AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Teachers’ Day 2026: ನಿಮ್ಮ ನೆಚ್ಚಿನ ಗುರುಗಳಿಗೆ ಈ ಗಿಫ್ಟ್‌ಗಳನ್ನು ನೀಡಿದ್ರೆ ಖುಷಿಯಾಗ್ತಾರೆ

ಸೆಪ್ಟೆಂಬರ್ 5ರಂದು ಶಿಕ್ಷಕ, ವಿದ್ವಾಂಸ ಹಾಗೂ ತತ್ವಜ್ಞಾನಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ. ರಾಧಾಕೃಷ್ಣನ್ ಜನ್ಮದಿನವನ್ನು ಶಿಕ್ಷಕರ ದಿನ ಎಂದು ದೇಶದೆಲ್ಲೆಡೆ ಆಚರಿಸಲಾಗುತ್ತದೆ. ಈ ವಿಶೇಷ ದಿನದಂದು ಮಕ್ಕಳು ತಮ್ಮ ಪ್ರೀತಿಯ ಶಿಕ್ಷಕರಿಗೆ ವಿವಿಧ ಉಡುಗೊರೆಗಳನ್ನು ನೀಡುತ್ತಾರೆ. ಈ ನೀವು ನಿಮ್ಮ ನೆಚ್ಚಿನ ಗುರುಗಳಿಗೆ ಈ ಗಿಫ್ಟ್‌ ನೀಡಿ ಖುಷಿ ಪಡಿಸಬಹುದು. ಗಿಫ್ಟ್ ಐಡಿಯಾಸ್ ಈ ಕೆಳಗಿದೆ.

Teachers’ Day 2026: ನಿಮ್ಮ ನೆಚ್ಚಿನ ಗುರುಗಳಿಗೆ ಈ ಗಿಫ್ಟ್‌ಗಳನ್ನು ನೀಡಿದ್ರೆ ಖುಷಿಯಾಗ್ತಾರೆ
ಸಾಂದರ್ಭಿಕ ಚಿತ್ರImage Credit source: Elisa Schu/picture alliance via Getty Images
ಸಾಯಿನಂದಾ
|

Updated on: Sep 04, 2026 | 3:57 PM

Share

ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಆದರೆ ಈ ಮಕ್ಕಳಿಗೆ ಶಿಕ್ಷಣದ ಜತೆಗೆ ಸರಿಯಾದ ಮಾರ್ಗದರ್ಶನ ನೀಡಿ ಬದುಕು ಕಟ್ಟಿಕೊಳ್ಳಲು ಸಹಾಯ ಮಾಡುವವರೇ ಈ ಶಿಕ್ಷಕರು. ಪ್ರತಿಯೊಬ್ಬ ವಿದ್ಯಾರ್ಥಿಯ ಭವಿಷ್ಯವನ್ನು ಉತ್ತಮವಾಗಿ ರೂಪಿಸುವಲ್ಲಿ, ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ನೀಡುವಲ್ಲಿ ಶಿಕ್ಷಕರ ಪಾತ್ರವು ಬಹುದೊಡ್ಡದು. ಶಿಕ್ಷಕರಿಗೆ ಗೌರವ ಸಲ್ಲಿಸಲುವ ಸಲುವಾಗಿ ನಮ್ಮ ಭಾರತದಲ್ಲಿ ಪ್ರತಿವರ್ಷ ಸೆಪ್ಟೆಂಬರ್‌ 05 ರಂದು ಶಿಕ್ಷಕರ ದಿನಾಚರಣೆಯನ್ನು (Teachers’ Day) ಆಚರಿಸಲಾಗುತ್ತದೆ. ಈ ವಿಶೇಷ ದಿನದಂದು ನಿಮ್ಮ ಪ್ರೀತಿಯ ಶಿಕ್ಷಕರಿಗೆ ವಿವಿಧ ಗಿಫ್ಟ್‌ಗಳನ್ನು ನೀಡಿ ಶುಭಾಶಯಗಳನ್ನು ಕೋರಬಹುದು.

ಶಿಕ್ಷಕರ ದಿನಾಚರಣೆಯ ಇತಿಹಾಸವೇನು?

ರಾಧಕೃಷ್ಣನ್ ಅತ್ಯುತ್ತಮ ಶಿಕ್ಷಕ, ತತ್ವಜ್ಞಾನಿ, ರಾಷ್ಟ್ರಪತಿ ಹಾಗೂ ಉಪರಾಷ್ಟ್ರಪತಿ ಆಗಿದ್ದವರು. 1952 ರಿಂದ 1962 ರವರೆಗೆ ಭಾರತದ ಮೊದಲ ಉಪರಾಷ್ಟ್ರಪತಿಗಳಾಗಿ ಸೇವೆ ಸಲ್ಲಿಸಿದ ಅವರು 1962 ರಲ್ಲಿ ಭಾರತದ ಎರಡನೇಯ ರಾಷ್ಟ್ರಪತಿಯಾಗಿ ಆಯ್ಕೆಯಾದರು. ಭಾರತದ ಅಧ್ಯಕ್ಷರಾದಾಗ, ಅವರ ಕೆಲವು ವಿದ್ಯಾರ್ಥಿಗಳು ಅವರ ಜನ್ಮದಿನವನ್ನು ಆಚರಿಸಲು ಬಯಸಿದರು. ಅವರು “ನನ್ನ ಜನ್ಮದಿನವನ್ನು ಆಚರಿಸಲು ಬದಲಾಗಿ 5 ಸೆಪ್ಟೆಂಬರ್ ನ್ನು ಶಿಕ್ಷಕರ ದಿನವಾಗಿ ಆಚರಿಸಿದರೆ ಅದು ನನಗೆ ಹೆಮ್ಮೆಯಾಗುತ್ತದೆ” ಎಂದು ಉತ್ತರಿಸಿದ್ದರು. ಹೀಗಾಗಿ ಸೆಪ್ಟೆಂಬರ್ 5 , 1962 ರಲ್ಲಿ ಮೊದಲ ಬಾರಿಗೆ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಅಂದಿನಿಂದ ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನವನ್ನು ಆಚರಣೆ ಮಾಡಲಾಗುತ್ತಿದೆ.

ಶಿಕ್ಷಕರ ದಿನಾಚರಣೆಯ ಮಹತ್ವ, ಆಚರಣೆ ಹೇಗೆ?

ಮಕ್ಕಳ ಭವಿಷ್ಯ ನಿರ್ಮಿಸುವಲ್ಲಿ ಶಿಕ್ಷಕರ ಪಾತ್ರ ಅಗಾಧವಾಗಿದ್ದು, ಅವರನ್ನು ಗೌರವ ಸಲ್ಲಿಸುವ ನಿಟ್ಟಿನಲ್ಲಿ ಈ ದಿನವು ಮಹತ್ವದ್ದಾಗಿದೆ. ಈ ವಿಶೇಷ ದಿನದಂದು ಶಾಲಾ ಕಾಲೇಜುಗಳಲ್ಲಿ ಅದ್ದೂರಿಯಾಗಿ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಭಾರತದಲ್ಲಿ ಶಿಕ್ಷಕರ ದಿನಾಚರಣೆಯ ಸಲುವಾಗಿ ರಾಷ್ಟ್ರಪತಿಗಳಿಂದ ಪ್ರತಿಭಾನ್ವಿತ ಶಿಕ್ಷಕರಿಗೆ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.

ನಿಮ್ಮ ಪ್ರೀತಿಯ ಶಿಕ್ಷಕರಿಗೆ ನೀಡಬಹುದಾದ ಗಿಫ್ಟ್‌ ಐಡಿಯಾಸ್‌

ಫೋಟೋ ಫ್ರೇಮ್:‌ ಗುರುಗಳಿಗೆ ಫೋಟೋ ಫ್ರೇಮ್‌ ಉಡುಗೊರೆಯಾಗಿ ನೀಡಬಹುದು. ಗುರುಗಳೊಂದಿಗೆ ನೀವು ತೆಗೆಸಿಕೊಂಡಿದ್ದ ಫೋಟೋಗಳಿದ್ದರೆ ಫ್ರೇಮ್ ಮಾಡಿಕೊಡಬಹುದು.

ಹೂವಿನ ಗಿಡ: ನಿಮ್ಮ ನೆಚ್ಚಿನ ಗುರುಗಳಿಗೆ ಹೂವಿನ ಗಿಡವನ್ನು ಗಿಫ್ಟ್‌ ಆಗಿ ನೀಡಬಹುದು. ಪ್ರತಿದಿನ ಗಿಡಕ್ಕೆ ನೀರು ಹಾಕಿ ಆರೈಕೆ ಮಾಡುವ ವೇಳೆ ಗುರುಗಳಿಗೆ ನಿಮ್ಮ ನೆನಪಾಗುತ್ತದೆ.

ಪೆನ್ ಮತ್ತು ಡೈರಿ: ಹೆಚ್ಚಿನ ಶಿಕ್ಷಕರಿಗೆ ಡೈರಿ ಬರೆಯುವ ಅಭ್ಯಾಸವಿರುತ್ತದೆ. ಹೀಗಾಗಿ ನೀವು ಉಡುಗೊರೆಯನ್ನು ಶಿಕ್ಷಕರಿಗೆ ನೀಡಬಹುದು. ಈ ಗಿಫ್ಟ್ ಯೋಚನೆ ಹಳೆಯದಾಗಿದ್ದರೂ, ಶಿಕ್ಷಕರಿಗೆ ಇಷ್ಟವಾಗುತ್ತದೆ.

ಪುಸ್ತಕ: ಶಿಕ್ಷಕರು ಪುಸ್ತಕ ಓದಲು ಇಷ್ಟ ಪಡುತ್ತಾರೆ. ಹೀಗಾಗಿ ನಿಮ್ಮ ಶಿಕ್ಷಕರಿಗೆ ಅವರ ನೆಚ್ಚಿನ ಲೇಖಕರ ಅಥವಾ ಉತ್ತಮ ಪುಸ್ತಕವನ್ನು ಉಡುಗೊರೆಯಾಗಿ ನೀಡಬಹುದು.

ಇದನ್ನೂ ಓದಿ: Krishna Janmashtami 2026: ಜನ್ಮಾಷ್ಟಮಿಯಂದು ಶ್ರೀಕೃಷ್ಣನಿಗೆ ಈ ನೈವೇದ್ಯಗಳನ್ನು ಅರ್ಪಿಸಲೇಬೇಕು

ಗ್ರೀಟಿಂಗ್ ಕಾರ್ಡ್: ನೀವೇ ಸ್ವತಃ ತಯಾರಿಸಿದ ಕಾರ್ಡ್ ಮೇಲೆ ಗುರುಗಳ ಬಗ್ಗೆ ಕೃತಜ್ಞತೆಯ ಮಾತುಗಳನ್ನು ನಿಮ್ಮ ಕೈಯಾರೆ ಬರೆದು ಕೊಟ್ಟರೆ ಖುಷಿ ಪಡುತ್ತಾರೆ. ಇದು ಯಾವುದೇ ದುಬಾರಿ ಉಡುಗೊರೆಗಳಿಗಿಂತ ಕಡಿಮೆಯಿಲ್ಲ.

ಇನ್ನಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನಿರುದ್ಯೋಗಿ ಯುವಕ ಯುವತಿಯರೇ ಟಾರ್ಗೆಟ್: ಈತನ ಮೊಬೈಲ್​​​ನಲ್ಲಿ ಶಾಕಿಂಗ್ ಅಂಶ
ನಿರುದ್ಯೋಗಿ ಯುವಕ ಯುವತಿಯರೇ ಟಾರ್ಗೆಟ್: ಈತನ ಮೊಬೈಲ್​​​ನಲ್ಲಿ ಶಾಕಿಂಗ್ ಅಂಶ
ಕೃಷ್ಣ ಜನ್ಮಾಷ್ಟಮಿ; ಗೋಪೂಜೆ ಸಲ್ಲಿಸಿದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ
ಕೃಷ್ಣ ಜನ್ಮಾಷ್ಟಮಿ; ಗೋಪೂಜೆ ಸಲ್ಲಿಸಿದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ
ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ 9 ವರ್ಷ ಕಳೆದರೂ ಜನರಿಗೆ ತಪ್ಪದ ಪರದಾಟ!
ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ 9 ವರ್ಷ ಕಳೆದರೂ ಜನರಿಗೆ ತಪ್ಪದ ಪರದಾಟ!
15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಆಕಾಂಕ್ಷಿಗಳ ಪರದಾಟ
15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಆಕಾಂಕ್ಷಿಗಳ ಪರದಾಟ
4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್!
4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್!
ಮೈಸೂರು ದಸರಾ 2026: ಶ್ರೀಕಂಠ ಪಟ್ಟದ ಆನೆ, ಏಕಲವ್ಯ ನಿಶಾನೆ ಆನೆಯಾಗಿ ಆಯ್ಕೆ
ಮೈಸೂರು ದಸರಾ 2026: ಶ್ರೀಕಂಠ ಪಟ್ಟದ ಆನೆ, ಏಕಲವ್ಯ ನಿಶಾನೆ ಆನೆಯಾಗಿ ಆಯ್ಕೆ
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿಯ ಸಂಭ್ರಮ ಹೇಗಿದೆ ನೋಡಿ
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿಯ ಸಂಭ್ರಮ ಹೇಗಿದೆ ನೋಡಿ
ರೈತರಿಗೆ ವಿದ್ಯುತ್ ಕೊಡಲು ಸೋಲಾರ್ ಪ್ಲಾಟ್ ಸ್ಥಾಪಿಸುತ್ತಿದೆ ಎಂಇಐಎಲ್ ಕಂಪನ
ರೈತರಿಗೆ ವಿದ್ಯುತ್ ಕೊಡಲು ಸೋಲಾರ್ ಪ್ಲಾಟ್ ಸ್ಥಾಪಿಸುತ್ತಿದೆ ಎಂಇಐಎಲ್ ಕಂಪನ
ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್ ಕೇಂದ್ರಗಳಲ್ಲಿನ ಮಹೋತ್ಸವದ ವಿವರ
ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್ ಕೇಂದ್ರಗಳಲ್ಲಿನ ಮಹೋತ್ಸವದ ವಿವರ
ರಾಜ್​ಕುಮಾರ್​ಗೆ ಪೌರಾಣಿಕ ಕಥೆ ಹೇಳಿದ್ದ ನಾಗತಿಹಳ್ಳಿ ಚಂದ್ರಶೇಖರ್
ರಾಜ್​ಕುಮಾರ್​ಗೆ ಪೌರಾಣಿಕ ಕಥೆ ಹೇಳಿದ್ದ ನಾಗತಿಹಳ್ಳಿ ಚಂದ್ರಶೇಖರ್