AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parenting Tips : ಪೋಷಕರೇ ಮಕ್ಕಳ ಮುಂದೆ ಯಾವತ್ತೂ ಈ ರೀತಿ ನಡೆದುಕೊಳ್ಳಬೇಡಿ

ನಿಮ್ಮ ಮಕ್ಕಳನ್ನು ನೀವು ಹೇಗೆ ಬೆಳೆಸುತ್ತೀರಿ ಎನ್ನುವುದರ ಮೇಲೆ ಅವರ ನಡವಳಿಕೆ ಹಾಗೂ ಭವಿಷ್ಯವು ನಿರ್ಧಾರವಾಗುತ್ತದೆ. ಒಂದು ವೇಳೆ ಪೋಷಕರಾದ ನೀವುಗಳು ಮಕ್ಕಳನ್ನು ಬೆಳೆಸುವ ವೇಳೆ ಸ್ವಲ್ಪ ಎಚ್ಚರ ತಪ್ಪಿದರೂ ಮಕ್ಕಳು ಹಾದಿ ತಪ್ಪುತ್ತಾರೆ. ಅದಲ್ಲದೇ ಮಕ್ಕಳ ಮುಂದೆ ಫೋಷಕರ ಈ ವರ್ತನೆಗಳು ಅವರ ಮೇಲೆ ನಾನಾ ರೀತಿಯ ಪರಿಣಾಮಗಳು ಬೀರಬಹುದು. ಹೀಗಾಗಿ ತಂದೆ ತಾಯಿಗಳು ತಮ್ಮ ಮಕ್ಕಳಿರುವಾಗ ಈ ತಪ್ಪುಗಳನ್ನು ಮಾಡದೇ ಇರುವುದು ಒಳ್ಳೆಯದು.

Parenting Tips : ಪೋಷಕರೇ ಮಕ್ಕಳ ಮುಂದೆ ಯಾವತ್ತೂ ಈ ರೀತಿ ನಡೆದುಕೊಳ್ಳಬೇಡಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Jul 12, 2024 | 4:14 PM

Share

ಮಕ್ಕಳನ್ನು ಬೆಳೆಸುವುದು ಎಂದರೆ ಅಷ್ಟು ಸುಲಭದ ಮಾತಲ್ಲ. ಮಗುವನ್ನು ದೈಹಿಕ, ಮಾನಸಿಕ ಹಾಗೂ ಆರೋಗ್ಯಯುತವಾಗಿ ಬೆಳೆಸುವಲ್ಲಿ ಪೋಷಕರ ಪಾತ್ರ ಬಹುದೊಡ್ಡದು. ಹೀಗಾಗಿ ಮಕ್ಕಳಿಗೆ ಒಳ್ಳೆಯ ಸಂಸ್ಕಾರ, ಸದ್ಗುಣಗಳೊಂದಿಗೆ ಬೆಳೆಸಿದರೆ ಉತ್ತಮ ವ್ಯಕ್ತಿಯಾಗಲು ಸಾಧ್ಯ. ಅದಲ್ಲದೇ ಮಕ್ಕಳೊಂದಿಗೆ ಈ ರೀತಿ ನಡೆದುಕೊಳ್ಳುವ ಪೋಷಕರು ಸಾವಿರ ಸಲ ಯೋಚಿಸಬೇಕು.

* ಪೋಷಕರು ಮಕ್ಕಳನ್ನು ಆಡಲು ಹೊರಗಡೆ ಬಿಡುವುದಿಲ್ಲ. ನಾಲ್ಕು ಗೋಡೆಗಳಲ್ಲಿ ನಡುವೆ ಮೊಬೈಲ್ ಕೊಟ್ಟು ಬಿಡುತ್ತಾರೆ. ಮಕ್ಕಳು ಹೆಚ್ಚು ಮೊಬೈಲ್ ಬಳಕೆ ಮಾಡುವುದರಿಂದ ಅವರ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅದಲ್ಲದೇ ಮಕ್ಕಳು ಮನೆಯಲ್ಲಿರುವಾಗ ಹೆತ್ತವರು ಕೂಡ ಮೊಬೈಲ್ ನಲ್ಲೇ ಮುಳುಗಿರುತ್ತಾರೆ. ಪೋಷಕರ ಈ ಅಭ್ಯಾಸವು ಮಕ್ಕಳು ಮೊಬೈಲ್ ಬಳಸುವುದಕ್ಕೆ ಪ್ರೇರೇಪಿಸುತ್ತದೆ.

* ಮಕ್ಕಳ ವಿಷಯದಲ್ಲಿ ಪೋಷಕರು ಮಾಡುವ ತಪ್ಪೆಂದರೆ ತಮ್ಮ ಮಗುವನ್ನು ಇತರ ಮಕ್ಕಳೊಂದಿಗೆ ಹೋಲಿಕೆ ಮಾಡುವುದು. ಎಲ್ಲಾ ಮಕ್ಕಳ ಮನಸ್ಥಿತಿ ಒಂದೇ ರೀತಿ ಇರುವುದಿಲ್ಲ. ಹೆತ್ತವರ ಈ ನಡವಳಿಕೆಯು ಮಕ್ಕಳ ಮನಸ್ಸಿನ ಮೇಲೆ ಗಾಢವಾದ ಪರಿಣಾಮ ಬೀರಬಹುದು. ಬೇರೆ ಮಕ್ಕಳೊಂದಿಗೆ ಹೋಲಿಕೆ ಮಾಡುವುದರಿಂದ ಮಕ್ಕಳ ಮನಸ್ಸಿಗೆ ನೋವಾಗುವುದೇ ಹೆಚ್ಚು.

* ಮಗು ಸಣ್ಣ ಪುಟ್ಟ ತಪ್ಪು ಮಾಡಿದ ಕೂಡಲೇ ಪೋಷಕರು ಬೈಯಲು ಪ್ರಾರಂಭಿಸುವುದು. ಹೆತ್ತವರು ತಾಳ್ಮೆಯಿಂದಲೇ ತಪ್ಪನ್ನು ತಿದ್ದಿ ಹೇಳುವುದು ಒಳ್ಳೆಯದು. ಮಕ್ಕಳಿಗೆ ಹೀಗೆ ಬೈದರೆ ಮಕ್ಕಳು ಹಾಳಾಗಲು ಹೆತ್ತವರೇ ಕಾರಣವಾಗುತ್ತಾರೆ. ತಂದೆ ತಾಯಿ ಬೈಯುತ್ತಾರೆ ಎನ್ನುವ ಕಾರಣ ಏನಾದರೂ ತಪ್ಪು ಮಾಡಿದರೆ ಮುಚ್ಚಿಡುವ ಸಾಧ್ಯತೆಯಿರುತ್ತದೆ. ಇದು ಮಕ್ಕಳ ಹಾದಿ ತಪ್ಪಲು ಮುಖ್ಯ ಕಾರಣವಾಗುತ್ತದೆ.

ಇದನ್ನೂ ಓದಿ: ಮಲೆನಾಡಿನ ಸಾಂಪ್ರದಾಯಿಕ ಅಡುಗೆ ಕೋಳಿ ಕಜ್ಜಾಯ, ಇಲ್ಲಿದೆ ರೆಸಿಪಿ

* ತಮ್ಮ ಮಕ್ಕಳಿಗೆ ಯಾವುದರಲ್ಲಿ ಕೊರತೆಯಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳು ಏನು ಕೇಳಿದರೂ ಕೊಡಿಸುತ್ತಾರೆ. ಮಕ್ಕಳಿಗೆ ಹಣ ಬೆಲೆ ಹಾಗೂ ಬಡತನದ ಬಗ್ಗೆ ಸ್ವಲ್ಪವಾದರೂ ಅನುಭವಿರಬೇಕು. ಕೇಳಿದ್ದನ್ನೆಲ್ಲ ಕೊಡಿಸುವುದರಿಂದ ಎಲ್ಲಾ ವಸ್ತುಗಳು ಮಕ್ಕಳ ಕೈ ಸೇರುತ್ತದೆ. ಮಕ್ಕಳಿಗೆ ತಮ್ಮ ಭಾವನೆಗಳನ್ನು ನಿಯಂತ್ರಿಸುವುದನ್ನು ಕಲಿಸಿಕೊಡದಿದ್ದರೆ ಮಕ್ಕಳು ಹಾದಿ ತಪ್ಪುವುದರಲ್ಲಿ ಸಂದೇಹವಿಲ್ಲ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!