Health Care Tips in Kannada :ಬೇಸಿಗೆಯಲ್ಲಿ ಹೆಚ್ಚು ಸಮಯ ಜಿಮ್ ನಲ್ಲಿ ಇರ್ತೀರಾ? ಈ ಟಿಪ್ಸ್ ಪಾಲಿಸಿ!

ಇತ್ತೀಚೆಗಿನ ದಿನಗಳಲ್ಲಿ ಫಿಟ್ ನೆಸ್ ಬಗ್ಗೆ ಗಮನ ಕೊಡುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಹೀಗಾಗಿ ಹೆಚ್ಚಿನವರು ಜಿಮ್ ವರ್ಕ್ ಔಟ್ ಎಂದು ಬ್ಯುಸಿಯಾಗುತ್ತಿದ್ದಾರೆ. ಆದರೆ ಈ ಬೇಸಿಗೆಯಲ್ಲಿ ಜಿಮ್ ನಲ್ಲಿ ವರ್ಕ್ ಔಟ್ ಎಂದು ಬ್ಯುಸಿಯಾಗುವವರು ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಆರೋಗ್ಯ ದೃಷ್ಟಿಯಿಂದ ತುಂಬಾ ಒಳ್ಳೆಯದು.

Health Care Tips in Kannada :ಬೇಸಿಗೆಯಲ್ಲಿ ಹೆಚ್ಚು ಸಮಯ ಜಿಮ್ ನಲ್ಲಿ ಇರ್ತೀರಾ? ಈ ಟಿಪ್ಸ್ ಪಾಲಿಸಿ!
Summer Workout
Follow us
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ

Updated on: Apr 17, 2024 | 5:28 PM

ಕಳೆದ ಕೆಲವು ವರ್ಷಗಳಿಂದ ಹೆಚ್ಚಿನವರಿಗೆ ಆರೋಗ್ಯವು ಕೈಕೊಡುತ್ತಿದೆ. ಹೀಗಾಗಿ ಹೆಚ್ಚಿನವರು ತಮ್ಮ ಜೀವನ ಶೈಲಿ ಹಾಗೂ ಆಹಾರ ಕ್ರಮಗಳಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿಕೊಂಡಿದ್ದಾರೆ. ಹಿಂದೆಂದೂ ಜಿಮ್ ನನ್ನು ನೋಡದವರು, ಜಿಮ್ ನಲ್ಲಿ ವರ್ಕ್ ನತ್ತ ಒಲವು ತೋರಿಸುತ್ತಿದ್ದಾರೆ. ಆದರೆ ಬಿಸಿ ವಾತಾವರಣದ ನಡುವೆ ಹೆಚ್ಚು ಹೊತ್ತು ವರ್ಕ್ ಔಟ್ ಮಾಡುವುದು ಒಳ್ಳೆಯದಲ್ಲ. ಆದರೆ ಫಿಟ್ ನೆಸ್ ಕಾಯ್ದುಕೊಳ್ಳಲು ವರ್ಕ್ ಔಟ್ ಮಾಡಬೇಕೆನ್ನುವವರು ಕೆಲವೊಂದು ಸಲಹೆಗಳನ್ನು ಅನುಸರಿಸುವುದು ಒಳ್ಳೆಯದು.

ವರ್ಕ್ ಔಟ್ ಮಾಡುವ ಮುನ್ನ ಈ ವಿಚಾರಗಳ ಬಗ್ಗೆ ಗಮನವಿರಲಿ:

  1. ಬೇಸಿಗೆಯಲ್ಲಿ ಒಂದೇ ಬಾರಿಗೆ ಹೆಚ್ಚು ವರ್ಕೌಟ್ ಮಾಡದಿರುವುದು ಒಳ್ಳೆಯದು. ಈ ವೇಳೆಯಲ್ಲಿ ನಿರ್ಜಲೀಕರಣದಿಂದ ದೇಹವು ನೈಸರ್ಗಿಕವಾಗಿ ದುರ್ಬಲಗೊಳ್ಳುತ್ತದೆ. ಅದಲ್ಲದೇ ಬೇಗನೇ ಆಯಾಸಗೊಳ್ಳುತ್ತೇವೆ ಈ ಕಾರಣದಿಂದ ವರ್ಕೌಟ್‌ಗಳನ್ನು ಸ್ವಲ್ಪ ಕಡಿಮೆ ಮಾಡುವುದು ಉತ್ತಮ.
  2. ದೇಹವು ಹೆಚ್ಚು ನಿರ್ಜಲೀಕರಣವಾಗುವುದರಿಂದ ಜಿಮ್‌ಗೆ ಹೋಗುವ ಮೊದಲು ಮತ್ತು ನಂತರ ದ್ರವರೂಪದ ಆಹಾರವನ್ನು ಸೇವಿಸುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು.
  3. ಜಿಮ್ ಗೆ ಹೋಗುವಾಗ ತೊಡುವ ಬಟ್ಟೆಯ ಬಗ್ಗೆಯೂ ಎಚ್ಚರಿಕೆ ವಹಿಸಬೇಕು. ಬಿಗಿಯಾದ ಬಟ್ಟೆಗಳನ್ನು ತಪ್ಪಿಸಬೇಕು. ಸಾಧ್ಯವಾದಷ್ಟು ಸಡಿಲವಾದ ಬಟ್ಟೆಗಳನ್ನು ಧರಿಸುವುದು ಉತ್ತಮ.
  4. ಬೇಸಿಗೆಯಲ್ಲಿ ಜಿಮ್‌ಗೆ ಹೋಗುವವರು ತೆಗೆದುಕೊಳ್ಳುವ ಆಹಾರದ ಬಗ್ಗೆಯೂ ಕೆಲವು ನಿಯಮಗಳನ್ನು ಪಾಲಿಸುವುದು ಒಳಿತು. ದೇಹಕ್ಕೆ ಅಗತ್ಯವಾದ ಪೋಷಕಾಂಶಗಳು ಮತ್ತು ವಿಟಮಿನ್ ಗಳನ್ನು ಒಳಗೊಂಡಿರುವ ಆಹಾರವು ನಿಮ್ಮ ಬ್ಯಾಗ್ ನಲ್ಲಿರಲಿ. ವ್ಯಾಯಾಮದ ನಂತರ ಮೊಟ್ಟೆ ಮತ್ತು ಬಾಳೆಹಣ್ಣುಗಳನ್ನು ಸೇವಿಸುವುದನ್ನು ಮರೆಯದಿರಿ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ