ಬೇಸಿಗೆಯಲ್ಲಿ ತ್ವಚೆಯ ಆರೈಕೆಗೆ ಈ ಫೇಸ್ ಪ್ಯಾಕ್​​​ಗಳು ಬೆಸ್ಟ್

ಬೇಸಿಗೆಯ ಕಾಲ ಶುರುವಾಗುತ್ತಿದ್ದಂತೆ ಬಿಸಿಲಿನ ಝಳವನ್ನು ತಡೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಈ ಸಮಯದಲ್ಲಿ ಅನಾರೋಗ್ಯ ಸಮಸ್ಯೆಗಳು ಕಾಡುವುದೇ ಹೆಚ್ಚು. ಇನ್ನೊಂದೆಡೆ ಸೌಂದರ್ಯದ ಬಗ್ಗೆ ಎಷ್ಟು ಕಾಳಜಿ ವಹಿಸಿದರೂ ಕೂಡ ಸಾಲುವುದಿಲ್ಲ. ಸುಡು ಬಿಸಿಲು ತ್ವಚೆಯ ಮೇಲೆ ನಾನಾ ರೀತಿಯ ತೊಂದರೆಗಳನ್ನು ಉಂಟು ಮಾಡುತ್ತದೆ. ಹೀಗಾಗಿ ಮುಖದ ಕಾಂತಿಯು ಸಹಜವಾಗಿ ಕುಂದುತ್ತವೆ. ಮನೆಯಲ್ಲಿಯೇ ಸುಲಭವಾಗಿ ಫೇಸ್ ಪ್ಯಾಕ್ ತಯಾರಿಸಿ ಹಚ್ಚುವುದರಿಂದ ಸೌಂದರ್ಯವನ್ನು ಕಾಪಾಡಿಕೊಳ್ಳಬಹುದು.

ಬೇಸಿಗೆಯಲ್ಲಿ ತ್ವಚೆಯ ಆರೈಕೆಗೆ ಈ ಫೇಸ್ ಪ್ಯಾಕ್​​​ಗಳು ಬೆಸ್ಟ್
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Mar 01, 2024 | 1:00 PM

ಹೆಣ್ಣು ಮಕ್ಕಳು ತಮ್ಮ ಸೌಂದರ್ಯದ ಬಗ್ಗೆ ಹೆಚ್ಚು ಗಮನ ಕೊಡುತ್ತಾರೆ. ಅದರಲ್ಲಿ ಹವಾಮಾನ ಬದಲಾಗುತ್ತಿದ್ದಂತೆ ತ್ವಚೆಯಲ್ಲಾಗುವ ಬದಲಾವಣೆಯಿಂದ ಹೆಂಗಳೆಯರು ಚಿಂತಿತರಾಗುವುದೇ ಹೆಚ್ಚು. ಈ ಬೇಸಿಗೆಯಲ್ಲಿ ಸೂರ್ಯನ ಅತಿಯಾದ ಶಾಖದ ಕಾರಣ ಚರ್ಮ ಕಪ್ಪಾಗುವುದು, ಸುಕ್ಕು ಟ್ಟುವುದು, ಮೊಡವೆಗಳಾಗುವುದು, ಉರಿಯೂತ ಸಮಸ್ಯೆ ಹಾಗೂ ಕಿರಿಕಿರಿ ಹೀಗೆ ನಾನಾ ರೀತಿಯ ಸಮಸ್ಯೆಗಳು ಕಾಡುತ್ತವೆ. ಹೀಗಾದಾಗ ಸೂಕ್ಷ್ಮ ಚರ್ಮದ ಕಾಳಜಿ ವಹಿಸುವುದು ಅಗತ್ಯ.

  1. ಅಲೋವೆರಾ ಫೇಸ್ ಮಾಸ್ಕ್: ಮೊದಲಿಗೆ ಅಲೋವೆರಾ ಜೆಲ್, ಅರ್ಧ ಚಮಚ ಅರಿಶಿನ ಪುಡಿಯನ್ನು ಒಂದು ಬಟ್ಟಲಿಗೆ ಹಾಕಿ ಚೆನ್ನಾಗಿ ಕಲಸಿಕೊಳ್ಳಿ. ಇದನ್ನು ಮುಖದ ಮೇಲೆ ಹಚ್ಚಿ ಹತ್ತು ನಿಮಿಷದ ನಂತರದಲ್ಲಿ ತಣ್ಣೀರಿನಿಂದ ಮುಖ ತೊಳೆದರೆ ಮುಖದಲ್ಲಿರುವ ಮೊಡವೆಯು ಕಡಿಮೆಯಾಗುತ್ತದೆ.
  2. ಮುಲ್ತಾನಿ ಮಿಟ್ಟಿ ಫೇಸ್ ಪ್ಯಾಕ್ : ಮುಲ್ತಾನಿ ಮಿಟ್ಟಿಯನ್ನು ರೋಸ್ ವಾಟರ್ ನೊಂದಿಗೆ ಮಿಶ್ರಣ ಮಾಡಿಕೊಳ್ಳಿ. ಇದನ್ನು ಮುಖ ಹಾಗೂ ಕುತ್ತಿಗೆಯ ಭಾಗಕ್ಕೆ ಹಚ್ಚಿಕೊಂಡು ಸ್ವಲ್ಪ ಹೊತ್ತು ಹಾಗೆ ಬಿಡಿ. ಒಣಗಿದ ಬಳಿಕ ತಣ್ಣಗಿನ ನೀರಿನಿಂದ ಮುಖ ತೊಳೆಯಿರಿ. ಈ ಫೇಸ್ ಪ್ಯಾಕನ್ನು ಮುಖಕ್ಕೆ ಹಚ್ಚುವುದರಿಂದ ಮೊಡವೆ ಸಮಸ್ಯೆಯು ದೂರವಾಗುತ್ತದೆ.
  3. ನಿಂಬೆಹಣ್ಣಿನ ಫೇಸ್ ಪ್ಯಾಕ್ : ಒಂದು ಚಮಚ ಲಿಂಬೆ ರಸ ಮತ್ತು ಒಂದು ಚಮಚ ಜೇನುತುಪ್ಪಕ್ಕೆ ಮೊಟ್ಟೆಯ ಬಿಳಿಭಾಗವನ್ನು ಸೇರಿಸಿ ಈ ಮಿಶ್ರಣವನ್ನು ಮುಖ ಹಾಗೂ ಕುತ್ತಿಗೆ ಭಾಗಕ್ಕೆ ಹಚ್ಚಿಕೊಳ್ಳಬೇಕು. ಇಪ್ಪತ್ತು ನಿಮಿಷಗಳ ಬಳಿಕ ತಣ್ಣೀರಿನಲ್ಲಿ ಮುಖ ತೊಳೆಯುವುದರಿಂದ ಚರ್ಮವನ್ನು ಬಿಳುಪಾಗಿ ಕಾಂತಿಯುತವಾಗುತ್ತದೆ.
  4. ಮೊಸರು ಮತ್ತು ಕಡಲೆಹಿಟ್ಟಿನ ಫೇಸ್ ಪ್ಯಾಕ್ : ಒಂದು ಬಟ್ಟಲಿನಲ್ಲಿ ಮೊಸರು ಮತ್ತು ಕಡಲೆಹಿಟ್ಟನ್ನು ಬೆರೆಸಿ, ಅದಕ್ಕೆ ಒಂದು ಚಿಟಿಕೆಯಷ್ಟು ಅರಶಿನವನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿಟ್ಟುಕೊಳ್ಳಬೇಕು. ಇದನ್ನು ಮುಖಕ್ಕೆ ಹಚ್ಚಿ ಹದಿನೈದು ನಿಮಿಷದ ಬಳಿಕ ತಣ್ಣೀರಿನಿಂದ ತೊಳೆಯಬೇಕು. ಹೀಗೆ ಮಾಡುವುದರಿಂದ ಮುಖದಲ್ಲಿನ ಕಲೆಯು ನಿವಾರಣೆಯಾಗಿ ಹೊಳಪು ಹೆಚ್ಚಾಗುತ್ತದೆ.
  5. ಟೊಮೆಟೋ ಫೇಸ್ ಪ್ಯಾಕ್ : ಒಂದು ಬಟ್ಟಲಿನಲ್ಲಿ ಟೊಮೆಟೋ ರಸವನ್ನು ತೆಗೆದುಕೊಂಡು, ಅದಕ್ಕೆ ಸ್ವಲ್ಪ ಪ್ರಮಾಣದಲ್ಲಿ ಜೇನುತುಪ್ಪ ಬೆರೆಸಬೇಕು. ಈ ಮಿಶ್ರಣವನ್ನು ಮುಖ ಹಾಗೂ ಕುತ್ತಿಗೆಗೆ ಹಚ್ಚಿಕೊಳ್ಳಬೇಕು. ಒಣಗಿದ ಬಳಿಕ ಮುಖವನ್ನು ತೊಳೆಯಬೇಕು. ಟೊಮೆಟೋ ಫೇಸ್ ಪ್ಯಾಕ್ ಹಚ್ಚುವುದರಿಂದ ಸತ್ತ ಚರ್ಮದ ಕೋಶಗಳನ್ನು ತೆಗೆದು ಹಾಕುವುದಲ್ಲದೆ ಮುಖದ ಮೇಲಿನ ಕಲೆಯು ನಿವಾರಣೆಯಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ