Ayurvedic Herbs For Skin: ತ್ವಚೆಯ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿ ಈ ಆಯುರ್ವೇದ ಗಿಡಮೂಲಿಕೆಗಳು  

ವಯಸ್ಸು ಹೆಚ್ಚಾದಂತೆ ಮುಖದಲ್ಲಿ ಸುಕ್ಕುಗಳು ಮತ್ತು ವಯಸ್ಸಾಗುವಿಕೆಯ ಲಕ್ಷಣಗಳು ಗೋಚರಿಸಲು ಆರಂಭಿಸುತ್ತದೆ.  ಹೀಗಿರುವಾಗ  ನೀವು ರಾಸಯನಿಕ ಉತ್ಪನ್ನಗಳ ಬದಲಿಗೆ ಕೆಲವೊಂದು ಆಯುರ್ವೇದ ಗಿಡಮೂಲಿಕೆಗಳ ಸಹಾಯದಿಂದ ಮುಖದಲ್ಲಿ ಕಾಣಿಸಿಕೊಳ್ಳುವ ಸುಕ್ಕುಗಳನ್ನು ತೊಡೆದು ಹಾಕಿ ತ್ವಚೆಯ ಆರೋಗ್ಯ ಮತ್ತು ಸೌಂದರ್ಯ ಎರಡನ್ನೂ ಕಾಪಾಡಿಕೊಳ್ಳಬಹುದು.

Ayurvedic Herbs For Skin: ತ್ವಚೆಯ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿ ಈ ಆಯುರ್ವೇದ ಗಿಡಮೂಲಿಕೆಗಳು  
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:Sep 28, 2023 | 6:07 PM

ವಯಸ್ಸು ಹೆಚ್ಚಾದಂತೆ ಅದರ ಪರಿಣಾಮಗಳು ಮೊದಲು ನಮ್ಮ ಮುಖದ ಮೇಲೆ ಗೋಚರಿಸುತ್ತದೆ. ವಿಶೇಷವಾಗಿ ಮೂವತ್ತು ವರ್ಷದ ಬಳಿಕ ಮುಖದಲ್ಲಿ ಸೂಕ್ಷ್ಮ ರೇಖೆಗಳು ಮತ್ತು ಸುಕ್ಕುಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ ಹೆಚ್ಚಿನವರು ಮಾರುಕಟ್ಟೆಯಲ್ಲಿ ಲಭ್ಯವಿರುವ ದುಬಾರಿ ಕ್ರೀಮ್ ಇತ್ಯಾದಿ ಉತ್ಪನ್ನಗಳನ್ನು ಬಳಸುತ್ತಾರೆ. ಆದರೆ ಇವುಗಳಲ್ಲಿ ಬಳಸಲಾಗುವ ರಾಸಾಯನಿಕಗಳು ಚರ್ಮಕ್ಕೆ ಭಾರಿ ಹಾನಿಯನ್ನುಂಟುಮಾಡುತ್ತವೆ. ಹಾಗಾಗಿ ಈ ಎಲ್ಲಾ ಸಮಸ್ಯೆಗಳನ್ನು ತಪ್ಪಿಸಲು ನೀವು ಆಯುರ್ವೇದ ಗಿಡಮೂಲಿಕೆಗಳ ಸಹಾಯವನ್ನು ತೆಗೆದುಕೊಳ್ಳಬಹುದು. ಈ ಮೂಲಿಕೆಗಳು ಮುಖದಲ್ಲಿ ಕಾಣಿಸಿಕೊಳ್ಳುವ ಸುಕ್ಕುಗಳನ್ನು ತೊಡೆದು ಹಾಕಿ ತ್ವಚೆಯ ಆರೋಗ್ಯ ಮತ್ತು ಸೌಂದರ್ಯ ಎರಡನ್ನೂ ಕಾಪಾಡಿಕೊಳ್ಳಲು ಸಹಕಾರಿಯಾಗಿದೆ.

ಕುಗ್ಗುತ್ತಿರುವ ತ್ವಚೆಯ ಹೊಳಪು ಮತ್ತು ಸೌಂದರ್ಯವನ್ನು ಹೆಚ್ಚಿಸಲು  ಈ ಗಿಡಮೂಲಿಕೆಗಳನ್ನು ಬಳಸಿ:

ತುಳಸಿ: ತುಳಸಿಯಲ್ಲಿ ಹಲವು ಔಷಧೀಯ ಗುಣಗಳಿವೆ.  ಇದು ತ್ವಚೆಯಲ್ಲಿ ಗೋಚರಿಸುವ  ಕಾಣಿಸಿಕೊಳ್ಳುವ ವಯಸ್ಸಾಗುವಿಕೆಯ ಲಕ್ಷಣಗಳನ್ನು ಕಡಿಮೆ ಮಾಡಲು ಪರಿಣಾಮಕಾರಿ ಮನೆಮದ್ದಾಗಿದೆ.  ಇದು ಸುಕ್ಕುಗಳನ್ನು ಕಡಿಮೆ ಮಾಡಲು ಕೂಡಾ ಸಹಕಾರಿಯಾಗಿದೆ. ಅಲ್ಲದೆ ಇದು ತ್ವಚೆಯ ಶುಷ್ಕತೆಯನ್ನು ಹೋಗಲಾಡಿಸಲು ಸಹ ಸಹಾಯ ಮಾಡುತ್ತದೆ.

ನೆಲ್ಲಿಕಾಯಿ: ಪ್ರತಿದಿನ ನೆಲ್ಲಿಕಾಯಿಯನ್ನು ಸೇವಿಸುವುದರಿಂದ ಚರ್ಮಕ್ಕೆ ಪೋಷಣೆ ದೊರೆಯುತ್ತದೆ. ಇದರಲ್ಲಿರುವ ಆಂಟಿ ಏಜಿಂಗ್ ಗುಣಲಕ್ಷಣಗಳು ಮುಖದಲ್ಲಿ ಗೋಚರಿಸುವ  ವಯಸ್ಸಾಗುವಿಕೆಯ ಲಕ್ಷಣಗಳನ್ನು ಕಡಿಮೆ ಮಾಡುತ್ತದೆ. ಮತ್ತು ಚರ್ಮವನ್ನು ಬಿಗಿಗೊಳಿಸುತ್ತದೆ. ಅಲ್ಲದೆ ಇದರಲ್ಲಿ ವಿಟಮಿನ್ ಸಿ  ಮತ್ತು  ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದ್ದು,  ಇದು ಆರೋಗ್ಯಕರ ಚರ್ಮವನ್ನು ಉತ್ತೇಜಿಸುತ್ತದೆ.

ಜೆನ್ಸೆಂಗ್: ಕೊರಿಯಾ ಮತ್ತು ಜಪಾನ್ನಂತಹ ದೇಶಗಳಲ್ಲಿ ಜೆನ್ಸೆಂಗ್ ಬಹಳ ಜನಪ್ರಿಯವಾಗಿದೆ. ಇದು ಸೌಂದರ್ಯವರ್ಧಕ ಉತ್ಪನ್ನಗಳಲ್ಲಿ ಬಳಸಲಾಗುವ ಗಿಡಮೂಲಿಕೆಯಾಗಿದೆ. ಇದರಲ್ಲಿ ಫೈಟೊಕೆಮಿಕಲ್ ಇದ್ದು, ಇದು ವಯಸ್ಸಾಗುವಿಕೆಯ  ಚಿಹ್ನೆಗಳು ಮುಖದ ಮೇಲೆ ಕಾಣಿಸಿಕೊಳ್ಳುವುದನ್ನು ತಡೆಯುತ್ತದೆ. ಜೊತೆಗೆ ಈ ಮೂಲಿಕೆಯು ನಿಮ್ಮ ಚರ್ಮವು ಸೂರ್ಯನ ಹಾನಿಯಿಂದ ಉಂಟಾಗುವ ಹಾನಿಯ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಅರಶಿನ: ಅರಶಿನವು ಒಂದು ಅದ್ಭುತ ಗಿಡಮೂಲಿಕೆಯಾಗಿದ್ದು, ಇದು ತ್ವಚೆಗೆ ಹಲವು ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ.  ಅರಶಿನದಲ್ಲಿ ಕಂಡುಬರುವ ಕರ್ಕ್ಯುಮಿನ್ ಅಂಶ ಮುಖದಲ್ಲಿ ಗೋಚರಿಸುವ ವಯಸ್ಸಾಗುವಿಕೆಯ ಲಕ್ಷಣವನ್ನು ಕಡಿಮೆ ಮಾಡುತ್ತದೆ. ಇದು ಸೂರ್ಯನ ನೇರಳಾತೀತ ಕಿರಣಗಳಿಂದ ಉಂಟಾಗುವ ಹಾನಿಯಿಂದ ಚರ್ಮವನ್ನು ರಕ್ಷಿಸಲು ಸಹಾಯ ಮಾಡುತ್ತದೆ.  ಹಾಗೂ ಚರ್ಮಕ್ಕೆ  ಸಂಪೂರ್ಣ ಪೋಷಣೆಯನ್ನು ನೀಡುತ್ತದೆ.

ಒಂದೆಲಗ: ಒಂದೆಲಗ ಆಂಟಿ ಏಜಿಂಗ್ ಗುಣಲಕ್ಷಣಗಳನ್ನು ಹೊಂದಿರುವ ಅದ್ಭುತ ಗಿಡಮೂಲಿಕೆಯಾಗಿದೆ. ಇದರಲ್ಲಿ ಫ್ಲೇವನಾಯ್ಡ್ ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದ್ದು, ಇದು ಚರ್ಮವನ್ನು ಪೋಷಿಸಸಲು ಸಹಾಯ ಮಾಡುತ್ತದೆ ಮತ್ತು  ಮುಖದಲ್ಲಿ ವಯಸ್ಸಾಗುವಿಕೆ ಲಕ್ಷಣಗಳು ಕಾಣಿಸಿಕೊಳ್ಳದಂತೆ  ಮಾಡಲು ಕಾಲಜನ್ ಉತ್ಪಾದನೆಯನ್ನು ಸಹ  ಹೆಚ್ಚಿಸುತ್ತದೆ. ಅಲ್ಲದೆ ಈ ಸಸ್ಯವು ನಮ್ಮ ಒಟ್ಟಾರೆ ಆರೋಗ್ಯವನ್ನು ಉತ್ತೇಜಿಸುತ್ತದೆ.

ಇದನ್ನೂ ಓದಿ: ನೀವು ಈ ಸಮಸ್ಯೆಗಳಿಂದ ಬಳಲುತ್ತಿದ್ದರೆ ಮೆಗ್ನೀಸಿಯಮ್ ಕೊರತೆ ಇರಬಹುದು; ಪರಿಹಾರವೇನು?

ಅಶ್ವಗಂಧ: ಅಶ್ವಗಂಧ ಉತ್ಕರ್ಷಣ ನಿರೋಧಕಗಳ ಸಮೃದ್ಧ  ಮೂಲವಾಗಿದ್ದು, ಇದು ಫ್ರೀ ರಾಡಿಕಲ್ಗಳಿಂದ ಉಂಟಾಗುವ ಹಾನಿಗಳಿಂದ ಚರ್ಮವನ್ನು ರಕ್ಷಿಸಲು ಸಹಾಯ ಮಾಡುತ್ತದೆ.  ಅಶ್ವಗಂಧವನ್ನು ಪ್ರತಿನಿತ್ಯ ಸೇವಿಸುವುದರಿಂದ ತ್ವಚೆಯು ಯೌವನಭರಿತ ಮತ್ತು ಹೊಳಪಿನಿಂದ ಕೂಡಿರುತ್ತದೆ.  ಅಲ್ಲದೆ ಇದು ಒತ್ತಡವನ್ನು ನಿವಾರಿಸಲು ಸಹ ಸಹಕಾರಿಯಾಗಿದೆ.

ಬೇವು: ತ್ವಚೆಯ ಆರೈಕೆಗೆ ಬೇವು ಕೂಡಾ ಸಹಕಾರಿಯಾಗಿದೆ. ಇದರಲ್ಲಿ ಆಂಟಿ ಸೆಪ್ಟಿಕ್, ಆಂಟಿ ಫಂಗಲ್ ಮತ್ತು ಆಂಟಿ ಬ್ಯಾಕ್ಟಿರಿಯಲ್ ಗುಣಗಳಿದ್ದು, ಇದು ಚರ್ಮವನ್ನು ಸ್ವಚ್ಛವಾಗಿಡಲು ಸಹಾಯ ಮಾಡುತ್ತದೆ. ಹಾಗಾಗಿ ಮೊಡವೆಗಳನ್ನು ತೊಡೆದುಹಾಕಲು ಮತ್ತು ಚರ್ಮವನ್ನು ಹೊಳೆಯುವಂತೆ ಮಾಡಲು ಬೇವನ್ನು ಬಳಸಿ.

ಅಲೋವೆರಾ: ತ್ವಚೆಯ ಆರೈಕೆಯಲ್ಲಿ ವ್ಯಾಪಕವಾಗಿ ಬಳಸಲಾಗುವ ಗಿಡಮೂಲಿಕೆಗಳಲ್ಲಿ ಆಲೋವೆರಾ ಕೂಡ ಒಂದು. ಇದು ಚರ್ಮದ ಶುಷ್ಕತೆ, ದದ್ದುಗಳು, ಸೋಂಕುಗಳು, ಮೊಡವೆಗಳು ಮತ್ತು ಅಲರ್ಜಿಗಳನ್ನು ಹೋಗಲಾಡಿಸಲು ಪರಿಣಾಮಕಾರಿಯಾಗಿದೆ.  ಅಲ್ಲದೆ ಇದು ಮುಖದೆ ಮೇಲೆ ಗೋಚರಿಸುವ ವಯಸ್ಸಾಗುವಿಕೆಯ ಲಕ್ಷಣಗಳನ್ನು ಸಹ ತೆಗೆದು ಹಾಕುತ್ತದೆ. ಅಲೋವೆರಾ ಜೆಲ್ನ್ನು ಪ್ರತಿದಿನ ಹಚ್ಚುವುದರಿಂದ  ಹೊಳೆಯುವ ತ್ವಚೆಯನ್ನು ನಿಮ್ಮದಾಗಿಸಬಹುದು.

ಮತ್ತಷ್ಟು ಆರೋಗ್ಯ ಸಲಹೆಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:05 pm, Thu, 28 September 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ