Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೂದಲಿನ ಬೆಳವಣಿಗೆಗೆ ಉತ್ತಮ ಈ ಆರೋಗ್ಯಕರ ಪಾನೀಯಗಳು

ಕೂದಲು ಉದುರುವುದು, ಸರಿಯಾಗಿ ಕೂದಲು ಬೆಳವಣಿಗೆ ಹೊಂದದಿರುವುದು ಇತ್ಯಾದಿ ಕೂದಲಿಗೆ ಸಂಬಂಧಿಸಿದ ಸಮಸ್ಯೆಗಳನ್ನು ನೀವು ಎದುರಿಸುತ್ತಿದ್ದೀರಾ? ಹಾಗಿದ್ದರೆ ಈ ಕೆಲವೊಂದು ಆರೋಗ್ಯಕರ ಜ್ಯೂಸ್​​ಗಳ ಸೇವನೆಯು ನಿಮ್ಮ ಕೂದಲು ಬೆಳವಣಿಗೆಗೆ ಸಹಕಾರಿಯಾಗಬಹುದು.

ಕೂದಲಿನ ಬೆಳವಣಿಗೆಗೆ ಉತ್ತಮ ಈ ಆರೋಗ್ಯಕರ ಪಾನೀಯಗಳು
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 14, 2023 | 5:56 PM

ಸುಂದರವಾದ, ಬಲವಾದ ಹಾಗೂ ಉದ್ದವಾದ ಆರೋಗ್ಯಕರ ಕೂದಲು ಪಡೆಯಬೇಕೆಂಬುವುದು ಪ್ರತಿಯೊಬ್ಬರ ಕನಸು. ಆದರೆ ಅನಾರೋಗ್ಯಕರ ಜೀವನಶೈಲಿ, ಕಳಪೆಮಟ್ಟದ ಆಹಾರ ಸೇವನೆ, ಒತ್ತಡ, ರಾಸಾಯನಿಕಯುಕ್ತ ಶಾಂಪೂ ಹಾಗೂ ಕಂಡಿಷನರ್​​​ಗಳ ಬಳಕೆ ಇವೆಲ್ಲಾದರ ಕಾರಣದಿಂದಾಗಿ ಹಲವಾರು ಕೂದಲಿನ ಸಮಸ್ಯೆಗಳು ನಮ್ಮನ್ನು ಬಾಧಿಸುತ್ತದೆ. ಕೂದಲಿಗೆ ಎಣ್ಣೆ ಹಚ್ಚುವುದು, ಸರಿಯಾದ ರೀತಿಯಲ್ಲಿ ಕೂದಲನ್ನು ಆರೈಕೆ ಮಾಡುವುದು ಈ ರೀತಿಯ ಬಾಹ್ಯ ಆರೈಕೆಯ ಜೊತೆಗೆ ಆರೋಗ್ಯಕರ ಆಹಾರ ಸೇವನೆಯಿಂದಲೂ ನಿಮ್ಮ ಕೂದಲಿನ ಆರೋಗ್ಯವನ್ನು ಸರಿಯಾದ ರೀತಿಯಲ್ಲಿ ಕಾಪಾಡಿಕೊಳ್ಳಬಹುದು. ಹಾಗಿದ್ದರೆ ಈ ಕೆಲವೊಂದು ಆರೋಗ್ಯಕರ ಜ್ಯೂಸ್​​​ಗಳನ್ನು ಸೇವಿಸುವ ಮೂಲಕ ನಿಮ್ಮ ಕೂದಲಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.

ಕೂದಲು ಬೆಳವಣಿಗೆಗೆ ಸಹಕಾರಿ ಈ 5 ಬಗೆಯ ಆರೋಗ್ಯಕರ ಪಾನೀಯಗಳು:

ಕ್ಯಾರೆಟ್ ಜ್ಯೂಸ್: ಕ್ಯಾರೆಟ್ ಜ್ಯೂಸ್ ನಮ್ಮ ಒಟ್ಟಾರೆ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು, ಕಣ್ಣಿನ ಆರೋಗ್ಯವನ್ನು ಸುಧಾರಿಸಲು, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸರಿಯಾಗಿ ನಿರ್ವಹಿಸಲು, ಹೃದಯದ ಆರೋಗ್ಯನ್ನು ಕಾಪಾಡಿಕೊಳ್ಳಲು ಕ್ಯಾರೆಟ್ ತುಂಬಾನೇ ಒಳ್ಳೆಯದು. ಅಲ್ಲದೆ ಕ್ಯಾರೆಟ್ ನಲ್ಲಿ ವಿಟಮಿನ್ ಎ, ಬಿ, ಸಿ, ಇ ಮತ್ತು ಕೆ ಹೇರಳವಾಗಿದ್ದು, ಇದು ಕೂದಲು ಬೆಳವಣಿಗೆಗೆ ಸಹಕಾರಿಯಾಗಿದೆ. ಕ್ಯಾರೆಟ್ ಜ್ಯೂಸ್ ಕುಡಿಯುವುದರಿಂದ ಅವುಗಳಲ್ಲಿನ ಉತ್ಕರ್ಷಣ ನಿರೋಧಕ, ಆಂಟಿಮೈಕ್ರೊಬಿಯಲ್ ಮತ್ತು ಉರಿಯೂತದ ಗುಣಲಕ್ಷಣಗಳು ಕೂದಲು ಉದುರುವಿಕೆಯನ್ನು ತಡೆಯಲು ಮತ್ತು ಕೂದಲಿನ ಕಿರುಚೀಲವನ್ನು ಬಲಪಡಿಸಲು ಸಹಾಯ ಮಾಡುತ್ತದೆ.

ಸ್ಟ್ರಾಬೆರಿ ಜ್ಯೂಸ್: ಇದು ರುಚಿಕರವಾದ ಹಾಗೂ ನಮ್ಮ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳ್ನು ಒದಗಿಸುವ ರಿಫ್ರೆಶಿಂಗ್ ಪಾನೀಯವಾಗಿದೆ. ಸ್ಟ್ರಾಬೆರಿ ಜ್ಯೂಸ್ ಜೀರ್ಣಾಂಗ ವ್ಯವಸ್ಥೆಗೆ ಒಳ್ಳೆಯದು ಮತ್ತು ಇದು ಕೂದಲನ್ನು ಹಾನಿಯಾಗದಂತೆ ರಕ್ಷಿಸುತ್ತದೆ. ಇದರಲ್ಲಿನ ವಿಟಮಿನ್ ಸಿ, ಬಿ6, ಇ, ಕೆ ಮತ್ತು ಫೋಲಿಕ್ ಆಮ್ಲದಂತಹ ಉತ್ಕರ್ಷಣ ನಿರೋಧಕಗಳು ಮತ್ತು ವಿವಿಧ ಪೋಷಕಾಂಶಗಳು ನೆತ್ತಿಯನ್ನು ಆರೋಗ್ಯಕರವಾಗಿರಿಸಲು ಮತ್ತು ಕೂದಲು ಉದುರುವಿಕೆಯನ್ನು ತಡೆಯಲು ಸಹಕಾರಿಯಾಗಿದೆ.

ಇದನ್ನೂ ಓದಿ:  ಕೂದಲಿನ ಬೆಳವಣಿಗೆ ಈ ಆಹಾರಗಳಿಂದ ಸಾಧ್ಯ

ಸೌತೆಕಯಿ ಜ್ಯೂಸ್: ಸೌತೆಕಾಯಿ ರಸವು ಜಲಸಂಚಯನಕಾರಿ ಪಾನೀಯವಾಗಿದೆ. ಮತ್ತು ಬೇಸಿಗೆಯಲ್ಲಿನ ಶಾಖದಿಂದ ಮುಕ್ತಿಪಡೆಯಲು ಇದು ಸಹಕಾರಿಯಾಗಿದೆ. ಅಲ್ಲದೆ ಸೌತೆಕಾಯಿಯಲ್ಲಿನ ವಿಟಮಿನ್ ಕೆ ಪೋಷಕಾಂಶವು ಕೂದಲಿನ ಪುನರುತ್ಪಾದನೆಗೆ ಸಹಾಯ ಮಾಡುತ್ತದೆ ಮತ್ತು ಇದರಲ್ಲಿನ ವಿಟಮಿನ್ ಎ ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ:

ಕೊತ್ತಂಬರಿ ಸೊಪ್ಪಿನ ಜ್ಯೂಸ್: ಕೊತ್ತಂಬರಿ ಸೊಪ್ಪಿನಲ್ಲಿ ವಿಟಮಿನ್ ಪೋಷಕಾಂಶಗಳು ಹೇರಳವಾಗಿದ್ದು, ಇದು ಹಲವಾರು ಕೂದಲಿನ ಸಮಸ್ಯೆಗೆ ಪರಿಹಾರವನ್ನು ಒದಗಿಸುತ್ತದೆ.. ಕೊತ್ತಂಬರಿ ಸೊಪ್ಪಿನ ಜ್ಯೂಸ್ ಕುಡಿಯುವುದರಿಂದ ದೇಹಕ್ಕೆ ಅಗತ್ಯವಾದ ಜೀವಸತ್ವಗಳು, ಖನಿಜಗಳು ಮತ್ತು ಪ್ರೋಟೀನ್ ಗಳಂತಹ ಪೋಷಕಾಂಶಗಳು ದೊರೆಯುತ್ತದೆ. ಮತ್ತು ಇದು ಕೂದಲಿನ ಆರೋಗ್ಯವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಅಲ್ಲದೆ ಇದು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸಲು ಮತ್ತು ಕೂದಲು ಉದುರುವಿಕೆಯನ್ನು ತಡೆಯಲು ಸಹಕಾರಿಯಾಗಿದೆ.

ಪಾಲಕ್ ಸೊಪ್ಪಿನ ಜ್ಯೂಸ್: ಕೊತ್ತಂಬರಿ ಸೊಪ್ಪಿನಂತೆ ಪಾಲಕ್ ಸೊಪ್ಪಿನಲ್ಲಿಯೂ ಕಬ್ಬಿಣಾಂಶ ಹೇರಳವಾಗಿದೆ. ಕಬ್ಬಿಣಾಂಶವು ಕೆಂಪು ರಕ್ತಕಣಗಳು ಕೂದಲು ಕಿರುಚೀಲಗಳಿಗೆ ಆಮ್ಲಜನಕವನ್ನು ಸಾಗಿಸಲು ಸಹಾಯ ಮಾಡುತ್ತದೆ. ಇದು ಬಲವಾದ ಮತ್ತು ಆರೋಗ್ಯಕರ ಕೂದಲು ಬೆಳವಣಿಗೆಗೆ ಕಾರಣವಾಗುತ್ತದೆ. ಅಲ್ಲದೆ ಪಾಲಕ್ ಸೊಪ್ಪಿನಲ್ಲಿರುವ ಪ್ರಮುಖ ಜೀವಸತ್ವಗಳು ಮತ್ತು ಕಬ್ಬಿಣಾಂಶವು ಹಲವಾರು ಕೂದಲು ಸಮಸ್ಯೆಗಳನ್ನು ಸುಲಭವಾಗಿ ತಡೆಯಲು ಸಹಾಯ ಮಾಡುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!