World Population Day 2023: ವಿಶ್ವ ಜನಸಂಖ್ಯಾ ದಿನದ ಆಚರಣೆಯ ಹಿಂದಿನ ಕಾರಣ, ಮಹತ್ವ

| Updated By: ಅಕ್ಷಯ್​ ಪಲ್ಲಮಜಲು​​

Updated on: Jul 10, 2023 | 5:38 PM

ಜನಸಂಖ್ಯೆಯು ನಿರಂತರವಾಗಿ ಹೆಚ್ಚುತ್ತಿದೆ. ಈ ಅಧಿಕ ಜನಸಂಖ್ಯೆಯಿಂದ ಉಂಟಾಗುವ ಸಮಸ್ಯೆಗಳು ಮತ್ತು ಅದು ಒಂದು ದೇಶದ ಅಭಿವೃದ್ಧಿ ಹಾಗೂ ಪರಿಸರದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಜುಲೈ 11 ರಂದು ವಿಶ್ವ ಜನಸಂಖ್ಯಾ ದಿನವನ್ನು ಆಚರಿಸಲಾಗುತ್ತದೆ.

World Population Day 2023: ವಿಶ್ವ ಜನಸಂಖ್ಯಾ ದಿನದ ಆಚರಣೆಯ ಹಿಂದಿನ ಕಾರಣ, ಮಹತ್ವ
ಸಾಂದರ್ಭಿಕ ಚಿತ್ರ
Follow us on

ಯಾವುದೇ ದೇಶದ ಪ್ರಗತಿಗೆ ಮಾನವ ಸಂಪನ್ಮೂಲವು ಅಗತ್ಯವಾಗಿ ಬೇಕಾಗಿದೆ. ಆದರೆ ಅದೇ ಮಾನವ ಸಂಪನ್ಮೂಲದ ಸಂಖ್ಯೆಯು ಹೆಚ್ಚಾದರೆ ಅದು ಅಭಿವೃದ್ಧಿಯ ಬದಲು ಹೆಚ್ಚು ಸಮಸ್ಯೆಗೆ ಕಾರಣವಾಗುತ್ತದೆ. ಪ್ರಸ್ತುತ ಜಾಗತಿಕ ಜನಸಂಖ್ಯೆಯು ದಿನದಿಂದ ದಿನಕ್ಕೆ ಏರುತ್ತಿದೆ. ಜನಸಂಖ್ಯೆಯ ಹೆಚ್ಚಳದೊಂದಿಗೆ, ಅದಕ್ಕೆ ಸಂಬಂಧಿಸಿದ ಸಮಸ್ಯೆಗಳು ಸಹ ಹೆಚ್ಚಾಗುತ್ತಿದೆ. ಬಡನತದಿಂದ ಹಿಡಿದು ಆರ್ಥಿಕತೆಯವರೆಗೆ ಜನಸಂಖ್ಯೆಯ ಹೆಚ್ಚಳದಿಂದ ಹಲವಾರು ಸಮಸ್ಯೆಗಳು ಉದ್ಭವಿಸುತ್ತಿದೆ. ಹೀಗೆ ಹೆಚ್ಚುತ್ತಿರುವ ಜನಸಂಖ್ಯೆಯ ಪರಿಣಾಮ, ಲಿಂಗಸಮಾನತೆ, ಕುಟುಂಬ ಯೋಜನೆಯ ಪ್ರಾಮುಖ್ಯತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿವರ್ಷ ಜುಲೈ 11 ರಂದು ಪ್ರಪಂಚದಾದ್ಯಂತ ವಿಶ್ವ ಜನಸಂಖ್ಯಾ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಜನಸಂಖ್ಯಾ ದಿನದ ಆಚರಣೆಯ ಹಿಂದಿನ ಕಾರಣ ಮತ್ತು ಇತಿಹಾಸ:

ವಾಸ್ತವವಾಗಿ, 1987 ರಲ್ಲಿ, ವಿಶ್ವದ ಜನಸಂಖ್ಯೆಯು 5 ಮಿಲಿಯನ್​​ಗಿಂತಲೂ ದಾಟಿತ್ತು. ಅಂತಹ ಪರಿಸ್ಥಿತಿಯಲ್ಲಿ, ಬೆಳೆಯುತ್ತಿರುವ ಜನಸಂಖ್ಯೆ ಮತ್ತು ನಮ್ಮ ಭೂಮಿಯ, ಅಭಿವೃದ್ಧಿಯ ಮೇಲೆ ಅದರ ಪರಿಣಾಮದ ಬಗ್ಗೆ ಗಮಹರಿಸಬೇಕಾದ ಅಗತ್ಯವಿತ್ತು. ಈ ಕುರಿತು ಇಡೀ ಜಗತ್ತಿಗೆ ಅರಿವು ಮೂಡಿಸಲು ಜನಸಂಖ್ಯಾ ದಿನವನ್ನು ಆಚರಿಸಲು ಆರಂಭಿಸಲಾಯಿತು.
ಜಾಗತಿಕ ಜನಸಂಖ್ಯೆಯ ಸಮಸ್ಯೆಗಳು ಮತ್ತು ಸಾಮಾಜಿಕ, ಆರ್ಥಿಕ ಮತ್ತು ಪರಿಸರದ ಮೇಲೆ ಅವುಗಳ ಪ್ರಭಾವದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಜುಲೈ 11 ರಂದು ವಿಶ್ವ ಜನಸಂಖ್ಯಾ ದಿನವನ್ನು ಆಚರಿಸಲಾಗುತ್ತದೆ. ಜುಲೈ 11, 1987 ರಂದು ವಿಶ್ವದ ಸಂಖ್ಯೆಯು 5 ಬಿಲಿಯನ್ ನಷ್ಟು ತಲುಪಿದ ಕಾರಣ, ವಿಶ್ವ ಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ ಆಡಳಿತ ಮಂಡಳಿಯು 1989 ರಲ್ಲಿ ‘ವಿಶ್ವ ಜನಸಂಖ್ಯಾ ದಿನ’ವನ್ನು ಪ್ರಾರಂಭಿಸಿತ್ತು. ಈ ದಿನವನ್ನು ಡಾ. ಕೆ.ಸಿ ಜಕರಿಯಾ ಅವರು ಸೂಚಿಸಿದರು. ವಿಶ್ವ ಜನಸಂಖ್ಯಾ ದಿನದ ಗುರಿಯು ಕುಟುಂಬ ಯೋಜನೆ, ಲಿಂಗ ಸಮಾನತೆ, ಬಡತನ, ತಾಯಿಯ ಆರೋಗ್ಯ ಮತ್ತು ಮಾನವ ಹಕ್ಕುಗಳ ಮೌಲ್ಯ ಸೇರಿದಂತೆ ಜನಸಂಖ್ಯೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವುದಾಗಿದೆ.

ಇದನ್ನೂ ಓದಿ: ಭಾರತವು ಚೀನಾವನ್ನು ಹಿಂದಿಕ್ಕಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಹೊರಹೊಮ್ಮಲಿದೆ

ವಿಶ್ವ ಜನಸಂಖ್ಯಾ ದಿನದ ಮಹತ್ವ:

ವಿಶ್ವ ಜನಸಂಖ್ಯಾ ದಿನವು ಜಾಗತಿಕ ಜನಸಂಖ್ಯೆಗೆ ಸಂಬಂಧಿಸಿದ ಚಾಲ್ತಿಯಲ್ಲಿರುವ ಸಮಸ್ಯೆಗಳ ಬಗ್ಗೆ ಜನರಿಗೆ ತಿಳುವಳಿಕೆ ಮೂಡಿಸುವುದುರ ಮೇಲೆ ಕೆಂದ್ರೀಕೃತವಾಗಿದೆ. ಇದು ಅಸಮಾನತೆ, ಆರ್ಥಿಕ ಬಿಕ್ಕಟ್ಟುಗಳು ಮತ್ತು ಬಡತನದಂತಹ ವಿವಿಧ ಸವಾಲುಗಳ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ. ಎಲ್ಲರಿಗೂ ಸಮಾನ ಅವಕಾಶಗಳು ಮತ್ತು ಅಪರಿಮಿತ ಸಾಮರ್ಥ್ಯಗಳನ್ನು ಹೊಂದಿರುವ ಭವಿಷ್ಯವನ್ನು ರಚಿಸುವ ದೃಷ್ಟಿಕೋನದೊಂದಿಗೆ ವಿಶ್ವಸಂಸ್ಥೆಯು ವಿಶ್ವ ಜನಸಂಖ್ಯಾ ದಿನವನ್ನು ಆಚರಿಸುತ್ತದೆ. ವಿಶ್ವ ಜನಸಂಖ್ಯಾ ದಿನದ ಉದ್ದೇಶವು ಬಡತನ, ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ಲಿಂಗ ಸಮಾನತೆಯಂತಹ ಜನಸಂಖ್ಯೆಯ ಬೆಳವಣಿಗೆಗೆ ಸಂಬಂಧಿಸಿದ ಸವಾಲುಗಳ ಬಗ್ಗೆ ತಿಳುವಳಿಕೆ ಮೂಡಿಸುವುದಾಗಿದೆ. ಮತ್ತು ಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವುದಾಗಿದೆ. ಸರ್ಕಾರಗಳು ಮತ್ತು ಸಂಘಸಂಸ್ಥೆಗಳು ಕುಟುಂಬ ಯೋಜನೆ ಮತ್ತು ಜನಸಂಖ್ಯೆಯ ನಿಯಂತ್ರಣದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ವಿಶ್ವದಾದ್ಯಂತ ಜಾಗೃತಿ ಕಾರ್ಯಗಳನ್ನು ಆಯೋಜಿಸುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ