Healthy Relationships: ಮದುವೆ ಮುನ್ನ ಮಾಡಬೇಕಾದ ಮುಖ್ಯ ಕೆಲಸಗಳಿವು

ಮದುವೆಯಾಗುವ ಮೊದಲು ಮಹಿಳೆ ಮತ್ತು ಪುರುಷ ಇಬ್ಬರೂ ಕೆಲವು ಕೆಲಸಗಳನ್ನು ಮಾಡಬೇಕು ಎಂದು ಮನೋವೈದ್ಯರು ಸಲಹೆ ನೀಡುತ್ತಾರೆ. ಇವುಗಳಿಂದ ನಿಮ್ಮ ವರ್ತಮಾನ ಮಾತ್ರವಲ್ಲದೆ ನಿಮ್ಮ ಭವಿಷ್ಯವೂ ಉತ್ತಮವಾಗಿರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಮದುವೆಗೂ ಮುನ್ನ ಅನುಸರಿಸಬೇಕಾದ ಕೆಲವು ವಿಷಯಗಳನ್ನು ಇಲ್ಲಿ ತಿಳಿದುಕೊಳ್ಳಿ.

Healthy Relationships: ಮದುವೆ ಮುನ್ನ ಮಾಡಬೇಕಾದ ಮುಖ್ಯ ಕೆಲಸಗಳಿವು
Follow us
ಅಕ್ಷತಾ ವರ್ಕಾಡಿ
|

Updated on: Aug 23, 2024 | 7:58 PM

ಮದುವೆಯು ಪುರುಷ ಮತ್ತು ಮಹಿಳೆಯ ಜೀವನದ ಮುಖ್ಯ ಘಟ್ಟ. ಕೌಟುಂಬಿಕ ಹೊರೆ ಮತ್ತು ಕೆಲಸದ ಹೊರೆಯಿಂದಾಗಿ ಪುರುಷರು ಮದುವೆಗೆ ಮೊದಲು ತಮ್ಮ ಆರೋಗ್ಯದ ಬಗ್ಗೆ ಗಮನ ಹರಿಸುವುದಿಲ್ಲ. ಇದು ಅವರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಮದುವೆಯಾಗುವ ಮೊದಲು ಮಹಿಳೆ ಮತ್ತು ಪುರುಷ ಇಬ್ಬರೂ ಕೆಲವು ಕೆಲಸಗಳನ್ನು ಮಾಡಬೇಕು. ಇವುಗಳಿಂದ ನಿಮ್ಮ ವರ್ತಮಾನ ಮಾತ್ರವಲ್ಲದೆ ನಿಮ್ಮ ಭವಿಷ್ಯವೂ ಉತ್ತಮವಾಗಿರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಮದುವೆಗೂ ಮುನ್ನ ಅನುಸರಿಸಬೇಕಾದ ಕೆಲವು ವಿಷಯಗಳನ್ನು ಇಲ್ಲಿ ತಿಳಿದುಕೊಳ್ಳಿ.

ವೈದ್ಯಕೀಯ ಪರೀಕ್ಷೆ:

ನೀವು ಮದುವೆಯಾಗುವ ಮೊದಲು ವೈದ್ಯರನ್ನು ಸಂಪರ್ಕಿಸಿ ಮತ್ತು ಕೆಲವು ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸಿಕೊಳ್ಳುವುದು ಉತ್ತಮ. ಯಾವುದೇ ಆನುವಂಶಿಕ ಕಾಯಿಲೆಗಳನ್ನು ಮದುವೆಗೆ ಮೊದಲು ಪತ್ತೆ ಹಚ್ಚಬಹುದು ಮತ್ತು ಸರಿಪಡಿಸಬಹುದು ಎಂದು ವೈದ್ಯರು ಹೇಳುತ್ತಾರೆ. ಬದಲಾಗುತ್ತಿರುವ ಜೀವನಶೈಲಿಯಿಂದ ಅನೇಕ ರೋಗಗಳು ನಿರ್ದಿಷ್ಟ ವಯಸ್ಸಿನಲ್ಲಿ ದೇಹವನ್ನು ಆಕ್ರಮಿಸುತ್ತವೆ. ಈ ಎಲ್ಲಾ ಕಾಯಿಲೆಗಳು ಮದುವೆಗೆ ಮುಂಚೆಯೇ ಪತ್ತೆಯಾದರೆ, ಅವುಗಳನ್ನು ತಪ್ಪಿಸಲು ಅಥವಾ ಚಿಕಿತ್ಸೆ ನೀಡುವುದು ತುಂಬಾ ಸುಲಭ. ಇದು ನಿಮ್ಮ ವೈವಾಹಿಕ ಜೀವನ ಸುಖಮಯವಾಗಿರುತ್ತದೆ.

ಹಸ್ತಮೈಥುನ ಅಭ್ಯಾಸ ತ್ಯಜಿಸಿ:

ಲೈಂಗಿಕ ಬಯಕೆಗಳನ್ನು ಪೂರೈಸಲು ಪುರುಷರು ಮತ್ತು ಮಹಿಳೆಯರು ಇಬ್ಬರೂ ಹಸ್ತಮೈಥುನದಲ್ಲಿ ತೊಡಗುತ್ತಾರೆ. ಮದುವೆಗೆ ಮೊದಲು ನೀವು ಈ ಅಭ್ಯಾಸವನ್ನು ತ್ಯಜಿಸುವುದು ಮುಖ್ಯ. ಕೆಲವರು ಇದನ್ನು ದಿನನಿತ್ಯ ಬಳಸುತ್ತಾರೆ ಮತ್ತು ಅದನ್ನು ಚಟವಾಗಿ ಪರಿವರ್ತಿಸುತ್ತಾರೆ. ಈ ಸ್ವಯಂ ಭೋಗವು ನಿಮ್ಮ ಸಂಬಂಧವನ್ನು ಹಾಳು ಮಾಡುತ್ತದೆ. ಆದುದರಿಂದ ಆದಷ್ಟು ಸ್ವಯಂ ಭೋಗವನ್ನು ತ್ಯಜಿಸುವುದು ಉತ್ತಮ.

ವ್ಯಾಯಾಮ:

ದಿನಕ್ಕೆ ಕನಿಷ್ಠ 15 ನಿಮಿಷಗಳ ಕಾಲ ವ್ಯಾಯಾಮ ಮಾಡುವುದರಿಂದ ನಿಮ್ಮ ಫಿಟ್ನೆಸ್ ಅನ್ನು ಸುಧಾರಿಸಬಹುದು ಮತ್ತು ನಿಮ್ಮ ಕಾಮವನ್ನು ಹೆಚ್ಚಿಸಬಹುದು. ಅಕಾಲಿಕ ಸ್ಖಲನದಂತಹ ಸಮಸ್ಯೆಯು ನಿಮಗೆ ಒತ್ತಡವನ್ನು ಉಂಟುಮಾಡಬಹುದು ಮತ್ತು ಕುಟುಂಬದೊಳಗೆ ಸಮಸ್ಯೆಗಳನ್ನು ಉಂಟುಮಾಡಬಹುದು. ವ್ಯಾಯಾಮದಿಂದ ಇಂತಹ ಸಮಸ್ಯೆಗಳನ್ನು ಕಡಿಮೆ ಮಾಡಬಹುದು.

ಇದನ್ನೂ ಓದಿ: ಕೂದಲಿಗೆ ಮೆಹಂದಿ ಹಚ್ಚುತ್ತಿದ್ರೆ ಇಂದೇ ನಿಲ್ಲಿಸಿ ಬಿಡಿ, ಈ ರೋಗ ಬರುವುದು ಖಂಡಿತ

ಆರೋಗ್ಯಕರ ಆಹಾರ:

ಆರೋಗ್ಯಕರ ಆಹಾರವನ್ನು ಸೇವಿಸುವುದರಿಂದ ನಿಮ್ಮ ದೇಹವನ್ನು ಆರೋಗ್ಯಕರವಾಗಿರಿಸುವುದು ಮಾತ್ರವಲ್ಲದೆ ನಿಮ್ಮ ಲೈಂಗಿಕ ಆರೋಗ್ಯವನ್ನು ಸುಧಾರಿಸುತ್ತದೆ. ಕೆಲವು ಆಹಾರಗಳು ಸೆಕ್ಸ್ ಡ್ರೈವ್, ಲಿಬಿಡೋ (ಲೈಂಗಿಕ ಬಯಕೆಯ ಒಂದು ರೂಪ) ಮತ್ತು ವೀರ್ಯಾಣು ಸಂಖ್ಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಆದ್ದರಿಂದ, ನಿಮ್ಮ ಆಹಾರದಲ್ಲಿ ಪ್ರೋಟೀನ್ಗಳು, ಕಾರ್ಬೋಹೈಡ್ರೇಟ್ಗಳು ಮತ್ತು ಉತ್ತಮ ಕೊಬ್ಬುಗಳನ್ನು ಸೇರಿಸುವ ಮೂಲಕ, ಲೈಂಗಿಕ ಜೀವನವು ಆರೋಗ್ಯಕರವಾಗಿರುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್