AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hair Fall: ಕೂದಲು ಉದುರುವಿಕೆ ತಡೆಯಲು ಈ ಮನೆಮದ್ದುಗಳನ್ನು ಟ್ರೈ ಮಾಡಿ

Hair Fall Problems: ಒತ್ತಡ ಭರಿತ ಜೀವನದಿಂದಾಗಿ ಕೂದಲು ಉದುರುವಿ( Hair Fall) ಕೆ ಸಾಮಾನ್ಯ ಸಮಸ್ಯೆಯಾಗಿ ಕಾಣಿಸಿಕೊಳ್ಳುತ್ತದೆ. ಕೂದಲು ಉದುರುವುದನ್ನು ಕಡಿಮೆ ಮಾಡಲು ಜನರು ಮಾರುಕಟ್ಟೆಯಲ್ಲಿ ಲಭ್ಯವಿರುವ ನಾನಾ ರೀತಿಯ ತೈಲಗಳು ಹಾಗೂ ವಿವಿಧ ಶ್ಯಾಂಪೂಗಳ ಮೊರೆಹೋಗುತ್ತಾರೆ.

Hair Fall: ಕೂದಲು ಉದುರುವಿಕೆ ತಡೆಯಲು ಈ ಮನೆಮದ್ದುಗಳನ್ನು ಟ್ರೈ ಮಾಡಿ
ಕೂದಲು ಉದುರುವಿಕೆ
TV9 Web
| Edited By: |

Updated on: May 14, 2022 | 5:52 PM

Share

ಒತ್ತಡ ಭರಿತ ಜೀವನದಿಂದಾಗಿ ಕೂದಲು ಉದುರುವಿ( Hair Fall) ಕೆ ಸಾಮಾನ್ಯ ಸಮಸ್ಯೆಯಾಗಿ ಕಾಣಿಸಿಕೊಳ್ಳುತ್ತದೆ. ಕೂದಲು ಉದುರುವುದನ್ನು ಕಡಿಮೆ ಮಾಡಲು ಜನರು ಮಾರುಕಟ್ಟೆಯಲ್ಲಿ ಲಭ್ಯವಿರುವ ನಾನಾ ರೀತಿಯ ತೈಲಗಳು ಹಾಗೂ ವಿವಿಧ ಶ್ಯಾಂಪೂಗಳ ಮೊರೆಹೋಗುತ್ತಾರೆ. ಹಲವು ಸಂದರ್ಭಗಳಲ್ಲಿ ಹೆಚ್ಚು ರಾಸಾಯನಿಕ ಭರಿತ ಶಾಂಪೂಗಳನ್ನು ಕೂದಲಿಗೆ ಹಚ್ಚುವುದರಿಂದ ಕೂದಲು ಉದುರುವ ಸಮಸ್ಯೆ ದುಪ್ಪಟ್ಟಾಗುತ್ತಿದೆ. ಮನೆ ಮದ್ದುಗಳನ್ನು ಬಳಸುವುದರಿಂದ ಕೂದಲುದುರುವ ಸಮಸ್ಯೆಗೆ ಪರಿಹಾರದ ಜೊತೆಗೆ ನೀವು ದಪ್ಪವಾದ, ಹೊಳೆಯುವ ಕೂದಲನ್ನು ಪಡೆಯಬಹುದು.

ಅಲೋವೆರಾ ಜೆಲ್ ಬಳಸಿ ಅಲೋವೆರಾವನ್ನು ಕೂದಲು ಹಾಗೂ ನೆತ್ತಿಗೆ ಹಚ್ಚಿ ಬಿಡಿ. ಸುಮಾರು ಒಂದು ಗಂಟೆಯ ನಂತರ ಶಾಂಪೂ ಬಳಸಿ ತೊಳೆಯಿರಿ. ಇದು ನಿಮ್ಮ ಹಾನಿಗೊಳಗಾದ ಕೂದಲನ್ನು ಸರಿಪಡಿಸುವುದಲ್ಲದೆ, ಒಣ ಕೂದಲನ್ನು ರೇಷ್ಮೆಯಂತೆ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಕೂದಲಿನ ಹಲವು ಸಮಸ್ಯೆಗಳಿಗೆ ಅಲೋವೆರಾ ಜೆಲ್ ಪರಿಣಾಮಕಾರಿ ಆಗಿದೆ.

ಭೃಂಗರಾಜ್ ಭೃಂಗರಾಜ್ ಕೂದಲಿನ ಎಲ್ಲಾ ಸಮಸ್ಯೆಗಳನ್ನು ಗುಣಪಡಿಸುವ ಶಕ್ತಿ ಇದೆ. ಇದರ ಬಳಕೆಯಿಂದ ಕೂದಲು ಉದುರುವುದು, ತಲೆಹೊಟ್ಟು ಮತ್ತು ಅಕಾಲಿಕ ಕೂದಲು ಬೆಳ್ಳಗಾಗುವುದು ಈ ರೀತಿಯ ಎಲ್ಲಾ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು.

ನೆಲ್ಲಿಕಾಯಿ ಆಮ್ಲಾ ಅಥವಾ ನೆಲ್ಲಿಕಾಯಿಯಲ್ಲಿರುವ ಕೆಲವು ಅಂಶಗಳು ಕೂದಲನ್ನು ಮೃದುವಾಗಿಸುವುದರ ಜೊತೆಗೆ, ಅವುಗಳನ್ನು ಹೊಳೆಯುವಂತೆ ಮಾಡುತ್ತದೆ. ಜೊತೆಗೆ ಕೂದಲು ದಟ್ಟವಾಗಿ ಉದ್ದವಾಗಿ ಬೆಳೆಯುವಂತೆ ಪೋಷಿಸುತ್ತದೆ.

ತೆಂಗಿನ ಎಣ್ಣೆ ಕೂದಲಿಗೆ ತೆಂಗಿನ ಎಣ್ಣೆಯನ್ನು ಹಚ್ಚುವುದರಿಂದ ಕೂದಲು ಆರೋಗ್ಯಕರವಾಗಿರುತ್ತದೆ. ಕೂದಲನ್ನು ಬಲಪಡಿಸುವಲ್ಲಿ ಇದು ಅತ್ಯಂತ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ.

ಇಲ್ಲಿ ನೀಡಲಾದ ಮಾಹಿತಿಗಳು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ ಸಾಮಾನ್ಯ ಮಾಹಿತಿಯನ್ನು ಆಧರಿಸಿರುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್