AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mental Health: ಉತ್ತಮ ಮಾನಸಿಕ ಆರೋಗ್ಯಕ್ಕೆ ಈ ಅಭ್ಯಾಸ ರೂಢಿಸಿಕೊಳ್ಳಿ

ಆರೋಗ್ಯಕರ ಮಾನಸಿಕ ಯೋಗಕ್ಷೇಮವನ್ನು ಕಾಪಾಡಿಕೊಳ್ಳಲು ಬಹುತೇಕ ಜನರು ಹೆಚ್ಚಿನ ಗಮನ ಹರಿಸುವುದಿಲ್ಲ. ದೈಹಿಕ ಆರೋಗ್ಯದಂತೆಯೇ ಮಾನಸಿಕ ಆರೋಗ್ಯವೂ ಅಗತ್ಯ. ಉತ್ತಮ ಮಾನಸಿಕ ಆರೋಗ್ಯಕ್ಕಾಗಿ ನೀವು ಮಾಡಬಹುದಾದ ಕೆಲವು ಅಭ್ಯಾಸಗಳು ಹೀಗಿವೆ.

Mental Health: ಉತ್ತಮ ಮಾನಸಿಕ ಆರೋಗ್ಯಕ್ಕೆ ಈ ಅಭ್ಯಾಸ ರೂಢಿಸಿಕೊಳ್ಳಿ
ಮಾನಸಿಕ ಆರೋಗ್ಯ
ಸುಷ್ಮಾ ಚಕ್ರೆ
|

Updated on:Jan 03, 2024 | 6:02 PM

Share

ನಮ್ಮಲ್ಲಿ ಹೆಚ್ಚಿನವರು ನಿಯಮಿತ ವ್ಯಾಯಾಮದಲ್ಲಿ ತೊಡಗಿಸಿಕೊಳ್ಳಲು ಮತ್ತು ಆರೋಗ್ಯಕರ ದೇಹ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಆರೋಗ್ಯಕರ ಡಯೆಟ್ ಅನುಸರಿಸುತ್ತಾರೆ. ಆದರೆ, ಆರೋಗ್ಯಕರ ಮಾನಸಿಕ ಯೋಗಕ್ಷೇಮವನ್ನು ಕಾಪಾಡಿಕೊಳ್ಳಲು ಬಹುತೇಕ ಜನರು ಹೆಚ್ಚಿನ ಗಮನ ಹರಿಸುವುದಿಲ್ಲ. ದೈಹಿಕ ಆರೋಗ್ಯದಂತೆಯೇ ಮಾನಸಿಕ ಆರೋಗ್ಯವೂ ಅಗತ್ಯ. ಉತ್ತಮ ಮಾನಸಿಕ ಆರೋಗ್ಯಕ್ಕಾಗಿ ನೀವು ಮಾಡಬಹುದಾದ ಕೆಲವು ಅಭ್ಯಾಸಗಳು ಹೀಗಿವೆ.

ಪಾಸಿಟಿವ್ ಮಂತ್ರದೊಂದಿಗೆ ದಿನವನ್ನು ಪ್ರಾರಂಭಿಸಿ:

ಸಕಾರಾತ್ಮಕ ಹೇಳಿಕೆ ಅಥವಾ ಪಾಸಿಟಿವ್ ಮಾತಿನಿಂದ ನಿಮ್ಮ ದಿನವನ್ನು ಆರಂಭಿಸಿ. ಇದು ನಿಮ್ಮ ದಿನಕ್ಕೆ ಉತ್ತಮ ಆರಂಭವನ್ನು ನೀಡುತ್ತದೆ ಮತ್ತು ನಿಮ್ಮ ಒಟ್ಟಾರೆ ಮಾನಸಿಕ ಯೋಗಕ್ಷೇಮವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಕೃತಜ್ಞತೆಯನ್ನು ಅಭ್ಯಾಸ ಮಾಡಿ:

ನಿಮಗೆ ಸಹಾಯ ಮಾಡಿದವರ ಅಥವಾ ನಿಮ್ಮ ದಿನ ಚೆನ್ನಾಗಿದ್ದುದಕ್ಕೆ ಕಾರಣರಾದವರಿಗೆ ಥ್ಯಾಂಕ್ಸ್ ಹೇಳಿ. ಅವರಿಗೆ ಬಾಯಿ ಬಿಟ್ಟು ಹೇಳಲು ಸಾಧ್ಯವಾಗದಿದ್ದರೆ ನಿಮ್ಮ ಡೈರಿಯಲ್ಲಿ ಬರೆದಿಡಿ. ಈ ಅಭ್ಯಾಸವು ನಿಮ್ಮ ಗಮನವನ್ನು ಜೀವನದ ಸಕಾರಾತ್ಮಕ ಅಂಶಗಳ ಕಡೆಗೆ ಬದಲಾಯಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಚಳಿಗಾಲದಲ್ಲಿ ಹೃದಯಾಘಾತದ ಅಪಾಯದಿಂದ ಪಾರಾಗುವುದು ಹೇಗೆ?

ನಿಯಮಿತ ದೈಹಿಕ ವ್ಯಾಯಾಮದಲ್ಲಿ ತೊಡಗಿಸಿಕೊಳ್ಳಿ:

ಒತ್ತಡವನ್ನು ಕಡಿಮೆ ಮಾಡುವ ಮೂಲಕ, ಚಿತ್ತವನ್ನು ಹೆಚ್ಚಿಸುವ ಮತ್ತು ಒಟ್ಟಾರೆ ಯೋಗಕ್ಷೇಮವನ್ನು ಸುಧಾರಿಸುವ ಮೂಲಕ ವ್ಯಾಯಾಮವು ಮಾನಸಿಕ ಆರೋಗ್ಯದ ಮೇಲೆ ಗಮನಾರ್ಹ ಪರಿಣಾಮ ಬೀರುತ್ತದೆ. ನಿಮ್ಮ ದೈನಂದಿನ ದಿನಚರಿಯಲ್ಲಿ ನಿಯಮಿತ ದೈಹಿಕ ಚಟುವಟಿಕೆಯನ್ನು ಸೇರಿಸಿಕೊಳ್ಳಿ.

ಉತ್ತಮವಾಗಿ ನಿದ್ರೆ ಮಾಡಿ:

ಪ್ರತಿದಿನ ಒಂದೇ ಸಮಯದಲ್ಲಿ ಮಲಗಲು ಮತ್ತು ಏಳುವ ಮೂಲಕ ಸ್ಥಿರವಾದ ನಿದ್ರೆಯ ದಿನಚರಿಯನ್ನು ರೂಢಿಸಿಕೊಳ್ಳಿ. ಮಲಗುವ ಮುನ್ನ ಕೆಫೀನ್ ಮತ್ತು ಪರದೆಗಳನ್ನು ತಪ್ಪಿಸಿ ಮತ್ತು ನಿಮ್ಮ ನಿದ್ರೆಯ ವಾತಾವರಣವು ಆರಾಮದಾಯಕವಾಗಿರಲಿ.

ಧ್ಯಾನವನ್ನು ಅಭ್ಯಾಸ ಮಾಡಿ:

ಧ್ಯಾನಕ್ಕಾಗಿ ಪ್ರತಿದಿನ ಕೆಲವು ನಿಮಿಷಗಳನ್ನು ಮೀಸಲಿಡಿ. ಇದು ನಿಮ್ಮ ಉಸಿರಾಟದ ಮೇಲೆ ಕೇಂದ್ರೀಕರಿಸುವುದು, ನಿಮ್ಮ ಆಲೋಚನೆಗಳನ್ನು ಗಮನಿಸುವುದು ಅಥವಾ ಧ್ಯಾನವನ್ನು ಅಭ್ಯಾಸ ಮಾಡುವುದನ್ನು ಒಳಗೊಂಡಿರುತ್ತದೆ. ನಿಯಮಿತವಾದ ಧ್ಯಾನದ ಅಭ್ಯಾಸವು ಮನಸ್ಸನ್ನು ಶಾಂತಗೊಳಿಸಲು, ಒತ್ತಡವನ್ನು ಕಡಿಮೆ ಮಾಡಲು ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಮಾನಸಿಕ ಒತ್ತಡದಿಂದ ದೇಹದ ತೂಕ ಹೆಚ್ಚಾಗಲು ಕಾರಣವೇನು?

ಮೊಬೈಲ್, ಟಿವಿ ನೋಡುವುದನ್ನು ಕಡಿಮೆ ಮಾಡಿ:

ನೀವು ಸಾಮಾಜಿಕ ಮಾಧ್ಯಮದಲ್ಲಿ ಕಳೆಯುವ ಸಮಯದ ಮಿತಿಯನ್ನು ಕಡಿಮೆ ಮಾಡಿ. ಇಂಟರ್ನೆಟ್ ಬ್ರೌಸಿಂಗ್ ಅಥವಾ ಟಿವಿ ವೀಕ್ಷಿಸಲು ಹೆಚ್ಚು ಸಮಯ ಕಳೆಯಬೇಡಿ. ಅತಿಯಾದ ಸ್ಕ್ರೀನಿಂಗ್ ಸಮಯವು ಮಾನಸಿಕ ಯೋಗಕ್ಷೇಮದ ಮೇಲೆ ಪರಿಣಾಮ ಬೀರಬಹುದು.

ನೀವು ಆನಂದಿಸುವ ಹವ್ಯಾಸಗಳನ್ನು ಮುಂದುವರೆಸಿ:

ಓದುವುದು, ಚಿತ್ರಕಲೆ ಮಾಡುವುದು, ಸಂಗೀತ ಕೇಳುವುದು, ಸಂಗೀತ ವಾದ್ಯವನ್ನು ನುಡಿಸುವುದು ಅಥವಾ ಕ್ರೀಡೆಯಲ್ಲಿ ತೊಡಗಿರುವಂತಹ ನಿಮಗಿಷ್ಟವಾದ ಚಟುವಟಿಕೆಗೆ ಪ್ರತಿದಿನ ಸಮಯವನ್ನು ಮೀಸಲಿಡಿ. ಈ ಚಟುವಟಿಕೆಗಳು ದೈನಂದಿನ ಒತ್ತಡಗಳಿಂದ ನಿಮಗೆ ರಿಲ್ಯಾಕ್ಸ್ ನೀಡುತ್ತವೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:02 pm, Wed, 3 January 24

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!