ. ಕ್ರಮೇಣ ಯುವ ಜನತೆ ತಮ್ಮನ್ನು ಇತರರೊಂದಿಗೆ ಹೋಲಿಸಿಕೊಳ್ಳಲು ಪ್ರಾರಂಭಿಸುತ್ತಾರೆ, ಇದು ಅವರಿಗೆ ಅವರ ಮೇಲೆ ಕೀಳರಿಮೆ ಹುಟ್ಟಿಕೊಳ್ಳುವಂತೆ ಮಾಡುತ್ತದೆ ಇದರಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚು.

ಡಾ. ಕುಮಾರ್ ಅವರು ಹೇಳುವ ಪ್ರಕಾರ ಇಂದು ಯುವ ಜನತೆ ತಡರಾತ್ರಿಯವರೆಗೆ ಸ್ಮಾರ್ಟ್‌ಫೋನ್ ಬಳಸುತ್ತಾರೆ, ಇದರಿಂದಾಗಿ ಅವರ ದೈನಂದಿನ ವ್ಯವಸ್ಥೆಯು ಅಸ್ತವ್ಯಸ್ತವಾಗುತ್ತದೆ ಎಂದು ಹೇಳುತ್ತಾರೆ. ರಾತ್ರಿ ತಡವಾಗಿ ಮಲಗುವುದರಿಂದ ನಿದ್ರೆ ಸಾಕಾಗುವುದಿಲ್ಲ, ಇದು ನಮಗೆ ಕಿರಿಕಿರಿಯನ್ನುಂಟು ಮಾಡುತ್ತದೆ ಫೇಸ್ ಬುಕ್, ಇನ್ಸ್ಟಾಗ್ರಾಮ್ ಮತ್ತು ವಾಟ್ಸಾಪ್ನಂತಹ ಸಾಮಾಜಿಕ ಮಾಧ್ಯಮಗಳನ್ನು ತಡರಾತ್ರಿಯವರೆಗೆ ಬಳಸುವುದರಿಂದ ಕಣ್ಣುಗಳಲ್ಲಿ ನಿದ್ರೆಗೆ ಕಾರಣವಾದ ಮೆಲೋಟೋನಿಯಂ ಹಾರ್ಮೋನ್ ಬಿಡುಗಡೆಯಾಗುವುದನ್ನು ತಡೆಯುತ್ತದೆ. ಹಾಗಾಗಿ ತಡರಾತ್ರಿ ಸಾಮಾಜಿಕ ಮಾಧ್ಯಮವನ್ನು ಬಳಸುವುದರಿಂದ ನಿದ್ರೆಯ ಕೊರತೆ ಉಂಟಾಗುತ್ತದೆ, ಇದು ಆಯಾಸ, ಕಿರಿಕಿರಿ ಮತ್ತು ಏಕಾಗ್ರತೆಯ ಕೊರತೆಗೆ ಕಾರಣವಾಗುತ್ತದೆ, ಇದರಿಂದ ಒತ್ತಡ ಅನುಭವಿಸಬೇಕಾಗುತ್ತದೆ. ಅನೇಕ ಬಾರಿ ಯುವ ಜನತೆ ತಿಳಿದೋ ತಿಳಿಯದೆಯೋ ಸಾಮಾಜಿಕ ಮಾಧ್ಯಮದಲ್ಲಿ ಆನ್ಲೈನ್ ಕಿರುಕುಳ ಮತ್ತು ಬೆದರಿಕೆಗಳನ್ನು ಎದುರಿಸಬೇಕಾಗುತ್ತದೆ, ಇದು ಅವರಲ್ಲಿ ಮಾನಸಿಕ ಒತ್ತಡವನ್ನು ಸೃಷ್ಟಿಸುತ್ತದೆ.

ಇದನ್ನೂ ಓದಿ: ನಿಮ್ಮ ಗರ್ಲ್​​​​ ಫ್ರೆಂಡ್ ಮಾತು ಮಾತಿಗೂ ಕಣ್ಣೀರು ಹಾಕ್ತಾರ? ಹಾಗಾದ್ರೆ ಇಂತವರ ಬಗ್ಗೆ ತಜ್ಞರು ಹೇಳಿದ ರಹಸ್ಯ ಇಲ್ಲಿದೆ

ಇದಕ್ಕೆ ಪರಿಹಾರಗಳೇನು?

* ಒಂದು ದಿನದಲ್ಲಿ ಎಷ್ಟು ಸಮಯ ಸಾಮಾಜಿಕ ಮಾಧ್ಯಮವನ್ನು ವೀಕ್ಷಿಸಲು ಬಯಸುತ್ತೀರಿ ಎಂಬುದನ್ನು ನಿರ್ಧರಿಸಿ. ಬಳಿಕ ಅದನ್ನು ಸರಿಯಾಗಿ ಪಾಲಿಸಿ.

* ಕುಟುಂಬ ಮತ್ತು ಸ್ನೇಹಿತರೊಂದಿಗೆ ಹೆಚ್ಚಿನ ಸಮಯ ಕಳೆಯಿರಿ.

* ಜನರು ಹೆಚ್ಚಾಗಿ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಕಷ್ಟಗಳನ್ನು ಹಂಚಿಕೊಳ್ಳುವ ಬದಲು ಸುಖ, ಸಂತೋಷದ ವಿಷಯಗಳನ್ನು ಎಲ್ಲರಿಗೂ ಕಾಣುವಂತೆ ಹಂಚಿಕೊಳ್ಳುತ್ತಾರೆ, ಆದ್ದರಿಂದ ನಿಮ್ಮನ್ನು ಇತರರೊಂದಿಗೆ ಹೋಲಿಸಿಕೊಳ್ಳುವುದನ್ನು ತಪ್ಪಿಸಿ.

* ನಿಮಗೆ ತೊಂದರೆ ನೀಡುವ ಅಥವಾ ಕಿರಿಕಿರಿ ಉಂಟುಮಾಡುವ ಸುದ್ದಿ ಮತ್ತು ಪೋಸ್ಟ್ ಗಳನ್ನು ಓದುವುದು ಮತ್ತು ನೋಡುವುದನ್ನು ತಪ್ಪಿಸಿ.

ಮತ್ತಷ್ಟು ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ