Health Tips: ವಿಪರೀತ ಬೆನ್ನು ನೋವಿನ ಸಮಸ್ಯೆಯೇ? ಪರಿಹಾರಕ್ಕಾಗಿ ಇಲ್ಲಿದೆ ತಜ್ಞರ ಸಲಹೆಗಳು

ವಿಪರೀತ ಬೆನ್ನು ನೋವಿನ ಸಮಸ್ಯೆಗೆ ತಜ್ಞರು ಕೆಲವೊಂದಿಷ್ಟು ಸಲಹೆಗಳನ್ನು ನೀಡಿದ್ದಾರೆ. ಅವಗಳನ್ನು ಪಾಲಿಸುವ ಮೂಲಕ ನಿಮ್ಮ ಬೆನ್ನು ನೋವಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು.

Health Tips: ವಿಪರೀತ ಬೆನ್ನು ನೋವಿನ ಸಮಸ್ಯೆಯೇ? ಪರಿಹಾರಕ್ಕಾಗಿ ಇಲ್ಲಿದೆ ತಜ್ಞರ ಸಲಹೆಗಳು
ಬೆನ್ನು ನೋವು
Follow us
TV9 Web
| Updated By: shruti hegde

Updated on: Nov 12, 2021 | 9:45 AM

ಕೊವಿಡ್ ಸಾಂಕ್ರಾಮಿಕ ಹರಡುತ್ತಿದ್ದಂತೆಯೇ ಎಲ್ಲವೂ ಡಿಜಿಟಲ್ ಆಗಿದೆ. ಶಾಪಿಂಗ್ ಮಾಡಲು, ಅಫೀಸ್ ಕೆಲಸ ಹೀಗೆ ಎಲ್ಲವೂ ಮನೆಯಲ್ಲೇ ಕುಳಿತು ಕಂಪ್ಯೂಟರ್, ಮೊಬೈಲ್​ನಿಂದಲೇ ಆಗುತ್ತಿದೆ. ಹೀಗಿರುವಾಗ ದೈಹಿಕ ವ್ಯಾಯಾಮ ಸಹಜವಾಗಿಯೇ ಕಡಿಮೆ ಆಗಿದೆ. ಇದರಿಂದ ಸೊಂಟ ನೋವು, ಬೆನ್ನು ನೋವಿನಂತಹ ಸಮಸ್ಯೆಗಳು ಜನರಲ್ಲಿ ಕಾಣಿಸಿಕೊಳ್ಳುತ್ತಿದೆ. ಶಾಲೆಗೆ ಹೋಗುವ ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಎಲ್ಲರಿಗೂ ಸಾಮಾನ್ಯವಾಗಿ ಬೆನ್ನು ನೋವು ಕಾಣಿಸಿಕೊಳ್ಳುತ್ತದೆ. ಹಾಗಿರುವಾಗ ಈ ಸಮಸ್ಯೆಗೆ ಪರಿಹಾರಗಳೇನು? ಡಾ. ದೀಕ್ಷಾ ಅವರು ತಮ್ಮ ಇನ್​ಸ್ಟಾಗ್ರಾಮ್​  ಖಾತೆಯಲ್ಲಿ ಕೆಲವು ಸಲಹೆಗಳನ್ನು ಹಂಚಿಕೊಂಡಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ ಡಾ. ದೀಕ್ಷಾ ಕೆಲವು ಸಲಹೆಗಳನ್ನು ಹಂಚಿಕೊಂಡಿದ್ದಾರೆ. ಬೆನ್ನು ನೋವಿಗೆ ಪರಿಹಾರ ಕ್ರಮಗಳೇನು? ಎಂಬುದನ್ನು ತಿಳಿಸಿಕೊಟ್ಟಿದ್ದಾರೆ. ಮನೆಯಲ್ಲಿ ಕುಳಿತಲ್ಲಿಯೇ ಕುಳಿತುಕೊಂಡು ಕೆಲಸ ಮಾಡುತ್ತಿರುವದರಿಂದ ಕೆಲವು ಸಮಸ್ಯೆಗಳು ಜನರಲ್ಲಿ ಕಾಡುತ್ತಿದೆ. ಸ್ಥೂಲಕಾಯತೆ, ಅಜೀರ್ಣ ಮತ್ತು ಮಲಬದ್ಧತೆ ಜೊತೆಗೆ ಇತರ ಸಮಸ್ಯೆಗಳು ಕಾಡುತ್ತಿದೆ ಎಂದು ತಜ್ಞರು ಹಂಚಿಕೊಂಡ ಪೋಸ್ಟ್​ನಲ್ಲಿ ಬರೆದಿದ್ದಾರೆ.

ಶೇ. 90ರಷ್ಟು ವಯಸ್ಕರಲ್ಲಿ ಬೆನ್ನು ನೋವಿನ ಸಮಸ್ಯೆ ಕಾಡುತ್ತದೆ. ಬೆನ್ನು ನೋವು ಕಾಣಿಸಿಕೊಳ್ಳಲು ಪ್ರಮುಖ ಕಾರಣವೆಂದರೆ ಜೀವನಶೈಲಿಯಲ್ಲಿ ಜಡತ್ವ ಎಂದು ತಜ್ಞರು ಹೇಳುತ್ತಾರೆ. ಇದರ ಜೊತೆಗೆ ಬೆನ್ನು ನೋವಿಗೆ ತ್ವರಿತ ಕಾರಣಗಳೇನು ಎಂಬುದನ್ನು ತಜ್ಞರು ತಿಳಿಸಿದ್ದಾರೆ. ಅವುಗಳು ಈ ಕೆಳಗಿನಂತಿದೆ.

*ಮಲಗುವಾಗ ತಲೆಯ ಕೆಳಗೆ ದಿಂಬನ್ನು ಬಳಸಬೇಡಿ *ಪ್ರತಿನಿತ್ಯ ವ್ಯಾಯಾಮ ಮಾಡಿ *2 ಗಂಟೆಗಳಿಗಿಂತ ಹೆಚ್ಚು ಕಾಲ ಒಂದೇ ಭಂಗಿಯಲ್ಲಿ ಕುಳಿತುಕೊಳ್ಳಬೇಡಿ. 5 ನಿಮಿಷಗಳ ವಿರಾಮ ತೆಗೆದುಕೊಳ್ಳಿ. *ಎಣ್ಣೆ ಹಚ್ಚಿ ಮಸಾಜ್ ಮಾಡಿದ ಬಳಿಕ ಸ್ನಾನ ಮಾಡುವ ಅಭ್ಯಾಸ ಮಾಡಿಕೊಳ್ಳಿ.

ಇವು ನಿಮ್ಮ ಬೆನ್ನು ನೋವಿನ ಸಮಸ್ಯೆಯನ್ನು ಕಡಿಮೆ ಮಾಡುತ್ತವೆ. ಈ ರೀತಿಯ ಕೆಲವು ಅಭ್ಯಾಸಗಳಿದ್ದರೆ ಅವುಗಳನ್ನು ಆದಷ್ಟು ತಪ್ಪಿಸಿ. ನೀವು ಸಾಸಿವೆ ಎಣ್ಣೆ ಅಥವಾ ಎಳ್ಳೆಯನ್ನು ಸಹ ಬೆನ್ನು ನೋವಿಗೆ ಹಚ್ಚಬಹುದು ಎಂದು ಡಾ. ದೀಕ್ಷಾ ಸಲಹೆ ನೀಡಿದ್ದಾರೆ.

ಇದನ್ನೂ ಓದಿ:

Health Tips: ಜ್ಞಾಪಕ ಶಕ್ತಿ ಕಡಿಮೆಯಾಗುತ್ತಿದೆಯೇ? ಆಹಾರ ಕ್ರಮದ ಬಗ್ಗೆ ಇರಲಿ ಎಚ್ಚರ

Health Tips: ಗಂಟಲು ನೋವೇ? ಇಲ್ಲಿದೆ ಮನೆಮದ್ದು

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ