Yoga Asanas: ಆರೋಗ್ಯಕರ ಜೀವನ ಶೈಲಿಗಾಗಿ ಈ ಕೆಲವು ಯೋಗ ಆಸನಗಳನ್ನು ಪ್ರತಿನಿತ್ಯ ಮಾಡಿ

ಪ್ರತಿನಿತ್ಯ ವ್ಯಾಯಾಮ ಅಭ್ಯಾಸ ಮಾಡುವ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದಾಗಿದೆ. ನೀವು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಬೇಕಾದರೆ ಈ ಕೆಲವು ಯೋಗ ಭಂಗಿಗಳು ಸಹಾಯಕವಾಗಿದೆ.

Yoga Asanas: ಆರೋಗ್ಯಕರ ಜೀವನ ಶೈಲಿಗಾಗಿ ಈ ಕೆಲವು ಯೋಗ ಆಸನಗಳನ್ನು ಪ್ರತಿನಿತ್ಯ ಮಾಡಿ
ನೌಕಾಸನ- ನೀವು ಬೆನ್ನಿನ ಮೇಲೆ ಮಲಗಿ. ನಿಮ್ಮ ಮೊಣಕಾಲುಗಳು ಮತ್ತು ಮತ್ತು ಬೆನ್ನನ್ನು ನೇರವಾಗಿರಿಸಿ ಮುಂದಕ್ಕೆ ಚಾಚಿ. ನಿಮ್ಮ ಕಿಬ್ಬೊಟ್ಟೆಯ ಸ್ನಾಯುಗಳನ್ನು ಬಿಗಿಗೊಳಿಸಿ. ನಿಮ್ಮ ಬೆನ್ನು ನೇರವಾಗಿರಲಿ. ಈ ಯೋಗ ಭಂಗಿ ನಿಮ್ಮ ಸ್ನಾಯುಗಳನ್ನು ಬಲಗೊಳಿಸಲು ಸಹಾಯಕವಾಗಿದೆ.
Follow us
TV9 Web
| Updated By: shruti hegde

Updated on:Nov 30, 2021 | 9:49 AM

ಬದಲಾಗುತ್ತಿರುವ ಜೀವನ ಶೈಲಿ, ಹರಡುತ್ತಿರುವ ರೋಗ-ರುಜುನೆ, ಕಾಯಿಲೆಗಳು ಇವೆಲ್ಲ ನಿಮ್ಮ ನೆಮ್ಮದಿಯನ್ನು ಕಿತ್ತುಕೊಂಡಿರಬಹುದು. ನಿಮ್ಮ ಆರೋಗ್ಯ ಹಾನಿಗೊಳಗಾದಾದ ಮಾನಸಿಕ ಸ್ಥಿತಿ ಹದಗೆಡುವುದು ಸಹಜ. ಹೀಗಿರುವಾಗ ನೀವು ಅರೋಗ್ಯಕರ ಜೀವನ ಶೈಲಿಯನ್ನು ಹೊಂದಬೇಕಾದರೆ ವ್ಯಾಯಾಮ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಪ್ರತಿನಿತ್ಯ ವ್ಯಾಯಾಮ ಅಭ್ಯಾಸ ಮಾಡುವ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದಾಗಿದೆ. ನೀವು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಬೇಕಾದರೆ ಈ ಕೆಲವು ಯೋಗ ಭಂಗಿಗಳು ಸಹಾಯಕವಾಗಿದೆ.

ಮಾನಸಿಕ ಆರೋಗ್ಯ ಸುಧಾರಣೆಗೆ ಯೋಗ ಆಸನಗಳು ಯೋಗವು ಯಾವುದೇ ರೀತಿಯ ಒತ್ತಡ, ಖಿನ್ನತೆ, ಆತಂಕ ಮತ್ತು ಇತರ ಮಾನಸಿಕ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ನೀವು ವ್ಯಾಯಾಮ ಅಭ್ಯಾಸ ಮಾಡುವುದರಿಂದ ಅಂದರೆ ಸೂರ್ಯ ನಮಸ್ಕಾರ, ಯೋಗ ಮುದ್ರೆಗಳು, ಪ್ರಣಾಯಾಮ ಮತ್ತು ಧ್ಯಾನವನ್ನು ಅಭ್ಯಾಸ ಮಾಡುವುದರಿಂದ ನಿಮ್ಮ ಮನಸ್ಥಿತಿ ಸುಧಾರಿಸುತ್ತದೆ. ನೆನಪಿನ ಶಕ್ತಿ ಹೆಚ್ಚಿಸಿಕೊಳ್ಳಲು ಇದು ಸಹಾಯಕ. ಜೊತೆಗೆ ನಿಮ್ಮ ಏಕಾಗ್ರತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ವ್ಯಾಯಾಮ ಮಾಡುವಾಗ ಹಿರಿಯ ನಾಗರಿಕರು ಅಗತ್ಯವಿರುವ ಸುರಕ್ಷತಾ ಕ್ರಮಗಳನ್ನು ಅನುಸರಿಸಿ. ನೀವು ಇತ್ತೀಚೆಗೆ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದರೆ ಅಥವಾ ತೀವ್ರವಾದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರೆ ವೈದ್ಯರ ಸಲಹೆಯ ಮೇರೆಗೆ ವ್ಯಾಯಾಮ ಅಭ್ಯಾಸದಲ್ಲಿ ತೊಡಗಿಕೊಳ್ಳಿ, ಜೊತೆಗೆ ನಿಮ್ಮ ಆರೋಗ್ಯದಲ್ಲಿ ಏನೇ ಏರು-ಪೇರು ಕಂಡು ಬಂದರೂ ಸಹ ಆರೋಗ್ಯದ ಕುರಿತಾಗಿ ನಿರ್ಲಕ್ಷ್ಯ ತೋರದೆ ವೈದ್ಯರಲ್ಲಿ ಸಲಹೆ ಪಡೆಯಿರಿ.

ಯೋಗ ಆಸನಗಳು ವೃಕ್ಷಾಸನ ಸಮತೋಲನ ಮತ್ತು ಏಕಾಗ್ರತೆ ಒಳ್ಳೆಯದು ಕಾಲು ಮತ್ತು ಹೊಟ್ಟೆಯ ಬಲವನ್ನು ನಿಯಂತ್ರಿಸುತ್ತದೆ ಏಕಾಗ್ರತೆಯನ್ನು ಹೆಚ್ಚಿಸುತ್ತದೆ ನಿಮ್ಮ ಒಟ್ಟಾರೆ ಆರೋಗ್ಯ ಸುಧಾರಣೆಗೆ ಒಳ್ಳೆಯದು

ನೌಕಾಸನ ಯಾವುದೇ ಬೆನ್ನುನೋವು ಸಂಬಂಧಿತ ಆರೋಗ್ಯ ಸಮಸ್ಯೆ ನಿವಾರಣೆಗೆ ಸಹಾಯಕ ಸ್ನಾಯುಗಳನ್ನು ಬಲಪಡಿಸುತ್ತದೆ ಒಟ್ಟಾರೆ ಆರೋಗ್ಯ ಸುಧಾರಣೆಗೆ ಉತ್ತಮ ಯೋಗ ಭಂಗಿ

ಸಮಕೋನಾಸನ ಸಮತೋಲನವನ್ನು ಸುಧಾರಿಸುತ್ತದೆ ಬೆನ್ನು ನೋವು ನಿವಾರಿಸುತ್ತದೆ ಕಾಲು ಸೆಳೆತ, ನೋವಿನ ಸಮಸ್ಯೆ ನಿವಾರಣೆಗೆ ಸಹಾಯಕ ಸ್ನಾಯುಗಳನ್ನು ಬಲಪಡಿಸುತ್ತದೆ

ಇದನ್ನೂ ಓದಿ:

Skin Care: ಆರೋಗ್ಯಕರ ಚರ್ಮವನ್ನು ಪಡೆಯಲು ವ್ಯಾಯಾಮ ಸಹಾಯಕವೇ? ತಜ್ಞರ ಸಲಹೆಗಳಿವು

Weight Loss: ಪ್ರತಿದಿನ ಮಾಡುವ ‘ರನ್ನಿಂಗ್ ಮತ್ತು ಜಂಪಿಂಗ್​’ ವ್ಯಾಯಾಮ ನಿಮ್ಮ ದೇಹದ ತೂಕ ಇಳಿಸಿಕೊಳ್ಳಲು ಸಹಾಯಕ

Published On - 9:49 am, Tue, 30 November 21

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ