ಪ್ರತಿನಿತ್ಯ ನಿಯಮಿತವಾಗಿ ವ್ಯಾಯಾಮ ಮಾಡದಿದ್ದರೆ ಏನೆಲ್ಲಾ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು ಗೊತ್ತಾ?

ನಿಮ್ಮ ಆರೋಗ್ಯದ ಕುರಿತಾಗಿ ಕಾಳಜಿ ಮಾಡಬೇಕಾದರೆ ವ್ಯಾಯಾಮ ಅತ್ಯವಶ್ಯಕ. ನಿಯಮಿತವಾದ ವ್ಯಾಯಾಮ ಮಾಡುವ ಅಭ್ಯಾಸವನ್ನು ಪ್ರತಿನಿತ್ಯ ರೂಢಿಯಲ್ಲಿಕೊಳ್ಳಿ.

ಪ್ರತಿನಿತ್ಯ ನಿಯಮಿತವಾಗಿ ವ್ಯಾಯಾಮ ಮಾಡದಿದ್ದರೆ ಏನೆಲ್ಲಾ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು ಗೊತ್ತಾ?
ಸಂಗ್ರಹ ಚಿತ್ರ
Follow us
TV9 Web
| Updated By: preethi shettigar

Updated on: Oct 23, 2021 | 9:17 AM

ದೈಹಿಕ ವ್ಯಾಯಾಮ ನಿಜವಾಗಿಯೂ ನಿಮ್ಮ ಆರೋಗ್ಯವನ್ನು ಸುಧಾರಿಸುವಲ್ಲಿ ಸಹಾಯಕವಾಗಿದೆ. ನಿಯಮಿತವಾದ ವ್ಯಾಯಾಮವು ನಿಮ್ಮನ್ನು ಸದೃಢಗೊಳಿಸುತ್ತದೆ. ಜತೆಗೆ ಪ್ರತಿನಿತ್ಯ 45 ರಿಂದ 50 ನಿಮಿಷಗಳ ವ್ಯಾಯಾಮ ಮಾಡುವ ಅಭ್ಯಾಸ ರೂಢಿಯಲ್ಲಿರಲಿ. ನೀವು ವ್ಯಾಯಾಮ ಮಾಡದಿದ್ದರೆ, ಏನೆಲ್ಲಾ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು ಎಂಬುದರ ಕುರಿತಾದ ಕೆಲವು ಮಾಹಿತಿಗಳು ಇಲ್ಲಿದೆ.

ಆರೋಗ್ಯಕರ ಜೀವನ ಶೈಲಿಗೆ ಪೌಷ್ಟಿಕ ಆಹಾರ ಸೇವನೆ ಮಾಡುವುದು ಜತೆಗೆ ದೇಹಕ್ಕೆ ಹಾನಿ ಮಾಡುವ ಧೂಮಪಾನ ಮದ್ಯಪಾನದಿಂದ ದೂರವಿರುವುದು ಒಳ್ಳೆಯದು. ಇದರ ಜತೆಗೆ ದೈಹಿಕವಾದ ವ್ಯಾಯಾಮ ಕೂಡಾ ಅಷ್ಟೇ ಮುಖ್ಯ. ಈಗೆಲ್ಲಾ ಎಲ್ಲಾ ಸಾಮಗ್ರಿಗಳನ್ನು ಅಂಗಡಿಗೆ ಹೋಗಿ ತರುವ ಅವಶ್ಯಕತೆಯೇ ಇಲ್ಲ. ಆನ್ಲೈನ್ ಮೂಲಕ ಆರ್ಡರ್ ಮಾಡುವುದರಿಂದ ನಡೆಯುವ ಅಭ್ಯಾಸವೇ ತಪ್ಪಿಹೋಗಿದೆ. ಕೂತಲ್ಲಿಯೇ ಎಲ್ಲವೂ ಬಂದಿರುತ್ತದೆ. ಹೀಗಿರುವಾಗ ನಿಮ್ಮ ಆರೋಗ್ಯದ ಕುರಿತಾಗಿ ಕಾಳಜಿ ಮಾಡಬೇಕಾದರೆ ವ್ಯಾಯಾಮ ಅತ್ಯವಶ್ಯಕ. ನಿಯಮಿತವಾದ ವ್ಯಾಯಾಮ ಮಾಡುವ ಅಭ್ಯಾಸವನ್ನು ಪ್ರತಿನಿತ್ಯ ರೂಢಿಯಲ್ಲಿಕೊಳ್ಳಿ.

ನೀವು ನಿಯಮಿತವಾಗಿ ವ್ಯಾಯಾಮ ಮಾಡದಿದ್ದರೆ ಉಂಟಾಗಬಹುದಾದ ಸಮಸ್ಯೆಗಳು ಹೃದಯ ಆರೋಗ್ಯ ಸುಧಾರಿಸುವುದಿಲ್ಲ ನಿಯಮಿತ ವ್ಯಾಯಾಮದಿಂದ ಹೃದಯದ ಆರೋಗ್ಯವು ಸುಧಾರಿಸುತ್ತದೆ. ಜತೆಗೆ ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ನೀವು ದೀರ್ಘಕಾಲದವರೆಗೆ ವ್ಯಾಯಾಮ ಮಾಡದಿದ್ದರೆ ಹೃದಯದ ಆರೋಗ್ಯವು ಕುಂಠಿತಗೊಳ್ಳಬಹುದು. ಹಾಗಿರುವಾಗ ಪ್ರತಿನಿತ್ಯ ವ್ಯಾಯಾಮ ಮಾಡುವ ಅಭ್ಯಾಸವನ್ನು ರೂಢಿಯಿರಲಿ.

ಸ್ನಾಯುಗಳಲ್ಲಿ ದುರ್ಬಲತೆ ಸಾಕಷ್ಟು ದೈಹಿಕ ವ್ಯಾಯಾಮ ಮಾಡದಿದ್ದಾಗ ಸ್ನಾಯುವಿನ ಬಲವು ಕಡಿಮೆಯಾಗುತ್ತದೆ. ಜತೆಗೆ ಸ್ನಾಯು ಸೆಳೆತ, ನೋವುಗಳು ಕಂಡು ಬರುತ್ತವೆ. ಹೀಗಿರುವಾಗ ಪ್ರತಿನಿತ್ಯವೂ ನಿಯಮಿತವಾಗಿ ವ್ಯಾಯಾಮ ಮಾಡುವ ಅಭ್ಯಾಸ ರೂಢಿಯಲ್ಲಿರಲಿ.

ನಿದ್ರೆಯ ತೊಂದರೆ ಉತ್ತಮ ವ್ಯಾಯಾಮವು ನಿಮ್ಮ ಆರೋಗ್ಯವನ್ನು ಸುಧಾರಿಸಲು ನೆರವಾಗುತ್ತದೆ. ನಿದ್ರೆ ಕೊರತೆಯು ದೇಹಕ್ಕೆ ಸುಸ್ತು, ಆಯಾಸವನ್ನು ಉಂಟು ಮಾಡುತ್ತದೆ. ನಿದ್ರೆಯ ಕೊರತೆಯು ಹಾರ್ಮೋನುಗಳ ಸಮಸ್ಯೆಗಳೊಂದಿಗೆ ಸಂಭವಿಸುತ್ತದೆ. ಇದರಿಂದ ಮಧುಮೇಹದ ಅಪಾಯ, ತೂಕ ಹೆಚ್ಚಾಗುವುದು ಮತ್ತು ಮಾನಸಿಕ ಆರೋಗ್ಯ ಹದಗೆಡುವ ತೊಂದರೆಗಳು ಉಂಟಾಗಬಹುದು.

ಇದನ್ನೂ ಓದಿ:

Health Tips: ಸಾತ್ವಿಕ ಆಹಾರ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬಹುದು

Health Tips: ಬಿಸಿ ನೀರು ಕುಡಿಯುವಾಗ ಈ 3 ಪದಾರ್ಥಗಳನ್ನು ಸೇರಿಸಿ; ಆರೋಗ್ಯಕರ ಬದಲಾವಣೆಯ ಬಗ್ಗೆ ತಿಳಿಯಿರಿ

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?