AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಗಾಲದಲ್ಲಿ ಈ ತರಕಾರಿಗಳನ್ನು ಫ್ರಿಡ್ಜ್‌ನಲ್ಲಿ ಇಡುವ ತಪ್ಪನ್ನು ಮಾಡಲೇಬೇಡಿ

ಈಗಂತೂ ಫ್ರಿಡ್ಜ್‌ ನಮೆಲ್ಲರ ಜೀವನದ ಅವಿಭಾಜ್ಯ ಅಂಗವಾಗಿ ಹೋಗಿದೆ. ದೀರ್ಘಕಾಲ ತಾಜಾವಾಗಿರಲೆಂದು ಮಾರುಕಟ್ಟೆಯಿಂದ ತಂದಂತಹ ಹಣ್ಣು, ತರಕಾರಿ, ಹಾಲು ಸೇರಿದಂತೆ ಎಲ್ಲಾ ವಸ್ತುಗಳನ್ನು ಫ್ರಿಡ್ಜ್‌ನಲ್ಲಿ ತುಂಬಿಸಿಡುತ್ತೇವೆ. ಆದರೆ ವಿಶೇಷವಾಗಿ ಈ ಚಳಿಗಾಲದಲ್ಲಿ ಕೆಲವೊಂದಿಷ್ಟು ತರಕಾರಿಗಳನ್ನು ಫ್ರಿಡ್ಜ್‌ನಲ್ಲಿ ಇಡಬಾರದಂತೆ, ಇವು ನಮ್ಮ ಅರೋಗ್ಯದ ಮೇಲೆ ನಾಕಾರಾತ್ಮಕ ಪರಿಣಾಮವನ್ನು ಬೀರುತ್ತಂತೆ. ಹಾಗಿದ್ರೆ ಆ ತರಕಾರಿಗಳು ಯಾವುವು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಚಳಿಗಾಲದಲ್ಲಿ ಈ ತರಕಾರಿಗಳನ್ನು ಫ್ರಿಡ್ಜ್‌ನಲ್ಲಿ ಇಡುವ ತಪ್ಪನ್ನು ಮಾಡಲೇಬೇಡಿ
ಸಾಂದರ್ಭಿಕ ಚಿತ್ರ Image Credit source: Getty Images
ಮಾಲಾಶ್ರೀ ಅಂಚನ್​
|

Updated on:Dec 13, 2025 | 3:28 PM

Share

ಸಾಮಾನ್ಯವಾಗಿ  ಹೆಚ್ಚಿನವರು ಇಡೀ ವಾರಕ್ಕೆ ಬೇಕಾಗಿರುವ ಹಣ್ಣು-ತರಕಾರಿಗಳನ್ನು ಒಂದೇ ಬಾರಿಗೆ ತಂದು ಫ್ರಿಡ್ಜ್‌ನಲ್ಲಿ ಸಂಗ್ರಹಿಸಿಡುತ್ತೇವೆ. ಚಳಿಗಾಲದ ದಿನಗಳಲ್ಲಿಯೂ ವಾತಾವರಣ ಎಷ್ಟೇ ತಂಪಾಗಿದ್ದರೂ, ಹಣ್ಣು-ತರಕಾರಿಗಳು (vegetables) ತಾಜಾವಾಗಿಡಲು ಅವುಗಳನ್ನು ಫ್ರಿಡ್ಜ್‌ನಲ್ಲಿ ಸಂಗ್ರಹಿಸುತ್ತೇವೆ. ಆದರೆ ಚಳಿಗಾಲದಲ್ಲಿ ಈ ಕೆಲವು ತರಕಾರಿಗಳನ್ನು ರೆಫ್ರಿಜರೇಟರ್‌ನಲ್ಲಿ ಸಂಗ್ರಹಿಸಬಾರದು, ಅವುಗಳ ಗುಣಲಕ್ಷಣಗಳು ಬದಲಾಗಿ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಂದು ಅನೇಕ ಆರೋಗ್ಯ ತಜ್ಞರು ನಂಬುತ್ತಾರೆ. ಹಾಗಿದ್ದರೆ ಯಾವ ತರಕಾರಿಗಳನ್ನು ಫ್ರಿಡ್ಜ್‌ನಲ್ಲಿ ಸ್ಟೋರ್‌ ಮಾಡುವುದು ಸೂಕ್ತವಲ್ಲ ಎಂಬುದನ್ನು ನೋಡೋಣ ಬನ್ನಿ.

ಚಳಿಗಾಲದಲ್ಲಿ ಈ ತರಕಾರಿಗಳನ್ನು ಫ್ರಿಡ್ಜ್‌ನಲ್ಲಿ ಸಂಗ್ರಹಿಸಬೇಡಿ:

ಬೆಳ್ಳುಳ್ಳಿ, ಈರುಳ್ಳಿ: ಬೆಳ್ಳುಳ್ಳಿ ಮತ್ತು ಈರುಳ್ಳಿಯನ್ನು ಶೇಖರಿಸಿಡಲು ಉತ್ತಮ ಮಾರ್ಗವೆಂದರೆ ಅದನ್ನು ಅಡುಗೆಮನೆಯಲ್ಲಿ ಸಣ್ಣ ಬುಟ್ಟಿಯಲ್ಲಿ ಇಡುವುದು. ಕೋಣೆಯ ಉಷ್ಣಾಂಶದಲ್ಲಿಯೂ ಇದು ದೀರ್ಘಕಾಲ ತಾಜಾವಾಗಿರುತ್ತದೆ. ನೀವು ಅದನ್ನು ಸಿಪ್ಪೆ ಸುಲಿದು ಅಥವಾ ಪೇಸ್ಟ್‌ ಮಾಡಿ ರೆಫ್ರಿಜರೇಟರ್‌ನಲ್ಲಿ ಸಂಗ್ರಹಿಸಿದರೆ, ಅದರ ಪೌಷ್ಟಿಕಾಂಶದ ಮೌಲ್ಯ ಕಡಿಮೆಯಾಗುತ್ತದೆ.

ಟೊಮೆಟೊ: ಪ್ರತಿಯೊಂದು ಅಡುಗೆಗಳಲ್ಲೂ ನಾವು ಟೊಮೆಟೊವನ್ನು ಬಳಕೆ ಮಾಡುತ್ತೇವೆ. ಹೆಚ್ಚಿನವರು ಈ ಟೊಮೆಟೊವನ್ನು ಸಹ ಫ್ರಿಡ್ಜ್‌ನಲ್ಲಿ ಸ್ಟೋರ್‌ ಮಾಡ್ತಾರೆ. ಆದರೆ, ತಜ್ಞರು ಹೇಳುವಂತೆ ಅವುಗಳನ್ನು ಫ್ರಿಡ್ಜ್‌ನಲ್ಲಿ ಇಡಬಾರದು. ಏಕೆಂದರೆ ಇವುಗಳನ್ನು ಫ್ರಿಡ್ಜ್‌ನಲ್ಲಿ ಇಡುವುದರಿಂದ ಅವುಗಳ ರುಚಿ ಮತ್ತು ವಿನ್ಯಾಸ ಎರಡೂ ಹಾಳಾಗುತ್ತದೆ. ಇದರ ಜೊತೆಗೆ, ಟೊಮೆಟೊದಲ್ಲಿರುವ ಉತ್ಕರ್ಷಣ ನಿರೋಧಕಗಳು ಸಹ ನಾಶವಾಗುತ್ತವೆ. ಚಳಿಗಾಲದಲ್ಲಿ ಹೊರಗೆ ಇಟ್ಟರೂ ಟೊಮೆಟೊ ಒಂದು ವಾರದವರೆಗೆ ಕೆಡುವುದಿಲ್ಲ.

ಆಲೂಗಡ್ಡೆ: ಅನೇಕ ಜನರು ಆಲೂಗಡ್ಡೆಯನ್ನು ಸಹ ಫ್ರಿಡ್ಜ್‌ನಲ್ಲಿ ಸಂಗ್ರಹಿಸುತ್ತಾರೆ.ಇದು ಆರೋಗ್ಯಕ್ಕೆ ಒಳ್ಳೆಯದಲ್ಲ ಎನ್ನುವುದು ತಜ್ಞರ ಅಭಿಪ್ರಾಯ.  ಆಲೂಗಡ್ಡೆಯನ್ನು ಫ್ರಿಡ್ಜ್‌ನಲ್ಲಿ ಇಡುವುದರಿಂದ ಅವು ಮೊಳಕೆಯೊಡೆಯುವುದಲ್ಲದೆ, ಅವುಗಳಲ್ಲಿರುವ ಪಿಷ್ಟವು ಸಕ್ಕರೆಯಾಗಿ ಬದಲಾಗುತ್ತದೆ. ಇದು ಮಧುಮೇಹಿಗಳಿಗೆ ಮಾತ್ರವಲ್ಲದೆ  ಎಲ್ಲರ ಆರೋಗ್ಯ ಮೇಲೂ ಪರಿಣಾಮವನ್ನು ಬೀರುತ್ತದೆ.

ಇದನ್ನೂ ಓದಿ: ನಿಂಬೆಹಣ್ಣು ಬೇಗ ಹಾಳಾಗಬಾರದೆಂದರೆ, ಅವುಗಳನ್ನು ರೀತಿ ಸಂಗ್ರಹಿಸಿಡಿ

ಶುಂಠಿ: ಚಳಿಗಾಲದಲ್ಲಿ ರೆಫ್ರಿಜರೇಟರ್‌ನಲ್ಲಿ ಸಂಗ್ರಹಿಸಬಾರದ ಮತ್ತೊಂದು ತರಕಾರಿ ಶುಂಠಿ. ನೀವು ಅದನ್ನು ರೆಫ್ರಿಜರೇಟರ್‌ನಲ್ಲಿ ಇಟ್ಟರೆ, ಅದರಲ್ಲಿ ಶಿಲೀಂಧ್ರಗಳು ಬೆಳೆದು ಅವು ಹಾಳಾಗಬಹುದು. ಈ ರೀತಿಯ ಶುಂಠಿಯನ್ನು ಸೇವಿಸುವುದರಿಂದ  ಮೂತ್ರಪಿಂಡ ಮತ್ತು ಯಕೃತ್ತಿನ ಮೇಲೆ ಹಾನಿಕಾರಕ ಪರಿಣಾಮ ಬೀರಬಹುದು.

ಸೊಪ್ಪು: ಸೊಪ್ಪು ತರಕಾರಿಗಳನ್ನು ಕೇವಲ 12 ಗಂಟೆಗಳ ಕಾಲ ಮಾತ್ರ ರೆಫ್ರಿಜರೇಟರ್‌ನಲ್ಲಿ ಸಂಗ್ರಹಿಸಬಹುದೆಂದು ತಜ್ಞರು ಶಿಫಾರಸು ಮಾಡುತ್ತಾರೆ. ಇದಕ್ಕಿಂತ ಹೆಚ್ಚು ಸಮಯ ಸಂಗ್ರಹಿಸುವುದರಿಂದ ಅವುಗಳ ನೈಸರ್ಗಿಕ ಸುವಾಸನೆ, ವಿನ್ಯಾಸ ಮತ್ತು ಪೌಷ್ಟಿಕಾಂಶದ ಮೌಲ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.ಇದಲ್ಲದೆ ಹೂಕೋಸು, ಕ್ಯಾರೆಟ್‌ಗಳನ್ನು ಸಹ ಫ್ರಿಡ್ಜ್‌ನಲ್ಲಿ ಸಂಗ್ರಹಿಸಬಾರದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:27 pm, Sat, 13 December 25

ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಕೋಲಾರ: ಬೆಳ್ಳಂಬೆಳಗ್ಗೆ ಬಸ್, ಕಾರುಗಳ ನಡುವೆ ಭೀಕರ ಸರಣಿ ಅಪಘಾತ
ಕೋಲಾರ: ಬೆಳ್ಳಂಬೆಳಗ್ಗೆ ಬಸ್, ಕಾರುಗಳ ನಡುವೆ ಭೀಕರ ಸರಣಿ ಅಪಘಾತ
ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು