World Cancer Day: ಕ್ಯಾನ್ಸರ್ ವಿರುದ್ಧ ಹೋರಾಡುವುದು ಹೇಗೆ? ಈ ರೋಗಕ್ಕೆ ಕಾರಣವಾಗುವ ಅಂಶಗಳಿವು

| Updated By: ಅಕ್ಷಯ್​ ಪಲ್ಲಮಜಲು​​

Updated on: Feb 02, 2024 | 4:40 PM

ಇತ್ತೀಚೆಗಿನ ದಿನಗಳಲ್ಲಿ ಕಾಡುತ್ತಿರುವ ಆರೋಗ್ಯ ಸಮಸ್ಯೆಗಳು ಒಂದೆರಡಲ್ಲ. ಆದರೆ ಕ್ಯಾನ್ಸರ್ ಎನ್ನುವ ಮಹಾಮಾರಿಗೆ ಬಲಿಯಾಗುತ್ತಿರುವವರ ಸಂಖ್ಯೆಯೇ ಹೆಚ್ಚು. ಪ್ರತಿ ಹತ್ತು ಭಾರತೀಯರಲ್ಲಿ ಒಬ್ಬರು ಕ್ಯಾನ್ಸರ್ ಗೆ ತುತ್ತಾಗುತ್ತಿದ್ದಾರೆ. ವಾರ್ಷಿಕವಾಗಿ ನಾನಾ ರೀತಿಯ ಕ್ಯಾನ್ಸರ್ ರೋಗಕ್ಕೆ ತುತ್ತಾಗುವವರ ಸಂಖ್ಯೆಯೂ 16 ಮಿಲಿಯನ್ ಗೂ ಅಧಿಕವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆವು ತಿಳಿಸಿದೆ. ಈ ಮಹಾಮಾರಿಯ ವಿರುದ್ಧ ಹೋರಾಡಲು, ಈ ರೋಗದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಫೆಬ್ರವರಿ 04 ರಂದು ವಿಶ್ವ ಕ್ಯಾನ್ಸರ್ ದಿನವನ್ನು ಆಚರಿಸಲಾಗುತ್ತದೆ.

World Cancer Day: ಕ್ಯಾನ್ಸರ್ ವಿರುದ್ಧ ಹೋರಾಡುವುದು ಹೇಗೆ? ಈ ರೋಗಕ್ಕೆ ಕಾರಣವಾಗುವ ಅಂಶಗಳಿವು
Follow us on

ನಾವಿಂದು ವೇಗವಾದ ಜಗತ್ತಿನಲ್ಲಿದ್ದೇವೆ. ಎಲ್ಲರದರಲ್ಲಿ ವೇಗವಾಗಿರುವ ನಾವುಗಳು ಆರೋಗ್ಯ ಸಮಸ್ಯೆಗಳ ವಿಚಾರದಲ್ಲಿ ವೇಗವಾಗಿದ್ದೇವೆ ಎನ್ನುವುದು ನೋವಿನ ಸಂಗತಿ. ಇತ್ತೀಚೆಗಿನ ಜೀವನ ಶೈಲಿ, ಆಹಾರ ಶೈಲಿಯಿಂದ ಯಾರಿಗೆ ಯಾವ ಕಾಯಿಲೆಯಿದೆ ಎಂದು ಹೇಳುವುದು ಕಷ್ಟವಾಗಿದೆ. ಈಗೀಗ ಎಲ್ಲರೂ ಕೂಡ ಒಂದಲ್ಲ ಒಂದು ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುವವರೇ ಆಗಿದ್ದಾರೆ. ಆದರೆ ಹೆಚ್ಚಿನವರನ್ನು ಬೆಂಬಿಡದಂತೆ ಕಾಡುವ ಸಮಸ್ಯೆಗಳಲ್ಲಿ ಮಾರಣಾಂತಿಕ ಕಾಯಿಲೆಯಾಗಿರುವ ಕ್ಯಾನ್ಸರ್ ಕೂಡ ಒಂದು. ಎಲ್ಲಾ ಕಾಯಿಲೆಗಳಲ್ಲಿ ಕ್ಯಾನ್ಸರ್ ಅತ್ಯಂತ ಅಪಾಯಕಾರಿಯಾಗಿದ್ದು, ಪ್ರತಿ ವರ್ಷ, ಫೆಬ್ರವರಿ 4 ರಂದು ವಿಶ್ವದಾದ್ಯಂತ ವಿಶ್ವ ಕ್ಯಾನ್ಸರ್ ದಿನವನ್ನು ಆಚರಿಸುವ ಮೂಲಕ ಕ್ಯಾನ್ಸರ್ ಕಾಯಿಲೆಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸಗಳು ನಡೆಯುತ್ತಿದೆ.

ವಿಶ್ವ ಕ್ಯಾನ್ಸರ್ ದಿನದ ಇತಿಹಾಸ

ವಿಶ್ವ ಕ್ಯಾನ್ಸರ್ ದಿನವನ್ನು ಪ್ರತಿ ವರ್ಷ ಫೆಬ್ರವರಿ 4 ರಂದು ಆಚರಿಸುತ್ತ ಬರಲಾಗುತ್ತಿದೆ. 2000 ಫೆಬ್ರವರಿ 4 ರಂದು ವಿಶ್ವ ಶೃಂಗಸಭೆಯಲ್ಲಿ ವಿಶ್ವ ಕ್ಯಾನ್ಸರ್ ದಿನವು ಅಸ್ತಿತ್ವಕ್ಕೆ ಬಂದಿತು. ಪ್ಯಾರಿಸ್ ನಲ್ಲಿ ನಡೆದ ಶೃಂಗಸಭೆಯಲ್ಲಿ ಯುನಿಯನ್ ಫಾರ್ ಇಂಟರ್ ನ್ಯಾಷನಲ್ ಕ್ಯಾನ್ಸರ್ ಕಂಟ್ರೋಲ್ (ಯುಐಸಿ) ಮೂಲಕ ವಿಶ್ವ ಕ್ಯಾನ್ಸರ್​ ದಿನ ಆಚರಣೆಯನ್ನು ಜಾರಿಗೆ ತರಲಾಯಿತು. ಈ ದಿನದ ಆಚರಣೆಯೂ ರೋಗದ ಬಗ್ಗೆ ಜಾಗೃತಿ ಮೂಡಿಸುವುದು, ರೋಗವನ್ನು ಹೇಗೆ ತಡೆಗಟ್ಟುವುದು ಹಾಗೂ ರೋಗವನ್ನು ಪತ್ತೆ ಹಚ್ಚಿ ಚಿಕಿತ್ಸೆಯನ್ನು ನೀಡುವುದನ್ನು ಉತ್ತೇಜಿಸುವ ಉದ್ದೇಶವನ್ನು ಹೊಂದಿದೆ.

ಇದನ್ನೂ ಓದಿ: ಅಲೋವೆರಾದಿಂದ ಮನೆ ಮದ್ದು ತಯಾರಿಸಿ, ಆರೋಗ್ಯ ಸಮಸ್ಯೆಗಳನ್ನು ದೂರವಾಗಿಸಿ

ವಿಶ್ವ ಕ್ಯಾನ್ಸರ್ ದಿನದ ಮಹತ್ವ

ವಿಶ್ವ ಕ್ಯಾನ್ಸರ್​ ದಿನವನ್ನು 2022- 2024 ರವರೆಗೆ ಕ್ಲೋಸ್​ ದಿ ಕೇರ್​ ಗ್ಯಾಪ್​ ಎನ್ನುವ ಥೀಮ್​ ನಡಿಯಲ್ಲಿ ಆಚರಿಸಲಾಗುತ್ತಿದೆ. ಈ ದಿನದಂದು ಜಾಗೃತಿ ಕಾರ್ಯಕ್ರಮಗಳ ಮೂಲಕ ಕ್ಯಾನ್ಸರ್ ರೋಗ ಲಕ್ಷಣಗಳು, ಚಿಕಿತ್ಸೆಯ ಕುರಿತಾಗಿ ಮಾಹಿತಿ ನೀಡಲಾಗುತ್ತದೆ. ವಿಶ್ವದ ಎಲ್ಲೆಡೆ ಕ್ಯಾನ್ಸರ್ ರೋಗ ತಡೆಗಟ್ಟುವಿಕೆಯ ಬಗೆಗಿನ ಕಾರ್ಯಕ್ರಮಗಳು, ಜಾಗೃತಿ ಅಭಿಯಾನಗಳು ಮತ್ತು ಶೈಕ್ಷಣಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ಕ್ಯಾನ್ಸರ್ ರೋಗಕ್ಕೆ ಕಾರಣವಾಗುವ ಅಂಶಗಳಿವು

ವಿಶ್ವದ ಜನರನ್ನು ಕಾಡುತ್ತಿರುವ ಈ ಮಹಾಮಾರಿ ರೋಗ ಕ್ಯಾನ್ಸರ್ ಬರಲು ಇಂತಹದ್ದೆ ನಿರ್ದಿಷ್ಟವಾದ ಕಾರಣವಿಲ್ಲ. ಆದರೆ ಬದಲಾಗುತ್ತಿರುವ ಜೀವನ ಶೈಲಿ ಹಾಗೂ ಆಹಾರ ಶೈಲಿಯೂ ಕ್ಯಾನ್ಸರ್ ರೋಗಕ್ಕೆ ಆಹ್ವಾನ ಕೊಟ್ಟಂತಾಗುತ್ತದೆ. ತಂಬಾಕಿನ ಸೇವನೆ, ಧೂಮಪಾನ, ಮದ್ಯಪಾನ, ಆಹಾರಪದ್ಧತಿಗಳು, ಎ ಹಾಗೂ ಸಿ ವಿಟಮಿನ್‌ ಕೊರತೆ, ಹಾರ್ಮೋನು ಅಸಮತೋಲನ ರಾಸಾಯನಿಕ ಸೌಂದರ್ಯ ವರ್ಧಕಗಳ ಅತಿಯಾದ ಬಳಕೆ, ಅನುವಂಶಿಕವಾಗಿಯಿಂದಾಗಿ ಕ್ಯಾನ್ಸರ್ ರೋಗ ಬರುವ ಸಾಧ್ಯತೆಯೂ ಹೆಚ್ಚು ಎನ್ನಬಹುದು. ಆದರೆ ಪ್ರಾರಂಭದಲ್ಲಿ ಕ್ಯಾನ್ಸರ್ ರೋಗ ಲಕ್ಷಣಗಳನ್ನು ಪತ್ತೆ ಹಚ್ಚಿ, ಸರಿಯಾದ ಚಿಕಿತ್ಸೆ ನೀಡಿದರೆ ಮಹಾಮಾರಿ ರೋಗದಿಂದ ಸ್ವಲ್ಪ ಮಟ್ಟಿಗೆ ಪಾರಾಗಬಹುದು.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ