Swami Vivekananda Birth Anniversary: ಸ್ವಾಮಿ ವಿವೇಕಾನಂದರು ಯುವಜನತೆಗೆ ನೀಡಿರುವ ಪ್ರೇರಣಾದಾಯಕ ಸಂದೇಶಗಳು ಇಲ್ಲಿವೆ
ವಿಶ್ವದ ಶ್ರೇಷ್ಠ ಸಾಧಕರ ಸಾಲಿನಲ್ಲಿ ನಿಲ್ಲುವ ಜಗತ್ತಿನ ಆಧ್ಯಾತ್ಮಿಕ ನಾಯಕ ಸ್ವಾಮಿ ವಿವೇಕಾನಂದರು. ಅಂತಹ ತೇಜಸ್ವಿ ಸಾಧಕ ಸಂತರ ನುಡಿ ಸದಾ ಪ್ರೇರಣಾದಾಯಿಕವಾಗಿರುತ್ತದೆ. ಸ್ವಾಮಿ ವಿವೇಕಾನಂದರು ಯುವಜನತೆಗೆ ನೀಡಿದ ಸಂದೇಶಗಳು ಇಲ್ಲಿವೆ.
ರಾಷ್ಟ್ರೀಯ ಯುವ ದಿನ ಅಥವಾ ಸ್ವಾಮಿ ವಿವೇಕಾನಂದರ ಜನ್ಮ ದಿನವನ್ನು ಪ್ರತಿ ವರ್ಷ ಜನವರಿ 12 ಆಚರಿಸಲಾಗುತ್ತದೆ. ರಾಷ್ಟ್ರೀಯ ಯುವ ದಿನದಂದು ದೇಶಾದ್ಯಂತ ಶಾಲಾ ಕಾಲೇಜುಗಳಲ್ಲಿ ಭಾಷಣ, ಗೋಷ್ಠಿಗಳು, ಯು ಸಮ್ಮೇಳನಗಳು, ವಿಚಾರಗೋಷ್ಠಿಗಳು, ಪ್ರಬಂಧ ಬರಹ ಸೇರಿದಂತೆ ಅನೇಕ ಸ್ಪರ್ಧೆಗಳು ಮತ್ತು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ವಿವೇಕಾನಂದರು 1863ರ ಜನವರಿ 12 ರಂದು ಕೊಲ್ಕೊತ್ತಾದಲ್ಲಿ ಜನಿಸಿದರು. ಇವರ ಮೊದಲ ಹೆಸರು ನರೇಂದ್ರನಾಥ ದತ್ತಾ. ಇವರ ತಂದೆ ವಿಶ್ವನಾಥ ದತ್ತ, ಇವರ ತಾಯಿ ಭುವನೇಶ್ವರಿ ದೇವಿ. ವಿಶ್ವದ ಶ್ರೇಷ್ಠ ಸಾಧಕರ ಸಾಲಿನಲ್ಲಿ ನಿಲ್ಲುವ ಜಗತ್ತಿನ ಆಧ್ಯಾತ್ಮಿಕ ನಾಯಕ ಸ್ವಾಮಿ ವಿವೇಕಾನಂದರು. ಅಂತಹ ತೇಜಸ್ವಿ ಸಾಧಕ ಸಂತರ ನುಡಿ ಸದಾ ಪ್ರೇರಣಾದಾಯಿಕವಾಗಿರುತ್ತದೆ. ಸ್ವಾಮಿ ವಿವೇಕಾನಂದರು ಯುವಜನತೆಗೆ ನೀಡಿದ ಸಂದೇಶಗಳು ಇಲ್ಲಿವೆ.
ಸ್ವಾಮಿ ವಿವೇಕಾನಂದರು ಯುವಜನತೆಗೆ ನೀಡಿರುವ ಪ್ರೇರಣಾದಾಯಿಕ ಸಂದೇಶಗಳು:
- ‘ಏಳಿ, ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ’.
- ‘ಗುರು ಎಂದರೆ ಒಬ್ಬ ವ್ಯಕ್ತಿಯಲ್ಲ, ಒಂದು ಶಕ್ತಿ. ಅಜ್ಞಾನದ ಕತ್ತಲೆಯನ್ನು ಕಳೆದು ಸುಜ್ಞಾನದ ಕಡೆಗೆ ಕರೆದೊಯ್ಯುವುದೇ ಗುರು’.
- ‘ನಿಮ್ಮ ಮೇಲೆ ನೀವು ನಂಬಿಕೆ ಇಡಿ ಆಗ ಜಗತ್ತು ನಿಮ್ಮ ಪಾದದಡಿಯಲ್ಲಿರುತ್ತದೆ’.
- ‘ಶಿಕ್ಷಣ ಎಂಬುದು ಮನುಷ್ಯನೊಳಗೆ ಹುದುಗಿದ್ದ ಪರಿಪೂರ್ಣತೆಯನ್ನು ಅಭಿವ್ಯಕ್ತಿಗೊಳಿಸುವ ಪ್ರಯತ್ನ’.
- ‘ಒಂದು ಸಾಮಾನ್ಯ ಕೆಲಸವನ್ನು ಅತ್ಯುತ್ತಮವಾಗಿ ಮಾಡುವುದರಿಂದ ಶ್ರೇಷ್ಠ ಪ್ರತಿಫಲ ದೊರಕುತ್ತದೆ’.
- ‘ನನಗೆ ಬೇಕಾದುದು ಕಬ್ಬಿಣದ ಸ್ನಾಯುಗಳು, ಉಕ್ಕಿನ ನರಗಳು ಮತ್ತು ಸಿಡಿಲಿನಂಥ ಮನಸ್ಸುಗಳು. ಅಂತಹ ಕೆಲವೇ ತರುಣರಿಂದ ದೇಶದ ಭವಿಷ್ಯವನ್ನೇ ಬದಲಾಯಿಸಬಲ್ಲೇ’.
- ‘ವಿಸ್ತಾರವಾಗುತ್ತ ಹೋಗುವುದು ಜೀವನ. ಸಂಕುಚಿತವಾಗುತ್ತ ಸಾಗುವುದೇ ಸಾವು. ಪ್ರೀತಿಯೇ ಜೀವನ, ದ್ವೇಷವೇ ಸಾವು’.
- ‘ಶತಮೂರ್ಖ ಕೂಡ ತನ್ನ ಹೃದಯಕ್ಕೆ ಹತ್ತಿರವಾದ ಕೆಲಸವನ್ನು ಸಾಧಿಸಬಲ್ಲ. ಆದರೆ ಕೆಲಸವನ್ನು ತನ್ನ ಅಭಿರುಚಿಗೆ ತಕ್ಕಂತೆ ರೂಪಿಸುವವನು ಮಾತ್ರ ಬುದ್ಧಿವಂತ’.
- ‘ಸಾಧ್ಯವೇ ಇಲ್ಲ ಎಂದರೆ ಏನನ್ನೂ ಸಾಧಿಸಲಾಗದು. ಪ್ರಯತ್ನದಿಂದ ನಷ್ಟವೇನಿದೆ? ಗೆದ್ದರೆ ಸಂತೋಷ ಸಿಗುವುದು, ಸೋತರೆ ಅನುಭವ ಖಚಿತ’.
ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: