Sign In

By signing in or creating an account, you agree with Associated Broadcasting Company's Terms & Conditions and Privacy Policy.

Teachers Day 2023: ಶಿಕ್ಷಕರ ದಿನದಂದು ನಿಮ್ಮ ಗುರುಗಳಿಗೆ ಈ ರೀತಿ ಶುಭಾಶಯಗಳನ್ನು ತಿಳಿಸಿ

ಗುರುವನ್ನು ದೇವರಿಗೆ ಹೋಲಿಸಲಾಗುತ್ತದೆ. ಅಜ್ಞಾನದ ಕತ್ತಲೆಯಿಂದ ಜ್ಞಾನವೆಂಬ ಬೆಳಕಿನೆಡೆಗೆ ಕೊಂಡೊಯ್ದು ಬದುಕನ್ನು ಉತ್ತಮವಾಗಿ ರೂಪಿಸುವಲ್ಲಿ ಅವರು ಪ್ರಮುಖ ಪಾತ್ರವನ್ನು ವಹಿಸುತ್ತಾರೆ. ಯಾವುದೇ ಸ್ವಾರ್ಥವಿಲ್ಲದೆ ವಿದ್ಯಾರ್ಥಿ ಜೀವನವನ್ನು ಸಕರಾತ್ಮಕತೆಯತ್ತ ಕೊಂಡೊಯ್ಯುವಲ್ಲಿ ಪೋಷಕರ ನಂತರ ಶಿಕ್ಷಕರು ಮಾತ್ರ ಸಹಾಯ ಮಾಡಬಲ್ಲರು. ಹೀಗೆ ನಿಮ್ಮ ಭವಿಷ್ಯವನ್ನು ರೂಪಿಸಿದ ಶಿಕ್ಷಕರಿಗೆ ಧನ್ಯವಾದವನ್ನು ತಿಳಿಸುವ ಮೂಲಕ ಈ ರೀತಿಯಾಗಿ ಶಿಕ್ಷಕರ ದಿನಾಚರಣೆಯ ಶುಭಾಶಯಗಳನ್ನು ಕೋರಿ.

Teachers Day 2023: ಶಿಕ್ಷಕರ ದಿನದಂದು ನಿಮ್ಮ ಗುರುಗಳಿಗೆ  ಈ ರೀತಿ ಶುಭಾಶಯಗಳನ್ನು ತಿಳಿಸಿ
ಶಿಕ್ಷಕರ ದಿನಾಚರಣೆImage Credit source: jobstamil
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on: Sep 05, 2023 | 10:20 AM

ಪ್ರತಿವರ್ಷ ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನ (Teachers Day)ವನ್ನು ಆಚರಿಸಲಾಗುತ್ತದೆ. ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸಲಾಗುತ್ತದೆ. ಶಿಕ್ಷಕರ ದಿನಾಚರಣೆ ಕೇವಲ ಒಂದು ಆಚರಣೆಯಲ್ಲ. ನಮ್ಮ ಜೀವನದಲ್ಲಿ ಶಿಕ್ಷಕರ ಮಹತ್ವವನ್ನು ನೆನೆಪಿಸಿಕೊಳ್ಳುವ ದಿನ. ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವಲ್ಲಿ ಶಿಕ್ಷಕರ ನಿಸ್ವಾರ್ಥ ಸೇವೆ, ಮಕ್ಕಳ ಉಜ್ವಲ ಭವಿಷ್ಯವನ್ನು ರೂಪಿಸುವಲ್ಲಿ ಅವರ ಪಾತ್ರ ಮತ್ತು ಒಟ್ಟಾರೆಯಾಗಿ ವ್ಯಕ್ತಿಗಳು ಮತ್ತು ಸಮಾಜದ ಮೇಲೆ ಶಿಕ್ಷಕರು ಬೀರುವ ಸಕರಾತ್ಮಕ ಪ್ರಭಾವವನ್ನು ಗುರುತಿಸುವ ದಿನವಾಗಿದೆ. ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುವ ಶಿಕ್ಷಕರಿಗೆ ಧನ್ಯವಾದವನ್ನು ತಿಳಿಸುವ ಮೂಲಕ ಈ ರೀತಿಯಾಗಿ ಶಿಕ್ಷಕರ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿ.

ನಿಮ್ಮ ನೆಚ್ಚಿನ ಗುರುಗಳಿಗೆ ಶಿಕ್ಷಕರ ದಿನದಂದು ಹೀಗೆ ಶುಭಾಶಯಗಳನ್ನು ಕೋರಿ:

  1. ಗುರುಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ ಗುರು ಸಾಕ್ಷಾತ್ ಪರ ಬ್ರಹ್ಮ ತಸ್ಮೈ ಶ್ರೀ ಗುರುವೇ ನಮಃ ನನಗೆ ಜ್ಞಾನ ಮತ್ತ ಜೀವನದ ಮೌಲ್ಯವನ್ನು ಕಲಿಸಿದ ಗುರುಗಳಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು
  2. ತಾಯಿ ಜೀವ ಕೊಡುತ್ತಾಳೆ, ತಂದೆ ಭದ್ರತೆ ನೀಡುತ್ತಾರೆ,ಆದರೆ ಶಿಕ್ಷಕರು ಈ ಸಮಾಜದಲ್ಲಿ ಹೇಗೆ ಬದುಕಬೇಕು ಎಂಬುದನ್ನು ಕಲಿಸುತ್ತಾರೆ. ನನ್ನ ಜೀವನವನ್ನು ರೂಪಿಸಿದ ನನ್ನ ನೆಚ್ಚಿನ ಶಿಕ್ಷಕರಾದ ನಿಮಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು.
  3. ನನಗೆ ಜೀವನ ಪಾಠವನ್ನು ಕಲಿಸಿದಂತಹ, ನನ್ನ ಪ್ರತಿಯೊಂದು ಹೆಜ್ಜೆಯಲ್ಲೂ ನನಗೆ ಬೆನ್ನೆಲುಬಾಗಿ ನಿಂತ ನನ್ನ ತಂದೆ ತಾಯಿ, ಗುರುಗಳು ಮತ್ತು ನನ್ನ ಸ್ನೇಹಿತರಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು.
  4.  ಅಜ್ಞಾನದ ಕತ್ತಲೆಯಿಂದ ಜ್ಞಾನವೆಂಬ ಬೆಳಕನ್ನು ಬೆಳಗಿಸಿದ ನನ್ನೆಲ್ಲಾ ಗುರುಗಳಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು.
  5. ನೀವು ಕೇವಲ ಶಿಕ್ಷಕರಲ್ಲ; ನೀವು ನನ್ನ ಸ್ನೇಹಿತ ನನ್ನ ಮಾರ್ಗದರ್ಶಿ, ಸದಾ ನನ್ನ ಏಳಿಗೆಯನ್ನು ಬಯಸುವ ನನ್ನ ನೆಚ್ಚಿನ ಗುರುಗಳಿಗೆ ಶಿಕ್ಷಕರ ದಿನದ ಶುಭಾಶಯಗಳು
  6. ನನ್ನನ್ನು ತಿದ್ದಿ ತೀಡಿ, ನನ್ನೆಲ್ಲಾ ಸಾಧನೆಗೆ ಸ್ಪೂರ್ತಿಯಾಗಿ ನಿಂತ, ನನ್ನ ಎಲ್ಲಾಗುರುಗಳಿಗೂ ಶಿಕ್ಷಕರ ದಿನಾಚರಣೆಯ ಶುಭಾಶಯಗಳು.
  7. ಗುರಿಯನ್ನು ಸಾಧಿಸಲು ನೀವು ನನಗೆ ಬೆಂಬಲ ನೀಡಿದ್ದೀರೀ. ಪ್ರತಿ ಬಾರಿಯೂ ನಾನು ಸೋಲನುಭವಿಸಿದಾಗಲೆಲ್ಲಾ ನೀವು ನನಗೆ ಧೈರ್ಯ ತುಂಬಿದ್ದೀರಿ. ಶಿಕ್ಷಕರ ದಿನಾಚರಣೆಯ ಶುಭಾಶಯಗಳು
  8. ನಮಗೆ ಜ್ಞಾನವನ್ನು ನೀಡಿ, ಉತ್ತಮ ಭವಿಷ್ಯಕ್ಕಾಗಿ ನಮ್ಮನ್ನು ಸಿದ್ಧಗೊಳಿಸಿದ ಎಲ್ಲಾ ಗುರುಗಳಿಗೆ ನನ್ನ ಕೃತಜ್ಞತೆಗಳು, ನನ್ನೆಲ್ಲಾ ನೆಚ್ಚಿನ ಗುರುಗಳಿಗೆ ಶಿಕ್ಷಕರ ದಿನದ ಶುಭಾಶಯಗಳು.
  9.  ಜೀವನದಲ್ಲಿ ಶಿಸ್ತು, ಏನಾದರೂ ಸಾಧಿಸಬೇಕೆಂಬ ಹಠವನ್ನು ಕಲಿಸಿದ ನಿಮಗೆ ಶಿಕ್ಷಕರ ದಿನದ ಶುಭಾಶಯಗಳು

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​  ಮಾಡಿ: 

ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ