AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jaggery Water: ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಲ್ಲದ ನೀರು ಸೇವಿಸುವುದರಿಂದ ಲಭಿಸುತ್ತೆ ಹಲವು ಪ್ರಯೋಜನಗಳು

ಬೆಲ್ಲವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದನ್ನು ನೀರಿನೊಂದಿಗೆ ಬೆರೆಸಿ ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಹಾಗಿದ್ದರೆ, ಬೆಲ್ಲದ ನೀರು ಕುಡಿಯುವುದರಿಂದ ಲಭಿಸುವ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳೋಣ.

Jaggery Water: ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಲ್ಲದ ನೀರು ಸೇವಿಸುವುದರಿಂದ ಲಭಿಸುತ್ತೆ ಹಲವು ಪ್ರಯೋಜನಗಳು
Drinking jaggery waterImage Credit source: Pinterest
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ|

Updated on:Sep 07, 2023 | 4:25 PM

Share

ಬೆಲ್ಲ ನೈಸರ್ಗಿಕ ಸಿಹಿಕಾರಕವಾಗಿದ್ದು, ಇದು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಬೆಲ್ಲದಿಂದ ಚಹಾ ಮತ್ತು ಹಲವು ಖಾದ್ಯಗಳನ್ನು ತಯಾರಿಸಲಾಗುತ್ತದೆ. ಬೆಲ್ಲವು ಪೊಟ್ಯಾಸಿಯಂ, ಕ್ಯಾಲ್ಸಿಯಂ, ಸತು, ರಂಜಕ ಮತ್ತು ತಾಮ್ರದಂತಹ ಜೀವಸತ್ವಗಳು ಮತ್ತು ಖನಿಜಗಳಿಂದ ಕೂಡಿದೆ. ಆದ್ದರಿಂದ ಬೆಲ್ಲದ ಸೇವನೆಯು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಆಯುರ್ವೇದದ ಪ್ರಕಾರ ಬಿಸಿನೀರಿಗೆ ಬೆಲ್ಲವನ್ನು ಬೆರೆಸಿ ಕುಡಿಯುವುದರಿಂದ, ಅದು ನೈಸರ್ಗಿಕ ಜೀರ್ಣಕಾರಿ ಕಿಣ್ವಗಳನ್ನು ಹೆಚ್ಚಿಸುತ್ತದೆ, ಜೀರ್ಣಕ್ರಿಯೆಯನ್ನು ವೇಗಗೊಳಿಸುತ್ತದೆ ಹಾಗೂ ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಹಾಗಾದರೆ ಬೆಳಗ್ಗೆ ಬೆಲ್ಲದ ನೀರನ್ನು ಕುಡಿಯುವುದರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳು ದೊರೆಯುತ್ತದೆ ಮತ್ತು ಅದನ್ನು ಹೇಗೆ ತಯಾರಿಸುವುದು ಎಂಬುದನ್ನು ತಿಳಿಯೋಣ.

ಬೆಲ್ಲದ ನೀರನ್ನು ಹೇಗೆ ತಯಾರಿಸುವುದು:

ರಾತ್ರಿ ಒಂದು ಲೋಟ ನೀರಿನಲ್ಲಿ ಬೆಲ್ಲದ ತುಂಡು ಹಾಕಿ ಮತ್ತು ಅದರಲ್ಲಿ ಸ್ವಲ್ಪ ಪುದೀನ ಮತ್ತು ಕೊತ್ತಂಬರಿ ಸೊಪ್ಪನ್ನು ಹಾಕಿ. ಮರುದಿನ ಬೆಳಗ್ಗೆ ಈ ಎಲ್ಲಾ ಪದಾರ್ಥಗಳನ್ನು ಚೆನ್ನಾಗಿ ಬೆರೆಸಿ ಮತ್ತು ಅದಕ್ಕೆ ನಿಂಬೆ ರಸವನ್ನು ಸೇರಿಸಿ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ.

ಬೆಲ್ಲದ ನೀರು ಕುಡಿಯುವುದರಿಂದ ಲಭಿಸುವ ಆರೋಗ್ಯ ಪ್ರಯೋಜನಗಳು:

ಮೂಳೆಗಳು ಬಲಗೊಳ್ಳುತ್ತವೆ:

ಸಾಮಾನ್ಯವಾಗಿ ಹೆಚ್ಚಿನ ಜನರಲ್ಲಿ ಸಂಧಿವಾತ ಮತ್ತು ಅಸ್ಟಿಯೊಪೊರೋಸಿಸ್ ನಂತಹ ಮೂಳೆ ಸಂಬಂಧಿ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ನಿತ್ಯವೂ ಬೆಲ್ಲವನ್ನು ಸೇವಿಸಿದರೆ ಮೂಳೆಗಳು ಬಲಗೊಳ್ಳುತ್ತವೆ. ಬೆಲ್ಲವು ಉರಿಯೂತ ವಿರೋಧಿ ಗುಣಲಕ್ಷಣಣವನ್ನು ಹೊಂದಿದ್ದು, ಇದು ನೋವು ಕಡಿಮೆ ಮಾಡಲು ಸಹಕಾರಿಯಾಗಿದೆ. ಆದ್ದರಿಂದ ಮೂಳೆ ಸಂಬಂಧಿ ರೋಗಗಳನ್ನು ತಡೆಗಟ್ಟಲು ಬೆಲ್ಲದ ನೀರನ್ನು ತೆಗೆದುಕೊಳ್ಳುವಂತೆ ಆಯುರ್ವೇದ ತಜ್ಞರು ಶಿಫಾರಸು ಮಾಡುತ್ತಾರೆ.

ಚರ್ಮಕ್ಕೆ ತುಂಬಾ ಪ್ರಯೋಜನಕಾರಿ:

ಪ್ರತಿದಿನ ಬೆಲ್ಲದ ನೀರನ್ನು ಸೇವನೆ ಮಾಡುವುದರಿಂದ ತ್ವಚೆಗೆ ಹಲವಾರು ಪ್ರಯೋಜನಗಳು ದೊರೆಯುತ್ತದೆ. ಇದು ಉತ್ಕರ್ಷಣ ನಿರೋಧಕಗಳು ಮತ್ತು ಉರಿಯೂತ ವಿರೋಧಿ ಗುಣಲಕ್ಷಣಗಳನ್ನು ಹೊಂದಿದ್ದು, ಇದು ಚರ್ಮದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರೊಂದಿಗೆ ತ್ವಚೆಯನ್ನು ಹೊಳೆಯುವಂತೆ ಮಾಡಲು ಇದು ಸಹಕಾರಿಯಾಗಿದೆ.

ಇದನ್ನೂ ಓದಿ: ಡ್ರ್ಯಾಗನ್ ಫ್ರೂಟ್​​​ನ ಯಾಕೆ ಸೂಪರ್​​​​​ಪುಡ್​​​​​ ಎನ್ನುತ್ತಾರೆ? ಕಾರಣಗಳು ಇಲ್ಲಿವೆ

ದೇಹದಿಂದ ವಿಷವನ್ನು ಹೊರಹಾಕಲು ಸಹಕಾರಿ:

ಬೆಲ್ಲವು ದೇಹವನ್ನು ಶುದ್ಧೀಕರಿಸುವಲ್ಲಿ ಸಹಾಯ ಮಾಡುವ ಗುಣಗಳನ್ನು ಹೊಂದಿದೆ. ಇದು ನೈಸರ್ಗಿಕವಾಗಿ ದೇಹದಿಂದ ವಿಷವನ್ನು ಹೊರಹಾಕುತ್ತದೆ. ರಕ್ತವನ್ನು ಶುದ್ಧೀಕರಿಸುತ್ತದೆ, ಯಕೃತ್ತನ್ನು ಶುದ್ಧಗೊಳಿಸುತ್ತದೆ. ಅದಕ್ಕಾಗಿಯೇ ಆಯುರ್ವೇದ ತಜ್ಞರು ದೇಹವನ್ನು ನಿರ್ವಿಷಗೊಳಿಸಲು ಬೆಲ್ಲದ ನೀರಿನ ಸಹಾಯವನ್ನು ತೆಗೆದುಕೊಳ್ಳುವಂತೆ ಶಿಫಾರಸು ಮಾಡುತ್ತಾರೆ. ಪ್ರತಿದಿನ ಬೆಳಗ್ಗೆ ಈ ನೀರನ್ನು ಕುಡಿದರೆ ದೇಹದಿಂದ ಹಾನಿಕಾರಕ ಅಂಶಗಳು ಹೊರಹೋಗುತ್ತವೆ.

ಚಯಾಪಚಯ ಮತ್ತು ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ:

ಬೆಲ್ಲವು ಮೆಗ್ನೇಸಿಯಂ, ವಿಟಮಿನ್ ಬಿ1, ವಿಟಮಿನ್ ಬಿ6 ಮತ್ತು ವಿಟಮಿನ್ ಸಿ ಯ ಅತ್ಯುತ್ತಮ ಮೂಲವಾಗಿದೆ. ಹಾಗೂ ಉತ್ಕರ್ಷಣ ನಿರೋಧಕಗಳು, ಸತು, ಸೆಲೆನಿಯಂ ನಂತಹ ಖನಿಜಗಳಿಂದ ಇದು ಸಮೃದ್ಧವಾಗಿದೆ. ಆದ್ದರಿಂದ ನೀವು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಲ್ಲದ ನೀರನ್ನು ಸೇವಿಸಿದರೆ ಅದು ನಿಮ್ಮ ಚಯಾಪಚಯ ಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ರಕ್ತಹೀನತೆಗೆ ಚಿಕಿತ್ಸೆ ನೀಡುತ್ತದೆ:

ರಕ್ತದಲ್ಲಿ ಹಿಮೋಗ್ಲೋಬಿನ್ ಮಟ್ಟ ಕಡಿಮೆಯಿದ್ದರೆ, ಬೆಲ್ಲದ ನೀರನ್ನು ಸೇವನೆ ಮಾಡುವುದು ಉತ್ತಮ. ಏಕೆಂದರೆ ಇದು ಕಬ್ಬಿಣ ಮತ್ತು ಫೋಲೇಟ್ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದು ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಸಹಕಾರಿಯಾಗಿದೆ.

ದೇಹದ ಶಕ್ತಿಯ ಮಟ್ಟವನ್ನು ಹೆಚ್ಚಿಸಲು ಸಹಕಾರಿ:

ಬೆಲ್ಲದ ನೀರನ್ನು ಸೇವಿಸುವುದರಿಂದ ದೇಹದಲ್ಲಿ ಶಕ್ತಿಯ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದನ್ನು ಸೇವಿಸುವುದರಿಂದ ನೀವು ಹೆಚ್ಚು ಕ್ರೀಯಾಶೀಲರಾಗಿ ಮತ್ತು ಉಲ್ಲಾಸದಿಂದಿರುವಿರಿ. ಅದಕ್ಕಾಗಿಯೇ ಇದರ ಸೇವನೆಯು ಪ್ರಯೋಜನಕಾರಿಯಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 4:24 pm, Thu, 7 September 23

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!