SUPERFOODS: ಅಕಾಯ್ ಬೆರ್ರಿಗಳ ಅದ್ಭುತ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದಿದೆಯಾ?

ಅಕಾಯ್ ಬೆರ್ರಿಗಳು ಉತ್ಕರ್ಷಣ ನಿರೋಧಕಗಳು, ಫೈಬರ್, ಆರೋಗ್ಯಕರ ಕೊಬ್ಬುಗಳು, ವಿಟಮಿನ್ ಸಿ ಮತ್ತು ವಿಟಮಿನ್ ಎ, ಪೊಟ್ಯಾಸಿಯಮ್ ಹಾಗೂ ಕ್ಯಾಲ್ಸಿಯಂನಂತಹ ಖನಿಜಗಳು ಸೇರಿದಂತೆ ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಜೊತೆಗೆ ಇವು ಕಡಿಮೆ ಸಕ್ಕರೆ ಅಂಶವನ್ನು ಹೊಂದಿದ್ದು ಅನೇಕ ಖನಿಜಗಳು ಮತ್ತು ಆಂಥೋಸಯಾನಿನ್ಗಳಂತಹ ಸಂಯುಕ್ತಗಳನ್ನು ಹೊಂದಿರುತ್ತವೆ ಎಂದು ತಜ್ಞರು ಹೇಳುತ್ತಾರೆ.

SUPERFOODS: ಅಕಾಯ್ ಬೆರ್ರಿಗಳ ಅದ್ಭುತ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದಿದೆಯಾ?
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 02, 2024 | 10:53 AM

ನಾವೆಲ್ಲರೂ ಬ್ಲೂಬೆರ್ರಿ ಮತ್ತು ರಾಸ್ಪ್ಬೆರಿಗಳ ಬಗ್ಗೆ ಕೇಳಿದ್ದೇವೆ, ಆದರೆ ನಿಮಗೆ ಅಕಾಯ್ ಬೆರ್ರಿಗಳ ಬಗ್ಗೆ ಗೊತ್ತಾ? ಕೆಲವರು ಇದರ ಉಪಯೋಗಗಳನ್ನು ತಿಳಿದುಕೊಂಡಿರಬಹುದು. ಅಕಾಯ್ ಬೆರ್ರಿಗಳು ದಕ್ಷಿಣ ಅಮೆರಿಕದ ಅಮೆಜಾನ್ ಮಳೆಕಾಡುಗಳಲ್ಲಿ ಸ್ಥಳೀಯವಾದ ಅಕೈ ತಾಳೆ ಮರದಲ್ಲಿ ಸಾಮಾನ್ಯವಾಗಿ ಕಾಣಸಿಗುತ್ತವೆ. ಅವು ನೀಲಿ- ನೇರಳೆ ಬಣ್ಣದಲ್ಲಿರುತ್ತವೆ ಮತ್ತು ದೊಡ್ಡ ಬ್ಲೂಬೆರ್ರಿಗಳ ಗಾತ್ರ ಮತ್ತು ಆಕಾರವನ್ನು ಕೂಡ ಹೊಂದಿರುತ್ತವೆ. ಅವುಗಳ ಸಂಭಾವ್ಯ ಆರೋಗ್ಯ ಪ್ರಯೋಜನಗಳಿಂದಾಗಿ ಅವು “ಸೂಪರ್ ಫುಡ್” ಆಗಿ ಜನಪ್ರಿಯತೆಯನ್ನು ಗಳಿಸಿವೆ. ಆದ್ದರಿಂದ, ನೀವು ಆರೋಗ್ಯ ಪ್ರಜ್ಞೆಯುಳ್ಳ ವ್ಯಕ್ತಿಯಾಗಿದ್ದರೆ, ಇದನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬಹುದು. ಇದಕ್ಕೂ ಮೊದಲು ಅಕಾಯ್ ಬೆರ್ರಿಗಳ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳಿ. ಈ ಬೆರ್ರಿಗಳ ಬಗ್ಗೆ ಹೆಲ್ತ್ ಶಾಟ್ಸ್ ಪೌಷ್ಟಿಕತಜ್ಞ ನಿರುಪಮಾ ರಾವ್ ಕೆಲವು ವಿಷಯಗಳನ್ನು ಹಂಚಿಕೊಂಡಿದ್ದು, ಸಂಪೂರ್ಣ ಮಾಹಿತಿ ಇಲ್ಲಿದೆ.

ಅಕಾಯ್ ಬೆರ್ರಿಗಳ ಪ್ರಯೋಜನಗಳು ಯಾವುವು?

ಅಕಾಯ್ ಬೆರ್ರಿಗಳು ಉತ್ಕರ್ಷಣ ನಿರೋಧಕಗಳು, ಫೈಬರ್, ಆರೋಗ್ಯಕರ ಕೊಬ್ಬುಗಳು, ವಿಟಮಿನ್ ಸಿ ಮತ್ತು ವಿಟಮಿನ್ ಎ, ಪೊಟ್ಯಾಸಿಯಮ್ ಹಾಗೂ ಕ್ಯಾಲ್ಸಿಯಂನಂತಹ ಖನಿಜಗಳು ಸೇರಿದಂತೆ ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಜೊತೆಗೆ ಇವು ಕಡಿಮೆ ಸಕ್ಕರೆ ಅಂಶವನ್ನು ಹೊಂದಿದ್ದು ಅನೇಕ ಖನಿಜಗಳು ಮತ್ತು ಆಂಥೋಸಯಾನಿನ್ಗಳಂತಹ ಸಂಯುಕ್ತಗಳನ್ನು ಹೊಂದಿರುತ್ತವೆ ಎಂದು ತಜ್ಞರು ಹೇಳುತ್ತಾರೆ. ಆದ್ದರಿಂದ, ನೈಸರ್ಗಿಕವಾಗಿ, ಅವು ನಿಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿ. ಈ ಬೆರ್ರಿಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ:

1. ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ

ಅಕಾಯ್ ಬೆರ್ರಿಗಳು ಹೆಚ್ಚಿನ ಉತ್ಕರ್ಷಣ ನಿರೋಧಕ ಅಂಶಕ್ಕೆ ಹೆಸರುವಾಸಿಯಾಗಿವೆ, ಇದು ಫ್ರೀ ರಾಡಿಕಲ್ಗಳಿಂದ ಉಂಟಾಗುವ ಆಕ್ಸಿಡೇಟಿವ್ ಹಾನಿಯಿಂದ ಜೀವಕೋಶಗಳನ್ನು ರಕ್ಷಿಸಲು ಸಹಾಯ ಮಾಡುತ್ತದೆ. ಆಂಟಿ ಆಕ್ಸಿಡೆಂಟ್ ಗಳಿಂದ ಫ್ರೀ ರಾಡಿಕಲ್ ಗಳ ಪರಿಣಾಮವನ್ನು ತಟಸ್ಥಗೊಳಿಸದಿದ್ದರೆ, ಫ್ರೀ ರಾಡಿಕಲ್ ಗಳು ಜೀವಕೋಶಗಳನ್ನು ಹಾನಿಗೊಳಿಸಬಹುದು ಮತ್ತು ನಮ್ಮ ದೇಹದಲ್ಲಿ ರೋಗಗಳ ಅಪಾಯವನ್ನು ಹೆಚ್ಚಿಸಬಹುದು. “ಉತ್ಕರ್ಷಣ ನಿರೋಧಕಗಳು ಕ್ಯಾನ್ಸರ್, ಮಧುಮೇಹ ಮತ್ತು ಹೃದ್ರೋಗದಂತಹ ದೀರ್ಘಕಾಲದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುವುದು ಸೇರಿದಂತೆ ವಿವಿಧ ಆರೋಗ್ಯ ಪ್ರಯೋಜನಗಳೊಂದಿಗೆ ಸಂಬಂಧ ಹೊಂದಿವೆ” ಎಂದು ತಜ್ಞರು ಹೇಳುತ್ತಾರೆ.

ಇದನ್ನೂ ಓದಿ: ರೂಂ ಹೀಟರ್ ಬಳಸುತ್ತೀರಾ?; ನಿಮ್ಮ ಆರೋಗ್ಯದ ಬಗ್ಗೆಯೂ ಎಚ್ಚರವಿರಲಿ

2. ನಿಮ್ಮ ಚರ್ಮಕ್ಕೆ ತುಂಬಾ ಒಳ್ಳೆಯದು

ಅಕಾಯ್ ಬೆರ್ರಿಗಳಲ್ಲಿನ ಉತ್ಕರ್ಷಣ ನಿರೋಧಕಗಳು ಆರೋಗ್ಯಕರ ಚರ್ಮವನ್ನು ಉತ್ತೇಜಿಸುತ್ತದೆ ಮತ್ತು ಆಕ್ಸಿಡೇಟಿವ್ ಒತ್ತಡವನ್ನು ಎದುರಿಸುವ ಮೂಲಕ ವಯಸ್ಸಾದ ಗುರುತುಗಳನ್ನು ಕಡಿಮೆ ಮಾಡುತ್ತವೆ.

3. ಹೃದಯದ ಆರೋಗ್ಯವನ್ನು ಉತ್ತೇಜಿಸುತ್ತದೆ

ಅಕಾಯ್ ಬೆರ್ರಿಗಳು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಅವುಗಳ ಆರೋಗ್ಯಕರ ಕೊಬ್ಬುಗಳು ಮತ್ತು ಉತ್ಕರ್ಷಣ ನಿರೋಧಕಗಳಿಂದಾಗಿ ಒಟ್ಟಾರೆ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

4. ತೂಕ ಇಳಿಕೆಗೆ ಸಹಾಯ ಮಾಡುತ್ತದೆ

ಅಕಾಯ್ ಬೆರ್ರಿ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ, ಇದನ್ನು ಬೆಂಬಲಿಸಲು ಸೀಮಿತ ವೈಜ್ಞಾನಿಕ ಪುರಾವೆಗಳಿವೆ. “ಅಕಾಯ್ ಬೆರ್ರಿಗಳಲ್ಲಿನ ಫೈಬರ್ ಅಂಶವು ದೀರ್ಘಕಾಲದ ವರೆಗೆ ಹೊಟ್ಟೆ ತುಂಬಿದ ಭಾವನೆಯನ್ನು ನೀಡಿ, ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ” ಎಂದು ತಜ್ಞರು ಹೇಳುತ್ತಾರೆ.

5. ಮೆದುಳಿನ ಆರೋಗ್ಯವನ್ನು ಸುಧಾರಿಸುತ್ತದೆ

ಅಲ್ಝೈಮರ್ ಕಾಯಿಲೆ ಮತ್ತು ಪಾರ್ಕಿನ್ಸನ್ ಕಾಯಿಲೆಯಂತಹ ಮೆದುಳಿನ ಕಾಯಿಲೆಗಳಿಗೆ ಯಾವುದೇ ನಿರ್ದಿಷ್ಟ ಚಿಕಿತ್ಸೆಯಿಲ್ಲ. ಆದರೆ ಉತ್ಕರ್ಷಣ ನಿರೋಧಕಗಳು ಮತ್ತು ಉರಿಯೂತದ ಸಂಯುಕ್ತಗಳಿಂದ ಸಮೃದ್ಧವಾಗಿರುವ ಕೆಲವು ಆಹಾರಗಳು ಇಂತಹ ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಅಕಾಯ್ ಬೆರ್ರಿಗಳಲ್ಲಿ ಹೇರಳವಾಗಿ ಕಂಡು ಬರುವ ಆಂಥೋಸಯಾನಿನ್, ಆಕ್ಸಿಡೇಟಿವ್ ಒತ್ತಡ ಮತ್ತು ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇದರಿಂದಾಗಿ ಮೆದುಳಿನ ಆರೋಗ್ಯವನ್ನು ಹೆಚ್ಚಿಸುತ್ತದೆ. ಈ ಸಂಯುಕ್ತಗಳು ಜ್ಞಾಪಕ ಶಕ್ತಿಯನ್ನು ಹೆಚ್ಚಿಸುತ್ತವೆ ಎಂದು ಸಂಶೋಧನೆಗಳಿಂದ ತಿಳಿದು ಬಂದಿದೆ.

ಆಹಾರದಲ್ಲಿ ಅಕಾಯ್ ಬೆರ್ರಿಗಳನ್ನು ಹೇಗೆ ಬಳಸುವುದು?

ಅಕಾಯ್ ಬೆರ್ರಿಗಳು ಪೋಷಕಾಂಶ- ಸಾಂದ್ರವಾಗಿವೆ ಮತ್ತು ಆರೋಗ್ಯಕರ ಆಹಾರದ ಭಾಗವಾಗಬಹುದು. ಅವುಗಳನ್ನು ಸಾಮಾನ್ಯವಾಗಿ ಹೆಪ್ಪುಗಟ್ಟಿದ ಪ್ಯೂರಿ, ಒಣಗಿದ ಪುಡಿ ಅಥವಾ ಅದರ ಪೂರಕಗಳಾಗಿ ಮಾರಾಟ ಮಾಡಲಾಗುತ್ತದೆ. ನೀವು ಅವುಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಬಹುದು. ಆದರೆ ಅದಕ್ಕೂ ಮೊದಲು ನಿಮ್ಮ ವೈದ್ಯರ ಸಲಹೆ ಪಡೆದುಕೊಳ್ಳಬೇಕು.

ಅಕಾಯ್ ಬೆರ್ರಿಗಳ ಅಡ್ಡಪರಿಣಾಮಗಳು ಯಾವುವು?

ಸಮತೋಲಿತ ಆಹಾರದ ಭಾಗವಾಗಿ ಸೇವಿಸಿದಾಗ ಅಕಾಯ್ ಬೆರ್ರಿಗಳನ್ನು ಸಾಮಾನ್ಯವಾಗಿ ಸುರಕ್ಷಿತವೆಂದು ಪರಿಗಣಿಸಲಾಗುತ್ತದೆ. ಆದರೆ ನೀವು ತಿಳಿದಿರಬೇಕಾದ ಕೆಲವು ಅಡ್ಡಪರಿಣಾಮಗಳು ಇಲ್ಲಿವೆ;

1. ಅಲರ್ಜಿಗಳು

ಕೆಲವು ವ್ಯಕ್ತಿಗಳಿಗೆ ಅಕಾಯ್ ಬೆರ್ರಿಗಳನ್ನು ಸೇವನೆ ಮಾಡುವುದರಿಂದ ಅಲರ್ಜಿ ಉಂಟಾಗಬಹುದು. ಆದ್ದರಿಂದ ಸೇವನೆ ಮಾಡುವಾಗ ಸ್ವಲ್ಪ ಪ್ರಮಾಣದಲ್ಲಿ ಸೇವನೆ ಮಾಡಿ ನೋಡಿ. ಬಳಿಕ ಇದನ್ನು ದೈನಂದಿನ ಆಹಾರದಲ್ಲಿ ಸೇರಿಸಿಕೊಳ್ಳಲು ಪ್ರಯತ್ನಿಸಿ.

2. ಜೀರ್ಣಕಾರಿ ಸಮಸ್ಯೆಗಳು

ಅಕಾಯ್ ಪೂರಕಗಳು ಕೆಲವೊಮ್ಮೆ ಸೌಮ್ಯ ಜೀರ್ಣಕಾರಿ ಅಸ್ವಸ್ಥತೆಯನ್ನು ಉಂಟು ಮಾಡಬಹುದು, ವಿಶೇಷವಾಗಿ ದೊಡ್ಡ ಪ್ರಮಾಣದಲ್ಲಿ ತೆಗೆದುಕೊಂಡರೆ ಮಾತ್ರ. ಇಂತಹ ತೊಡಕುಗಳನ್ನು ತಪ್ಪಿಸಲು ಶಿಫಾರಸು ಮಾಡಿದ ಡೋಸೇಜ್ ನೊಂದಿಗೆ ಪ್ರಾರಂಭಿಸಿ.

ಇತರ ಸೂಪಫುಡ್​​​ಗಳು, ಉತ್ತಮ ಆರೋಗ್ಯಕ್ಕಾಗಿ ಅಕಾಯ್ ಬೆರ್ರಿಗಳನ್ನು ಸಹ ಮಿತವಾಗಿ ಸೇವನೆ ಮಾಡಬೇಕು.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ