Bad Habits: ದೈನಂದಿನ ಜೀವನದಲ್ಲಿನ ಈ ಕೆಲವು ಕೆಟ್ಟ ಅಭ್ಯಾಸಗಳು ಗಂಭೀರ ಆರೋಗ್ಯ ಸಮಸ್ಯೆಯನ್ನು ಉಂಟುಮಾಡಬಹುದು

ಆಧುನಿಕ ಜೀನಶೈಲಿಯಲ್ಲಿ ಜನರು ಅನೇಕ ಕೆಟ್ಟ ಅಭ್ಯಾಸಗಳನ್ನು ರೂಢಿಸಿಕೊಂಡಿರುತ್ತಾರೆ. ಇಂತಹ ಕೆಟ್ಟ ಅಭ್ಯಾಸಗಳು ಗಂಭೀರ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು. ಹಾಗಾಗಿ ನೀವು ಈ ಕೆಲವೊಂದು ಕೆಟ್ಟ ಅಭ್ಯಾಸಗಳನ್ನು ರೂಢಿಸಿಕೊಂಡಿದ್ದರೆ, ಅದನ್ನು ಇಂದಿಗೆ ಬಿಟ್ಟುಬಿಡಿ.

Bad Habits: ದೈನಂದಿನ ಜೀವನದಲ್ಲಿನ ಈ ಕೆಲವು  ಕೆಟ್ಟ ಅಭ್ಯಾಸಗಳು ಗಂಭೀರ ಆರೋಗ್ಯ ಸಮಸ್ಯೆಯನ್ನು ಉಂಟುಮಾಡಬಹುದು
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on: Jul 23, 2023 | 11:50 AM

ದೇಹವನ್ನು ಆರೋಗ್ಯಕರವಾಗಿ ಮತ್ತು ಸದೃಢವಾಗಿಡಲು ಸರಿಯಾದ ಆಹಾರ ಕ್ರಮ ಮತ್ತು ಜೀವನಶೈಲಿಯನ್ನು ಪಾಲಿಸುವುದು ಮುಖ್ಯ ಎಂದು ಪರಿಗಣಿಸಲಾಗಿದೆ. ತಿಳಿದೋ ತಿಳಿಯದೆಯೋ ನಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಹಲವಾರು ಕೆಟ್ಟ ಅಭ್ಯಾಸಗಳನ್ನು ನಾವು ಅಭ್ಯಾಸ ಮಾಡಿಕೊಂಡಿರುತ್ತೇವೆ. ಇದು ನಮ್ಮ ಆರೋಗ್ಯದ ಮೇಲೆ ತೀವ್ರ ಹಾನಿ ಉಂಟುಮಾಡಬಹುದು. ಇತ್ತೀಚಿಗೆ ಹೆಚ್ಚುತ್ತಿರುವ ರೋಗಗಳ ಪಟ್ಟಿಯನ್ನು ಗಮನಿಸಿದರೆ ಹೆಚ್ಚಿನ ರೋಗಗಳು ಕಳಪೆ ಮಟ್ಟದ ಆಹಾರ ಸೇವನೆ ಮತ್ತು ಅನಾರೋಗ್ಯಕರ ಜೀವನಶೈಲಿಯ ಕಾರಣದಿಂದ ಉಂಟಾಗುತ್ತವೆ ಎಂಬುದು ಸ್ಪಷ್ಟವಾಗಿ ತಿಳಿಯುತ್ತದೆ. ಹಾಗಾಗಿ ಕೆಲವೊಂದು ಅಭ್ಯಾಸಗಳನ್ನು ಬದಲಾಯಿಸುವ ಮೂಲಕ ಆರೋಗ್ಯವನ್ನು ಸರಿಯಾದ ರೀತಿಯಲ್ಲಿ ಕಾಪಾಡಿಕೊಳ್ಳಬಹುದು.

ಆರೋಗ್ಯಕ್ಕೆ ಹಾನಿ ಮಾಡುವಂತಹ ಕೆಲವು ಕೆಟ್ಟ ಅಭ್ಯಾಸಗಳು:

ಕಡಿಮೆ ನೀರು ಕುಡಿಯುವುದು: 

ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಕಷ್ಟು ಪ್ರಮಾಣದಲ್ಲಿ ನೀರನ್ನು ಕುಡಿಯುವುದು ಅವಶ್ಯಕ. ಸಾಕಷ್ಟು ನೀರು ಕುಡಿಯುವುದರಿಂದ ನಿಮ್ಮ ಚರ್ಮವು ಮೃದುವಾಗಿರಲು ಸಹಾಯ ಮಾಡುತ್ತದೆ, ದೇಹವನ್ನು ತಂಪಾಗಿರಿಸುತ್ತದೆ, ನಿಮ್ಮ ಸ್ನಾಯುಗಳು ಮತ್ತು ಕೀಲುಗಳು ಉತ್ತಮವಾಗಿ ಕಾರ್ಯನಿರ್ವಹಿಸಲು ಅನುಮಾಡಿಕೊಡುತ್ತದೆ ಅಲ್ಲದೆ ಮೂತ್ರಪಿಂಡದ ಕಲ್ಲಿನ ಸಮಸ್ಯೆಯನ್ನು ನಿವಾರಿಸುತ್ತದೆ. ಹಾಗಾಗಿ ಪ್ರತಿನಿತ್ಯ ಸಾಕಷ್ಟು ಪ್ರಮಾಣದ ನೀರನ್ನು ಕುಡಿಯುವುದು ಅವಶ್ಯಕ.

ಸರಿಯಾಗಿ ನಿದ್ರೆ ಮಾಡದಿರುವುದು:

ನಿದ್ರೆಯ ಕೊರತೆಯು ದೀರ್ಘಕಾಲದ ಕಾಯಿಲೆಗಳನ್ನು ಉಂಟುಮಾಡಬಹುದು. ನ್ಯಾಶನಲ್ ಹಾರ್ಟ್, ಲಂಗ್ ಮತ್ತು ಬ್ಲಡ್ ಇನ್ಸ್ಟಿಟ್ಯೂಟ್ ಪ್ರಕಾರ, ಸಾಕಷ್ಟು ನಿದ್ರೆ ಪಡೆಯದೆ ಹೋದರೆ ಹೃದ್ರೋಗ, ಅಧಿಕ ರಕ್ತದೊತ್ತಡ, ಮೂತ್ರಪಿಂಡದ ಕಾಯಿಲೆ, ಮಧುಮೇಹ, ಪಾರ್ಶ್ವವಾಯು, ಸ್ಥೂಲಕಾಯತೆ ಮತ್ತು ಖಿನ್ನತೆ ಸೇರಿದಂತೆ ಹಲವಾರು ದೀರ್ಘಕಾಲದ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು. ಹಾಗಾಗಿ ಪ್ರತಿದಿನ 7 ರಿಂದ 8 ಗಂಟೆಗಳ ಕಾಲ ನಿದ್ರೆ ಮಾಡುವುದು ಅವಶ್ಯಕ.

ಇದನ್ನೂ ಓದಿ: ಮಹಿಳೆಯರ ವ್ಯಕ್ತಿತ್ವವನ್ನು ಆಕರ್ಷಕವಾಗಿ ರೂಪಿಸುವ ಕೆಲವು ಅಭ್ಯಾಸಗಳು

ತಡರಾತ್ರಿಯಲ್ಲಿ ತಿನ್ನುವುದು:

ರಾತ್ರಿಯಲ್ಲಿ ಮಲಗುವ ಸಮಯದಲ್ಲಿ ಊಟ ಮತ್ತು ಇತರ ಆಹಾರಗಳನ್ನು ತಿನ್ನುವುದು ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ. ಅಲ್ಲದೆ 2020 ರಲ್ಲಿ ಪ್ರಕಟವಾದ ಅಧ್ಯಯನವೊಂದು ತಡವಾಗಿ ತಿನ್ನುವುದು ತೂಕ ಹೆಚ್ಚಾಗಲು ಕಾರಣವಾಗಬಹುದು ಎಂದು ಹೇಳಿದೆ. ಹಾಗಾಗಿ 8 ಗಂಟೆಯ ಮುಂಚೆಯೇ ಊಟವನ್ನು ಮಾಡಿ ಮುಗಿಸಬೇಕು.

ವ್ಯಾಯಾಮ ಮಾಡದಿರುವುದು:

ವ್ಯಾಯಾಮವು ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ವ್ಯಾಯಾಮವು ತೂಕವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ, ಮೆದುಳಿನ ಆರೋಗ್ಯವನ್ನು ಸುಧಾರಿಸುತ್ತದೆ, ಮೂಳೆಗಳು, ಸ್ನಾಯುಗಳು, ಹೃದಯ ಮತ್ತು ಶ್ವಾಸಕೋಶಗಳನ್ನು ಬಲಪಡಿಸುತ್ತದೆ. ಹಾಗೂ ನೀವು ಚೆನ್ನಾಗಿ ನಿದ್ರೆ ಮಾಡಲು ಸಹಕಾರಿಯಾಗಿದೆ. ಅಲ್ಲದೆ ವ್ಯಾಯಾಮವು ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ. ಆದ್ದರಿಂದ ದೇಹದಾರೋಗ್ಯವನ್ನು ಕಾಪಾಡಿಕೊಳ್ಳಲು ನಿಯಮಿತವಾಗಿ ವ್ಯಾಯಾಮವನ್ನು ಮಾಡುವುದು ಅವಶ್ಯಕ.

ಮದ್ಯ ಮತ್ತು ಧೂಮಪಾನ ಸೇವನೆ:

ಮದ್ಯಪಾನ ಮತ್ತು ಧೂಮಪಾನದ ಅತಿಯಾದ ಸೇವನೆಯು ಆರೋಗ್ಯದ ಮೇಲೆ ಬಹಳ ಕೆಟ್ಟ ಪರಿಣಾಮ ಬೀರುತ್ತದೆ. ಈ ಕಾರಣದಿಂದಾಗಿ ನೀವು ಬಾಯಿ, ಗಂಟಲು, ಶ್ವಾಸಕೋಶದ ಕಾಯಿಲೆಗಳು, ಅಲರ್ಜಿಗಳು ಮುಂತಾದ ಅನೇಕ ಗಂಭೀರ ಕಾಯಿಲೆಗಳಿಗೆ ತುತ್ತಾಗಬಹುದು.

ಎಲೆಕ್ಟ್ರಾನಿಕ್ ಗ್ಯಾಜೆಟ್ ಗಳ ಅತಿಯಾದ ಬಳಕೆ:

ಮೊಬೈಲ್ ಫೋನ್, ಲ್ಯಾಪ್​​​ಟಾಪ್​​​, ಕಂಪ್ಯೂಟರ್ ಗಳ ಮುಂದೆ ಹೆಚ್ಚು ಸಮಯ ಕಳೆಯುವುದರಿಂದ ಅದು ನಿಮ್ಮ ಕಣ್ಣುಗಳು, ಕುತ್ತಿಗೆಯ ಮೇಲೆ ಪರಿಣಾಮ ಬೀರಬಹುದು. ಅಲ್ಲದೆ ಇದು ನಿಮ್ಮ ಒಟ್ಟಾರೆ ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಆದ್ದರಿಂದ ಹೆಚ್ಚು ಸಮಯ ಮೊಬೈಲ್ ನೋಡುವುದರಲ್ಲಿ ಕಳೆಯುವುದನ್ನು ನಿಲ್ಲಿಸಿ.

ವೇಗವಾಗಿ ತಿಂದು ಮುಗಿಸುವುದು:

ಹೆಚ್ಚಿನ ಜನರು ಆತುರದಲ್ಲಿ ಆಹಾರವನ್ನು ಸರಿಯಾಗಿ ಜಗಿಯದೆ ತಿನ್ನುತ್ತಾರೆ. ಇದು ಕೆಟ್ಟ ಅಭ್ಯಾಸವಾಗಿದ್ದು, ಆಹಾರವನ್ನು ಸರಿಯಾಗಿ ಜಗಿಯದೆ ತಿನ್ನುವುದರಿಂದ ಅಜೀರ್ಣ, ಹೊಟ್ಟೆ ಉಬ್ಬುವುದು, ಹೊಟ್ಟೆ ನೋವು ಮತ್ತು ಆಮ್ಲೀಯತೆಯಂತಹ ಇತರ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಪ್ರತಿಸಲ ಆಹಾರವನ್ನು ಸರಿಯಾಗಿ ಅಗಿದು ತಿನ್ನಬೇಕು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?