ಇತ್ತೀಚಿನ ದಿನಗಳಲ್ಲಿ ಮಧುಮೇಹ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಅನಾರೋಗ್ಯಕರ ಜೀವನಶೈಲಿಯ ಕಾರಣ ಜನರು ಅನೇಕ ಆರೋಗ್ಯ ಸಮಸ್ಯೆಗಳಿಗೆ ಬಲಿಯಾಗುತ್ತಿದ್ದಾರೆ. ಈ ಸಮಸ್ಯೆಗಳಲ್ಲಿ ಮಧುಮೇಹವೂ ಒಂದು. ಇದು ಗುಣಪಡಿಸಲಾಗದ ಕಾಯಿಲೆಯಾಗಿದ್ದು, ಇದನ್ನು ಔಷಧಿಗಳ ಸಹಾಯದಿಂದ ಮತ್ತು ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ನಿಯಂತ್ರಣದಲ್ಲಿಟ್ಟುಕೊಳ್ಳಬಹುದು. ವಿಶೇಷವಾಗಿ ಮಧುಮೇಹ ಕಾಯಿಲೆ ಹೊಂದಿರುವ ವ್ಯಕ್ತಿಯು ತನ್ನ ಆಹಾರ ಕ್ರಮದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಸಾಮಾನ್ಯವಾಗಿ ಮಧುಮೇಹ ರೋಗಿಗಳಿಗೆ ಕಡಿಮೆ ಗ್ಲೈಸೆಮಿಕ್ ಸೂಚ್ಯಾಂಕ ಹೊಂದಿರುವ ಆಹಾರವನ್ನು ಸೇವನೆ ಮಾಡಲು ಸೂಚಿಸಲಾಗುತ್ತದೆ. ಅಲ್ಲದೆ ಹಲವಾರು ಪೋಷಕಾಂಶಗಳಲ್ಲಿ ಸಮೃದ್ಧವಾಗಿರುವ ಒಣಹಣ್ಣುಗಳನ್ನು ಮಧುಮೇಹಿಗಳು ಸೇವಿಸಬಾರದು ಎಂದು ಹೇಳಲಾಗುತ್ತದೆ. ಆದರೆ ನಿಮಗೆ ಗೊತ್ತಾ, ಈ ಕೆಲವೊಂದು ಒಣಹಣ್ಣುಗಳನ್ನು ತಿನ್ನುವ ಮೂಲಕ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.
ಒಣ ಪ್ಲಮ್: ನೀವು ಮಧುಮೇಹ ರೋಗದಿಂದ ಬಳಲುತ್ತಿದ್ದರೆ, ಪ್ರತಿದಿನ ಒಣಗಿದ ಪ್ಲಮ್ ತಿನ್ನುವುದರಿಂದ ನೀವು ಹಲವು ಪ್ರಯೋಜನವನ್ನು ಪಡೆದುಕೊಳ್ಳಬಹುದು. ಇದರಲ್ಲಿ ಕರಗುವ ಫೈಬರ್ ಮತ್ತು ವಿಟಮಿನ್ ಸಿ ಇದ್ದು, ಇದು ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ನೀವು ನಿಯಮಿತವಾಗಿ 2 ತುಂಡು ಒಣಗಿದ ಪ್ಲಮ್ ತಿನ್ನುವು ಮೂಲಕ ಮಧುಮೇಹವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.
ಗೋಡಂಬಿ: ಗೋಡಂಬಿ ತಿನ್ನುವ ಮೂಲಕವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಹೌದು ಅಧ್ಯಯನಗಳ ಪ್ರಕಾರ, ಗೋಡಂಬಿಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಮತ್ತು ಇದು ಮಧುಮೇಹ ವಿರೋಧಿ ಗುಣಗಳನ್ನು ಹೊಂದಿದೆ.
ಒಣ ಕಪ್ಪು ಅಂಜೂರ: ಹೆಚ್ಚಿನ ಪ್ರಮಾಣದ ವಿಟಮಿನ್ ಬಿ, ಮೆಗ್ನೇಸಿಯಂ ಮತ್ತು ಕಬ್ಬಿಣಾಂಶವು ಇದರಲ್ಲಿ ಕಂಡುಬರುತ್ತದೆ. ಇದರ ಸೇವನೆಯಿಂದ ಮಧುಮೇಹವನ್ನು ನಿಯಂತ್ರಿಸಹುದು. ಅಲ್ಲದೆ ಕರಗುವ ಫೈಬರ್ ಅಂಶಗಳಲ್ಲಿ ಸಮೃದ್ಧವಾಗಿರುವ ಅಂಜೂರ ಮಲಬದ್ಧತೆ ಮತ್ತು ಹೊಟ್ಟೆಯುಬ್ಬರ ಸಮಸ್ಯೆಯಿಂದಲೂ ಪರಿಹಾರವನ್ನು ಒದಗಿಸುತ್ತದೆ.
ಬಾದಾಮಿ: ಬಾದಾಮಿಯು ನಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ತುಂಬಾ ಪ್ರಯೋಜನಕಾರಿಯಾಗಿದೆ. ಇದು ಫೈಬರ್ನ ಅತ್ಯುತ್ತಮ ಮೂಲವಾಗಿದ್ದು, ಇದು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಇದರಲ್ಲಿ ಕಂಡುಬರುವ ಮೆಗ್ನೇಸಿಯಂ ಮೂಳೆಗಳು, ಸ್ನಾಯು ಮತ್ತು ನರಗಳ ಕಾರ್ಯನಿರ್ವಹಣೆಯನ್ನು ಸುಧಾರಿಸುತ್ತದೆ.
ಪಿಸ್ತಾ: ಪಿಸ್ತಾ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ, ಹೇಗೆಂದರೆ ಇದನ್ನು ತಿನ್ನುವುದರಿಂದ ಹೊಟ್ಟೆಯು ದೀರ್ಘಕಾಲದವರೆಗೆ ತುಂಬಿರುತ್ತದೆ. ಇದರಿಂದಾಗಿ ನೀವು ಅತಿಯಾಗಿ ತಿನ್ನುವುದನ್ನು ತಪ್ಪಿಸಬಹುದು. ಮಧುಮೇಹಿಗಳು ಸರಿಯಾದ ತೂಕವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಅಂತಹ ಪರಿಸ್ಥಿತಿಯಲ್ಲಿ ನೀವು ಪಿಸ್ತಾ ತಿನ್ನುವ ಮೂಲಕ ನಿಮ್ಮ ತೂಕವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.
ಒಣ ಮಲ್ಬೆರಿಗಳು: ಒಣ ಮಲ್ಬೆರಿಗಳು ಕಡಿಮೆ ಸಕ್ಕರೆ ಅಂಶವನ್ನು ಹೊಂದಿರುತ್ತವೆ. ಮತ್ತು ಮೆಗ್ನೇಸಿಯಮ್, ವಿಟಮಿನ್ ಬಿ, ಕಬ್ಬಿಣನಾಂಶ ಮತ್ತು ಪೊಟ್ಯಾಸಿಯಂನ ಉತ್ತಮ ಮೂಲವಾಗಿದೆ. ಇದು ಮಧುಮೇಹ ರೋಗಿಗಳಿಗೆ ಉತ್ತಮ ಆಯ್ಕೆಯಾಗಿದೆ.
ಇದನ್ನೂ ಓದಿ:ಮಧುಮೇಹಿಗಳಿಗೆ ಇವೆ ಅಸಂಖ್ಯಾತ, ನಾನಾ ಉಚಿತ ಸಲಹೆಗಳು -ಯಾವುದು ಪಾಲಿಸಬೇಕು, ಯಾವುದು ಬಿಡಬೇಕು?
ವಾಲ್ನಟ್: ಇದು ಕಡಿಮೆ ಪ್ರಮಾಣದ ಕ್ಯಾಲೋರಿಗಳು ಮತ್ತು ವಿಟಮಿನ್ ಇ ಪೋಷಕಾಂಶವನ್ನು ಹೊಂದಿದ್ದು, ಇದು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ. ನಿಯಮಿತವಾಗಿ ವಾಲ್ನಟ್ ಸೇವನೆ ಮಾಡುವುದರಿಂದ ಟೈಪ್ 2 ಮಧುಮೇಹದ ಅಪಾಯವನ್ನು ಕಡಿಮೆ ಮಾಡಬಹುದು ಎಂದು ಅನೇಕ ಸಂಶೋಧನೆಗಳು ತೋರಿಸಿವೆ.
ಒಣ ಏಪ್ರಿಕಾಟ್: ಒಣ ಏಪ್ರಿಕಾಟ್ ಹಣ್ಣು ಮಧುಮೇಹಿಗಳಿಗೆ ಉತ್ತಮ ಆಯ್ಕೆಯಾಗಿದೆ. ಇವುಗಳು ಫ್ರೀ ರಾಡಿಕಲ್ ಗಳಿಂದ ಜೀವಕೋಶಗಳನ್ನು ರಕ್ಷಿಸಲು ಅವು ಪ್ರಮುಖ ಉತ್ಕರ್ಷಣ ನಿರೋಧಕಗಳನ್ನು ಒದಗಿಸುತ್ತದೆ. ಹಾಗೂ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿರಿಸುತ್ತದೆ.
ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:47 pm, Tue, 3 October 23