Anjeer Benefits: ಅಂಜೂರದ ಹಣ್ಣು ರುಚಿಗಾಗಿ ಮಾತ್ರ ಸೇವಿಸಬೇಡಿ, ಆರೋಗ್ಯಕರ ಗುಣಲಕ್ಷಣದ ಬಗ್ಗೆಯೂ ಗಮನಹರಿಸಿ
ಅಂಜೂರದ ಹಣ್ಣುಗಳಲ್ಲಿ ಮ್ಯಾಂಗನೀಸ್, ಮೆಗ್ನೀಶಿಯಮ್ ಮತ್ತು ಕಬ್ಬಿಣದಂತಹ ಖನಿಜಗಳಿವೆ. ನೆನೆಸಿದ ಅಂಜೂರದ ಹಣ್ಣುಗಳನ್ನು ಪ್ರತಿದಿನ ಸೇವಿಸುವುದರಿಂದ ಹಲವಾರು ಪ್ರಯೋಜನಗಳಿವೆ. ಒಂದು ಅಥವಾ ಎರಡು ಅಂಜೂರದ ಹಣ್ಣುಗಳನ್ನು ರಾತ್ರಿಯಿಡೀ ನೆನೆಸಿಟ್ಟು ಬೆಳಿಗ್ಗೆ ಅವುಗಳನ್ನು ಸೇವಿಸುವುದರಿಂದ ಆರೋಗ್ಯದಲ್ಲಿ ಹೆಚ್ಚು ರೋಗನಿರೋಧಕ ಶಕ್ತಿ ಬೆಳವಣಿಗೆಯಾಗುತ್ತದೆ.
ಪ್ರಸ್ತುತ ಕೊರೊನಾ ಕಾಲಘಟ್ಟದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು ಅತಿ ಮುಖ್ಯವಾಗಿದೆ. ಈ ಸಂದರ್ಭದಲ್ಲಿ ಯಾವುದೇ ಕಾಯಿಲೆಗಳಿಲ್ಲದ ಜನರು ಕೊರೊನಾ ನಿಯಂತ್ರಣಕ್ಕಾಗಿ ವಿವಿಧ ರೀತಿಯ ಆಹಾರ ಮತ್ತು ಕಷಾಯಗಳನ್ನು ಸೇವಿಸಬಹುದು. ಆದರೆ ಇನ್ನಿತರ ಕಾಯಿಲೆಯಿಂದ ಬಳಲುತ್ತಿರುವವರು ಬೇರೆ ಬೇರೆ ಗಿಡ ಮೂಲಿಕೆಗಳಿಂದ ತಯಾರಿಸಿದ ಕಷಾಯ ತೆಗೆದುಕೊಳ್ಳಬೇಕಾದರೆ ಸ್ವಲ್ಪ ಮಟ್ಟಿಗೆ ಯೋಚಿಸಬೇಕಾದ ಅನಿವಾರ್ಯತೆ ಇದೆ. ಅಂತಹವರು ಅಂಜೂರದ ಹಣ್ಣುಗಳನ್ನು ಸೇವಿಸಬಹುದು. ಅಂಜೂರದ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಈ ಹಣ್ಣುಗಳು ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ.
ಅಂಜೂರದ ಹಣ್ಣುಗಳಲ್ಲಿ ಮ್ಯಾಂಗನೀಸ್, ಮೆಗ್ನೀಶಿಯಮ್ ಮತ್ತು ಕಬ್ಬಿಣದಂತಹ ಖನಿಜಗಳಿವೆ. ನೆನೆಸಿದ ಅಂಜೂರದ ಹಣ್ಣುಗಳನ್ನು ಪ್ರತಿದಿನ ಸೇವಿಸುವುದರಿಂದ ಹಲವಾರು ಪ್ರಯೋಜನಗಳಿವೆ. ಒಂದು ಅಥವಾ ಎರಡು ಅಂಜೂರದ ಹಣ್ಣುಗಳನ್ನು ರಾತ್ರಿಯಿಡೀ ನೆನೆಸಿಟ್ಟು ಬೆಳಿಗ್ಗೆ ಅವುಗಳನ್ನು ಸೇವಿಸುವುದರಿಂದ ಆರೋಗ್ಯದಲ್ಲಿ ಹೆಚ್ಚು ರೋಗನಿರೋಧಕ ಶಕ್ತಿ ಬೆಳವಣಿಗೆಯಾಗುತ್ತದೆ. ಇದರಲ್ಲಿ ಫೈಬರ್ ಅಧಿಕವಾಗಿದ್ದು, ಪಿಎಂಎಸ್ ಹೊಂದಿರುವ ಮಹಿಳೆಯರಿಗೆ ಅಂಜೂರ ಒಳ್ಳೆಯದು. ಇನ್ನು ಹಾರ್ಮೋನುಗಳ ಅಸಮತೋಲನ ಹೊಂದಿರುವವರಿಗೆ ಅಂಜೂರದ ಹಣ್ಣು ಉಪಯುಕ್ತಕಾರಿ
ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ ಅಂಜೂರದಲ್ಲಿ ಪೊಟ್ಯಾಶಿಯಮ್ ಸಮೃದ್ಧವಾಗಿದೆ. ಇದು ದೇಹದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಇದು ಕ್ಲೋರೊಜೆನಿಕ್ ಆಮ್ಲವನ್ನು ಹೊಂದಿರುತ್ತದೆ. ಜತೆಗೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಅನೇಕ ಅಧ್ಯಯನಗಳಲ್ಲಿ ಸಾಭೀತಾಗಿದೆ. ನೆನೆಸಿದ ಅಂಜೂರದ ಹಣ್ಣುಗಳನ್ನು ತಿನ್ನುವುದರಿಂದ ಟೈಪ್ 2 ಡಯಾಬಿಟಿಸ್ನಿಂದ ಬಳುತ್ತಿರುವವರಿಗೆ ಒಳಿತು. ಇದು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಮಲಬದ್ಧತೆಯನ್ನು ತಡೆಯುತ್ತದೆ ಇದರಲ್ಲಿ ಫೈಬರ್ ಅಧಿಕವಾಗಿರುತ್ತದೆ. ಇದು ಮಲಬದ್ಧತೆಯ ಸಮಸ್ಯೆಯನ್ನು ನಿವಾರಿಸುತ್ತದೆ. ಹೆಚ್ಚು ಅಂಜೂರದ ಹಣ್ಣುಗಳನ್ನು ತಿನ್ನುವುದರಿಂದ ಕರುಳಿನ ಆರೋಗ್ಯ ಚೆನ್ನಾಗಿರುತ್ತದೆ ಮತ್ತು ಇನ್ನಿತರ ಸಮಸ್ಯೆಗಳಿಂದ ಕರುಳನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.
ತೂಕ ಇಳಿಕೆ ತೂಕ ಇಳಿಸಿಕೊಳ್ಳಲು ಇಷ್ಟಪಡುವವರು ಸಾಮಾನ್ಯವಾಗಿ ಒಂದು ಆಹಾರ ಪದ್ಧತಿಯನ್ನು ಅನುಸರಿಸುತ್ತಾರೆ ಇದರಲ್ಲಿ ಅಂಜೂರದ ಹಣ್ಣುಗಳನ್ನು ಸೆರಿಸಿಕೊಳ್ಳಬಹುದು. ಇದು ಫೈಬರ್ ಅನ್ನು ಹೊಂದಿರುತ್ತದೆ. ಆದ್ದರಿಂದ ತೂಕ ಇಳಿಕೆಗೆ ಸಹಾಯ ಮಾಡುತ್ತದೆ. ಇದರಲ್ಲಿ ಕ್ಯಾಲೊರಿ ಕಡಿಮೆ. ಆದರೆ ಅಂಜೂರದ ಹಣ್ಣುಗಳನ್ನು ಮಿತವಾಗಿ ತೆಗೆದುಕೊಳ್ಳಬೇಕು. ಒಂದು ವೇಳೆ ಹೆಚ್ಚು ಹಣ್ಣು ತಿಂದರೆ ತೂಕ ಹೆಚ್ಚಾಗುವ ಸಾಧ್ಯತೆ ಇದೆ.
ಹೃದಯದ ಆರೋಗ್ಯ ಕಾಪಾಡುತ್ತದೆ ಅಂಜೂರದಲ್ಲಿನ ಉತ್ಕರ್ಷಣ ನಿರೋಧಕಗಳು ರಕ್ತದೊತ್ತಡದ ಮಟ್ಟವನ್ನು ನಿಯಂತ್ರಿಸುತ್ತವೆ. ಇದು ಹೃದಯವನ್ನು ಆರೋಗ್ಯವಾಗಿಡಲು ಕೆಲಸ ಮಾಡುತ್ತದೆ. ದೇಹದಲ್ಲಿ ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡಲು ಅಂಜೂರದ ಹಣ್ಣುಗಳು ಸಹಾಯ ಮಾಡುತ್ತವೆ ಎಂದು ಅಧ್ಯಯನಗಳು ತಿಳಿಸಿವೆ.
ಮೂಳೆಯನ್ನು ಬಲಿಷ್ಟವಾಗಿಸುತ್ತದೆ ಅಂಜೂರದಲ್ಲಿ ಕ್ಯಾಲ್ಸಿಯಂ ಅಧಿಕವಾಗಿರುತ್ತದೆ. ಇದು ಮೂಳೆಗಳು ಆರೋಗ್ಯವಾಗಿರಲು ಸಹಾಯ ಮಾಡುತ್ತವೆ. ಕ್ಯಾಲ್ಸಿಯಂ ದೇಹದಲ್ಲಿಯೇ ಉತ್ಪತ್ತಿಯಾಗುವುದಿಲ್ಲ. ಆದ್ದರಿಂದ ಹಾಲು, ಸೋಯಾ, ಹಸಿರು ಸೊಪ್ಪು ತರಕಾರಿಗಳು ಮತ್ತು ಅಂಜೂರದ ಹಣ್ಣುಗಳನ್ನು ತೆಗೆದುಕೊಳ್ಳುವುದು ಉತ್ತಮ.
ಇದನ್ನೂ ಓದಿ:
ಉಸಿರಾಟದ ತೊಂದರೆ ಅನುಭವಿಸುತ್ತಿದ್ದರೆ ಈ ಕೆಳಗಿನ ಆಹಾರ ಪದ್ಧತಿಯನ್ನು ನಿತ್ಯವು ಅನುಸರಿಸಿ
ಆಹಾರದಲ್ಲಿನ ನಾರಿನಾಂಶ ಎಂದರೆ ಏನು? ಮಲಬದ್ಧತೆಯಿಂದ ದೂರವಿರಲು ಇದು ಹೇಗೆ ಸಹಕಾರಿಯಾಗಿದೆ