AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಸಿಗೆಯಲ್ಲಿ ಆರೋಗ್ಯವನ್ನು ಕಾಪಾಡಲು ಸೌತೆಕಾಯಿ ಚಟ್ನಿ ತಯಾರಿಸಿ, ರೆಸಿಪಿ ಇಲ್ಲಿದೆ

ಸೌತೆಕಾಯಿ ಬೇಸಿಗೆಯಲ್ಲಿ ಉತ್ತಮ ಆಯ್ಕೆಯಾಗಿದೆ. ಇದರಲ್ಲಿ ನೀರಿನಾಂಶವು ಹೇರಳವಾಗಿರುವುದರಿಂದ ಒಟ್ಟಾರೆ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ.

ಬೇಸಿಗೆಯಲ್ಲಿ ಆರೋಗ್ಯವನ್ನು ಕಾಪಾಡಲು ಸೌತೆಕಾಯಿ ಚಟ್ನಿ ತಯಾರಿಸಿ, ರೆಸಿಪಿ ಇಲ್ಲಿದೆ
Summer Health TipsImage Credit source: NDTV
ಅಕ್ಷತಾ ವರ್ಕಾಡಿ
|

Updated on: May 01, 2023 | 7:00 AM

Share

ಬೇಸಿಗೆ ಪ್ರಾರಂಭವಾಗಿದೆ, ನಿಮ್ಮ ಆರೋಗ್ಯವನ್ನು ಕಾಪಾಡುವುದು ತುಂಬಾ ಅಗತ್ಯವಾಗಿದೆ. ದೇಹಕ್ಕೆ ಹೆಚ್ಚು ನೀರಿನಾಂಶದ ಅಗತ್ಯವಿರುವುದರಿಂದ ಸರಿಯಾದ ಆಹಾರ ಕ್ರಮವನ್ನು ರೂಢಿಸಿಕೊಳ್ಳುವುದು ಅಗತ್ಯವಾಗಿದೆ. ಆದ್ದರಿಂದ ಅಧಿಕ ನೀರಿನಾಂಶವಿರುವ ಆಹಾರವನ್ನು ದೈನಂದಿನ ಆಹಾರಕ್ರಮದಲ್ಲಿ ಜೋಡಿಸಿಕೊಳ್ಳುವುದು ಉತ್ತಮ. ಸೌತೆಕಾಯಿ ಬೇಸಿಗೆಯಲ್ಲಿ ಉತ್ತಮ ಆಯ್ಕೆಯಾಗಿದೆ. ಇದರಲ್ಲಿ ನೀರಿನಾಂಶವು ಹೇರಳವಾಗಿರುವುದರಿಂದ ಒಟ್ಟಾರೆ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ. ಜೊತೆಗೆ ಬೇಸಿಗೆಯಲ್ಲಿ ಸೌತೆಕಾಯಿಯನ್ನು ತಿನ್ನುವುದು ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅದರಲ್ಲಿ ಕ್ಯಾಲೋರಿಗಳ ಪ್ರಮಾಣವು ತುಂಬಾ ಕಡಿಮೆಯಾಗಿದೆ. ಇದರಿಂದ ದೇಹದಲ್ಲಿ ಬೊಜ್ಜು ಹೆಚ್ಚಾಗುವುದಿಲ್ಲ ಮತ್ತು ತೂಕವೂ ನಿಯಂತ್ರಣದಲ್ಲಿರುತ್ತದೆ. ಇದಲ್ಲದೇ ಸೌತೆಕಾಯಿಯನ್ನು ಸೇವಿಸುವುದರಿಂದ ಕಿಡ್ನಿ ಆರೋಗ್ಯವಾಗಿರುವುದರ ಜೊತೆಗೆ ಕಲ್ಲುಗಳಂತಹ ಸಮಸ್ಯೆಗಳು ಬರುವುದಿಲ್ಲ.

ಆದ್ದರಿಂದ ನೀವು ಮನೆಯಲ್ಲಿ ಅತ್ಯಂತ ಸುಲಭವಾಗಿ ಸೌತೆಕಾಯಿಯ ಚಟ್ನಿ ತಯಾರಿಸಿ. ಪಾಕವಿಧಾನ ಇಲ್ಲಿದೆ. ದಕ್ಷಿಣ ಭಾರತೀಯ ಶೈಲಿಯ ಸೌತೆಕಾಯಿ ಚಟ್ನಿ ತಯಾರಿಸಲು ಬೇಕಾಗುವ ಪದಾರ್ಥಗಳು:

  • 1 ಸೌತೆಕಾಯಿ
  • 2 ಹಸಿರು ಮೆಣಸಿನಕಾಯಿ
  • 1/2 ಟೀಸ್ಪೂನ್ ಜೀರಿಗೆ
  • 1/2 ಟೀಸ್ಪೂನ್ ಸಾಸಿವೆ
  • 1 ಬೆಳ್ಳುಳ್ಳಿ
  • 1/2 ಟೀಸ್ಪೂನ್ ಬೇಳೆಕಾಳು
  • ರುಚಿಗೆ ತಕ್ಕಷ್ಟು ಉಪ್ಪು
  • 2 ಟೀಸ್ಪೂನ್ ತೆಂಗಿನ ಎಣ್ಣೆ
  • 5-6 ಕರಿಬೇವಿನ ಎಲೆ
  • ಕೊತ್ತಂಬರಿ ಸೊಪ್ಪು

ಇದನ್ನೂ ಓದಿ: ಕಾಂತಾರ ಸಿನಿಮಾದಲ್ಲಿ ಉಟ್ಟಿದ್ದ 32ವರ್ಷ ಹಳೆಯ ಸೀರೆಯ ಸೀಕ್ರೆಟ್​​​​ ಬಿಚ್ಚಿಟ್ಟ ರಿಷಬ್​​ ಪತ್ನಿ

ಸೌತೆಕಾಯಿ ಚಟ್ನಿ ಮಾಡುವ ವಿಧಾನ:

  • ಸೌತೆಕಾಯಿಯನ್ನು ಚೆನ್ನಾಗಿ ತೊಳೆದು ತುರಿದುಕೊಳ್ಳಿ. ಎಣ್ಣೆ ಬಿಸಿ ಮಾಡಿ ಹಸಿಮೆಣಸಿನಕಾಯಿ, ಉದ್ದಿನಬೇಳೆ ಹಾಕಿ ಹುರಿಯಿರಿ. ಸ್ಪಲ್ಪ ಹೊತ್ತು ತಣ್ಣಗಾಗಲು ಬಿಡಿ.
  • ತಣ್ಣಗಾದ ಬಳಿಕ ಮಿಕ್ಸರ್ ಗ್ರೈಂಡರ್ಗೆ ಹಾಕಿ ಮತ್ತು ಜೀರಿಗೆ, ಉಪ್ಪು, ಬೆಳ್ಳುಳ್ಳಿ ಸೇರಿಸಿ. ನುಣ್ಣಗೆ ಪೇಸ್ಟ್ ಆಗಿ ರುಬ್ಬಿಕೊಳ್ಳಿ.
  • ಇದಕ್ಕೆ ತುರಿದ ಸೌತೆಕಾಯಿಯನ್ನು ಸೇರಿಸಿ ಮತ್ತು ಮಿಶ್ರಣ ಮಾಡಿ. ಸ್ವಲ್ಪ ಹುಣಸೆ ಹಣ್ಣಿನ ರಸ ಸೇರಿಸಿ ರುಬ್ಬಿಕೊಳ್ಳಿ.
  • ಮಿಶ್ರಣವನ್ನು ಒಂದು ಬೌಲ್‌ಗೆ ಹಾಕಿ ಮತ್ತು ಅದಕ್ಕೆ ತುರಿದ ಸೌತೆಕಾಯಿಯನ್ನು ಸೇರಿಸಿ ಮತ್ತು ಮಿಶ್ರಣ ಮಾಡಿ. ಇದಕ್ಕೆ ಸ್ವಲ್ಪ ಉಪ್ಪು ಮತ್ತು ಕತ್ತರಿಸಿದ ಕೊತ್ತಂಬರಿ ಸೊಪ್ಪು ಸೇರಿಸಿ.
  • ಕೆಂಪು ಮೆಣಸಿನಕಾಯಿ, ಕರಿಬೇವಿನ ಎಲೆಗಳು ಮತ್ತು ಇಂಗು, ಸಾಸಿವೆ ಮತ್ತು ಜೀರಿಗೆಯನ್ನು ಸೇರಿಸಿ ಒಗ್ಗರಣೆ ಹಾಕಿ. ಇದನ್ನು ಚಟ್ನಿಯ ಮೇಲೆ ಮೇಲೆ ಸುರಿಯಿರಿ. ಈಗ ಸೌತೆಕಾಯಿಯ ಚಟ್ನಿ ಸಿದ್ಧವಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ