AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Good Cholesterol: ನಿಮ್ಮ ದೇಹದಲ್ಲಿ ಆರೋಗ್ಯಕರ ಕೊಬ್ಬನ್ನು ಹೆಚ್ಚಿಸಬಲ್ಲ ಆಹಾರಗಳಿವು

ನಿಮ್ಮ ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್​ (Cholesterol)ಅನ್ನು ಹೋಗಲಾಡಿಸಲು ಒಂದೇ ಮಾರ್ಗ ಅದು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುವುದು.

Good Cholesterol: ನಿಮ್ಮ ದೇಹದಲ್ಲಿ ಆರೋಗ್ಯಕರ ಕೊಬ್ಬನ್ನು ಹೆಚ್ಚಿಸಬಲ್ಲ ಆಹಾರಗಳಿವು
Chia Seeds
TV9 Web
| Edited By: |

Updated on: Nov 16, 2022 | 8:00 AM

Share

ನಿಮ್ಮ ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್​ (Cholesterol)ಅನ್ನು ಹೋಗಲಾಡಿಸಲು ಒಂದೇ ಮಾರ್ಗ ಅದು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುವುದು. ಉತ್ತಮ ಕೊಲೆಸ್ಟ್ರಾಲ್​ ಮಟ್ಟವನ್ನು ದೇಹದಲ್ಲಿ ಹೆಚ್ಚು ಮಾಡಲು ಕೆಟ್ಟ ಅಭ್ಯಾಸಗಳಾದ ಧೂಮಪಾನ, ಮಧ್ಯಪಾನ ಸೇರಿದಂತೆ ಅನಾರೋಗ್ಯಕರ ಜೀವನಶೈಲಿಯನ್ನು ತಪ್ಪಿಸಬೇಕು.

ಕೊಲೆಸ್ಟ್ರಾಲ್, ಪಿತ್ತಕೋಶದಲ್ಲಿ ಉತ್ಪತ್ತಿಯಾಗುವಂಥ ಮೇಣದ ರೀತಿಯ ಒಂದು ವಸ್ತು, ಕೆಲವು ಆಹಾರಗಳಲ್ಲಿಯೂ ಕಂಡು ಬರುತ್ತದೆ. ವಿಟಮಿನ್ ಡಿ ಮತ್ತು ಕೆಲ ಹಾರ್ಮೋನುಗಳು, ಜೀವಕೋಶಗಳ ಭಿತ್ತಿಗಳ ನಿರ್ಮಾಣ, ಕೊಬ್ಬಿನಂಶವನ್ನು ಕರಗಿಸುವ ಬೈಲ್ ಸಾಲ್ಟ್ಗಳ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.

ಪ್ರಮಾಣದಲ್ಲಿ ಅಲ್ಲದಿದ್ದರೂ, ದೇಹಕ್ಕೆ ಕೊಬ್ಬು ಬೇಕೇ ಬೇಕು. ಆದರೆ, ನಾವು ಬಹುತೇಕ ಅಗತ್ಯಕ್ಕಿಂತ ಹೆಚ್ಚು ತಿನ್ನುತ್ತೇವೆ. ದೇಹಕ್ಕೆ ದಿನವೊಂದಕ್ಕೆ ಬೇಕಾಗುವ ಒಟ್ಟು ಕ್ಯಾಲೋರಿಗಳಲ್ಲಿ ನಾಲ್ಕನೇ ಒಂದು ಭಾಗ ಕೊಬ್ಬಿನಿಂದ ಬರಬೇಕು. ಆದರೆ, ಸ್ಪಲ್ಪ ಪ್ರಮಾಣದಲ್ಲಿ ಮಾತ್ರ ಈ ಶಕ್ತಿ ಸ್ಯಾಚುರೇಟೆಟ್ ಫ್ಯಾಟ್ ಗಳಿಂದ ಬರುತ್ತದೆ.

ಆರೋಗ್ಯಕರ ಕೊಬ್ಬನ್ನು ಹೆಚ್ಚಿಸುವ ಆಹಾರಗಳು ಚಿಯಾ ಬೀಜಗಳು ಚಿಯಾ ಬೀಜಗಳಲ್ಲಿ ಒಮೆಗಾ-3 ಕೊಬ್ಬಿನಾಮ್ಲಗಳು, ಫೈಬರ್ ಮತ್ತು ಇತರ ಆರೋಗ್ಯಕರ ಪೋಷಕಾಂಶಗಳ ಉತ್ತಮ ಮೂಲವಾಗಿದೆ. ನಿಮ್ಮ ಆಹಾರದಲ್ಲಿ ಚಿಯಾ ಬೀಜಗಳನ್ನು ಸೇರಿಸುವುದರಿಂದ ಎಲ್ಡಿಎಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಬಾರ್ಲಿ ಇದು ಕರಗಬಲ್ಲ ಫೈಬರ್ ಆಗಿದ್ದು ಅದು ಉತ್ತಮ ಎಚ್‌ಡಿಎಲ್ ಮತ್ತು ಎಲ್‌ಡಿಎಲ್ ಅನುಪಾತಕ್ಕೆ ಸಹಾಯ ಮಾಡುತ್ತದೆ.

ವಾಲ್ನಟ್ಸ್ ವಾಲ್‌ನಟ್ಸ್‌ನಲ್ಲಿ ಕಂಡುಬರುವ ಕೊಬ್ಬು ಮುಖ್ಯವಾಗಿ ಒಮೆಗಾ-3 ಕೊಬ್ಬುಗಳು, ಹೃದಯ-ರಕ್ಷಣಾತ್ಮಕ ಗುಣಗಳನ್ನು ಹೊಂದಿರುವ ಮೊನೊಸಾಚುರೇಟೆಡ್ ಕೊಬ್ಬಿನಾಮ್ಲವಾಗಿದೆ. ಹೀಗಾಗಿ ವಾಲ್್ನಟ್ಸ್ ರಕ್ತದ ಒಟ್ಟು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ ಮತ್ತು HDL ಅಥವಾ ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತದೆ.

ತೆಂಗಿನ ಎಣ್ಣೆ ತೆಂಗಿನ ಎಣ್ಣೆಯು ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ, ಮಧ್ಯಮ ಸರಪಳಿ ಟ್ರೈಗ್ಲಿಸರೈಡ್‌ಗಳು ತೆಂಗಿನ ಎಣ್ಣೆಯಲ್ಲಿರುವ ಕೊಬ್ಬಿನಾಮ್ಲಗಳ ಒಂದು ಸಣ್ಣ ಪ್ರಮಾಣವನ್ನು ಮಾತ್ರ ರೂಪಿಸುತ್ತವೆ.

ಸೋಯಾಬೀನ್ ಮಾಂಸಾಹಾರಕ್ಕೆ ಸಮಾನವಾದ ಸಸ್ಯಾಹಾರಿ, ಸೋಯಾಬೀನ್ ಕೊಬ್ಬು, ಫೈಬರ್ ಮತ್ತು ಪ್ರೋಟೀನ್‌ ಪ್ರಮಾಣ ಹೆಚ್ಚಿರಲಿದೆ. ಐಸೊಫ್ಲಾವೊನ್‌ಗಳು ಎಚ್‌ಡಿಎಲ್ ಮಟ್ಟವನ್ನು ಹೆಚ್ಚಿಸುತ್ತವೆ ಮತ್ತು ಫೈಟೊಈಸ್ಟ್ರೊಜೆನ್‌ಗಳು ಎಲ್‌ಡಿಎಲ್ ಮಟ್ಟಗಳು ಮತ್ತು ಟ್ರೈಗ್ಲಿಸರೈಡ್‌ಗಳನ್ನು ಕಡಿಮೆ ಮಾಡಿದರೆ ನಿಮ್ಮ ಲಿಪಿಡ್ ಪ್ರೊಫೈಲ್ ಅನ್ನು ಸುಧಾರಿಸಬಹುದು.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್